ಕಲಬುರಗಿ: ಕಲಬುರಗಿಯಲ್ಲಿ (Kalaburagi News) ಬೃಹತ್ ಟ್ಯಾಂಕರ್ ಕಟ್ಟಡ ನಿರ್ಮಾಣ ಮಾಡುವಾಗ ಮೇಲಿಂದ ಕಬ್ಬಿಣದ ರಾಡು ಕಳಚಿ ಬಿದ್ದಿದ್ದು, ಕಾರ್ಮಿಕನೊರ್ವ ಸ್ಥಳದಲ್ಲೇ ಮೃತಪಟ್ಟಿದಾರೆ. ಜಾರ್ಖಂಡ ಮೂಲದ ರಾಜಕುಮಾರ (26) ಮೃತ ದುರ್ದೈವಿ.
ಶ್ರೀ ಸಿಮೆಂಟ್ ಕಾರ್ಖಾನೆಯಲ್ಲಿ ಮರಣ ಮೃದಂಗ ಮುಂದುವರಿದಿದ್ದು, ಎರಡೇ ತಿಂಗಳಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಸರಿಯಾದ ಸುರಕ್ಷತಾ ಕ್ರಮ ಕೈಗೊಳ್ಳದ ಪರಿಣಾಮ ಜಾರ್ಖಂಡ ಮೂಲದ ರಾಜಕುಮಾರ ಬಲಿಯಾಗಿದ್ದಾರೆ. ಕೆಲ ದಿನಗಳ ಹಿಂದಷ್ಟೆ ಬೆನಕನಹಳ್ಳಿ ನಿವಾಸಿ ಇಂದ್ರಕುಮಾರ ಎಂಬಾತ ಮೃತಪಟ್ಟಿದ್ದ. ಈಗ ಮತ್ತೋರ್ವನನ್ನು ಶ್ರೀಸಿಮೆಂಟ್ ಕಾರ್ಖಾನೆ ಬಲಿ ಪಡೆದಿದೆ.
ಸರಣಿ ಸಾವುಗಳಾಗುತ್ತಿದ್ದರೂ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗು ಸ್ಥಳೀಯ ಶಾಸಕ ಸಚಿವ ಡಾ. ಶರಣಪ್ರಕಾಶ ಪಾಟೀಲ ತಿರುಗಿ ನೋಡಿಲ್ಲ. ಮುಡಾ ಹಗರಣದಲ್ಲೇ ಬ್ಯುಸಿಯಾಗಿರುವ ಸಚಿವರಿಗೆ ಕ್ಷೇತ್ರದ ಪರಿವೇ ಇಲ್ಲ ಎಂದು ಸ್ಥಳೀಯರು ಕಿಡಿಕಾರಿದ್ದಾರೆ. ಮೃತಪಟ್ಟವರ ಪೈಕಿ ಇಬ್ಬರು ಸೇಡಂನವರೇ ಆಗಿದ್ದರೂ, ಸಚಿವರು ಕಾರ್ಖಾನೆಗೂ ಭೇಟಿ ನೀಡಿಲ್ಲ. ಮೃತರಿಗೂ ಸಾಂತ್ವನ ಹೇಳಲು ಸಹ ಮುಂದಾಗಿಲ್ಲ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಸೇಡಂ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಸೇಡಂ ತಾಲೂಕಿನ ಶ್ರೀಸಿಮೆಂಟ್ ಕಾರ್ಖಾನೆಯಲ್ಲಿ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಯಾವುದೇ ಸುರಕ್ಷತಾ ಕ್ರಮ ಕೈಗೊಳ್ಳದ ಕಾರ್ಖಾನೆಯನ್ನು ಬಂದ್ ಮಾಡುವಂತೆ ಆಗ್ರಹಿಸಿದ್ದಾರೆ. ಸಾಕಷ್ಟು ಬಾರಿ ದೂರು ಕೊಟ್ಟರು ಯಾವುದೇ ಕ್ರಮ ಕೈಗೊಳ್ಳದ ಜಿಲ್ಲಾಡಳಿತದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಶ್ರೀಸಿಮೆಂಟ್ ಕಾರ್ಖಾನೆಯು ಅನುಮತಿ ಇಲ್ಲದೆ ನಿರ್ಮಿಸಿದ್ದಾರೆ ಎಂದು ಮಳಖೇಡ ಗ್ರಾಮ ಪಂಚಾಯತ್ ಸದಸ್ಯ ಉಮೇಶ್ ಪಾಂಡುಸಿಂಗ್ ಚೌಹಾಣ್ ಆರೋಪಿಸಿದ್ದಾರೆ.
ಇದನ್ನೂ ಓದಿ: Assault Case : ಬೈಕ್ ಗುದ್ದಿದ್ದನ್ನು ಪ್ರಶ್ನಿಸಿದಕ್ಕೆ ಡ್ರ್ಯಾಗರ್‌ನಿಂದ ಅಟ್ಯಾಕ್ ಮಾಡಿದ ಪುಡಿರೌಡಿಗಳು
ಮನೆ ಕುಸಿದು ಬಿದ್ದು ನಾಲ್ವರಿಗೆ ಗಾಯ
ಶಿವಮೊಗ್ಗ: ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿದೆ. ಜತೆಗೆ ಅಲ್ಲಲ್ಲಿ ಅವಾಂತರವೂ ಸೃಷ್ಟಿಯಾಗಿದೆ. ಮಲೆನಾಡಲ್ಲಿ ಸುರಿದ ಧಾರಾಕಾರ ಮಳೆಯಿಂದ ಶಿವಮೊಗ್ಗದ ಶಿಕಾರಿಪುರದಲ್ಲಿ ಮನೆ ಕುಸಿದು ಬಿದ್ದು ನಾಲ್ವರು ಗಾಯಗೊಂಡಿದ್ದಾರೆ (Karnataka Rain).
ಶಿಕಾರಿಪುರ ತಾಲೂಕಿನ ಕಪ್ಪನಹಳ್ಳಿ ಗ್ರಾಮದಲ್ಲಿ ಮಳೆಯಿಂದಾಗಿ ಶಿವಮೂರ್ತಿ ಎಂಬುವರಿಗೆ ಸೇರಿದ ಮನೆ ಕುಸಿದು ಬಿದ್ದು ನಾಲ್ಕು ಮಂದಿಗೆಗೆ ಗಾಯಗಳಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೂರ್ತಿ, ಪತ್ನಿ ಸೇರಿ ಇಬ್ಬರು ಮಕ್ಕಳಿಗೆ ಗಾಯಗಳಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಬಿ.ವೈ.ರಾಘವೇಂದ್ರ ಆರೋಗ್ಯ ವಿಚಾರಿಸಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