Physical Abuse : ಇನ್ಸ್ಟಾಗ್ರಾಮ್ ಲವ್‌; ಮದುವೆ ಆಗೋಣ ಬಾ ಎಂದವನು ಲಾಡ್ಜ್‌ಗೆ ಕರೆದೊಯ್ದು ಕೈಕೊಟ್ಟ ಪೊಲೀಸ್‌ ಪೇದೆ! - Vistara News

ಕಲಬುರಗಿ

Physical Abuse : ಇನ್ಸ್ಟಾಗ್ರಾಮ್ ಲವ್‌; ಮದುವೆ ಆಗೋಣ ಬಾ ಎಂದವನು ಲಾಡ್ಜ್‌ಗೆ ಕರೆದೊಯ್ದು ಕೈಕೊಟ್ಟ ಪೊಲೀಸ್‌ ಪೇದೆ!

Physical Abuse : ಇನ್ಸ್ಟಾಗ್ರಾಮ್ ಮೂಲಕ ಯುವತಿಯನ್ನು ಪರಿಚಯ ಮಾಡಿಕೊಂಡ ಪೊಲೀಸ್‌ ಪೇದೆ, ಲವ್‌ ಮಾಡಿ ಮದುವೆ ಆಗೋಣ ಬಾ ಎಂದವನು ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

VISTARANEWS.COM


on

Physical Abuse
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಲಬುರಗಿ: ಪ್ರೀತಿಸಿ ಮದುವೆಯಾಗುವುದಾಗಿ (Love case) ಪೊಲೀಸ್ ಪೇದೆ ಯುವತಿಗೆ ವಂಚಿಸಿರುವ (Physical Abuse) ಆರೋಪ ಕೇಳಿ ಬಂದಿದೆ. ಪೊಲೀಸ್ ಪೇದೆ ವಿರುದ್ಧ ಮಹಿಳಾ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಕೆಎಸ್‌ಆರ್‌ಪಿ ಪೊಲೀಸ್ ಪೇದೆ ಯಲ್ಲಾಲಿಂಗ ಮೇತ್ರೆ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ‌ ದೌರ್ಜನ್ಯ ವೆಸಗಿ ಪೊಲೀಸ್ ಪೇದೆ ವಂಚಿಸಿದ್ದಾನೆ. ಹೈದರಾಬಾದ್‌ ಯುವತಿಯನ್ನು ಪೊಲೀಸ್ ಪೇದೆ ಯಲ್ಲಾಲಿಂಗ ಮೇತ್ರೆ ಇನ್ಸ್ಟಾಗ್ರಾಮ್ ಮೂಲಕ ಪರಿಚಯ ಮಾಡಿಕೊಂಡಿದ್ದ. ಹೀಗೆ ಇಬ್ಬರಿಬ್ಬರು ಮಸೇಜ್‌, ಫೋನ್‌ ಕಾಲ್‌ ಮೂಲಕ ಸಂಪರ್ಕದಲ್ಲಿದ್ದರು. ಈ ವೇಳೆ ಯಲ್ಲಾಲಿಂಗ ಯುವತಿಯನ್ನು ಪ್ರೀತಿಸುತ್ತಿರುವುದಾಗಿ ಹೇಳಿದ್ದಾನೆ. ಆಗ ಜಾತಿ ಕಾರಣಕ್ಕೆ ಪ್ರೀತಿಯನ್ನು ಯುವತಿ ಮೊದಲು ನಿರಾಕರಿಸಿದ್ದಳು. ಆದರೆ ಪೋಷಕರನ್ನು ಒಪ್ಪಿಸಿ ಮದುವೆ ಆಗುವುದಾಗಿ ಪುಸಲಾಯಿಸಿದ್ದ ಎನ್ನಲಾಗಿದೆ.

