Murder Case: ಸಂಸದ ಉಮೇಶ್‌ ಜಾಧವ್‌ ಬೆಂಬಲಿಗನ ಬರ್ಬರ ಕೊಲೆ, ಪಾರ್ಟಿ ಕೊಡಿಸಿ ಕೊಂದ ಸ್ನೇಹಿತರು - Vistara News

ಕಲಬುರಗಿ

Murder Case: ಸಂಸದ ಉಮೇಶ್‌ ಜಾಧವ್‌ ಬೆಂಬಲಿಗನ ಬರ್ಬರ ಕೊಲೆ, ಪಾರ್ಟಿ ಕೊಡಿಸಿ ಕೊಂದ ಸ್ನೇಹಿತರು

Murder Case: ಕಳೆದ ನಾಲ್ಕು ದಿನಗಳ ಹಿಂದೆಯಷ್ಟೇ ಕಲಬುರಗಿ ಬಿಎಸ್ಎನ್ಎಲ್‌ ಸಲಹಾ ಸಮಿತಿಗೆ ನಿರ್ದೇಶಕರಾಗಿ ಸಂಸದ ಜಾಧವ್ ಅವರು ಗಿರೀಶ್‌ನನ್ನು ಆಯ್ಕೆ ಮಾಡಿದ್ದರು.

VISTARANEWS.COM


on

mp umesh jadhav aide murder
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಲಬುರಗಿ: ಕಲಬುರಗಿ ಸಂಸದ ಡಾ.ಉಮೇಶ್ ಜಾಧವ್ (MP Umesh Jadhav) ಅವರ ಬೆಂಬಲಿಗನೊಬ್ಬನನ್ನು ಬರ್ಬರವಾಗಿ ಹತ್ಯೆ (Murder Case) ಮಾಡಲಾಗಿದೆ. ಕಾರಿನಲ್ಲಿ ಕರೆದೊಯ್ದು ಕಣ್ಣಿಗೆ ಕಾರದ ಪುಡಿ ಎರಚಿ ಕೊಚ್ಚಿ ಕೊಲೆ ಮಾಡಲಾಗಿದೆ.

ಗಿರೀಶ್ ಚಕ್ರ ಬರ್ಬರವಾಗಿ ಹತ್ಯೆಯಾದ ಬಿಜೆಪಿ ಮುಖಂಡ. ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದರಾಗಿರುವ ಉಮೇಶ್‌ ಜಾಧವ್‌ ಅವರ ಆಪ್ತ ಎನ್ನಲಾಗಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸಾಗನೂರ ಗ್ರಾಮದ ಜಮೀನಿನಲ್ಲಿ ಕೊಲೆ ಮಾಡಲಾಗಿದೆ.

ಕಳೆದ ನಾಲ್ಕು ದಿನಗಳ ಹಿಂದೆಯಷ್ಟೇ ಕಲಬುರಗಿ ಬಿಎಸ್ಎನ್ಎಲ್‌ ಸಲಹಾ ಸಮಿತಿಗೆ ನಿರ್ದೇಶಕರಾಗಿ ಸಂಸದ ಜಾಧವ್ ಅವರು ಗಿರೀಶ್‌ನನ್ನು ಆಯ್ಕೆ ಮಾಡಿದ್ದರು. ಸಲಹಾ ಸಮಿತಿ‌ ನಿರ್ದೇಶಕನಾಗಿ ನೇಮಕವಾದ ಹಿನ್ನೆಲೆಯಲ್ಲಿ ಪಾರ್ಟಿ ಕೊಡುವುದಾಗಿ ಜಮೀನಿಗೆ ಕರಿಸಿ ಸ್ನೇಹಿತರಿಂದಲೇ ಬರ್ಬರ ಕೊಲೆ ನಡೆದಿದೆ.

ಕೊಲೆಗೂ‌ ಮುನ್ನ ಕಣ್ಣಿಗೆ ಖಾರದ ಪುಡಿ ಎರಚಿ ನಂತರ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಗಾಣಗಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಮಡಿಕೇರಿ: ಯುವಕನೊಬ್ಬ ತನ್ನ ಎದೆಗೆ ತಾನೇ ಗುಂಡು ಹೊಡೆದುಕೊಂಡು ಪ್ರಾಣ ಕಳೆದುಕೊಂಡ (Self Harming) ದಾರುಣ ಘಟನೆ ಕೊಡಗು ಜಿಲ್ಲೆಯಲ್ಲಿ (Crime News) ನಡೆದಿದೆ. ಕೊಡಗು ಜಿಲ್ಲೆ (Kodagu News) ಸೋಮವಾರಪೇಟೆ ತಾಲೂಕಿನ ಮಾದಪುರ ಸಮೀಪದ ಮುವತ್ತೋಕ್ಲುವಿನಲ್ಲಿ ನಡೆದ ಘಟನೆ ಇದಾಗಿದ್ದು, ಮೃತ ಯುವಕನನ್ನು ಪ್ರವೀಣ್ (28) ಎಂದು ಗುರುತಿಸಲಾಗಿದೆ.

