Summer Season: ವಾಹನ ಸವಾರರನ್ನು ಬಿಸಿಲ ತಾಪದಿಂದ ಪಾರು ಮಾಡಲು ಟ್ರಾಫಿಕ್‌ ಸಿಗ್ನಲ್‌ ಸ್ಥಗಿತ! - Vistara News

ಕಲಬುರಗಿ

Summer Season: ವಾಹನ ಸವಾರರನ್ನು ಬಿಸಿಲ ತಾಪದಿಂದ ಪಾರು ಮಾಡಲು ಟ್ರಾಫಿಕ್‌ ಸಿಗ್ನಲ್‌ ಸ್ಥಗಿತ!

Summer Season: ಕಲಬುರಗಿ ಡಿಸಿ ಬಿ.ಫೌಜಿಯಾ ತರನ್ನುಮ್ ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ (Summer Season) ನಡೆಸಿದರು. ಈ ಸಂದರ್ಭದಲ್ಲಿ ಅವರು ಮಹತ್ವದ ಸೂಚನೆ ನೀಡಿದ್ದಾರೆ.

VISTARANEWS.COM


on

District Disaster Management Authority meeting by DC B Fauzia Tarannum
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಲಬುರಗಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ (Summer Season) ಹೆಚ್ಚುತ್ತಿದ್ದು, ಹೆಚ್ಚು ಜನಸಂದಣಿ, ಮಾರುಕಟ್ಟೆ ಪ್ರದೇಶ, ಕೈಗಾರಿಕೆ ಪ್ರದೇಶದಲ್ಲಿ, ಕಟ್ಟಡ ನಿರ್ಮಾಣ ಕೆಲಸಗಳಲ್ಲಿ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು ಮತ್ತು ಸಾರ್ವಜನಿಕರಿಗೆ ಆರೋಗ್ಯ (Health) ಸಲಹೆಗಳನ್ನು ವ್ಯಾಪಕವಾಗಿ ಪ್ರಚಾರ ಮಾಡಬೇಕು, ವಿಫಲವಾದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಡಿಸಿ ಬಿ. ಫೌಜಿಯಾ ತರನ್ನುಮ್ (Kalaburagi News) ಸೂಚಿಸಿದ್ದಾರೆ. ವಿಶೇಷವೆಂದರೆ ವಾಹನ ಸವಾರರನ್ನು ಬಿಸಿಲ ತಾಪದಿಂದ ಪಾರು ಮಾಡಲು ಮಧ್ಯಾಹ್ನದ ವೇಳೆಗೆ ಟ್ರಾಫಿಕ್‌ ಸಿಗ್ನಲ್‌ ಸ್ಥಗಿತಗೊಳಿಸಿ, ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಹೀಟ್ ಸ್ಟ್ರೋಕ್ ಹೆಚ್ಚಳ ಹಿನ್ನೆಲೆಯಲ್ಲಿ ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಿ, ಮಾತನಾಡಿದ ಅವರು, ಬೇಸಿಗೆ ಕಾರಣ ಸಹಜವಾಗಿಯೇ ಮದುವೆ, ಧಾರ್ಮಿಕ ಕಾರ್ಯಕ್ರಮ, ಜಾತ್ರೆ, ಜಯಂತಿ, ಹಬ್ಬ-ಹರಿದಿನಗಳ ಸಾಲುಗಳೇ ನಮ್ಮ ಮುಂದಿವೆ. ಇದರ ಜತೆಗೆ ಚುನಾವಣಾ ಪ್ರಚಾರ ಕಾವು ಹೆಚ್ಚುತ್ತಿದೆ. ಸಾರ್ವಜನಿಕವಾಗಿ ನಡೆಯುವ ಕಾರ್ಯಕ್ರಮಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಶಾಮಿಯಾನದ ವ್ಯವಸ್ಥೆ ಮಾಡುವಂತೆ ಆಯೋಜಕರಿಗೆ ತಿಳಿಸಬೇಕು ಎಂದರು.

ಇದನ್ನೂ ಓದಿ: Gold Rate Today: ಬಂಗಾರದ ಧಾರಣೆಯಲ್ಲಿ ಇಳಿಕೆ; ಹಾಲ್‌ಮಾರ್ಕ್‌ ಗಮನಿಸಿ ಖರೀದಿಸಿ

ಇನ್ನು ಬಿಸಿಲು ತಾಪದಿಂದ ಆಸ್ಪತ್ರೆಗೆ ಬರುವ ಯಾವುದೇ ರೋಗಿಗೆ ನಿಧಾನಗತಿ ಪ್ರವೇಶಾತಿ ಮತ್ತು ಚಿಕಿತ್ಸೆಯನ್ನು ತಾವು ಸಹಿಸುವುದಿಲ್ಲ ಎಂದು ಆರೋಗ್ಯಾಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿಗಳು, ರೋಗಿಗೆ ಪ್ರಥಮಾದ್ಯತೆ ಮೇಲೆ ವೈದ್ಯಕೀಯ ಚಿಕಿತ್ಸೆ ನೀಡಬೇಕು. ಇನ್ನು ಜಿಮ್ಸ್ ಆಸ್ಪತ್ರೆಯಲ್ಲಿ 6 ಬೆಡ್, ಪ್ರತಿ ತಾಲೂಕಾ ಆಸ್ಪತ್ರೆಯಲ್ಲಿ 2-3 ಬೆಡ್ ಹಾಗೂ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಒಂದೆರಡು ಹಾಸಿಗೆಗಳು ಹೀಟ್ ಸ್ಟ್ರೋಕ್ ರೋಗಿಗಳಿಗೆ ಮೀಸಲಿಡಬೇಕು. ಈ ಸಂಬಂಧ ಸರ್ಕಾರದಿಂದ ಬಂದಿರುವ ಎಸ್.ಓ.ಪಿ. ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.

