Site icon Vistara News

Road Accident : ಕೆಟ್ಟು ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿ; ಬಿಜೆಪಿ ಮುಖಂಡ ಸ್ಥಳದಲ್ಲೇ ಸಾವು

Bike collides with lorry BJP leader dies

ಕಲಬುರಗಿ: ನಿಂತಿದ್ದ ಸಿಮೆಂಟ್‌ ಲಾರಿಗೆ ಬೈಕ್‌ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜತೆಗೆ ಬುಲೆಟ್‌ ಬೈಕ್‌ನ ಮುಂಭಾಗವು ಪೀಸ್‌ ಪೀಸ್‌ ಆಗಿದೆ. ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ ತಾಲೂಕಿನ‌ ಮಿರಿಯಾಣ ಬಳಿ ಅಪಘಾತ (Road Accident) ನಡೆದಿದೆ.

ಬಿಜೆಪಿ ಮುಖಂಡ ಕೃಷ್ಣ ಲಕ್ಷ್ಮಣ (35) ಮೃತ ದುರ್ದೈವಿ. ಕೃಷ್ಣ ಲಕ್ಷ್ಮಣ ಅವರು ಚಿಂಚೊಳಿ ತಾಲೂಕಿನ ‌ಮರಾಠ ಸಮಾಜದ ತಾಲೂಕಿನ ಅಧ್ಯಕ್ಷರಾಗಿದ್ದರು. ಮಿರಿಯಾಣ ಗ್ರಾಮದಿಂದ ‌ತೆಲಂಗಾಣದ ತಾಂಡೂರಿಗೆ‌ ಹೋಗುತ್ತಿದ್ದ ಸಿಮೆಂಟ್ ಲಾರಿಯು ಕೆಟ್ಟು ನಿಂತಿತ್ತು.

ಈ ಮಾರ್ಗವಾಗಿ ಬುಲೆಟ್‌ ಬೈಕ್‌ನಲ್ಲಿ ಬರುತ್ತಿದ್ದ ಕೃಷ್ಣ ಅವರಿಗೆ ರಸ್ತೆ ಬದಿ ನಿಂತಿದ್ದ ಲಾರಿ ಕಂಡಿಲ್ಲ. ವೇಗವಾಗಿ ಬರುವಾಗ ನೇರವಾಗಿ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ತಲೆಗೆ ತೀವ್ರ ಪೆಟ್ಟಾಗಿದ್ದು, ರಕ್ತಸ್ರಾವವಾಗಿ ಸ್ಥಳದಲ್ಲೇ ಕೃಷ್ಣ ಲಕ್ಷ್ಮಣ ಅವರು ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಮಿರಿಯಾಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Elephant attack: ಹೊಸೂರಿನಲ್ಲಿ ಕಾಡಾನೆ ದಾಳಿ; ಇಬ್ಬರು ಮಹಿಳೆಯರು ಸೇರಿ ಜಾನುವಾರುಗಳು ಸಾವು

ಇನ್ನೋವಾ ಕಾರಿಗೆ ಬಸ್‌ ಡಿಕ್ಕಿ; ಇಬ್ಬರು ಸಾವು, ಐವರು ಗಂಭೀರ

ರಾಯಚೂರು: ರಾಯಚೂರಿನ ಕಸಬೆ ಕ್ಯಾಂಪ್ ಬಳಿ ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದೆ. ಖಾಸಗಿ ಬಸ್ ಹಾಗೂ ಇನ್ನೋವಾ ಕಾರ್ ನಡುವೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕಾರಿನ ಮುಂಭಾಗದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮಾರಿಯಾ ಗೀತಾ (38) ಹಾಗೂ ಅಮಲ್ ಪಾಲ್ ಮೇರಿ (64) ಮೃತ ದುರ್ದೈವಿ.

ಖಾಸಗಿ ಬಸ್‌ ಹೈದ್ರಾಬಾದ್‌ನಿಂದ ಸಿಂಧನೂರು ಮಾರ್ಗವಾಗಿ ಹೊರಟಿತ್ತು. ಗದಗನಿಂದ ರಾಯಚೂರು ಮಾರ್ಗವಾಗಿ ಇನ್ನೋವಾ ಕಾರಿನಲ್ಲಿ ಏಳು ಮಂದಿ ಪ್ರಯಾಣಿಸುತ್ತಿದ್ದರು. ಈ ವೇಳೆ ಎರಡು ವಾಹನಗಳು ವೇಗವಾಗಿ ಇದ್ದ ಕಾರಣ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಉಳಿದ ಐವರು ಗಂಭೀರ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಬಸ್‌ನಲ್ಲಿದ್ದ ಪ್ರಯಾಣಿಕರು ಸಣ್ಣ-ಪುಟ್ಟ ಗಾಯದಿಂದ ಪಾರಾಗಿದ್ದಾರೆ. ರಾಯಚೂರು ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಬಸ್‌ ಹಾಗೂ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ‌

Exit mobile version