ಆಗ ಸಿಂಗಲ್ ಬ್ಯಾರಲ್ ಗನ್ ನಿಂದ ಎದೆಗೆ ಗುಂಡು ಹೊಡೆದುಕೊಂಡು (Fires bullet into his own chest) ಪ್ರಾಣ ಬಿಟ್ಟಿದ್ದಾನೆ. ಮೃತದೇಹವನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಮಾದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೇರೆ ಕಡೆ ಉದ್ಯೋಗದಲ್ಲಿರುವ ಪ್ರವೀಣ್‌ ಕೆಲವು ದಿನಗಳ ಹಿಂದೆ ಊರಿಗೆ ಬಂದಿದ್ದ. ಆತ ಕೆಲವು ದಿನದಿಂದ ತೀವ್ರ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ, ಆತ ಯಾವುದೋ ನೋವಿನಲ್ಲಿ ಇದ್ದು ಹೊರಬರಲಾಗದೆ ಸಂಕಷ್ಟದಲ್ಲಿದ್ದ ಎಂಬಂತೆ ಕಂಡುಬಂದಿದೆ. ಅಥವಾ ಯಾವುದೋ ದೊಡ್ಡ ಸಮಸ್ಯೆಯಿಂದ ಬಳಲುತ್ತಿರುವ ಸಾಧ್ಯತೆಯೂ ಇದೆ.

ಕಾರಿನಲ್ಲಿ ಬಂದವರಿಂದ ಯುವಕನ ಮರ್ಡರ್

ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಗ್ರಾಮದಲ್ಲಿ ಕಾರಿನಲ್ಲಿ ಬಂದ ವ್ಯಕ್ತಿಗಳು ಯುವಕನೊಬ್ಬನನ್ನು ಕೊಂದು ಎಸೆದು ಪರಾರಿಯಾಗಿದ್ದಾರೆ. ಶವದ ಮುಖದ ಭಾಗವನ್ನು ಸಂಪೂರ್ಣ ಜಜ್ಜಲಾಗಿದ್ದು, ಗುರುತು ಪತ್ತೆ ಹಚ್ಚಲಾಗಿದೆ. ಆರೋಪಿಗಳು ಅತ್ಯಂತ ವೇಗವಾಗಿ ಬಂದು, ಕೊಲೆ ಮಾಡಿ ಎಸೆದು ಅದಕ್ಕಿಂತಲೂ ವೇಗವಾಗಿ ಹೋಗಿದ್ದಾರೆ. ಪೊಲೀಸರು ತಕ್ಷಣವೇ ಸ್ಥಳಕ್ಕಾಗಮಿಸಿದ್ದಾರೆ. ಸಿಸಿ ಟಿವಿ ಫೂಟೇಜ್‌ಗಳ ಆಧಾರದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Murder Case: ವೃದ್ಧೆಯ ದೇಹ 6 ಭಾಗವಾಗಿ ಪೀಸ್‌ ಪೀಸ್‌; ಆಸ್ತಿಗಾಗಿ ಪರಿಚಿತನಿಂದಲೇ ಕೊಲೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಾನಿಕ್‌ ಅಂಗಡಿ ಸುಟ್ಟು ಭಸ್ಮ

Karnataka Rain : ತಡರಾತ್ರಿ ಸುರಿದ ಭಾರಿ ಮಳೆಯು ಸಾವು-ನೋವಿಗೆ ಕಾರಣವಾಗಿದೆ. ತುಮಕೂರಲ್ಲಿ ಮಳೆಗೆ (Rain Effected) ಮರ ಬಿದ್ದು ಮೇಕೆಗಳು ಮೃತಪಟ್ಟರೆ, ಮನೆಗಳು, ವಾಹನಗಳು ಜಖಂಗೊಂಡಿವೆ. ಶಿವಮೊಗ್ಗದಲ್ಲಿ ಸಿಡಿಲಿಗೆ ಎಲೆಕ್ಟ್ರಾನಿಕ್‌ ಅಂಗಡಿ ಸುಟ್ಟು ಭಸ್ಮವಾಗಿದೆ.

VISTARANEWS.COM


on

By

Karnataka Rain
Koo

ತುಮಕೂರು: ತುಮಕೂರು ಜಿಲ್ಲೆಯಲ್ಲಿ ರಾತ್ರಿ ಗಾಳಿ ಸಹಿತ ಸುರಿದ ಭಾರಿ ಮಳೆಗೆ (Karnataka Rain) ಹಳೆಯ ಬೇವಿನ ಮರವೊಂದು ಕುಸಿದು ಬಿದ್ದಿದೆ. ಪರಿಣಾಮ ಮೂರು ಮನೆಗಳು ಹಾಗೂ ಒಂದು ಇಟಿಯೋಸ್ ಕಾರು ಜಖಂಗೊಂಡಿದೆ. ಸುಮಾರು 120 ವರ್ಷದ ಹಳೆಯ ಬೃಹತ್ ಮರ ಬಿದ್ದು ಅವಾಂತರವೇ ಸೃಷ್ಟಿಯಾಗಿದೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಹುಸೇನ್ ಪುರ ಗ್ರಾಮದಲ್ಲಿ ಘಟನೆ ನಡೆದಿದೆ.