ಟ್ರಾಫಿಕ್ ಸಿಗ್ನಲ್ ಬೇಡ

ಕಲಬುರಗಿ ನಗರದಲ್ಲಿ ಬಿಸಿಲಿನ ತಾಪ ಹೆಚ್ಚಳವಾಗಿದ್ದು, ಇದು ಕಡಿಮೆ ಆಗುವವರೆಗೆ ನಗರದಲ್ಲಿನ ಪ್ರಮುಖ ವೃತ್ತಗಳಲ್ಲಿ ಹಾಕಲಾಗಿರುವ ಟ್ರಾಫಿಕ್ ಸಿಗ್ನಲ್ ವ್ಯವಸ್ಥೆಯನ್ನು ಮಧ್ಯಾಹ್ನ 12 ಗಂಟೆಯಿಂದ ಸಾಯಂಕಾಲ 4 ಗಂಟೆ ವರೆಗೆ ತೆಗೆದು ಮುಕ್ತ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು. ಸಾರ್ವಜನಿಕರು ಮಧ್ಯಾಹ್ನ 12 ರಿಂದ ಸಂಜೆ 4 ಗಂಟೆ ವರೆಗೆ ಅನಗತ್ಯ ಓಡಾಟ ಮಾಡದಂತೆ ಸಲಹೆ ನೀಡಬೇಕು ಎಂದು ಹೆಚ್ಚುವರಿ ಎಸ್.ಪಿ. ಶ್ರೀನಿಧಿ ಅವರಿಗೆ ಡಿಸಿ ಸೂಚನೆ ನೀಡಿದರು.

ನರೇಗಾ ಸೈಟ್‍ಗೆ ಮಕ್ಕಳನ್ನು ಕರೆತರಬೇಡಿ

ಜಿಲ್ಲೆಯಲ್ಲಿ ಬಿರು ಬಿಸಿಲು ಮತ್ತು ಬರಗಾಲ ಎರಡೂ ಇದೆ. ಗ್ರಾಮೀಣ ಭಾಗದ ನರೇಗಾ ಕೂಲಿ ಕಾರ್ಮಿಕರ ಮಕ್ಕಳಿಗೆಂದೆ ಇಲಾಖೆ ಕೂಸಿನ ಮನೆ ಆರಂಭಿಸಿದೆ. ಮಹಿಳೆಯರು ತಮ್ಮ ಮಕ್ಕಳನ್ನು ಈ ಕೇಂದ್ರದಲ್ಲಿ ಬಿಡಬೇಕು. ಬಿಸಿಲು ತಾಪ ಹೆಚ್ಚಳ ಇರುವುದರಿಂದ ಯಾವುದೇ ಕಾರಣಕ್ಕೂ ಮಕ್ಕಳನ್ನು ನರೇಗಾ ಸೈಟ್‍ಗೆ ಕರೆತರಬಾರದು. ಇನ್ನು ಕಾರ್ಮಿಕರ ಕೆಲಸದ ಅವಧಿಯನ್ನು ಬೆಳಿಗ್ಗೆ 7 ರಿಂದ 12 ಗಂಟೆವರೆಗೆ ನಿಗಧಿಪಡಿಸಿ ಈ ಅವಧಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಶಾಮಿಯಾನ, ಓ.ಆರ್.ಎಸ್. ಪಾಕಿಟ್ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.

ಇದನ್ನೂ ಓದಿ: Mirabai Chanu: ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಮೀರಾಬಾಯಿ ಚಾನು

ಹೆಚ್ಚು ನೀರು ಕುಡಿಯಿರಿ, ನೀರಿನಂಶ ಹಣ್ಣು-ತರಕಾರಿ ಸೇವಿಸಿ

ಡಿ.ಎಚ್.ಓ ಡಾ.ರತಿಕಾಂತ ಸ್ವಾಮಿ ಮಾತನಾಡಿ, ಬಿಸಿಲಿನ ತಾಪದಿಂದ ರಕ್ಷಿಸಿಕೊಳ್ಳಲು ಬಾಯಾರಿಕೆ ಇಲ್ಲದಿದ್ದರೂ ಹೆಚ್ಚು ನೀರು ಸೇವಿಸಬೇಕು. ವಿಶೇಷವಾಗಿ ನೀರಿನಂಶ ಹೆಚ್ಚಿರುವ ಕಲ್ಲಂಗಡಿ, ದ್ರಾಕ್ಷಿ, ಕರಬೂಜ, ಕಿತ್ತಳೆ, ಅನಾನಸ್, ಸೌತೆಕಾಯಿ, ದ್ರವ ಪದಾರ್ಥಗಳಾದ ಓ.ಆರ್.ಎಸ್., ಎಳೆನೀರು, ಮಜ್ಜಿಗೆ, ಲಸ್ಸಿ, ನಿಂಬೆ ಹಣ್ಣಿನ ಶರಬತ್ತು, ಹಣ್ಣಿನ ಜ್ಯೂಸ್‍ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸುವುದು ಆರೋಗ್ಯಕ್ಕೆ ಉತ್ತಮ ಎಂದರು.

ಬಿಸಿಲಿನಲ್ಲಿ ಹೊರ ಹೋಗುವ ಸಂದರ್ಭಗಳಲ್ಲಿ ಛತ್ರಿ, ಟೋಪಿ, ಹ್ಯಾಟ್, ಟವೆಲ್ ರಕ್ಷಣೆ ಪಡೆಯಬೇಕು. ಪಾದರಕ್ಷೆ ಅಥವಾ ಶೂಸ್‍ಗಳನ್ನು ಧರಿಸಲೇಬೇಕು. ಹೊರಾಂಗಣ ಚಟುವಟಿಕೆಗಳನ್ನು ಬೆಳಿಗ್ಗೆ 11 ಗಂಟೆ ಒಳಗಾಗಿ ಅಥವಾ ಸಂಜೆ 4 ಗಂಟೆ ನಂತರ ಭಾಗಿಯಾದಲ್ಲಿ ಒಳ್ಳೆಯದು.

ನವಜಾತ ಶಿಶುಗಳು ಹಾಗೂ ಚಿಕ್ಕ ಮಕ್ಕಳು, ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು, ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರು, ಆರೋಗ್ಯ ಸಮಸ್ಯೆಗಳಿರುವವರು, ವಿಶೇಷವಾಗಿ ಹೃದ್ರೋಗ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿರುವವರು ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಕಾಲಕಾಲಕ್ಕೆ ವಿವಿಧ ಮಾಧ್ಯಮಗಳ ಮೂಲಕ ಆರೋಗ್ಯ ಇಲಾಖೆ ನೀಡುವ ಸಲಹೆಯನ್ನು ತಪ್ಪದೆ ಪಾಲಿಸಬೇಕು. ಅತಿಯಾದ ಉಷ್ಣತೆಯಿಂದ ತಲೆ ಸುತ್ತು, ವಾಕರಿಕೆ, ವಾಂತಿ, ತಲೆ ನೋವು, ಅತಿಯಾದ ಬಾಯಾರಿಕೆ, ಏರುಗತಿಯ ಉಸಿರಾಟ, ಹಳದಿ ಬಣ್ಣದ ಮೂತ್ರ ವಿಸರ್ಜನೆ ಕಂಡುಬಂದಲ್ಲಿ ತಕ್ಷಣವೇ ತಂಪಾದ ಸ್ಥಳಕ್ಕೆ ತೆರಳಿ ದ್ರವಾಹಾರ ಸೇವಿಸುವುದು. ಇನ್ನು ಯಾವುದೇ ವ್ಯಕ್ತಿ ತಾಪಾಘಾತ (ಹೀಟ್ ಸ್ಟ್ರೋಕ್) ಆದಲ್ಲಿ ಕೂಡಲೇ ವೈದ್ಯಕೀಯ ನೆರವು ಪಡೆಯಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ: IPL 2024: ರಾಜಸ್ಥಾನ್​ vs ಕೆಕೆಆರ್​ ಪಂದ್ಯದ ದಿನಾಂಕ ಬದಲಾವಣೆ ಸಾಧ್ಯತೆ!

