ಕಲಬುರಗಿ: ಕಲಬುರಗಿ ನಗರದಲ್ಲಿ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್ (Police Firing) ನಡೆದಿದೆ. ಕಲಬುರಗಿ ನಗರ ಹೊರವಲಯದ ಬೇಲೂರು ಕ್ರಾಸ್ ಬಳಿ ಘಟನೆ ನಡೆದಿದೆ. ಆರೋಪಿ ಅವತಾರ್‌ಸಿಂಗ್ ಮೇಲೆ ಸಬ್ ಅರ್ಬನ್ ಠಾಣೆ ಪೊಲೀಸರು ಕಾಲಿಗೆ ಫೈರಿಂಗ್ ಮಾಡಿದ್ದಾರೆ. ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೈಯ್ದು ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಸಬ್ ಅರ್ಬನ್ ಠಾಣೆ ಇನ್‌ಸ್ಪೆಕ್ಟರ್ ಸಂತೋಷ್ ತಟ್ಟೆಪಲ್ಲಿ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಗಾಯಾಳು ಆರೋಪಿ ಅವತಾರ್‌ಸಿಂಗ್ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅವತಾರ್ ಸಿಂಗ್ ಪೊಲೀಸರ ಮೇಲೆಯೇ ಚಾಕುಯಿಂದ ದಾಳಿ ಮಾಡಿ ಎಸ್ಕೇಪ್ ಆಗಲು ಯತ್ನಿಸಿದ್ದ. ಈ ವೇಳೆ ಒಂದು ಸುತ್ತು ಗಾಳಿಯಲ್ಲಿ ಗುಂಡಿ ಹಾರಿಸಿ ಶರಣಾಗುವಂತೆ ಪೊಲೀಸರು ವಾರ್ನಿಂಗ್ ನೀಡಿದ್ದಾರೆ. ಆದರೆ ಇದಕ್ಕೆ ಕ್ಯಾರೆ ಎನ್ನದ ಅವತಾರ್ ಸಿಂಗ್ ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದ. ಆತ್ಮರಕ್ಷಣೆಗಾಗಿ ಆರೋಪಿ ಬಲಗಾಲಿಗೆ ಗುಂಡು ಹಾರಿಸಿದ್ದಾರೆ.
ಈ ಅವತಾರ್ ಸಿಂಗ್‌ನ ಅವಾತರ ಒಂದೊಂದ್ ಅಲ್ಲ. ದರೋಡೆ, ರಾಬರಿ ಸೇರಿ ಅವತಾರ್ ಸಿಂಗ್ ಮೇಲೆ 13 ಕೇಸ್‌ಗಳಿವೆ. ಢಾಬಾವೊಂದರ ರಾಬರಿ ಕೇಸ್‌ನಲ್ಲಿ ಪೊಲೀಸರಿಗೆ ಬೇಕಾಗಿದ್ದ ಅವತಾರ ಸಿಂಗ್‌ಗಾಗಿ ಕಳೆದ ಮೂರು ದಿನಗಳಿಂದ ಪೊಲೀಸರು ಹುಡುಕಾಟ ನಡೆಸಿದ್ದರು. ಈ ವೇಳೆ ಉಪಳಾವ ಕ್ರಾಸ್ ಬಳಿ ಇರುವ ಖಚಿತ ಮಾಹಿತಿ ಮೇರೆಗೆ ಅರೆಸ್ಟ್ ಮಾಡಲು ಹೋಗಿದ್ದರು. ಈ ವೇಳೆ ಪೊಲೀಸರ ಮೇಲೆಯೇ ಚಾಕುಯಿಂದ ದಾಳಿಗೆ ಮುಂದಾದಾಗ ಫೈರಿಂಗ್ ಮಾಡಿದ್ದಾರೆ. ಈ ಗಲಾಟೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗೆ ಗಾಯವಾಗಿದ್ದು, ನಗರ ಟ್ರಾಮಾ ಕೇರ್‌ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇತ್ತ ಆರೋಪಿ ಅವತಾರ್ ಸಿಂಗ್‌ಗೂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಎರಡು ಲಕ್ಷ ಲೂಟಿ ಮಾಡಿದ್ದ ಅವತಾರ್ ಸಿಂಗ್ ಗ್ಯಾಂಗ್
ಈ ಖತರ್ನಾಕ್ ಅವತಾರ್ ಸಿಂಗ್ ಏಪ್ರಿಲ್ ತಿಂಗಳಲ್ಲಿ ಪಟ್ನಾ ಬಳಿಯ ಢಾಬಾದಲ್ಲಿ ದರೋಡೆ ಮಾಡಿದ್ದರು. ಸುಮಾರು 10ಕ್ಕೂ ಹೆಚ್ಚು ಮಂದಿ ಈ ಗ್ಯಾಂಗ್ ಢಾಬಾದಲ್ಲಿದ್ದ 2ಲಕ್ಷ ರೂ. ದರೋಡೆ ಮಾಡಿದ್ದರು. ರೌಡಿಶೀಟರ್ ಆಗಿರುವ ಅವತಾರ್ ಸಿಂಗ್ ದರೋಡೆ ಮಾಡುತ್ತಿದ್ದ ಸಿಸಿಟಿವಿ ದೃಶ್ಯ ಲಭ್ಯವಾಗಿದೆ. ಲಾಂಗ್, ಮಚ್ಚಿನಿಂದ ಎಂಟ್ರಿ ಕೊಟ್ಟಿದ್ದ ಈ ಗ್ಯಾಂಗ್ ಹಲ್ಲೆ ಮಾಡಿ ಬೆದರಿಸಿ ದರೋಡೆ ಮಾಡಿದ್ದರು. ದರೋಡೆ ಬಳಿಕ ಬೆಂಗಳೂರಿನಲ್ಲಿ ನಾಲ್ಕೈದು ತಿಂಗಳು ತಲೆ ಮರೆಸಿಕೊಂಡಿದ್ದ ಆರೋಪಿ ಅವತಾರ್ ಸಿಂಗ್, ಕಲಬುರಗಿಗೆ ಆಗಮಿಸಿದ್ದಾಗ ಪೊಲೀಸರು ಲಾಕ್ ಮಾಡಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