ನರಸಿಂಹ ಎಂಬುವರಿಗೆ ಸೇರಿದ ಕಾರು ಹಾಗೂ ನಾಗರಾಜ್, ಮಾಧವರಾಜ್, ಅಕಲಪ್ಪ ಎಂಬುವರಿಗೆ ಸೇರಿದ ಮನೆಗಳಿಗೆ ಹಾನಿಯಾಗಿದೆ. ಒಂದು ಬೈಕ್ ಕೂಡ ಜಖಂ ಆಗಿದ್ದು, ಮರದಡಿ ಕಟ್ಟಿದ್ದ ಎರಡು ಮೇಕೆಗಳು ಮೃತಪಟ್ಟಿವೆ. ಸುಮಾರು ನಾಲ್ಕೈದು ಜನರಿಗೆ ಸಣ್ಣಪುಟ್ಟ ಗಾಯವಾಗಿದೆ. ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮರ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.

ಸಿಡಿಲು ಬಡಿದು ಹೊತ್ತಿ ಉರಿದ ಅಂಗಡಿ

ಶಿವಮೊಗ್ಗ ಹೊರವಲಯದ ಜಾವಳ್ಳಿ ಗ್ರಾಮದಲ್ಲಿ ಸಿಡಿಲು ಸಹಿತ ಧಾರಾಕಾರವಾಗಿ ಸುರಿದ ಮಳೆಗೆ ಅಂಗಡಿಯೊಂದು ಹೊತ್ತಿ ಉರಿದಿದೆ. ಸಿಡಿಲು ಬಡಿದ ಕಾರಣಕ್ಕೆ ಎಲೆಕ್ಟ್ರಾನಿಕ್ ಅಂಗಡಿ ಧಗೆ ಧಗೆನೇ ಹೊತ್ತಿ ಉರಿದಿದೆ. ಮಳೆಯಲ್ಲೇ ಬೆಂಕಿ ಜ್ವಾಲೆಗೆ ಅಂಗಡಿ ಸಂಪೂರ್ಣ ಭಸ್ಮವಾಗಿದೆ. 10 ಲಕ್ಷಕ್ಕೂ ಹೆಚ್ಚು ಎಲೆಕ್ಟ್ರಾನಿಕ್ ವಸ್ತುಗಳು ಬೆಂಕಿಗಾಹುತಿಯಾಗಿವೆ. ವೀರಭದ್ರಪ್ಪ ಎಂಬುವರಿಗೆ ಅಂಗಡಿ ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಂಕಿ ನಂದಿಸಿದ್ದಾರೆ.

ಇದನ್ನೂ ಓದಿ: Dead Body Found : ಸೇತುವೆ ಸಮೀಪದಲ್ಲಿತ್ತು ಕೊಳೆತ ಮಹಿಳೆಯ ಶವ; ಹಂತಕರು ಯಾರು?

ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು

ದೊಡ್ಡಬಳ್ಳಾಪುರ: ರಾಜ್ಯದ ಹಲವೆಡೆ ಬುಧವಾರ ಸಂಜೆ ಭಾರಿ ಮಳೆಯಾಗಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ತಾಲೂಕಿನ ಕನಸವಾಡಿಯಲ್ಲಿ ಅಂಗಡಿ ಹಾಗೂ ಮನೆಗಳಿಗೆ ನೀರು ನುಗ್ಗಿದೆ. ರಸ್ತೆ ಪಕ್ಕದ ಅಂಗಡಿಗಳು ಹಾಗೂ ಮೆಡಿಕಲ್ ಸ್ಟೋರ್‌ಗೂ ನೀರು ನುಗ್ಗಿ ಹಾನಿಯಾಗಿದೆ.