ಸಭೆಯಲ್ಲಿ ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ್, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಆರ್.ಸಿ.ಎಚ್.ಓ ಡಾ.ಶರಣಬಸಪ್ಪ ಕ್ಯಾತನಾಳ, ಜಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ.ಶಿವಕುಮಾರ ಪಾಟೀಲ, ಸಿ.ಸಿ.ಟಿ. ಕಾರ್ಯಕ್ರಮ ಅಧಿಕಾರಿ ಡಾ.ವಿವೇಕಾನಂದ ರೆಡ್ಡಿ, ಟಿ.ಬಿ. ನಿಯಂತ್ರಣಾಧಿಕಾರಿ ಡಾ.ಚಂದ್ರಕಾಂತ ನರಿಬೋಳ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಗುಳಗಿ, ಡಿ.ಎಲ್.ಓ ಡಾ.ರಾಜಕುಮಾರ್‌ ಸೇರಿದಂತೆ ತಾಲೂಕಾ ತಹಸೀಲ್ದಾರರು, ತಾಲೂಕಾ ಆರೋಗ್ಯ ಅಧಿಕಾರಿಗಳು ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Karnataka Rain: ಸೋಮವಾರ ರಾತ್ರಿ ಸುರಿದ ಮಳೆಗೆ (Heavy Rain) ಜನರು ಕಂಗಲಾಗಿದ್ದಾರೆ. ಹಲವೆಡೆ ಭಾರಿ ಮಳೆಗೆ (Karnataka Weather) ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿದ್ದರೆ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದರಿಂದ ನಿವಾಸಿಗಳು ಜಾಗರಣೆ ಮಾಡುವಂತಾಯಿತು.

VISTARANEWS.COM


on

By

karnataka Rain Effected
Koo

ಬೆಂಗಗಳೂರು/ಬೆಳಗಾವಿ: ತಡರಾತ್ರಿ ಸುರಿದ ಮಳೆಯು (Karnataka Rain) ಅವಾಂತರವನ್ನೇ ಸೃಷ್ಟಿಸಿ ಮಾಡಿದೆ. ಬೆಂಗಳೂರಿನಲ್ಲಿ ರಾತ್ರಿ ಪೂರ್ತಿ ಅಬ್ಬರಿಸಿದ ಮಳೆಗೆ (Rain News) ಮರಗಳು ಧರೆಗುರುಳಿದ್ದವು. ನೃಪತುಂಗದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಎದುರಿಗೆ ಮರದ ಕೊಂಬೆ ನೆಲಕ್ಕೆ ಉರುಳಿದ ಪರಿಣಾಮ ಅರ್ಧ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇತ್ತ ಬುಕ್‌ಫೀಲ್ಡ್‌ನಲ್ಲಿ ಮರ ಬಿದ್ದು ಕಾರೊಂದು ಜಖಂಗೊಂಡಿತ್ತು. ಚಾಮರಾಜಪೇಟೆಯ ಗುಡ್ಡದಹಳ್ಳಿಯಲ್ಲಿ ಮನೆಗಳಿಗೆ ಕೆಸರುಮಯ ನೀರು ನುಗ್ಗಿದ್ದರಿಂದ ಹೊರಹಾಕಲು ಜನರು ತೊಂದರೆ ಅನುಭವಿಸಿದರು.

ಮೈಸೂರಿನಲ್ಲಿ ಕುಸಿದು ಬಿದ್ದ ಮನೆ

ಭಾರಿ ಮಳೆಗೆ ಮನೆಯೊಂದು ಕುಸಿದು ಬಿದ್ದ ಘಟನೆ ಮೈಸೂರಿನ ಹುಣಸೂರು ತಾಲೂಕಿನ ಮೂಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮವಾರ ರಾತ್ರಿ ಸುರಿದ ಬಾರಿ ಬಿರುಗಾಳಿ ಸಹಿತ ಮಳೆಗೆ ಭಾಗ್ಯಮ್ಮ ಎಂಬುವವರಿಗೆ ಸೇರಿದ ಮನೆ ಕುಸಿದಿದೆ. ಮನೆ ಕುಸಿದು ಬಿದ್ದಿದ್ದು, ವಾಸ ಮಾಡಲು ಮನೆ ಇಲ್ಲದೆ ಭಾಗ್ಯಮ್ಮ ಕಣ್ಣೀರು ಹಾಕಿದರು. ಮನೆಯಲ್ಲಿ ಸುಮಾರು 6 ತಿಂಗಳು ಸಣ್ಣ ಮಗುವಿದ್ದು ಮಧ್ಯರಾತ್ರಿ ಸುರಿದ ಭಾರಿ ಮಳೆಯಿಂದ ಮನೆ ಕುಸಿದು ಬಿದ್ದು ಕುಟುಂಬವು ಕಂಗಲಾಗಿದೆ. ಮನೆಯಲ್ಲಿದ್ದ ಸಾಮಾನುಗಳು ನಾಶವಾಗಿವೆ. ನಮಗೆ ಆದಷ್ಟು ಬೇಗ ಸರ್ಕಾರ ಪರಿಹಾರ ಮಾಡಿಕೊಡಬೇಕು ಎಂದು ಭಾಗ್ಯಮ್ಮ ಮನವಿ ಮಾಡಿದರು.

