Kalladka Prabhakara Bhat : ಕಲ್ಲಡ್ಕ ಪ್ರಭಾಕರ್‌ ಭಟ್‌ಗೆ ಜಾಮೀನು ಸಿಗುತ್ತಾ? ಜ. 17ಕ್ಕೆ ತೀರ್ಪು - Vistara News

ಕರ್ನಾಟಕ

Kalladka Prabhakara Bhat : ಕಲ್ಲಡ್ಕ ಪ್ರಭಾಕರ್‌ ಭಟ್‌ಗೆ ಜಾಮೀನು ಸಿಗುತ್ತಾ? ಜ. 17ಕ್ಕೆ ತೀರ್ಪು

Kalladka Prabhakara Bhat : ಮುಸ್ಲಿಂ ಮಹಿಳೆಯರಿಗೆ ಪರ್ಮನೆಂಟ್‌ ಗಂಡ ಸಿಕ್ಕಿದ್ದು ಮೋದಿ ಬಂದ ಮೇಲೆ ಎಂಬ ವಿವಾದಾತ್ಮಕ ಹೇಳಕೆ ನೀಡಿದ ಆರೆಸ್ಸೆಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ಅವರ ಜಾಮೀನು ಅರ್ಜಿಯ ತೀರ್ಪು ಜನವರಿ 17ರಂದು ಹೊರಬೀಳಲಿದೆ.

VISTARANEWS.COM


on

kalladka prabhakar bhat najma naseer
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಮುಸ್ಲಿಮ್‌ ಮಹಿಳೆಯರ ವಿರುದ್ಧ ಅವಹೇಳನಕಾರಿ (Defamatory Statement) ಹೇಳಿಕೆ ನೀಡಿದ ಆರೋಪ ಹೊತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡ (RSS Leader) ಕಲ್ಲಡ್ಕ ಪ್ರಭಾಕರ ಭಟ್‌ (Kalladka Prabhakara Bhat) ಅವರಿಗೆ ಜಾಮೀನು ಸಿಗುವುದೇ (Bail Application) ಎಂಬುದು ಜನವರಿ 17ಕ್ಕೆ ತೀರ್ಮಾನವಾಗಲಿದೆ.

ಪ್ರಭಾಕರ್‌ ಭಟ್‌ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ನಡೆಸಿದ ಶ್ರೀರಂಗಪಟ್ಟಣದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೋಪಾಲ ಕೃಷ್ಣ ರೈ ಟಿ. ಆದೇಶವನ್ನು ಜನವರಿ 17ಕ್ಕೆ ಕಾಯ್ದಿರಿಸಿದರು.

ಹನುಮ ಜಯಂತ್ಯುತ್ಸವದ ಅಂಗವಾಗಿ ಡಿಸೆಂಬರ್‌ 24ರಂದು ಶ್ರೀರಂಗ ಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆಯು ಆಯೋಜಿಸಿದ್ದ ಸಂಕೀರ್ತನಾ ಯಾತ್ರೆಯಲ್ಲಿ ಪ್ರಭಾಕರ್‌ ಭಟ್‌ ಮುಸ್ಲಿಮರ ವಿರುದ್ಧ ಧಾರ್ಮಿಕ ದ್ವೇಷಕಾರಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಜೀರ್‌ ನೀಡಿದ್ದರು. ಅಂದಿನ ಸಭೆಯಲ್ಲಿ ಪ್ರಭಾಕರ ಭಟ್‌ ಅವರು ಮುಸ್ಲಿಂ ಮಹಿಳೆಯರಿಗೆ ಪರ್ಮನೆಂಟ್‌ ಗಂಡಾನೇ ಇರಲಿಲ್ಲ. ಅವರಿಗೆ ಪರ್ಮನೆಂಟ್‌ ಗಂಡ ಕೊಟ್ಟಿದ್ದು ಮೋದಿ ಎಂದು ಹೇಳಿದ್ದರು. ಇದರ ವಿರುದ್ಧ ನಜ್ಮಾ ನಜೀರ್‌ ಅವರು ಶ್ರೀರಂಗಪಟ್ಟಣ ಟೌನ್‌ ಠಾಣೆಯ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಪ್ರಭಾಕರ್‌ ಭಟ್‌ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 294 (ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲ ಮಾತುಗಳನ್ನು ಆಡುವುದು), 509 (ಮಹಿಳೆಯ ಖಾಸಗಿತನಕ್ಕೆ ಸಂಬಂಧಿಸಿದ ಮಾತುಗಳನ್ನಾಡುವುದು), 153ಎ (ಧರ್ಮದ ಆಧಾರದಲ್ಲಿ ಸಮುದಾಯಗಳ ನಡುವೆ ದ್ವೇಷ ಹರಡುವುದು) ಮತ್ತು 298 (ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವುದು) ಅಡಿ ಪ್ರಕರಣ ದಾಖಲಿಸಿದ್ದರು.