ಕೆಆರ್‌ಡಿಸಿಎಲ್‌ನವರು ರಸ್ತೆ ಕಾಮಗಾರಿ ವೇಳೆ ಚರಂಡಿ ವ್ಯವಸ್ಥೆ ಮಾಡದಿರುವುದೇ ಮಳೆ ನೀರು ನುಗ್ಗಲು ಕಾರಣ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಎತ್ತರದ ಪ್ರದೇಶದಲ್ಲಿನ ಮಳೆ ನೀರು ತಗ್ಗು ಪ್ರದೇಶಗಳಿಗೆ ನುಗ್ಗಿದೆ. ರಾತ್ರಿಯೆಲ್ಲ ಮನೆಗಳಲ್ಲಿ ವಿದ್ಯುತ್ ಇಲ್ಲದೆ ಜನರು ಪರದಾಡಿದ್ದಾರೆ. ಮಳೆ ನೀರನ್ನು ಮನೆಯಿಂದ ಹೊರಗೆ ಎತ್ತೋಯ್ಯೊಲು ಹರಸಾಹಸ ಪಟ್ಟಿದ್ದಾರೆ. ಮನೆಯಲ್ಲಿದ್ದ ದಿನಸಿ, ಅಂಗಡಿಗಳಲ್ಲಿನ ತರಕಾರಿ ಎಲ್ಲವೂ ನೀರು ಪಾಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯದ ಹಲವೆಡೆ ಮಳೆ ಅಲರ್ಟ್‌; ಬೆಂಗಳೂರಲ್ಲಿ ಹೇಗೆ?

Rain news : ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಮುಂದಿನ 48 ಗಂಟೆಗಳಲ್ಲಿ ಒಳನಾಡಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್‌ನಿಂದ ಕ್ರಮೇಣ ಕಡಿಮೆಯಾಗುವ ಸಾಧ್ಯತೆಯಿದೆ (Karnataka Weather Forecast) ಇದೆ. ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರದಿಂದ ಸಾಧಾರಣ ಮಳೆಯೊಂದಿಗೆ (Heavy Rain) ಗುಡುಗು ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 21 ಡಿ.ಸೆ ಇರಲಿದೆ.

ಜೂನ್‌ 7ರವರೆಗೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇಂದು ಬುಧವಾರ ಕರಾವಳಿಯ ಉತ್ತರ ಕನ್ನಡದಲ್ಲಿ ಭಾರಿ ಮಳೆಗೆ ಗುಡುಗು ಸಾಥ್‌ ನೀಡಲಿದೆ. ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆಯಲ್ಲಿ ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿಯ ವೇಗವು 30-40 ಕಿಮೀ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ದ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: NEET UG Result 2024 : ಮೊದಲ ರ‍್ಯಾಂಕ್‌ ಪಡೆದ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ಮಂದಿ ನೀಟ್‌ ಟಾಪರ್ಸ್‌

ಯಾದಗಿರಿಯಲ್ಲಿ ಸಿಡಿಲು ಬಡಿದು ನಿರ್ಮಾಣ ಹಂತದ ಮನೆ ಗೋಡೆ ಹಾನಿ

ಯಾದಗಿರಿಯಲ್ಲಿ ನಿನ್ನೆ ಮಂಗಳವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಸಿಡಿಲು ಬಡಿದು ನಿರ್ಮಾಣ ಹಂತದ ಮನೆ ಗೋಡೆಗೆ ಹಾನಿಯಾಗಿದೆ. ಯಾದಗಿರಿಯ ಸುರಪುರ ತಾಲೂಕಿನ ತಳ್ಳಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮರಕ್ಕೆ ಸಿಡಿಲು ಬಡಿದು ಬೆಂಕಿಗಾಹುತಿಯಾಗಿದ್ದು, ಮರದ ಪಕ್ಕದಲ್ಲಿದ್ದ ಗುಡಿಸಲಿನಲ್ಲಿರುವ ಟಿವಿ ಸುಟ್ಟು ಹೋಗಿದೆ. ಗಿರಿನಗರದ ರಮೇಶ್ ಎಂಬುವವರ ಗುಡಿಸಲು ಹಾನಿಯಾಗಿದೆ. ಭಾರೀ ಮಳೆಗೆ ರೈಲ್ವೆ ನಿಲ್ದಾಣ ಸಮೀಪದ ಭವಾನಿ ಮಂದಿರದ ಮುಂಭಾಗದಲ್ಲಿ ಆಲದ ಮರ ಧರೆಗುರುಳಿದೆ.