ವಿಜಯನಗರದಲ್ಲಿ ಮಳೆಗೆ ಬೆಳೆ ಹಾನಿ

ಕಳೆದ ರಾತ್ರಿ ಮಳೆ ಜೆತಗೆ ಬಿರುಗಾಳಿ ಬೀಸಿದ ಹಿನ್ನೆಲೆಯಲ್ಲಿ ಬಾಳೆ, ಭತ್ತ, ವೀಳ್ಯದೆಲೆ ತೋಟಕ್ಕೆ ಹಾನಿಯಾಗಿದೆ. ವಿಜಯನಗರದ ಹುರುಳಿಹಾಳ ಗ್ರಾಮದಲ್ಲಿ ಗಾಳಿ ಪ್ರಮಾಣ ಹೆಚ್ಚಿದರಿಂದ ವೀಳ್ಯದೆಲೆ ತೋಟಕ್ಕೆ ಹಾನಿಯಾಗಿದೆ. ಕಾನಾಹೊಸಹಳ್ಳಿ ಹೋಬಳಿಯ ಎಕ್ಕೆಗೊಂದಿ ಗ್ರಾಮದಲ್ಲಿ ರೇಷ್ಮೆ ಸಾಗಾಣೆ ಮನೆಗೆ ಹಾನಿಯಾಗಿದೆ. ಹರಪನಹಳ್ಳಿ ತಾಲೂಕಿನಲ್ಲಿ ಗುಡುಗು, ಮಿಂಚು ಸಿಡಿಲಿನ ಆರ್ಭಟ ಮಧ್ಯೆ ಸಾಧಾರಣ ಮಳೆ ವರದಿಯಾಗಿದೆ.

ಧರೆಗುರುಳಿದ ಮರಗಳು

ಚಿಕ್ಕೋಡಿ ಗಡಿ ತಾಲೂಕು ನಿಪ್ಪಾಣಿಯಲ್ಲಿ ರಣ ಗಾಳಿ-ಮಳೆಗೆ ಸಿಕ್ಕಿ ನಲುಗಿದೆ. ನಿಪ್ಪಾಣಿ ನಗರದ ವಿವಿಧೆಡೆ ಗಾಳಿ ಮಳೆಗೆ ಮರಗಳು ಧರೆಗುರುಳಿವೆ. ನಿಪ್ಪಾಣಿಯ ಭೀಮನಗರ,ವಿದ್ಯಾನಗರ,ಅಂಬೇಡ್ಕರ್ ನಗರದ ಹತ್ತಿರ ಮರಗಳು ಬಿದ್ದಿವೆ. ಮುನ್ಸಿಪಲ್ ಹೈಸ್ಕೂಲ್,ಅಬಕಾರಿ ಫೀಸ್ ಸೇರಿದಂತೆ ವಿವಿಧೆಡೆ ಹಾನಿಯಾಗಿದೆ. ಭಾರಿ ಗಾಳಿಗೆ ವಿದ್ಯುತ್ ಕಂಬಗಳು ವಾಲಿದರೆ, ಮನೆಯ ಚಾವಣೆ ಹಾರಿ ಹೋಗಿವೆ. ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ನಿಪ್ಪಾಣಿ ನಗರಸಭೆ ಪೌರಾಯುಕ್ತ ಜಗದೀಶ ಹುಲಗೆಜ್ಜಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸ್ ವಾಹನ ಸೇರಿದಂತೆ ಸುಮಾರು 10ಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿವೆ. ಹಾನಿಯಾದ ಪ್ರದೇಶಗಳಿಗೆ ಜಗದೀಶ ಹುಲಗೆಜ್ಜಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ನಿಪ್ಪಾಣಿ ನಗರ ತತ್ತರಿಸಿದೆ. ಭಾರಿ ಮಳೆಗೆ 20 ಕ್ಕೂ ಹೆಚ್ಚು ಮನೆಗಳ ಚಾವಣಿ ಹಾರಿ ಹೋಗಿದೆ. ಪತ್ರಾಸ್ ಶೇಡ್ ಹಾಗೂ ಹಂಚಿನ ಮನೆಗಳಿಗೆ ಹೆಚ್ಚಿನ ಹಾನಿಯಾಗಿದೆ. ಭಾರಿ ಮಳೆ ಗಾಳಿಗೆ 30 ಕ್ಕೂ ಹೆಚ್ಚು ಮರಗಳು ಧರೆಗೆ ಉರುಳಿವೆ. ಮರಗಳ ಜತೆಗೆ ನಗರದಲ್ಲಿ 50 ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಬಿದ್ದು ಹಾನಿಯಾಗಿವೆ. ಮರಗಳು ಬಿದ್ದು 10 ಕ್ಕೂ ಹೆಚ್ಚು ವಾಹನಗಳು ಸಹ ಜಖಂಗೊಂಡಿವೆ. ಕಳೆದ ರಾತ್ರಿಯಿಂದ ನಿಪ್ಪಾಣಿ ನಗರದಲ್ಲಿ ವಿದ್ಯುತ್ ಕಟ್ ಆಗಿದೆ. ನಿಪ್ಪಾಣಿ ನಗರಸಭೆಯಿಂದ ಮರಗಳ ತೆರುವು ಕಾರ್ಯಾಚರಣೆ ನಡೆಸಲಾಗುತ್ತಿದೆ. ನಿಪ್ಪಾಣಿ ನಗರಸಭೆ ಅಧಿಕಾರಿಗಳು ಹಾನಿಯಾದ ಮನೆಗಳ ಸರ್ವೆಗೆ ಮುಂದಾಗಿದ್ದಾರೆ. ನಿಪ್ಪಾಣಿ ಪಟ್ಟಣದ ಅಂಬೇಡ್ಕರ್ ಗಲ್ಲಿಗೆ ಭೀಮ ನಗರ ಪ್ರದೇಶದಲ್ಲಿ ಅತಿ ಹೆಚ್ಚಿನ ಹಾನಿಯಾಗಿದೆ.

