ಕಲಬುರಗಿ: ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿ ರಕ್ತದಾನ (Blood Donation) ಮಾಡುವ ಮೂಲಕ ಇತರೆ ವ್ಯಕ್ತಿಯ ಜೀವ ಉಳಿಸಬೇಕು ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಕರೆ ನೀಡಿದರು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕಲಬುರಗಿ ಜಿಲ್ಲಾ ಶಾಖೆ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪ್ರಾದೇಶಿಕ ಕೇಂದ್ರ ಹಾಗೂ ಎಚ್.ಡಿ.ಎಫ್.ಸಿ ಬ್ಯಾಂಕ್ ಸಹಯೋಗದಲ್ಲಿ ಬುಧವಾರ ನಗರದಲ್ಲಿ ನಡೆದ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಎಲ್ಲರೂ ರಕ್ತದಾನ ಮಾಡುವುದು ಒಳ್ಳೆಯದು. ಇದರಿಂದ ಜೀವಗಳನ್ನು ಉಳಿಸಲು ಸಹಾಯಕವಾಗುತ್ತದೆ. ಹೊಸ ರಕ್ತ ಪಡೆಯುವ ರೋಗಿಯಲ್ಲಿ ಜೀವನ ಉತ್ಸಾಹ ಕಂಡು ಆರೋಗ್ಯ ವೃದ್ಧಿಯಾಗಲಿದೆ. ರಕ್ತದಾನ ಮಾಡುವುದು ಆರೋಗ್ಯಕ್ಕೂ ಒಳ್ಳೆಯದು ಎಂದರು.
ಇದನ್ನೂ ಓದಿ: Safe investment : ಹೆಚ್ಚು ಸುರಕ್ಷಿತ ಹೂಡಿಕೆಗಳು ಯಾವುವು? ರಿಸ್ಕ್ ಏಕೆ ಅಗತ್ಯ?
ಶಿಬಿರದಲ್ಲಿ ಒಟ್ಟು 60 ಯುನಿಟ್ ರಕ್ತ ಸಂಗ್ರಹಿಸಲಾಯಿತು. ಇ.ಎಸ್.ಐ. ಆಸ್ಪತ್ರೆ ಸಿಬ್ಬಂದಿ ರಕ್ತ ಸಂಗ್ರಹಿಸಿದರು.
ಇದೇ ಸಂದರ್ಭದಲ್ಲಿ 2020-21ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ರೆಡ್ ಕ್ರಾಸ್ ಸಂಸ್ಥೆಯಿಂದ ಉತ್ತಮ ಕಾರ್ಯನಿರ್ವಹಣೆಗೆ ಮಂಗಳವಾರ ರಾಜ್ಯಪಾಲರಿಂದ ಪ್ರಥಮ ಬಹುಮಾನ ಸ್ವೀಕರಿಸಿದ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರಿಗೆ ಅಭಿನಂದಿಸಲಾಯಿತು.
ಇದನ್ನೂ ಓದಿ: Covid Subvariant JN.1 : ಜನವರಿಯಲ್ಲಿ ರಾಜ್ಯದಲ್ಲಿ ಕೊರೊನಾ ಸ್ಫೋಟ; ತಜ್ಞರ ಎಚ್ಚರಿಕೆ
ಈ ವೇಳೆ ವಿ.ಟಿ.ಯು. ಪ್ರಾದೇಶಿಕ ನಿರ್ದೇಶಕ ಡಾ. ಬಸವರಾಜ ಗಾದೆ, ರೆಡ್ ಕ್ರಾಸ್ ಸಭಾಪತಿ ಅಪ್ಪಾರಾವ ಅಕ್ಕೋಣೆ, ಅರುಣ ಕುಮಾರ ಲೋಯಾ, ರವೀಂದ್ರ ಶಾಬಾದಿ, ಭಾಗ್ಯಲಕ್ಷ್ಮಿ, ಎಚ್.ಡಿ.ಎಫ್.ಸಿ. ಬ್ಯಾಂಕಿನ ಮಹೇಶ್ ಪಲ್ಲೇದ ಬಿಲಗುಂದಿ, ಇ.ಎಸ್.ಐ.ಸಿ ಡಾ. ಸತೀಶ, ವಿ.ಟಿ.ಯು. ರೆಡ್ ಕ್ರಾಸ್ ಅಧಿಕಾರಿ ಡಾ. ಶರಣಗೌಡ ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.