Site icon Vistara News

Murder Case: ಮಾರಕಾಸ್ತ್ರದಿಂದ ಇರಿದು ಯುವಕನ ಬರ್ಬರ ಕೊಲೆ

kalaburagi murder umer

ಕಲಬುರಗಿ: ಮಾರಕಾಸ್ತ್ರಗಳಿಂದ ಇರಿದು ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ (Murder Case) ಮಾಡಲಾಗಿದೆ.

ಕಲಬುರಗಿ ನಗರದ ಆಜಾದಪುರ್ ರಸ್ತೆಯಲ್ಲಿ ಘಟನೆ ನಡೆದಿದೆ. ಉಮೇರ್ (23) ಕೊಲೆಯಾದ ಯುವಕ. ಉಮೇರ್, ಕಲಬುರಗಿ ನಗರದ ಬಿಲಾಲಾಬಾದ್ ಕಾಲೋನಿ ನಿವಾಸಿ.

ಕಳೆದ ರಾತ್ರಿ ಹನ್ನೊಂದು ಮೂವತ್ತರ ಸಮಯದಲ್ಲಿ ಹಲ್ಲೆ ನಡೆದಿದೆ. ಚಾಕುವಿನಿಂದ ದೇಹದ ವಿವಿಧೆಡೆ ಸಿಕ್ಕಸಿಕ್ಕಂತೆ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಉಮೇರ್‌ನನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದ‌ರು. ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಉಮೇರ್ ಮೃತಪಟ್ಟಿದ್ದಾನೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ನಡೆಸಲಾಗಿರುವ ಶಂಕೆಯಿದ್ದು, ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ.

ಕುಮಟಾದಲ್ಲಿ ನವ ವಿವಾಹಿತೆ ಆತ್ಮಹತ್ಯೆ

ಕಾರವಾರ: ಸರ್ಕಾರಿ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದ ವಿವಾಹಿತೆಯೊಬ್ಬರು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಹೆರವಟ್ಟಾ ಬಳಿ ನಡೆದಿದೆ.

ಹೆರವಟ್ಟಾದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ವೀಣಾ ನಾಗರಾಜ್ (26) ನೇಣಿಗೆ ಶರಣಾದ ದುರ್ದೈವಿಯಾಗಿದ್ದಾರೆ. ಇವರು ಸೋಮವಾರ ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಕುಮಟಾ ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಿ ಮನೆಗೆ ವಾಪಸ್ಸಾಗಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ವೇಲ್‌ನಿಂದ ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೂಲತಃ ಶಿರಸಿಯವರಾಗಿದ್ದ ವೀಣಾ, ನಾಲ್ಕು ತಿಂಗಳ ಹಿಂದಷ್ಟೆ ಮದುವೆಯಾಗಿದ್ದರು. ಆತ್ಮಹತ್ಯೆಗೆ ನಿಖರವಾದ ಕಾರಣ ಏನು ತಿಳಿದುಬಂದಿಲ್ಲ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಇದನ್ನೂ ಓದಿ: ಹಸೆಮಣೆ ಏರಬೇಕಿದ್ದ ಯುವಕನ ಕೊಲೆ; ಈತ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯ ಪತಿ ಕೊಲೆಗಾರ!

Exit mobile version