ಇದನ್ನೂ ಓದಿ: Salman Khan: ಸಲ್ಮಾನ್‌ ಖಾನ್‌ ಮನೆ ಎದುರು ಫೈರಿಂಗ್‌ ಕೇಸ್‌; 6ನೇ ಆರೋಪಿಯ ಬಂಧನ

ಆನೇಕಲ್‌ನಲ್ಲಿ ಮನೆಗೆ ನುಗ್ಗಿದ ಚರಂಡಿ ನೀರು

ಸೋಮವಾರ ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ಮನೆಗಳಿಗೆ ಹಾಗೂ ಬಡಾವಣೆಗಳಿಗೆ ಕೊಳಚೆ ನೀರು ನುಗ್ಗಿದೆ. ಚರಂಡಿ-ರಾಜಕಾಲುವೆ ವ್ಯವಸ್ಥೆ ಸರಿ ಇಲ್ಲದೆ ಮನೆಗಳಿಗೆ ನೀರು ನುಗ್ಗಿದೆ. ಇಡೀ ರಾತ್ರಿ ನೀರಿನಲ್ಲಿ ನಿವಾಸಿಗಳು ಕಾಲ ಕಳೆದಿದ್ದಾರೆ. ಹೆಬ್ಬಗೋಡಿ ನಗರಸಭೆ ವ್ಯಾಪ್ತಿಯಲ್ಲಿ ಪ್ರತಿ ಬಾರಿ ಮಳೆ ಬಂದಾಗಲೂ ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗುತ್ತದೆ. ಮನೆಯೊಳಗೆ ನುಗ್ಗಿದ ಕೊಳಚೆ ನೀರನ್ನು ಸ್ವಚ್ಛ ಮಾಡುವುದರಲ್ಲಿ ದಿನದೂಡುತ್ತಿದ್ದಾರೆ.

ವಿಜಯನಗರದಲ್ಲಿ ವರುಣನ ಕೃಪೆಗಾಗಿ ಜಪ – ತಪ

ಜಪ – ತಪ ಮಾಡಿದ ಕೇವಲ ಎಂಟು ದಿನದಲ್ಲಿ ವರುಣನ ಆಗಮನವಾಗಿದೆ. ಕಳೆದ ಒಂದು ವಾರದಲ್ಲಿ ಎರಡು ಬಾರಿ ವಿಜಯನಗರದ ಹೊಸಪೇಟೆ ತಾಲೂಕಿನಲ್ಲಿ ಮಳೆ ಸುರಿದಿದೆ. ಭೀಕರ ಬರಗಾಲ, ಬಿಸಿಲಿನ ಧಗೆಯಿಂದ ಜನರು ಆಂಜನೇಯನ ಮೊರೆ ಹೋಗಿದ್ದರು. ಮಳೆಗಾಗಿ ನೂರಾರು ವರ್ಷ ಹಳೆಯದಾದ ಐತಿಹಾಸಿಕ ಹಿನ್ನೆಲೆವೊಳ್ಳ ಆಂಜನೇಯನಿಗೆ ಮಳೆಗಾಗಿ ನಿತ್ಯ ಪೂಜೆ, ಭಜನೆ ಮಾಡುತ್ತಿದ್ದರು. ಹೊಸಪೇಟೆ ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿರೋ ಐತಿಹಾಸಿಕ ಆಂಜನೇಯ ದೇಗುಲವನ್ನು ವಿಜಯನಗರ ಅರಸರ ಕಾಲದಿಂದಲೂ ವಿಶೇಷ ಸಲ್ಲಿಕೆ ಮಾಡುತ್ತಿದ್ದಾರೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಿಂತ ನೀರು

ಧಾರಾಕಾರ ಮಳೆಗೆ ಹಳೇ ಮೈ-ಬೆಂ ಹೆದ್ದಾರಿಯಲ್ಲಿ ಜಲಾವೃತಗೊಂಡಿತ್ತು. ಶ್ರೀರಂಗಪಟ್ಟಣದ ಅಗ್ನಿಶಾಮಕ ದಳದ ಎದುರಿನ ಮೈ- ಬೆಂ ಹೆದ್ದಾರಿಯಲ್ಲಿ ರಸ್ತೆ ಮಧ್ಯೆ ಮೂರು ಅಡಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡಿದರು. ಹೆದ್ದಾರಿಯಲ್ಲಿ ತೆರಳಲಾಗದೆ ಬೈಕ್ ಸವಾರರು ಬದಲಿ ರಸ್ತೆಯಲ್ಲಿ ಸಾಗಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka weather: ವ್ಯಾಪಕ ಮಳೆಯೊಂದಿಗೆ 60 ಕಿ.ಮೀ ವೇಗದಲ್ಲಿ ಅಪ್ಪಳಿಸಲಿದೆ ಗಾಳಿ; 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Karnataka weather Forecast: ರಾಜ್ಯದ ವಿವಿಧೆಡೆ ಮಳೆ ಅಬ್ಬರ (Heavy Rain)ಮುಂದುವರಿದಿದೆ. ಮೇ 14ರಂದು ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದ್ದು, ಹವಾಮಾನ ಇಲಾಖೆಯು 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ದಕ್ಷಿಣ ಒಳನಾಡು, ಉತ್ತರ ಒಳನಾಡು ಸೇರಿ ಮಲೆನಾಡು ಮತ್ತು ಕರಾವಳಿಯಲ್ಲಿ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು ಗಾಳಿಯೊಂದಿಗೆ (30-40 ಕಿ.ಮೀ) ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡಿನ ಕಲಬುರಗಿ, ಯಾದಗಿರಿ, ಬಾಗಲಕೋಟೆ, ವಿಜಯಪುರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದರೆ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

ಬೆಂಗಳೂರು ವ್ಯಾಪ್ತಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33 ಡಿಗ್ರಿ ಸೆಲ್ಸಿಯಸ್ ಮತ್ತು 24 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌:

ಭಾರೀ ಮಳೆಯೊಂದಿಗೆ ಗುಡುಗು ಹಾಗೂ ಬಿರುಗಾಳಿ ಇರಲಿದ್ದು ಹೀಗಾಗಿ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಪ್ರಮುಖವಾಗಿ ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು, ಯಾದಗಿರಿ, ಕಲಬುರಗಿ, ಬಾಗಲಕೋಟೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Rain News : ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಗಾಳಿಯೊಟ್ಟಿಗೆ ಧಾರಾಕಾರ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಭಾನುವಾರದಂದು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಕರಾವಳಿ, ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿರುವ (Rain News) ವರದಿ ಆಗಿದೆ. ಅತಿ ಹೆಚ್ಚು ಮಳೆಯು ಪುತ್ತೂರು ಹಾಗೂ ರಾಯಚೂರಿನಲ್ಲಿ ತಲಾ 10 ಸೆಂ.ಮೀ (Karnataka Weather Forecast) ಮಳೆಯಾಗಿದೆ. ಉಳಿದಂತೆ ಉಪ್ಪಿನಂಗಡಿ 9, ಸಿರಾ ಮತ್ತು ಕೊಟ್ಟಿಗೆಹಾರದಲ್ಲಿ ತಲಾ 8 ಸೆಂ.ಮೀ, ಗಬ್ಬೂರು, ಬೆಳಗಾವಿಯಲ್ಲಿ 7 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ಗರಿಷ್ಠ ಉಷ್ಣಾಂಶ ರಾಯಚೂರಿನಲ್ಲಿ 39.4 ಡಿ. ಸೆ ದಾಖಲಾಗಿದೆ.