ನಜ್ಮಾ ನಜೀರ್‌ ಪರ ವಕೀಲರು ಹೇಳುವುದೇನು?

ದೂರುದಾರೆ ನಜ್ಮಾ ನಜೀರ್‌ ಅವರ ಪರವಾಗಿ ಹಾಜರಾಗಿದ್ದ ವಕೀಲ ಎಸ್‌ ಬಾಲನ್‌ ಅವರು “ಪ್ರಕರಣದ ವಾಸ್ತವಿಕ ಅಂಶಗಳನ್ನು ಪರಿಗಣಿಸಿದರೆ ಮೇಲ್ನೋಟಕ್ಕೆ ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯಿದೆ (ಯುಎಪಿಎ) ಸೆಕ್ಷನ್‌ 13 ಮತ್ತು ಕೋಕಾ ಕಾಯಿದೆಯ ನಿಬಂಧನೆಗಳು ಅನ್ವಯಿಸುತ್ತವೆ. ಯಾವುದೇ ಕೋನದಿಂದ ನೋಡಿದರೂ ಅರ್ಜಿದಾರ ಭಟ್‌ ಅವರನ್ನು ಕಸ್ಟಡಿಗೆ ಪಡೆದು ವಿಚಾರಣೆಗೆ ಒಳಪಡಿಸಬೇಕಿದೆ. ಅಲ್ಲದೇ, ದೇಶದ ಸಮಗ್ರತೆ, ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಗೆ ಧಕ್ಕೆ ಮಾಡುವ ವಸ್ತುಗಳನ್ನು ಅರ್ಜಿದಾರರಿಂದ ವಶಕ್ಕೆ ಪಡೆಯಬೇಕಿದೆ. ಇದೆಲ್ಲದರ ಜೊತೆಗೆ ಮೇಲ್ನೋಟಕ್ಕೆ ಮಧ್ಯಂತರ ಜಾಮೀನು ಪಡೆಯಲು ಅವರು ಅರ್ಹರಲ್ಲ” ಎಂದು ಜಾಮೀನಿಗೆ ತೀವ್ರ ವಿರೋಧ ದಾಖಲಿಸಿದರು.

ಇದನ್ನೂ ಓದಿ: Kalladka Prabhakar Bhat : ಆರೆಸ್ಸೆಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ಬಂಧನ ಇಲ್ಲ ಎಂದ ಸರ್ಕಾರ

“ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವು ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಸವಾರಿ ಮಾಡಲು ಅವಕಾಶ ಮಾಡಿಕೊಡಲಾಗದು. ಜನರ ಕಲ್ಯಾಣಕ್ಕೆ ಅನುವು ಮಾಡಿಕೊಡಲು ರಾಜ್ಯ ಸರ್ಕಾರವು ಶಾಂತಿ ಸುವ್ಯವಸ್ಥೆ ಕಾಪಾಡಬೇಕು. ಇದಕ್ಕಾಗಿ ಕಾನೂನು ಉಲ್ಲಂಘಿಸುವವರನ್ನು ಕಾನೂನಿನ ಅಡಿ ತರಬೇಕು” ಎಂದರು.