ಬಿರುಗಾಳಿ ಸಹಿತ ಮಳೆಗೆ ಆಟೋ ಮೇಲೆ ಉರುಳಿ ಬಿದ್ದ ಮರ

ನಿನ್ನೆ ಮಂಗಳವಾರ ರಾತ್ರಿ ಗುಡುಗು, ಮಿಂಚು, ಬಿರುಗಾಳಿಯೊಂದಿಗೆ ಸುರಿದ ಮಳೆಗೆ ನಿಂತಿದ್ದ ಆಟೋ ಮೇಲೆ ಮರ ಉರುಳಿ ಬಿದ್ದ ಘಟನೆ ನಗರದ ತ್ರಿಪುರಾಂತನಲ್ಲಿ ಜರುಗಿದೆ. ತ್ರಿಪುರಾಂತನ ಮಡಿವಾಳ ವೃತ್ತದಲ್ಲಿಯ ಮುಖ್ಯ ರಸ್ತೆ ಬದಿಯಲ್ಲಿ ನಿಲ್ಲಿಸಿದ ಆಟೋ ಮೇಲೆ ಬೃಹತ್ ಗಾತ್ರದ ಬೇವಿನ ಮರ ಉರುಳಿ ಬಿದ್ದು, ಆಟೋ ಜಖಂಗೊಂಡಿದೆ.
ನಗರದ ಹರಳಯ್ಯ ವೃತ್ತದ ಸಮೀಪದ ಕರ್ನಾಟಕ ಬ್ಯಾಂಕ್ ಮುಂಭಾಗದಲ್ಲಿ ಮುಖ್ಯ ರಸ್ತೆ ಮೇಲೆ ಮರ ಉರುಳಿ ಬಿದ್ದ ಪರಿಣಾಮ ಈ ಮಾರ್ಗದಲ್ಲಿ ಕೆಲ ಕಾಲ ರಸ್ತೆ ಸಂಚಾರ ಬದಲಾಯಿಸಲಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ನಗರಸಭೆ ಅಧಿಕಾರಿಗಳು ತಕ್ಷಣ ಮರ ತೆರವುಗೊಳಿಸುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕಾರವಾರ, ಯಾದಗಿರಿಯಲ್ಲಿ ಅಬ್ಬರಿಸಿದ ವರುಣ; ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಮಳೆ

Rain News : ಬೆಂಗಳೂರಲ್ಲಿ ವರುಣ ಬ್ರೇಕ್‌ ಕೊಟ್ಟಿದ್ದು, ಕರಾವಳಿಯಲ್ಲಿ ಅಬ್ಬರಿಸುತ್ತಿದ್ದಾನೆ. ಮುಂದಿನ 24 ಗಂಟೆಯಲ್ಲಿ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ (Karnataka Weather Forecast) ಬೀಸಲಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ಮಂಗಳವಾರದಂದು ಕರಾವಳಿಯಲ್ಲಿ ಗುಡುಗು ಸಹಿತ ಭಾರಿ (Karnataka Weather Forecast) ಮಳೆಯಾಗಿತ್ತು. ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಭಾಗಗಳಲ್ಲಿ ಧಾರಾಕಾರ ಮಳೆಯಿಂದಾಗಿ (Rain News) ಜನಜೀವನ ಅಸ್ತವ್ಯಸ್ತವಾಗಿತ್ತು. ಭಾರಿ ಮಳೆಯಿಂದಾಗಿ (Heavy Rain Alert) ಹೆದ್ದಾರಿಯಲ್ಲಿ ನೀರು ನಿಂತಿತ್ತು. ಇದರಿಂದಾಗಿ ವಾಹನ ಸವಾರರು ಪರದಾಡಬೇಕಾಯಿತು.

ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ಎಡಬಿಡದೆ ಮಳೆ ಸುರಿದಿದೆ. ಕಳೆದೊಂದು ವಾರದಿಂದ ಘಟ್ಟದ ಮೇಲಿನ ತಾಲೂಕುಗಳಲ್ಲಿ ಮಳೆ ಸುರಿದಿತ್ತು. ಇದೀಗ ಕರಾವಳಿ ತಾಲೂಕುಗಳಲ್ಲಿ ವರುಣಾರ್ಭಟ ಆರಂಭವಾಗಿದೆ. ಲೋಕಸಭೆ ಚುನಾವಣೆಯ ಮತ ಎಣಿಕೆಗೂ ಮಳೆ ಅಡ್ಡಿ ಆಯಿತು. ಮತ ಎಣಿಕೆ ಕೇಂದ್ರಕ್ಕೆ ಅಧಿಕಾರಿ, ಸಿಬ್ಬಂದಿ ಮಳೆಯಲ್ಲಿ ನೆನೆದುಕೊಂಡೆ ಬರುವಂತಾಯಿತು.

karnataka weather Forecast

ಯಾದಗಿರಿಯಲ್ಲಿ ಸಿಡಿಲು ಬಡಿದು ನಿರ್ಮಾಣ ಹಂತದ ಮನೆ ಗೋಡೆ ಹಾನಿ

ಯಾದಗಿರಿಯಲ್ಲಿ ಮಂಗಳವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಸಿಡಿಲು ಬಡಿದು ನಿರ್ಮಾಣ ಹಂತದ ಮನೆ ಗೋಡೆಗೆ ಹಾನಿಯಾಗಿದೆ. ಯಾದಗಿರಿಯ ಸುರಪುರ ತಾಲೂಕಿನ ತಳ್ಳಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮರಕ್ಕೆ ಸಿಡಿಲು ಬಡಿದು ಬೆಂಕಿಗಾಹುತಿಯಾಗಿದ್ದು, ಮರದ ಪಕ್ಕದಲ್ಲಿದ್ದ ಗುಡಿಸಲಿನಲ್ಲಿರುವ ಟಿವಿ ಸುಟ್ಟು ಹೋಗಿದೆ. ಗಿರಿನಗರದ ರಮೇಶ್ ಎಂಬುವವರ ಗುಡಿಸಲು ಹಾನಿಯಾಗಿದೆ. ಭಾರೀ ಮಳೆಗೆ ರೈಲ್ವೆ ನಿಲ್ದಾಣ ಸಮೀಪದ ಭವಾನಿ ಮಂದಿರದ ಮುಂಭಾಗದಲ್ಲಿ ಆಲದ ಮರ ಧರೆಗುರುಳಿದೆ.