ಕಾಸರಗೋಡಿನಲ್ಲಿ ಗಾಳಿ ಮಳೆಗೆ ನೆಲಕ್ಕುರುಳಿದ ಬೃಹತ್ ಹೋರ್ಡಿಂಗ್‌

ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ ಕೇರಳದ ಕಾಸರಗೋಡಿನ ಬಸ್ ನಿಲ್ದಾಣ ಬಳಿ ಗಾಳಿ ಸಹಿತ ಮಳೆಯಾಗುತ್ತಿದೆ. ಗಾಳಿ ಮಳೆಗೆ ಬೃಹತ್ ಹೋರ್ಡಿಂಗ್‌ ನೆಲಕ್ಕುರುಳಿದ ಘಟನೆ ನಡೆದಿದೆ. ಹೋರ್ಡಿಂಗ್‌ ಬೀಳುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇನ್ನೂ ಹೋರ್ಡಿಂಗ್‌ ಬಿದ್ದು ಕೆಳಗಡೆ ಪಾರ್ಕ್ ಮಾಡಿದ್ದ ವಾಹನಗಳಿಗೆ ಹಾನಿಯಾಗಿದೆ. ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಪಾರ್ಕಿಂಗ್‌ ಜಾಗದಲ್ಲಿ ಜನರು ಇರಲಿಲ್ಲ. ಇದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ.

ಹಾಸನದಲ್ಲಿ ಉರುಳಿ ಬಿದ್ದ ಮರ

ಹಾಸನ ಜಿಲ್ಲೆಯ ವಿವಿಧೆಡೆ ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಮರವೊಂದು ಉರುಳಿ ಬಿದ್ದಿತ್ತು. ಪರಿಣಾಮ ಎರಡು ಗಂಟೆಗೂ ಹೆಚ್ಚು ಸಮಯ ಟ್ರಾಫಿಕ್ ಜಾಮ್ ಉಂಟಾಗಿತ್ತು. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿಘಾಟ್‌ ರಸ್ತೆಯಲ್ಲಿ ಘಟನೆ ನಡೆದಿದೆ.

ಮಂಗಳೂರು-ಬೆಂಗಳೂರು ಸಂಪರ್ಕ ಕಲ್ಪಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಘಾಟ್ ರಸ್ತೆಗೆ ಮರ ಬಿದ್ದಿತ್ತು. ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿದ ವಾಹನ ಸವಾರರು ಪರದಾಡಿದರು. ಸ್ಥಳಕ್ಕಾಗಮಿಸಿ ಟ್ರಾಫಿಕ್‌ ಪೊಲೀಸರು ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಮುಕ್ತ ಮಾಡಿದರು.

ಇದನ್ನೂ ಓದಿ: Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

ಮಳೆ ಜತೆಗೆ 60 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ ಬಿರುಗಾಳಿ

ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿದ್ದು, ಮೇ 14ರಂದು ಭಾರಿ ಮಳೆಯೊಂದಿಗೆ ಗಾಳಿ ವೇಗವು 50-60 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಚಿಕ್ಕಮಗಳೂರು, ಹಾಸನ, ಮಂಡ್ಯ,ಮೈಸೂರು ಸೇರಿ ಕಲಬುರಗಿ, ಬೆಳಗಾವಿ, ಯಾದಗಿರಿ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಕೋಲಾರ, ವಿಜಯಪುರ, ಬಾಗಲಕೋಟೆ, ಬೀದರ್‌, ಧಾರವಾಡ,ಗದಗದಲ್ಲಿ ಗುಡುಗು, ಸಿಡಿಲಿನೊಂದಿಗೆ ಜೋರಾದ ಗಾಳಿಯೊಂದಿಗೆ ಮಳೆಯಾಗಲಿದೆ. ಉಳಿದೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ನಂತರ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಹಾಗೂ ಕನಿಷ್ಠ ಉಷ್ಣಾಂಶ 22 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕಲಬುರಗಿ

Road Accident: ಬೊಲೇರೋ – ಬೈಕ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಆಳಂದದ ದಂಪತಿ ಸಾವು

Road Accident: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನಹಿಪ್ಪರಗಾದಿಂದ ಮಹಾರಾಷ್ಟ್ರದ ಮೈಂದರಿಗಿಗೆ ದಂಪತಿ ಹೋಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಬೊಲೇರೋ ವಾಹನ ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿದ್ದರಿಂದ ತೀವ್ರವಾಗಿ ಗಾಯಗೊಂಡ ದಂಪತಿ ಸ್ಥಳದಲ್ಲೇ ಅಸುನೀಗಿದ್ದಾರೆ. ಸ್ಥಳಕ್ಕೆ ಮಾದನಹಿಪ್ಪರಗಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

VISTARANEWS.COM


on

Road Accident between Bolero and bike Couple dies on the spot
Koo

ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ಮಾದನಹಿಪ್ಪರಗಾದ ಮಡ್ಡಿ ಬಳಿ ಬೊಲೇರೋ ಹಾಗೂ ದ್ವಿ ಚಕ್ರ ವಾಹನ‌ಗಳ ನಡುವೆ ರಸ್ತೆ ಅಪಘಾತ (Road Accident) ಸಂಭವಿಸಿ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗುರುಸಿದ್ದ (42), ಮಧುಮತಿ (34) ಮೃತ ದುರ್ದೈವಿಗಳು. ಇವರು ಮಾದನಹಿಪ್ಪರಗಾ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ.

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನಹಿಪ್ಪರಗಾದಿಂದ ಮಹಾರಾಷ್ಟ್ರದ ಮೈಂದರಿಗಿಗೆ ದಂಪತಿ ಹೋಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಬುಲೇರೋ ನಿಯಂತ್ರಣಕ್ಕೆ ಸಿಗದೆ ಪಕ್ಕದ ಚರಂಡಿಗೆ ಹೋಗಿ ಬಿದ್ದಿದೆ. ಸ್ಥಳಕ್ಕೆ ಮಾದನಹಿಪ್ಪರಗಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ಕೋರ್ಟ್‌ ಇಂಜಂಕ್ಷನ್‌ ಇರುವ ಜಮೀನಿಗೆ ಕಾಲಿಟ್ಟಿದ್ದಕ್ಕೆ ಕುಡುಗೋಲಿನಿಂದ ಕಡಿದು ಕೊಂದರು!