ಸದ್ಯದ ಇಸ್ಲಾಮೋಫೋಬಿಕ್ ವಾತಾವರಣದಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷದ ಆಧಾರದ ಮೇಲೆ ರಾಷ್ಟ್ರೀಯ ಅಭಿಪ್ರಾಯ ರೂಪಿಸಲು ಅರ್ಜಿದಾರರು ಬಯಸಿದ್ದಾರೆ. ಮುಸ್ಲಿಮರನ್ನು ಅತಿಮಾನುಷವಾಗಿ ಬಿಂಬಿಸುವ ಉದ್ದೇಶವನ್ನು ಹೊಂದಿದ್ದಾರೆ. ಭಟ್‌ ಅವರ ಭಾಷಣವು ಮುಸ್ಲಿಂ ಸಮುದಾಯವನ್ನು ನಿಂದಿಸುವ ಅವರ ಪ್ರಾಥಮಿಕ ಉದ್ದೇಶವನ್ನು ಸೂಚಿಸುತ್ತದೆ ಎಂದು ಆಕ್ಷೇಪಿಸಿದರು.

ಪ್ರಭಾಕರ ಭಟ್‌ ಪರ ವಕೀಲರ ವಾದವೇನು?

ಪ್ರಭಾಕರ್‌ ಭಟ್‌ ಪರವಾಗಿ ವಾದಿಸಿದ ವಕೀಲ ಚಂದ್ರೇಗೌಡ ಅವರು ತಮ್ಮ ಕಕ್ಷಿದಾರರ ವಿರುದ್ಧ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿರುವ ಸೆಕ್ಷನ್‌ಗಳು ಅನ್ವಯಿಸುವುದಿಲ್ಲ. ದೂರುದಾರೆಯು ನೊಂದ ಮಹಿಳೆಯಲ್ಲ. ಭಟ್‌ ಅವರಿಗೆ 82 ವರ್ಷ ವಯಸ್ಸಾಗಿದ್ದು, ಹೃದಯ ಶಸ್ತ್ರಚಿಕಿತ್ಸೆಯಾಗಿದೆ. ಭಟ್‌ ಅವರು ಸಮಾಜದಲ್ಲಿ ಗಣ್ಯ ವ್ಯಕ್ತಿಯಾಗಿದ್ದು, ಅವರ ವಿರುದ್ಧ ದೂರು ನೀಡಿದರೆ ಪ್ರಚಾರ ಪಡೆಯಬಹುದು ಎಂಬ ದುರುದ್ದೇಶವಿದೆ. ಭಟ್‌ ಅವರ ಭಾಷಣದಲ್ಲಿ ಕೋಮು ದ್ವೇಷ ಹರಡುವ ಅಥವಾ ಸೃಷ್ಟಿಸುವ ಉದ್ದೇಶವಿಲ್ಲ. ಘಟನೆ ನಡೆದ ಹಲವು ದಿನಗಳ ಬಳಿಕ ದೂರು ನೀಡಲಾಗಿದೆ ಎಂದು ಸಮರ್ಥಿಸಿದರು.

ಶ್ರೀರಂಗಪಟ್ಟ ಪೊಲೀಸರ ಪರವಾಗಿ ವಾದಿಸಿದ ಸರ್ಕಾರಿ ಅಭಿಯೋಜಕರು ಆರೋಪಿಯ ವಿರುದ್ಧ ಅನ್ವಯಿಸಿರುವ ಸೆಕ್ಷನ್‌ಗಳು ಗಂಭೀರ ಸ್ವರೂಪದ್ದಾಗಿವೆ. ಜಾಮೀನು ಪಡೆಯಲು ಅವರು ಅರ್ಹರಲ್ಲ ಎಂದು ವಾದಿಸಿದರು. ಈ ನಡುವೆ ರಾಜ್ಯ ಹೈಕೋರ್ಟ್‌ ಈ ಪ್ರಕರಣದಲ್ಲಿ ಪ್ರಭಾಕರ ಭಟ್‌ ಅವರನ್ನು ತಕ್ಷಣ ಬಂಧಿಸಬಾರದು ಎಂದು ಮಧ್ಯಂತರ ತಡೆಯಾಜ್ಞೆ ನೀಡಿದೆ. ಸರ್ಕಾರವೂ ಪ್ರಭಾಕರ ಭಟ್‌ ಅವರನ್ನು ಬಂಧಿಸುವುದಿಲ್ಲ ಎಂದು ಹೇಳಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಪ್ರಮುಖ ಸುದ್ದಿ