ಬಿರುಗಾಳಿ ಸಹಿತ ಮಳೆಗೆ ಆಟೋ ಮೇಲೆ ಉರುಳಿ ಬಿದ್ದ ಮರ

ಬಸವಕಲ್ಯಾಣ: ಗುಡುಗು, ಮಿಂಚು, ಬಿರುಗಾಳಿಯೊಂದಿಗೆ ಸುರಿದ ಮಳೆಗೆ ನಿಂತಿದ್ದ ಆಟೋ ಮೇಲೆ ಮರ ಉರುಳಿ ಬಿದ್ದ ಘಟನೆ ನಗರದ ತ್ರಿಪುರಾಂತನಲ್ಲಿ ಜರುಗಿದೆ. ತ್ರಿಪುರಾಂತನ ಮಡಿವಾಳ ವೃತ್ತದಲ್ಲಿಯ ಮುಖ್ಯ ರಸ್ತೆ ಬದಿಯಲ್ಲಿ ನಿಲ್ಲಿಸಿದ ಆಟೋ ಮೇಲೆ ಬೃಹತ್ ಗಾತ್ರದ ಬೇವಿನ ಮರ ಉರುಳಿ ಬಿದ್ದು, ಆಟೋ ಜಖಂಗೊಂಡಿದೆ.
ನಗರದ ಹರಳಯ್ಯ ವೃತ್ತದ ಸಮೀಪದ ಕರ್ನಾಟಕ ಬ್ಯಾಂಕ್ ಮುಂಭಾಗದಲ್ಲಿ ಮುಖ್ಯ ರಸ್ತೆ ಮೇಲೆ ಮರ ಉರುಳಿ ಬಿದ್ದ ಪರಿಣಾಮ ಈ ಮಾರ್ಗದಲ್ಲಿ ಕೆಲ ಕಾಲ ರಸ್ತೆ ಸಂಚಾರ ಬದಲಾಯಿಸಲಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ನಗರಸಭೆ ಅಧಿಕಾರಿಗಳು ತಕ್ಷಣ ಮರ ತೆರವುಗೊಳಿಸುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಇದನ್ನೂ ಓದಿ: Bellary VIMS Hospital : ಲೇಡಿ ಡಾಕ್ಟರ್‌ ಜುಟ್ಟು ಹಿಡಿದು ಎಳೆದಾಡಿ ಹೊಡೆದ; ವಿಮ್ಸ್‌ ಆಸ್ಪತ್ರೆಯಲ್ಲಿ ದಿಢೀರ್‌ ಪ್ರತಿಭಟನೆ

ಜೂನ್‌ 5ಕ್ಕೂ ಹಲವೆಡೆ ಮಳೆ ಅಬ್ಬರ

ಜೂ 5ರಂದು ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು ಸೇರಿ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಗಾಳಿಯ ವೇಗವು 30-40 ಕಿಮೀ ಇರಲಿದೆ.

ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುಲಗಿ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ದ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕಲಬುರಗಿ

Kalaburagi Election Result 2024: ಖರ್ಗೆ ಕೋಟೆಯಲ್ಲಿ ಅಳಿಯನ ದರ್ಬಾರ್;‌ ರಾಧಾಕೃಷ್ಣ ದೊಡ್ಡಮನಿಗೆ ಗೆಲುವು

Lok Sabha Election: ರಾಧಾಕೃಷ್ಣ ದೊಡ್ಡಮನಿ ಅವರು ಇದುವರೆಗೆ ಚುನಾವಣೆಗಳ ವೇಳೆ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್‌ ಖರ್ಗೆ ಅವರ ಬೆನ್ನಿಗೆ ನಿಂತು ಕೆಲಸ ಮಾಡಿದ್ದರು. ಇನ್ನು, ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರೂ ಆಗಿದ್ದು, ಸ್ಥಳೀಯವಾಗಿ ಹಿಡಿತ ಸಾಧಿಸಲು ಅಳಿಯನ ಗೆಲುವು ನಿರ್ಣಾಯಕವಾಗಿತ್ತು ರಾಜ್ಯದಲ್ಲಿ ಪ್ರಿಯಾಂಕ್‌ ಖರ್ಗೆ ಇನ್ನಷ್ಟು ಬಲಿಷ್ಠವಾಗಲು ಈ ಗೆಲುವು ಸಹಕಾರಿಯಾಗುವುದಿತ್ತು. ಹಾಗಾಗಿ, ಪ್ರಸಕ್ತ ಲೋಕಸಭೆ ಚುನಾವಣೆಯಲು ಖರ್ಗೆ ಕುಟುಂಬಕ್ಕೆ ಪ್ರತಿಷ್ಠೆಯ ಕಣವಾಗಿತ್ತು.