ಶಿವಮೊಗ್ಗ: ತಾಲೂಕಿನ ದುಮ್ಮಳ್ಳಿ ಗ್ರಾಮದ ಒಂದು ಜಮೀನು (Land dispute) ಹಲವು ವರ್ಷಗಳಿಂದ ವಿವಾದದಲ್ಲಿತ್ತು. ಈ ಹಿನ್ನೆಲೆಯಲ್ಲಿ ಇಂಜಂಕ್ಷನ್‌ ಆರ್ಡರ್‌ (Injenction Order) ಅನ್ನು ಸಹ ತರಲಾಗಿತ್ತು. ಇಷ್ಟಾದರೂ ಈ ಜಮೀನಿಗೆ ಪ್ರವೇಶ ಮಾಡಿದ್ದಾನೆ ಎಂಬ ಕಾರಣಕ್ಕೆ ಇನ್ನೊಂದು ಕಡೆಯ ಗುಂಪಿನವರು ದಾಳಿ ನಡೆಸಿ ಕುಡುಗೋಲು ಬೀಸಿ ಕೊಂದು (Murder case) ಹಾಕಿದ್ದಾರೆ.

ಜಮೀನು ವಿವಾದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಹಾಡಹಗಲೇ ಕೊಲೆ ನಡೆದಿದೆ. ಇಂಜಂಕ್ಷನ್‌ ಆರ್ಡರ್ ಇದ್ದ ಜಮೀನಿಗೆ ತೆರಳಿದ್ದ ಸತೀಶ್ ನಾಯ್ಕ (28) ಕೊಲೆಯಾದ ದುರ್ದೈವಿ. ದೂರದ ಸಂಬಂಧಿ ಅಖಿಲೇಶ್ (27) ಸೇರಿದಂತೆ ಹಲವರ ಗುಂಪಿನಿಂದ ಮಾರಣಾಂತಿಕ ಹಲ್ಲೆ ನಡೆದಿದೆ.

ಕಳೆದ ಹಲವಾರು ವರ್ಷಗಳಿಂದ ಈ ಜಮೀನು ವಿವಾದದಲ್ಲಿತ್ತು. ಯಾರೂ ಕೂಡ ಜಮೀ‌ನಿನೊಳಗೆ ತೆರಳದಂತೆ ಇಂಜಂಕ್ಷನ್‌ ಆದೇಶವನ್ನು ತರಲಾಗಿತ್ತು. ಆದರೆ, ಸೋಮವಾರ ಬೆಳಗ್ಗೆ ಸತೀಶ್ ನಾಯ್ಕ ಜಮೀನಿಗೆ ತೆರಳಿದ್ದರು. ಈ ವೇಳೆ ಅಖಿಲೇಶ್‌ ಹಾಗೂ ಕೆಲವರು ಇದನ್ನು ಪ್ರಶ್ನೆ ಮಾಡಿದ್ದಾರೆ. ಆಗ ಪರಸ್ಪರ ಮಾತಿಗೆ ಮಾತು ಬೆಳೆದಿದೆ. ತೀವ್ರ ವಾಗ್ವಾದಗಳು ನಡೆದಿದ್ದು, ಪರಸ್ಪರ ಹೊಡೆದಾಡಿಕೊಳ್ಳುವ ಮಟ್ಟಕ್ಕೆ ಹೋಗಿದೆ.

ಗಲಾಟೆ ಜೋರಾಗುತ್ತಿದ್ದಂತೆ ತಾಳ್ಮೆ ಕಳೆದುಕೊಂಡ ಅಖಿಲೇಶ್‌ ಗುಂಪಿನವರಲ್ಲೊಬ್ಬರು ಸ್ಥಳದಲ್ಲಿದ್ದ ಕುಡುಗೋಲಿನಿಂದ ಹಲ್ಲೆ ನಡೆಸಿದ್ದಾರೆ. ಮತ್ತೆ ಕೆಲವರು ಕೈಯಿಂದಲೇ ಗುದ್ದಿದ್ದಾರೆ. ಬಹಳಷ್ಟು ಜನ ಏಕಾಏಕಿ ದಾಳಿ ನಡೆಸಿದ್ದರಿಂದ ತೀವ್ರವಾಗಿ ಗಾಯಗೊಂಡ ಸತೀಶ್‌ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರ್ಕಾರಿ ಶಾಲೆಯಲ್ಲಿ ಹರಿದ ನೆತ್ತರು; ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ

ಹುಬ್ಬಳ್ಳಿ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಕೊಲೆಯಾಗಿ (Murder case) ಹೋಗಿದ್ದಾನೆ. ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ. ಹುಬ್ಬಳ್ಳಿ (Hubballi News) ತಾಲೂಕಿನ ಹಳ್ಯಾಳ ಗ್ರಾಮದಲ್ಲಿ ಘಟನೆ ನಡೆದಿದೆ.

ಶರೀಫ್‌ಸಾಬ್ ಕಮಡೊಳ್ಳಿ ಎಂಬಾತ ಹತ್ಯೆಯಾದವನು. ಹಳ್ಯಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೊಸ ಕೊಠಡಿಯಲ್ಲೇ ಶರೀಪ್‌ಸಾಬ್‌ನ ಕೊಲೆಯಾಗಿದೆ. ಶಶಿಧರ ಚೆನ್ನೋಜಿ ಕೊಲೆ ಆರೋಪಿ ಎಂದು ಶಂಕಿಸಲಾಗಿದೆ.

ಸದ್ಯ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ರಕ್ತಸಿಕ್ತವಾಗಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಹುಡುಕಾಟವನ್ನು ನಡೆಸುತ್ತಿದ್ದಾರೆ.

ಮೂರು ಮಂದಿಯನ್ನು ಕೊಂದು ಅಬ್ಬರಿಸಿದ ರೌಡಿ ಶೀಟರ್‌ ಕಾಲಿಗೆ ಗುಂಡೇಟು, ಬಂಧನ

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ (Shimogga Gang War) ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ (Triple Murder Case) ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್‌ (Rowdy Sheeter) ಕಾಲಿಗೆ ಪೊಲೀಸರು ಗುಂಡು ಹಾರಿಸಿ (Shoot out) ಬಂಧಿಸಿದ್ದಾರೆ.

