Site icon Vistara News

Kali Bridge Collapse: ಕಾಳಿನದಿ ಸೇತುವೆ ಕುಸಿತ; ಉ.ಕ ಡಿಸಿಯಿಂದ ಮಾಹಿತಿ ಪಡೆದ ಸಿಎಂ

CM Siddaramaiah

ಮೈಸೂರು: ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಕಾಳಿ ನದಿ ಸೇತುವೆ ಕುಸಿದು (Kali Bridge Collapse) ಬಿದ್ದಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರಿಗೆ ಕರೆ ಮಾಡಿ ಬುಧವಾರ ಮಾಹಿತಿ ಪಡೆದರು.

ಜಿಲ್ಲೆಯಲ್ಲಿ ಎಲ್ಲ ಸೇತುವೆಗಳು, ರಸ್ತೆಗಳ ಸುರಕ್ಷತೆಯ ಕುರಿತು ಖಾತರಿಪಡಿಸುವಂತೆ ಹಾಗೂ ಯಾವುದೇ ಜೀವಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಇದನ್ನೂ ಓದಿ: Namma Metro: ಆ.6ರಂದು ನಮ್ಮ ಮೆಟ್ರೋದಲ್ಲಿ ದಾಖಲೆ ಸಂಖ್ಯೆಯಲ್ಲಿ ಪ್ರಯಾಣಿಕರ ಓಡಾಟ

ಘಟನೆಯ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಸೇತುವೆ ಕುಸಿದ ಸಂದರ್ಭದಲ್ಲಿ ಗಾಯಗೊಂಡ ಲಾರಿ ಚಾಲಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣ ಕಾರ್ಯಚರಣೆಗಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಸೇತುವೆಯ ಪರಿಶೀಲನೆಗಾಗಿ ಮತ್ತು ಪ್ರದೇಶದಲ್ಲಿನ ಎಲ್ಲಾ ಸೇತುವೆಗಳ ಸುರಕ್ಷತೆಯನ್ನು ಖಚಿತಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (NHAI) ಅಧಿಕೃತ ಪತ್ರವನ್ನು ಕಳುಹಿಸಲಾಗಿದೆ ಎಂದು ವಿವರಿಸಿದರು.

ಕಾಳಿ ನದಿಗೆ ಕಟ್ಟಿದ ಸೇತುವೆ ಕುಸಿತ, ಟ್ರಕ್‌ ಬಿದ್ದು ಚಾಲಕನಿಗೆ ಗಾಯ

ಕಾಳಿ ನದಿಗೆ (Kali River) ಅಡ್ಡಲಾಗಿ ಕಟ್ಟಿದ್ದ ಹಳೆಯ ಸೇತುವೆ (Kali Bridge Collapse) ಕುಸಿದುಬಿದ್ದಿದ್ದು, ಅದರ ಮೇಲೆ ಚಲಿಸುತ್ತಿದ್ದ ಟ್ರಕ್‌ ಕೆಳಗೆ ಬಿದ್ದು ಚಾಲಕನಿಗೆ (truck driver injury) ಗಾಯವಾಗಿದೆ. ಹೊಸ ಸೇತುವೆಯಲ್ಲಿ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಿದ್ದ ಕಾರಣ ಭಾರಿ ಅನಾಹುತ ಆಗಿಲ್ಲ.

ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದ ಕೋಡಿಭಾಗ್‌ನಲ್ಲಿರುವ ಈ ಸೇತುವೆಯನ್ನು ಕಾರವಾರ- ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ನಿರ್ಮಿಸಲಾಗಿದೆ. ಇದು ಸುಮಾರು 60 ವರ್ಷ ಹಳೆಯದಾದ ಸೇತುವೆ. ಇತ್ತೀಚೆಗೆ ನಿರ್ಮಿಸಲಾದ ಹೊಸ ಸೇತುವೆಯಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದ್ದು, ಹಳೆಯ ಸೇತುವೆಯನ್ನು ಅಪಾಯಕಾರಿ ಎಂದು ಪರಿಗಣಿಸಲಾಗಿತ್ತು.

ಮಳೆ ಹಾಗೂ ನೀರಿನ ರಭಸ ಹೆಚ್ಚಾಗಿ ಸೇತುವೆ ಕುಸಿದು ಕೆಳಗೆ ಬಿದ್ದಿದ್ದು, ಅದರ ಮೇಲಿದ್ದ ಟ್ರಕ್‌ ಕೆಳಗೆ ಬಿದ್ದು ಚಾಲಕನಿಗೆ ಗಾಯವಾಗಿದೆ. ಚಾಲಕನನ್ನು ಅಗ್ನಿಶಾಮಕ‌ ಹಾಗೂ ಪೊಲೀಸ್ ಸಿಬ್ಬಂದಿ ರಕ್ಷಿಸಿದ್ದಾರೆ. ಲಾರಿ ಚಾಲಕ ಕೇರಳ ಮೂಲದ ರಾಧಾಕೃಷ್ಣ ನಾಳಾ ಸ್ವಾಮಿ (37) ರಕ್ಷಣೆಗೊಳಗಾದವರು. ಟ್ರಕ್‌ ಸಂಪೂರ್ಣ ನೀರಿನಲ್ಲಿ ಮುಳುಗಿದೆ.