ಈ ನಡುವೆ ಮದುವೆ ಆಗುತ್ತೇನೆ ಎಂದೇಳಿ ಹೈದರಾಬಾದ್‌ನಿಂದ ಯುವತಿಯನ್ನು ಕಲಬುರಗಿಗೆ ಕರೆಸಿಕೊಂಡಿದ್ದ.‌ ಅಲ್ಲಿಂದ ಕಲಬುರಗಿ ಬಸ್‌ ನಿಲ್ದಾಣದ ಸಮೀಪದಲ್ಲಿದ್ದ ಲಾಡ್ಜ್‌ಗೆ ಕರೆದುಕೊಂಡು ಹೋಗಿದ್ದಾನೆ. ಈ ವೇಳೆ ಯುವತಿ ಲಾಡ್ಜ್‌ಗೆ ಕರೆತಂದಿದ್ದು ಯಾಕೆ ಎಂದು ಪ್ರಶ್ನಿಸಿದಾಗ ನಾಳೆ ಮದುವೆ ಆಗೋಣಾ ಎಂದಿದ್ದಾನೆ. ಈತನ ಮಾತನ್ನು ನಂಬಿದ ಯುವತಿ ಲಾಡ್ಜ್‌ನಲ್ಲಿ ಉಳಿದುಕೊಂಡಿದ್ದಾಳೆ. ಪ್ರತ್ಯೇಕ ರೂಮು ಬುಕ್‌ ಮಾಡುವಂತೆ ಕೇಳಿದಾಗ, ಮದುವೆ ಆಗುತ್ತೇವೆ, ಮತ್ಯಾಕೆ ಎರಡು ರೂಮು ಎಂದು, ಒಂದೇ ರೂಮಿನಲ್ಲಿ ಇಬ್ಬರು ಉಳಿದುಕೊಂಡಿದ್ದರು. ಮದುವೆ ಆಗುವುದಾಗಿ ಹೇಳಿ ಬಲವಂತಾಗಿ ದೈಹಿಕ‌ಸಂಪರ್ಕ ಬೆಳಸಿದ್ದ.

ಮುಂಜಾನೆ ಮದುವೆ ವಿಷಯ ತೆಗೆದರೆ ಯಲ್ಲಾಲಿಂಗ ಮೇತ್ರೆ ನಿರಾಕರಿಸಿದ್ದಾನೆ. ನಿಮ್ಮ ಮನೆಯವರು ವರದಕ್ಷಿಣಿ ಕೊಡಲ್ಲ. ನಮ್ಮ ಮನೆಯಲ್ಲೂ ಮದುವೆಗೆ ಒಪ್ಪಲ್ಲ ಎಂದು ವಂಚಿಸಿದ್ದಾನೆ. ಈ ಕುರಿತು ದೂರಿನಲ್ಲಿ ಯುವತಿ ಉಲ್ಲೇಖಿಸಿದ್ದಾರೆ. ಹೀಗಾಗಿ ಯುವತಿ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದು, ಕಲಬುರಗಿ ಮಹಿಳಾ ಠಾಣೆಯಲ್ಲಿ 64,318(B),351,352 BNS ಅಡಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಪ್ರಮುಖ ಸುದ್ದಿ

Karnataka Rain : ಮಳೆ-ಗಾಳಿ ಜತೆಗೆ ಸಿಡಿಲು ಬಡಿದು ಇಬ್ಬರು ಸಾವು; ಜೈನ ಸಮುದಾಯ ಬಸದಿ ಶಿಖರಕ್ಕೆ ಹಾನಿ

Karnataka Weather Forecast : ಮಳೆ-ಗಾಳಿ (Karnataka Rain) ಜತೆಗೆ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ಸಿಡಿಲು ಬಡಿದು ಜೈನ ಸಮುದಾಯ ಬಸದಿ ಶಿಖರಕ್ಕೆ ಹಾನಿಯಾಗಿದೆ.

VISTARANEWS.COM


on

By

Karnataka Rain
Koo

ಚಿಕ್ಕೋಡಿ: ಸಿಡಿಲು ಬಡಿದು ರೈತರೊಬ್ಬರು (Karnataka Rain) ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ಭೀಮಪ್ಪ ಭಾಳಪ್ಪ ಮಂಗಳೂರ (56) ಮೃತ ದುರ್ದೈವಿ. ದನ ಕಾಯುತ್ತಿದ್ದ ಭೀಮಪ್ಪ ಭಾಳಪ್ಪ ಮನೆಗೆ ತೆರಳುವಾಗ ಸೋಮವಾರ ಸಂಜೆ ಹೊತ್ತಿಗೆ ಮಳೆ- ಗಾಳಿ ಜತೆಗೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೊಸುರ ಗ್ರಾಮದಲ್ಲಿ ಸಿಡಿಲಿನ ಹೊಡೆತಕ್ಕೆ ಜೈನ ಸಮುದಾಯ ಬಸದಿ ಶಿಖರಕ್ಕೆ ಹಾನಿಯಾಗಿದೆ. ಹೊಸೂರು ಗ್ರಾಮದ 1008 ಪಾರ್ಶ್ವನಾಥ ಜೈನ ಮಂದಿರಕ್ಕೆ ಹಾನಿಯಾಗಿದೆ. ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಗೆ ಸಿಡಿಲಿನ ಅಬ್ಬರವು ಅವಾಂತರವೇ ಸೃಷ್ಟಿಯಾಗಿದೆ. ಕಳೆದ ಎರಡು ದಿನಗಳಿಂದ ಹುಕ್ಕೇರಿ ಬಾಗದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಹುಕ್ಕೇರಿ, ಚಿಕ್ಕೋಡಿ, ನಿಪ್ಪಾಣಿ ತಾಲೂಕಗಳ ವಿವಿಧೆಡೆ ಒಂದು ಗಂಟೆಗೂ ಹೆಚ್ಚು ಕಾಲ ಭಾರಿ ಮಳೆಯಾಗಿದೆ. ಮಳೆಯಿಂದ ರಸ್ತೆ ಮೇಲೆ ನೀರು ಹರಿದಿದೆ. ವರುಣನ ಆರ್ಭಟಕ್ಕೆ ಪ್ರಯಾಣಿಕರ ಪರದಾಡಿದರು. ಇತ್ತ ಮಳೆಯಿಂದ ಹಿಂಗಾರು ಬಿತ್ತನೆಗೆ ಸಜ್ಜಾದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಗಾಳಿ- ಮಳೆಗೆ ಹಾರಿ ಹೋದ ಕಾರ್ಖಾನೆಯ ಚಾವಣಿ

