ಕಲಬುರಗಿ: ರಾಜ್ಯ ಕಾಂಗ್ರೆಸ್ ಸರ್ಕಾರವು (State Congress Government) ದಲಿತರಿಗೆ ಮೀಸಲಿಟ್ಟ ಹಣವನ್ನು ಬೇರೆ ಕಡೆಗೆ ಬಳಸುತ್ತಿದೆ ಎಂದು ಆರೋಪಿಸಿ, ಕಲಬುರಗಿ ನಗರದಲ್ಲಿ ಬಿಜೆಯ ಕಾರ್ಯಕರ್ತರು ಬೃಹತ್ ಪ್ರತಿಭಟನೆ (Kalaburagi News) ನಡೆಸಿದರು.
ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ್ ಮತ್ತಿಮೂಡ್ ಹಾಗೂ ಸೇಡಂ ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ್ ಅವರ ನೇತೃತ್ವದಲ್ಲಿ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ನೂರಾರು ಜನ ಬಿಜೆಪಿ ಕಾರ್ಯಕರ್ತರು, ಪ್ರತಿಭಟನಾ ರ‍್ಯಾಲಿ ನಡೆಸಿದರು.
ಇದನ್ನೂ ಓದಿ: Karnataka Weather : ರಾಜ್ಯದಲ್ಲಿ ಮತ್ತೆ ಮಳೆ ಮುನ್ಸೂಚನೆ!
ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಆರಂಭವಾದ ಪ್ರತಿಭಟನೆಯು ಡಿಸಿ ಕಚೇರಿವರೆಗೂ ಪ್ರತಿಭಟನಾ ರ‍್ಯಾಲಿ ನಡೆಸಿದ ಪ್ರತಿಭಟನಾಕಾರರು, ಏನಿಲ್ಲಾ ಏನಿಲ್ಲಾ ಸಿದ್ದರಾಮಯ್ಯ ದಲಿತರ ಪರ ನೀನಿಲ್ಲಾ ಧಿಕ್ಕಾರ ಧಿಕ್ಕಾರ ಸೇರಿದಂತೆ ಎಂಬಿತ್ಯಾದಿ ನಾಮಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದರು.
ರಾಜ್ಯ ಕಾಂಗ್ರೆಸ್ ಸರ್ಕಾರವು ದಲಿತರಿಗಾಗಿ ಮೀಸಲಿಟ್ಟ ಹಣವನ್ನು ಬೇರೆ ಕೆಲಸಕ್ಕೆ ಬಳಸುತ್ತಾ ದಲಿತ ವಿರೋಧಿ ಆಡಳಿತ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಇದನ್ನೂ ಓದಿ: Google Pay: ಇಲ್ಲಿದೆ ಬ್ಯಾಡ್‌ನ್ಯೂಸ್; ಈ ದಿನದಿಂದ ಗೂಗಲ್ ಪೇ ಆ್ಯಪ್ ಸ್ಥಗಿತ!
ಪ್ರತಿಭಟನೆಯಲ್ಲಿ ಕಲಬುರಗಿ ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ್ ಪಾಟೀಲ್ ರದ್ದೆವಾಡಗಿ, ನಗರ ಅಧ್ಯಕ್ಷ ಚಂದು ಪಾಟೀಲ್ ಸೇರಿದಂತೆ ಪದಾಧಿಕಾರಿಗಳು, ನೂರಾರು ಜನ ಕಾರ್ಯಕರ್ತರು ಪಾಲ್ಗೊಂಡಿದ್ದರು.