VISTARANEWS.COM


on

Kalaburagi Election Result 2024
Koo

ಕಲಬುರಗಿ: ಬಿಸಿಲ ನಾಡು ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು 2019ರ ಲೋಕಸಭೆ ಚುನಾವಣೆ (Kalaburagi Election Result 2024) ಸೋಲಿಗೆ ಸೇಡು ತೀರಿಸಿಕೊಂಡಿದ್ದಾರೆ. ಕಲಬುರಗಿಯಲ್ಲಿ ಬಿಜೆಪಿಯ ಉಮೇಶ್‌ ಜಾಧವ್‌ (Umesh Jadhav) ಅವರ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರು ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ, ಕಲಬುರಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಬಲ ಹೆಚ್ಚಾದಂತಾಗಿದೆ.

2019ರ ಲೋಕಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಸೋಲಿನ ಕಹಿಯನ್ನು ಮರೆಮಾಚಲು ಕಾಂಗ್ರೆಸ್‌ ನಾಯಕರು ಹಾಗೂ ಕಾರ್ಯಕರ್ತರು ಇನ್ನಿಲ್ಲದ ಪ್ರಯತ್ನ ಮಾಡಿದ್ದರು. ಇನ್ನು, ನರೇಂದ್ರ ಮೋದಿ ಅವರ ಅಲೆ, ಭಾರತ್‌ ಮಾಲಾ ಯೋಜನೆ, ವಂದೇ ಭಾರತ್‌ ರೈಲು ಸೇರಿ ಹಲವು ಯೋಜನೆಗಳನ್ನು ಮುಂದಿಟ್ಟುಕೊಂಡು ಉಮೇಶ್‌ ಜಾಧವ್‌ ಅವರು ಚುನಾವಣೆ ಎದುರಿಸಿದ್ದರು. ಆದರೂ ಅದು ಫಲ ನೀಡಿಲ್ಲ.

ರಾಧಾಕೃಷ್ಣ ದೊಡ್ಡಮನಿ ಅವರು ಇದುವರೆಗೆ ಚುನಾವಣೆಗಳ ವೇಳೆ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್‌ ಖರ್ಗೆ ಅವರ ಬೆನ್ನಿಗೆ ನಿಂತು ಕೆಲಸ ಮಾಡಿದ್ದರು. ಇನ್ನು, ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರೂ ಆಗಿದ್ದು, ಸ್ಥಳೀಯವಾಗಿ ಹಿಡಿತ ಸಾಧಿಸಲು ಅಳಿಯನ ಗೆಲುವು ನಿರ್ಣಾಯಕವಾಗಿತ್ತು. ರಾಜ್ಯದಲ್ಲಿ ಪ್ರಿಯಾಂಕ್‌ ಖರ್ಗೆ ಇನ್ನಷ್ಟು ಬಲಿಷ್ಠವಾಗಲು ಈ ಗೆಲುವು ಸಹಕಾರಿ ಆಗುತ್ತಿತ್ತು. ಹಾಗಾಗಿ, ಪ್ರಸಕ್ತ ಲೋಕಸಭೆ ಚುನಾವಣೆಯಲು ಖರ್ಗೆ ಕುಟುಂಬಕ್ಕೆ ಪ್ರತಿಷ್ಠೆಯ ಕಣವಾಗಿತ್ತು.

Lok Sabha Election 2024 and Fight between Radhakrishna Doddamani and Umesh Jadhav in Kalaburagi and Mallikarjuna Kharge strategy for election campaign

2019ರ ಚುನಾವಣೆ ಫಲಿತಾಂಶ ಏನಾಗಿತ್ತು?

ಪ್ರಸಕ್ತ ಸಾರ್ವತ್ರಿಕ ಚುನಾವಣೆಯಂತೆ 2019ರಲ್ಲೂ ಕಲಬುರಗಿ ಲೋಕಸಭೆ ಕ್ಷೇತ್ರದಲ್ಲಿ ಭಾರಿ ಜಿದ್ದಾಜಿದ್ದಿ ಏರ್ಪಟ್ಟಿತ್ತು. ಮಲ್ಲಿಕಾರ್ಜುನ ಖರ್ಗೆ ಅವರ ಪ್ರತಿಷ್ಠಿತ ಕ್ಷೇತ್ರದಲ್ಲಿ ಬಿಜೆಪಿಯ ಉಮೇಶ್‌ ಜಾಧವ್‌ ಅವರು ಗೆಲುವು ಸಾಧಿಸಿದ್ದು ರಾಜ್ಯಾದ್ಯಂತ ಸುದ್ದಿಯಾಗಿತ್ತು. ನರೇಂದ್ರ ಮೋದಿ ಅವರ ಅಲೆಯಿಂದಾಗಿ ಉಮೇಶ್‌ ಜಾಧವ್‌ ಅವರು 6,20,192 ಮತಗಳನ್ನು ಪಡೆದರೆ, ಮಲ್ಲಿಕಾರ್ಜುನ ಖರ್ಗೆ ಅವರು 5,24,740 ಮತಗಳನ್ನು ಪಡೆದು ಸೋಲನುಭವಿಸಿದರು. ಸೋಲಿನ ಬಳಿಕ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆ ಪ್ರವೇಶಿಸಿಸಿದರು. ಇನ್ನು, 2014ರಲ್ಲಿ ಕಲಬುರಗಿಯಲ್ಲಿ ಬಿಜೆಪಿ ರೇವು ನಾಯಕ್‌ ಬೆಳಮಗಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಅವರು ಗೆಲುವು ಸಾಧಿಸಿದ್ದರು.

