ಕಲಬುರಗಿ: 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಬರ್ಬರ ಘಟನೆ ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಿನ್ನೆ ಸಂಜೆ ಮೂರು ಗಂಟೆ ಸಮಯದಲ್ಲಿ ಬಹಿರ್ದೆಸೆಗೆ ಅಂತ ಹೊರಹೋಗಿದ್ದ ಬಾಲಕಿ ಮರಳಿ ಬಂದಿರಲಿಲ್ಲ. ಹುಡುಕಾಡಿದಾಗ ಗ್ರಾಮದ ಹೊರವಲಯದ ಕಬ್ಬಿನ ಗದ್ದೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಕಬ್ಬಿನ ಗದ್ದೆಯಲ್ಲಿ ಅಸ್ತವ್ಯಸ್ತ ರೀತಿಯಲ್ಲಿ ಬಾಲಕಿ ಶವ ಪತ್ತೆಯಾಗಿದ್ದು, ಅತ್ಯಾಚಾರ ಮಾಡಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ.
9ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ಸಂಬಂಧಿಗಳ ಮನೆಯಲ್ಲಿದ್ದಳು. ಸ್ಥಳಕ್ಕೆ ಕಲಬುರಗಿ ಎಸ್ಪಿ ಇಶಾ ಪಂತ್ ಸೇರಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | Horrible | ಕಲಬುರಗಿಯಲ್ಲಿ ನರಭಕ್ಷಕ ನಾಯಿಗಳ ಕ್ರೌರ್ಯ, ಮಲಗಿದ್ದ ವೃದ್ಧೆಯನ್ನು ಹರಿದು ತಿಂದ ರಾಕ್ಷಸ ಶ್ವಾನಗಳು