ಹಾವೇರಿ ಜಿಲ್ಲೆಯಲ್ಲಿ ತಡ ರಾತ್ರಿ ಸುರಿದ ಗಾಳಿ- ಮಳೆಗೆ ಕಾರ್ಖಾನೆಯ ಚಾವಣಿ ಹಾರಿಹೋಗಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಸೋಮಸಾಗರ ಗ್ರಾಮದಲ್ಲಿ ಮಳೆಯ ಆರ್ಭಟ ಜೋರಾಗಿದೆ. ಸನೀಲ್ ಎನ್ನುವವರಿಗೆ ಸೇರಿದ ಕಾರ್ಖಾನೆಯಲ್ಲಿದ್ದ ಮಷಿನ್ ಹಾಗು ಕಟ್ಟಡಕ್ಕೆ ಹಾನಿಯಾಗಿದೆ. ಜೋರಾಗಿ ಬೀಸಿದ ಗಾಳಿಗೆ ಚಾವಣಿ ಹಾರಿ ಹೋಗಿದೆ.

ರಾಯಚೂರಿನಲ್ಲೂ ಸಿಡಿಲು ಬಡಿದು ವ್ಯಕ್ತಿ ಸಾವು

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ವ್ಯಕ್ತಿ ಮೃತಪಟ್ಟಿದ್ದಾರೆ. ದುರಗಪ್ಪ (35) ಮೃತ ದುರ್ದೈವಿ. ರಾಯಚೂರಿನ ಲಿಂಗಸ್ಗೂರು ತಾಲ್ಲೂಕಿನ ಹಂಚಿನಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಗ್ರೇಡ್ -2 ತಹಶಿಲ್ದಾರ್ ಶಂಶಾಲಂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರಿನಲ್ಲೂ ಅಬ್ಬರಿಸಿದ್ದ ಮಳೆ

ಕಾಫಿನಾಡ ಮಲೆನಾಡು ಭಾಗದಲ್ಲಿ ಸೋಮವಾರ ಸಂಜೆ ಮಳೆ ಅಬ್ಬರ ಜೋರಾಗಿತ್ತು. ಆಲಿಕಲ್ಲು ಮಳೆಗೆ ಮಲೆನಾಡಿಗರು ಹೈರಾಣಾದರು. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಸುಂಕಸಾಲೆ ಗ್ರಾಮದಲ್ಲಿ ಭಾರೀ ಆಲಿಕಲ್ಲು ಮಳೆಯಾಗಿತ್ತು. ಹಸಿರ ಹುಲ್ಲಿನ ರಾಶಿ ಮೇಲೆ ಆಲಿಕಲ್ಲು ಹರಡಿದಂತೆ ಸುರಿದಿದೆ. ಅಕ್ಟೋಬರ್‌ನಲ್ಲಿ ಆಲಿಕಲ್ಲು ಮಳೆ ಕಂಡು ಮಲೆನಾಡಿಗರು ಕಂಗಲಾಗಿದ್ದು, ಕಾಫಿ ಬೆಳೆಗೆ ಹಾನಿಯಾಗುವ ಆತಂಕ ಇದೆ.

ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಮಹಲ್ಗೋಡು ಸೇತುವೆ ಜಲಾವೃತಗೊಂಡಿತ್ತು. ಕಳಸ-ಬಾಳೆಹೊನ್ನೂರು ರಾಜ್ಯ ಹೆದ್ದಾರಿ ಬಂದ್ ಆಗಿತ್ತು. ಹೊರನಾಡು ಮಾರ್ಗದಲ್ಲಿ ಕಿ.ಮೀ. ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿ, ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದ ಮಾರ್ಗವು ಬಂದ್ ಆಗಿತ್ತು. ಸೇತುವೆ ಮೇಲೆ 2 ಅಡಿ ಎತ್ತರದಲ್ಲಿ ನೀರು ಹರಿಯುತ್ತಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಭಾರಿ ಮಳೆ ಹಿನ್ನೆಲೆ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Karnataka Weather Forecast : ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಮಲೆನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ವಿಜಯನಗರದಲ್ಲಿ ಹಗುರದಿಂದ ಮಳೆಯಾಗಲಿದೆ.

ಉತ್ತರ ಒಳನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ. ಉಳಿದಂತೆ ಬೀದರ್, ಕಲಬುರಗಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದ್ದು, ಹಾಸನದಲ್ಲಿ ಸಾಧಾರಣ ಮಳೆಯಾಗಲಿದೆ. ಕರ್ನಾಟಕದ ಕರಾವಳಿಯಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಭಾರಿ ಮಳೆಯಾಗಲಿದ್ದು, ಉಡುಪಿಯಲ್ಲಿ ಹಗುರದಿಂದ ಕೂಡಿರಲಿದೆ.

ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರಿನಲ್ಲಿ ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30 ಮತ್ತು 20 ಡಿಗ್ರಿ ಸೆಲಿಯಸ್ಸ್‌ ಇರಲಿದೆ. ಮಂಗಳವಾರದಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಉಡುಪಿ, ಉತ್ತರ ಕನ್ನಡ, ಹಾಸನ, ಮಂಡ್ಯ, ಮೈಸೂರು ಮತ್ತು ತುಮಕೂರು
ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Karnataka Weather : ಮಲೆನಾಡಿನಲ್ಲಿ ಅಬ್ಬರಿಸುವ ಮಳೆ; ಮಂಡ್ಯ, ಮೈಸೂರು ಸೇರಿ 9 ಜಿಲ್ಲೆಗಳಿಗೆ ಅಲರ್ಟ್‌

Karnataka Weather Forecast : ಮಲೆನಾಡಿನಲ್ಲಿ ಮಳೆ ಅಬ್ಬರಿಸಲಿದ್ದು, ಮಂಡ್ಯ, ಮೈಸೂರು ಸೇರಿ 9 ಜಿಲ್ಲೆಗಳಿಗೆ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಪ್ರತ್ಯೇಕವಾಗಿ ಅತಿ ಹೆಚ್ಚು ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ ಭಾರೀ ಮಳೆಯಾಗಲಿದೆ. ತಕ್ಕಮಟ್ಟಿಗೆ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ವಿಜಯನಗರ, ಕೊಪ್ಪಳ, ಗದಗ, ವಿಜಯಪುರ, ಬಾಗಲಕೋಟೆ ಮತ್ತು ಹಾವೇರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಂಭವವಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾದರೆ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಅತಿ ಹಗುರದಿಂದ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಂಭವವಿದೆ. ಬೆಂಗಳೂರಿನಲ್ಲಿ ಚದುರಿದಂತೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 20 ಡಿ.ಸೆ ಇರಲಿದೆ.

ಆರೆಂಜ್‌ ಅಲರ್ಟ್‌

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದ್ದು, ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಗದಗ, ಹಾವೇರಿ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

Continue Reading

ಪ್ರಮುಖ ಸುದ್ದಿ

Karnataka Weather : ರಾಜ್ಯಾದ್ಯಂತ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ

Karnataka Weather : ರಾಜ್ಯಾದ್ಯಂತ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಮಳೆಯಾರ್ಭಟ (Rain News) ಜೋರಾಗಿ ಇರಲಿದೆ.. ದಕ್ಷಿಣ ಒಳನಾಡಿನಲ್ಲಿ ಲಘುವಾಗಿ ಸಾಧಾರಣ ಮಳೆಯೊಂದಿಗೆ ವ್ಯಾಪಕವಾಗಿ ಚದುರಿದಂತೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಗಾಳಿ ವೇಗದೊಂದಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast ) ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ಮಂಡ್ಯ, ಚಾಮರಾಜನಗರ, ಮೈಸೂರು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ತಕ್ಕಮಟ್ಟಿಗೆ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುತ್ತದೆ. ಉತ್ತರ ಒಳನಾಡಿನಲ್ಲಿ ಸುತ್ತಮುತ್ತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಚದುರಿದಂತೆ ಅಲ್ಲಲ್ಲಿ ತುಂಬಾ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಅಲ್ಲಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ಸುತ್ತಮುತ್ತ ಗುಡುಗು ಸಹಿತ ಲಘುವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Two children die after hot water and hot sambar fall on them
ದಾವಣಗೆರೆ2 ನಿಮಿಷಗಳು ago