ಇದನ್ನೂ ಓದಿ: Dharwad Election Result 2024: ಪ್ರಲ್ಹಾದ್‌ ಜೋಶಿಗೆ ‘ಧಾರವಾಡ ಪೇಡಾ’; ಅಸೂಟಿಗೆ ಸೋಲು

Continue Reading
Advertisement
Sunil Lahri aka Lakshman of Ramayan lashes out at Ayodhya citizens
ಬಾಲಿವುಡ್36 seconds ago

Sunil Lahri: ಅಯೋಧ್ಯೆಯಲ್ಲಿ ಬಿಜೆಪಿಗೆ ದಾರುಣ ಸೋಲು; ಅಲ್ಲಿಯ ಜನರ ವಿರುದ್ಧ ರಾಮಾಯಣದ ಲಕ್ಷ್ಮಣ ಕೆಂಡಾಮಂಡಲ!

Karnataka Rain
ಮಳೆ1 min ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಾನಿಕ್‌ ಅಂಗಡಿ ಸುಟ್ಟು ಭಸ್ಮ

Miss You First Look Out Siddharth unveils intriguing poster
ಟಾಲಿವುಡ್10 mins ago

Miss You First Look Out: ಆಶಿಕಾ ರಂಗನಾಥ್‌ಗೆ ʻಮಿಸ್ ಯುʼ ಎಂದ ನಟ ಸಿದ್ಧಾರ್ಥ್!

Narendra Modi
ದೇಶ24 mins ago

Narendra Modi: ಜೂ.8ರಂದು ಮೋದಿ ಪ್ರಮಾಣವಚನ; ದೇಶ ವಿದೇಶಗಳ ಗಣ್ಯರು ಭಾಗಿ

NDA Meeting
Lok Sabha Election 202438 mins ago

NDA Meeting: ಮೋದಿ ನಿವಾಸದಲ್ಲಿ ಎನ್‌ಡಿಎ ಸಭೆ; ಯಾವೆಲ್ಲ ವಿಚಾರಗಳನ್ನು ಚರ್ಚಿಸಲಾಯ್ತು? ಇಲ್ಲಿದೆ ವಿವರ

uttarakhand Trekking Tragedy
ಪ್ರಮುಖ ಸುದ್ದಿ46 mins ago

Trekking Tragedy: ಸಾವಿನ ಕಣಿವೆಯಾದ ಸಹಸ್ತ್ರತಾಲ್; ಬೆಂಗಳೂರಿನ 9 ಚಾರಣಿಗರು ಬಲಿಯಾದದ್ದು ಹೇಗೆ?

India vs Ireland
ಕ್ರಿಕೆಟ್47 mins ago

India vs Ireland: ಪಂಜಾಬಿ ಪುಟ್ಟ ಪೋರನಿಂದ ಚಿನ್ನದ ಪದಕ ಪಡೆದ ಮೊಹಮ್ಮದ್​ ಸಿರಾಜ್

Dead Body Found
ಬಾಗಲಕೋಟೆ50 mins ago

Dead Body Found : ಸೇತುವೆ ಸಮೀಪದಲ್ಲಿತ್ತು ಕೊಳೆತ ಮಹಿಳೆಯ ಶವ; ಹಂತಕರು ಯಾರು?

Kannada New Movie cranberry babies movie On set
ಸ್ಯಾಂಡಲ್ ವುಡ್1 hour ago

Kannada New Movie: ಮಹಿಳಾ ಪ್ರಧಾನ ಮರ್ಡರ್ ಮಿಸ್ಟ್ರಿ “ಕ್ಯಾನ್ಬೆರಿ ಬೇಬೀಸ್”ಗೆ ಮುಹೂರ್ತ

Murder Case
ಬೆಳಗಾವಿ1 hour ago

Murder Case : ಸ್ನೇಹಿತರೇ ಕೊಲೆಗಾರರು; ಬರ್ತ್‌ ಡೇ ಪಾರ್ಟಿಗೆ ಹೋದ ಯುವಕನ ಬರ್ಬರ ಹತ್ಯೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 min ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಾನಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ7 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