ಕಲಬುರಗಿ: ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ರಟಗಲ್ ಗ್ರಾಮದಲ್ಲಿರುವ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ (Forced Conversion) ಕೆಲಸ ಮಾಡುವ ಸ್ಟಾಫ್ ನರ್ಸ್‌ಗಳಿಂದ ಮತಾಂತರಕ್ಕೆ ಯತ್ನಿಸಿರುತ್ತಿರುವ (Conversion Attempt) ಗಂಭೀರ ಆರೋಪ ಎದುರಾಗಿದೆ.
ಅಶ್ವಿನಿ ಹಾಗೂ ರಾಧಿಕಾ ಎಂಬುವವರು ಮತಾಂತರ ದಂಧೆ ನಡೆಸುತ್ತಿದ್ದಾರೆ. ಆರೋಗ್ಯ ಕೇಂದ್ರಕ್ಕೆ ಬರುವವರನ್ನೇ ಟಾರ್ಗೆಟ್ ಮಾಡುವ ಇವರಿಬ್ಬರು ಹಿಂದೂಗಳ ಮೇಲೆ ಕ್ರೈಸ್ತ ಧರ್ಮವನ್ನು ಹೇರಲು ಪ್ರಯತ್ನಿಸುತ್ತಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.
ಇದನ್ನೂ ಓದಿ: Namma Metro : ಗುಡ್ ನ್ಯೂಸ್- ಫೆ.26 ರಿಂದ ಪ್ರತಿ ಮೂರು ನಿಮಿಷಕ್ಕೆ ಮೆಟ್ರೋ ರೈಲು ಓಡಾಟ
ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತವರಿನಲ್ಲೇ ಮತಾಂತರ ನಡೆಯುತ್ತಿದೆ. ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಆದರೆ 1 ಲಕ್ಷ ರೂ. ಹಣ ನೀಡುವುದಾಗಿ ಜನರಿಗೆ ಆಮಿಷವೊಡ್ಡಿದ್ದಾರೆ. ಹಣದ ಆಮಿಷ, ಅನಾರೋಗ್ಯ, ಬಡತನಗಳನ್ನೇ ದಾಳವಾಗಿಸಿಕೊಂಡು ಮತಾಂತರ ಮಾಡುತ್ತಿದ್ದಾರೆ.
ಆರೋಗ್ಯ ಕೇಂದ್ರದಲ್ಲೇ ಬೈಬಲ್ ಓದಿಸುವ ಮೂಲಕ ಮತಾಂತರಕ್ಕೆ ಪ್ರಚೋದಿಸುತ್ತಿದ್ದಾರೆ. ಸದ್ಯ ಮತಾಂತರಕ್ಕೆ ಸಿಟ್ಟಾಗಿರುವ ಸ್ಥಳೀಯರು ಕೂಡಲೇ ಇವರನ್ನು ಆಸ್ಪತ್ರೆಯಿಂದ ಹೊರಹಾಕಬೇಕು ಎಂದು ಆಗ್ರಹಿಸಿದ್ದಾರೆ. ಈ ಸಂಬಂಧ ರಟಗಲ್ ಪೊಲೀಸ್ ಠಾಣೆಯಲ್ಲಿ ಮತಾಂತರ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ರಟಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