ತ್ರಿಬಲ್ ಮರ್ಡರ್ ಪ್ರಕರಣದ ಆರೋಪಿ, ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಶೂಟ್‌ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೀರನಕೆರೆ ಬಳಿ ರೌಡಿ ಶೀಟರ್ ಶೋಹಿಬ್‌ನನ್ನು ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ. ಪಿಎಸ್ಐ ಕುಮಾರ್ ಹಾಗೂ ಹೆಡ್ ಕಾನ್ಸ್‌ಟೇಬಲ್ ಅಣ್ಣಪ್ಪ ಮೇಲೆ ಹಲ್ಲೆಗೆ ಯತ್ನಿಸಿದ್ದ ಶೋಹಿಬ್‌ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ.

ಇದನ್ನೂ ಓದಿ: Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

ಶಿವಮೊಗ್ಗ ನಗರದ ಲಷ್ಕರ್ ಮೊಹಲ್ಲಾ ಸರ್ಕಲ್ ಬಳಿ ಗ್ಯಾಂಗ್‌ ವಾರ್‌ ನಡೆದಿತ್ತು. ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್‌ಗಳನ್ನು ಕೊಚ್ಚಿ ಕೊಲೆ (Murder Case) ಮಾಡಲಾಗಿತ್ತು. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಭೀಕರವಾಗಿ ದುಷ್ಕರ್ಮಿಗಳು ಕೊಲೆ ಮಾಡಿದ್ದರು. ತುಂಗಾನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಶೋಯೆಬ್ ಅಲಿಯಾಸ್ ಸೇಬು‌, ದೊಡ್ಡಪೇಟೆ ಠಾಣಾ ವ್ಯಾಪ್ತಿಯ ರೌಡಿಶೀಟರ್ ಗೌಸ್ ಹತ್ಯೆಯಾಗಿತ್ತು. ಚಾಕುವಿನಿಂದ ತಿವಿತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಯಾಸೀನ್‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.

ಮೊದಲಿಗೆ ಮೃತ ಯುವಕರ ಕಡೆಯ ಗುಂಪು ರೌಡಿ ಶೀಟರ್ ಯಾಸೀನ್ ಕುರೇಶಿ ಎಂಬಾತನ ಮೇಲೆ ದಾಳಿ ಮಾಡಿದೆ. ಹೀಗಾಗಿ ಯಾಸೀನ್ ಕುರೇಶಿ ಗ್ಯಾಂಗ್ ಪ್ರತಿದಾಳಿ ನಡೆಸಿ, ಹಲ್ಲೆ ಮಾಡಲು ಬಂದಿದ್ದ ಶೋಯೆಬ್, ಗೌಸ್‌ನನ್ನು ಕೊಲೆ ಮಾಡಿದ್ದಾರೆ. ಬ್ಯಾಟ್, ಲಾಂಗುಗಳಿಂದ ಹೊಡೆದು, ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

Continue Reading
Advertisement
Job News
ಉದ್ಯೋಗ12 mins ago

Job News: ಅಟೆನ್ಷನ್‌ ಪ್ಲೀಸ್‌; ಸರ್ಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ಇಂದು, ನಾಳೆ ಕೊನೆಯ ದಿನ

kurkure divorce viral news
ವೈರಲ್ ನ್ಯೂಸ್13 mins ago

Viral News: ಕುರ್ಕುರೆ ಪ್ಯಾಕ್‌ ತರದೇ ಹೋದ ಗಂಡನಿಗೆ ಡೈವೋರ್ಸ್!‌

Supriya Sule
ದೇಶ22 mins ago

Supriya Sule: ಇವಿಎಂ ಇದ್ದ ಸ್ಟ್ರಾಂಗ್‌ ರೂಂ ಸಿಸಿಟಿವಿ ಕ್ಯಾಮೆರಾ ಸ್ವಿಚ್‌ ಆಫ್‌; ಸುಪ್ರಿಯಾ ಸುಳೆ ಗಂಭೀರ ಆರೋಪ, EC ರಿಯಾಕ್ಟ್‌

Road Accident
ಕ್ರೈಂ34 mins ago

Road Accident: ಸ್ಕೂಟರ್‌ಗೆ ಟ್ರಕ್‌, ಲಾರಿಗೆ ಬಸ್‌, ಡಿವೈಡರ್‌ಗೆ ಕಾರು ಡಿಕ್ಕಿ; ಅಪಾಯದಿಂದ ಜಸ್ಟ್‌ ಮಿಸ್‌

HD Revanna released from jail Revanna Go straight to HD Deve Gowda house
ಕ್ರೈಂ48 mins ago

HD Revanna Released: ಜೈಲಿಂದ ಬಿಡುಗಡೆಯಾದ ಎಚ್.ಡಿ. ರೇವಣ್ಣ; ನೇರವಾಗಿ ದೇವೇಗೌಡರ ಮನೆಗೆ ದೌಡು

Viral video
ವೈರಲ್ ನ್ಯೂಸ್56 mins ago

Viral video: ರಿಂಕು ಸಿಂಗ್​ ಜೆರ್ಸಿ ತೊಟ್ಟು ಚೆಂಡು ಕದಿಯಲು ಯತ್ನಿಸಿ ಸಿಕ್ಕಿ ಬಿದ್ದ ಭೂಪ!; ಪೊಲೀಸರಿಂದ ಬಿತ್ತು ಹಿಗ್ಗಾಮುಗ್ಗಾ ಗೂಸಾ

Vaishnavi Gowda
ಕಿರುತೆರೆ1 hour ago

Vaishnavi Gowda: ನಟಿ ವೈಷ್ಣವಿ ಗೌಡಗೆ ನೋಟಿಸ್‌ ಕೊಟ್ಟ ಟ್ರಾಫಿಕ್‌ ಪೊಲೀಸರು; ಸೀತಮ್ಮ ಮಾಡಿದ ತಪ್ಪೇನು?

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 hour ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

pm narendra modi nomination
ಪ್ರಮುಖ ಸುದ್ದಿ1 hour ago

PM Narendra Modi: ಪಿಎಂ ಮೋದಿ ನಾಮಪತ್ರ ಅನುಮೋದಿಸಿದ ನಾಲ್ವರ ಹಿನ್ನೆಲೆ ಏನು?

Viral Video
Latest1 hour ago

Viral Video: ಇಲ್ಲಿ ಸಿಗೋದು ಡಿಸೇಲ್ ಪರಾಠಾ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 hour ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು3 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ9 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ20 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ20 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ20 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ21 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ21 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

ಟ್ರೆಂಡಿಂಗ್‌