ವಿಷಯ ತಿಳಿದ ಕೂಡಲೇ ಎಚ್ಚೆತ್ತ ಉತ್ತರಕನ್ನಡ ಎಸ್.ಪಿ ನಾರಾಯಣ್, ಎಎಸ್‌ಪಿ ಜಯಕುಮಾರ ಹಾಗೂ ಡಿಎಸ್‌ಪಿ ಗಿರೀಶ್ ಸೇರಿದಂತೆ ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿದೆ. ಲಾರಿ ಚಾಲಕನನ್ನು ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಪೊಲೀಸರಿಂದ ಮಾಹಿತಿ ಸಿಗುತ್ತಿದ್ದಂತೆ ಡಿಸಿ ಲಕ್ಷ್ಮಿಪ್ರಿಯಾ ಮಧ್ಯರಾತ್ರಿ ಸ್ಥಳಕ್ಕೆ ಧಾವಿಸಿದ್ದು, ಮಾಹಿತಿ ಪಡೆದರು.

ಅವೈಜ್ಞಾನಿಕ ಕಾಮಗಾರಿಯಿಂದ ಕಳೆದ 15 ದಿನಗಳ ಹಿಂದಷ್ಟೆ ಶಿರೂರು ಗುಡ್ಡ ಕುಸಿತ ಆಗಿತ್ತು. ಈಗ ಹಳೆಯ ಸೇತುವೆ ಬಿದ್ದಿರುವ ಹಿನ್ನೆಲೆಯಲ್ಲಿ, ಐಆರ್‌ಬಿಯಿಂದ ನಿರ್ಮಾಣ ಮಾಡಿರುವ ಹೊಸ ಸೇತುವೆಯ ಗುಣಮಟ್ಟ ಪರೀಕ್ಷೆ ಮಾಡಲು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಈಗ ಕುಸಿದ ಸೇತುವೆಯ ಪಕ್ಕದಲ್ಲಿರುವ ಹೊಸ ಸೇತುವೆಯ ಗುಣಮಟ್ಟ ಪರೀಕ್ಷೆ ಮಾಡಲು, ಸೇತುವ ಗುಣಮಟ್ಟದ ಬಗ್ಗೆ 12 ಗಂಟೆಯೊಳಗೆ ವರದಿ ಸಲ್ಲಿಸುವಂತೆ IRB ಹಾಗೂ NHAIಗೆ ಡಿಸಿ ಲಕ್ಷ್ಮೀಪ್ರಿಯಾ ಆದೇಶಿಸಿದ್ದಾರೆ. ಸೇತುವೆ ಗುಣಮಟ್ಟದ ವರದಿ ಬರುವವರೆಗೂ ಸಂಚಾರ ನಿಷೇಧಿಸಲಾಗಿದ್ದು, ಸದ್ಯ ಕಾರವಾರದಿಂದ ಗೋವಾ ಕಡೆ ಹೋಗುವ ಸಂಚಾರ ಬಂದ್ ಆಗಿದೆ.

ಇದನ್ನೂ ಓದಿ: Bangladesh Unrest: ಬಾಂಗ್ಲಾದೇಶಕ್ಕೆ ಎಂದಿನಂತೆ ವಿಮಾನ ಹಾರಾಟ; ಢಾಕಾದಿಂದ ದಿಲ್ಲಿಗೆ ಬಂದಿಳಿದ 205 ಭಾರತೀಯರು

ಉತ್ತರಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಭಾನುವಾರ ಕಾರವಾರದ ಸುರಂಗ ಮಾರ್ಗದಲ್ಲಿ ಕಲ್ಲು ಕುಸಿದಿತ್ತು. ರಾಷ್ಟ್ರೀಯ ಹೆದ್ದಾರಿ 66ರ ಸುರಂಗ ಮಾರ್ಗದಲ್ಲಿ ಬಿಣಗಾದಿಂದ ಕಾರವಾರಕ್ಕೆ ಆಗಮಿಸುವ ಸುರಂಗದ ಎದುರು ಭಾರಿ ಪ್ರಮಾಣದ ಕಲ್ಲು, ಮಣ್ಣು ಕುಸಿದಿತ್ತು. ಅದೃಷ್ಟವಶಾತ್ ವಾಹನ ಸವಾರರು ಪಾರಾಗಿದ್ದರು. ಸ್ಥಳಕ್ಕೆ ಬಂದ ಕಾರವಾರ ಟ್ರಾಫಿಕ್ ಪೊಲೀಸರು ಐಆರ್‌ಬಿ ಕಾರ್ಮಿಕರಿಂದ ಹೆದ್ದಾರಿಯಲ್ಲಿ ಬಿದ್ದ ಕಲ್ಲು ಮಣ್ಣು ತೆರವು ಮಾಡಿಸಿದ್ದರು. ಮುನ್ನೆಚ್ಚರಿಕಾ ಕ್ರಮವಾಗಿ ಬಿಣಗಾ ಕಾರವಾರ ಟನೆಲ್ ಬಂದ್ ಮಾಡಿಸಿದ್ದರಲ್ಲದೆ, ಬಿಣಗಾದಿಂದ ಬೈತಕೋಲ್ ಮಾರ್ಗದಲ್ಲಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದರು.

Exit mobile version