Accident Case : ದಾವಣಗೆರೆಯಲ್ಲಿ ದುರಂತ; ಬಿಸಿ ನೀರು ಹಾಗೂ ಬಿಸಿ ಸಾಂಬಾರ್‌ ಬಿದ್ದು ಪ್ರತ್ಯೇಕ ಕಡೆ ಇಬ್ಬರು ಮಕ್ಕಳು ಸಾವು

Physical Abuse
ಕಲಬುರಗಿ25 ನಿಮಿಷಗಳು ago

Physical Abuse : ಇನ್ಸ್ಟಾಗ್ರಾಮ್ ಲವ್‌; ಮದುವೆ ಆಗೋಣ ಬಾ ಎಂದವನು ಲಾಡ್ಜ್‌ಗೆ ಕರೆದೊಯ್ದು ಕೈಕೊಟ್ಟ ಪೊಲೀಸ್‌ ಪೇದೆ!

Karnataka Rain
ಪ್ರಮುಖ ಸುದ್ದಿ59 ನಿಮಿಷಗಳು ago

Karnataka Rain : ಮಳೆ-ಗಾಳಿ ಜತೆಗೆ ಸಿಡಿಲು ಬಡಿದು ಇಬ್ಬರು ಸಾವು; ಜೈನ ಸಮುದಾಯ ಬಸದಿ ಶಿಖರಕ್ಕೆ ಹಾನಿ

Actor Govinda
ಬಾಲಿವುಡ್2 ಗಂಟೆಗಳು ago

Actor Govinda : ಬಾಲಿವುಡ್​ ನಟ ಗೋವಿಂದ ಕಾಲಿಗೆ ಗುಂಡೇಟು! ಮುಂಬೈ ಆಸ್ಪತ್ರೆಗೆ ದಾಖಲು

Superstar Rajinikanth is unwell Family members admitted to hospital in the middle of the night
ಸಿನಿಮಾ2 ಗಂಟೆಗಳು ago

Actor Rajinikanth: ಸೂಪರ್‌ ಸ್ಟಾರ್‌ ರಜನಿಕಾಂತ್‌ ಆರೋಗ್ಯದಲ್ಲಿ ಏರುಪೇರು; ಮಧ್ಯರಾತ್ರಿ ಆಸ್ಪತ್ರೆಗೆ ದಾಖಲಿಸಿದ ಕುಟುಂಬಸ್ಥರು

Karnataka Weather Forecast
ಮಳೆ8 ಗಂಟೆಗಳು ago

Karnataka Weather : ಭಾರಿ ಮಳೆ ಹಿನ್ನೆಲೆ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Dina Bhavishya
ಭವಿಷ್ಯ8 ಗಂಟೆಗಳು ago

Dina Bhavishya : ಪ್ರಮುಖ ಜನರೊಡನೆ ವ್ಯವಹರಿಸುವಾಗ ಈ ರಾಶಿಯವರು ಎಚ್ಚರಿಕೆಯಿಂದ ಮಾತನಾಡಿ

Namma Metro Blue line
ಬೆಂಗಳೂರು17 ಗಂಟೆಗಳು ago

Namma Metro: ಏರ್‌ಪೋರ್ಟ್‌ ನೀಲಿ ಮೆಟ್ರೋ ಮಾರ್ಗದಲ್ಲಿ‌ ಬದಲಾವಣೆ; ಎರಡು ನಿಲ್ದಾಣಗಳನ್ನು ಕೈಬಿಡಲು ಮುಂದಾದ ಬಿಎಂಆರ್‌ಸಿಎಲ್‌

Road accident on Karkala-Dharmasthala highway Four members of a family dead
ಪ್ರಮುಖ ಸುದ್ದಿ20 ಗಂಟೆಗಳು ago

Road Accident: ಕಾರ್ಕಳ ಧರ್ಮಸ್ಥಳ ಹೆದ್ದಾರಿಯಲ್ಲಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ದುರ್ಮರಣ

53rd KVS National Games inaugurated
ಬೆಂಗಳೂರು21 ಗಂಟೆಗಳು ago

KVS Sports Meet : 53ನೇ ಕೆವಿಎಸ್ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಚಾಲನೆ; ಮೈದಾನದಲ್ಲಿ ಬಾಲಕರ ರೋಚಕ ಕ್ರಿಕೆಟ್

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