ಕಲಬುರಗಿ: ಇಲ್ಲಿನ ಚಿಂಚೋಳಿ ತಾಲೂಕಿನ ಕುಂಚಾವರಂ ಠಾಣಾ ವ್ಯಾಪ್ತಿಯಲ್ಲಿ ಇರುವ ವಸತಿ ಶಾಲೆಯ ಪ್ರಾಚಾರ್ಯ ಮತ್ತು ಕಂಪ್ಯೂಟರ್ ಆಪರೇಟರ್ ಅವರು ಲೈಂಗಿಕ ಕಿರುಕುಳ (Sexual Harassment) ನೀಡಿದ ಆರೋಪ ಕೇಳಿಬಂದಿದೆ. ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ಶಾಲೆಯಲ್ಲಿ ತಮಗೆ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂದು ಇಬ್ಬರು ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ. ಆರೋಪಿಗಳು ಮೈಕೈ ಮುಟ್ಟುವುದು ಸೇರಿದಂತೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಕಂಪ್ಯೂಟರ್ ಆಪರೇಟರ್‌ಗೆ ಪೋಷಕರಿಂದ ಥಳಿತ
ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ಮೇಲೆ ಆಗುತ್ತಿರುವ ಲೈಂಗಿಕ ಕಿರುಕುಳ ತಿಳಿದ ಪೋಷಕರು ಮಂಗಳವಾರ ಸಂಜೆ ವಸತಿ ಶಾಲೆಗೆ ಆಗಮಿಸಿದ್ದಾರೆ. ಕೈಗೆ ಸಿಕ್ಕ ಕಂಪ್ಯೂಟರ್ ಆಪರೇಟರ್‌ನನ್ನು ಹಿಡಿದು ಪೋಷಕರು ಥಳಿಸಿದ್ದಾರೆ. ಮಂಗಳವಾರ ರಾತ್ರಿ ಕುಂಚಾವರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ವಸತಿ ಶಾಲೆ ಪ್ರಾಚಾರ್ಯ ಮತ್ತು ಕಂಪ್ಯೂಟರ್ ಆಪರೇಟರ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ | ಧಾರವಾಡ ವಿಶ್ವೇಶ್ವರಯ್ಯ ಕಾಲೇಜಿನ ಲೈಂಗಿಕ ಕಿರುಕುಳ ಆರೋಪ; ಕಾಲೇಜು ಅಧ್ಯಕ್ಷನ ಬಂಧನ