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

VISTARANEWS.COM


on


ಕೇಂದ್ರ ಚುನಾವಣಾ ಆಯೋಗ 3 ನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್‌ಐಆರ್‌) ಘೋಷಣೆ ಮಾಡಿದೆ. ಇದರಲ್ಲಿ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಸೇರಿದ್ದು, ಮೇ 30ರಿಂದ ಎಸ್‌ಐಆರ್‌ ನಡೆಯಲಿದೆ.
ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ದೆಹಲಿ, ಹರಿಯಾಣ, ಪಂಜಾಬ್‌, ಚಂಡೀಗಢ, ಒಡಿಶಾ, ಮಿಜೋರಾಂ, ಸಿಕ್ಕಿಂ, ಮಣಿಪುರ, ಉತ್ತರಾಖಂಡ, ಅರುಣಾಚಲ ಪ್ರದೇಶ, ಮೇಘಾಲಯ, ಜಾರ್ಜಂಡ್‌, ನಾಗಾಲ್ಯಾಂಡ್‌, ತ್ರಿಪುರ, ದಾದರ್‌ ಮತ್ತು ನಗರ ಹವೇಲಿ, ದಮನ್‌ ಮತ್ತು ದಿಯುಗಳಲ್ಲಿ 3 ನೇ ಹಂತದಲ್ಲಿ ಎಸ್‌ಐಆರ್‌ ನಡೆಯಲಿದೆ.
3ನೇ ಹಂತದ ಎಸ್‌ಐಆರ್‌ನಲ್ಲಿ 3.94 ಲಕ್ಷಕ್ಕೂ ಅಧಿಕ ಬೂತ್‌ ಮಟ್ಟದ ಅಧಿಕಾರಿಗಳು 36.73ಕೋಟಿ ಮತದಾರರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.
ಈಗಾಗಲೇ ದೇಶದ 10 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ನಡೆಸಲಾಗಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಛತ್ತೀಸಗಢ, ಕೇರಳಂ, ಪುದುಚೇರಿ, ಅಂಡಮಾನ್‌ ಮತ್ತು ನಿಕೋಬಾರ್‌, ಲಕ್ಷದ್ವೀಪ, ಗುಜರಾತ್‌, ಮಧ್ಯಪ್ರದೇಶ, ಗೋವಾ ಮತ್ತು ಬಿಹಾರದಲ್ಲಿ ಈಗಾಗಲೇ ಎಸ್‌ಐಆರ್‌ ಕಾರ್ಯ ಮುಗಿದಿದೆ.
ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಎಸ್‌ಐಆರ್‌ ಬಾಕಿ ಇದ್ದು, ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ವೇಳಾಪಟ್ಟಿ ಘೋಷಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

Continue Reading

ಚಿತ್ರದುರ್ಗ

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

VISTARANEWS.COM


on

ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್‌ ಅವರ ಅಗಲಿಕೆಯಿಂದ ರಾಜ್ಯ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ. ಸುಧಾಕರ್‌ ಅವರ ನಿವಾಸದಲ್ಲಿ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, “ಸುಧಾಕರ್‌ ಅವರು ಜನಪರ ನಾಯಕನಾಗಿ ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ರಾಜ್ಯಕ್ಕೆ ಅಪಾರ ನಷ್ಟವಾಗಿದೆ” ಎಂದು ಹೇಳಿದರು.

ಸುಧಾಕರ್‌ ಅವರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. “ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದು ಸಿಎಂ ಪ್ರಾರ್ಥಿಸಿದರು.

ಡಿ. ಸುಧಾಕರ್‌ ಅವರು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಅವರ ನಿಧನ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದ್ದು, ಸೋಮವಾರ ಸರ್ಕಾರಿ ರಜೆ ಘೋಷಿಸಲಾಗಿದೆ.

ನಾಳೆ ಸಂಜೆ 4 ಗಂಟೆಗೆ ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

Continue Reading

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

VISTARANEWS.COM


on

ಕಾಂಗ್ರೆಸ್‌ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌‌‌ ಅಭ್ಯರ್ಥಿ ಸಮರ್ಥ್​ ಮಲ್ಲಿಕಾರ್ಜುನ್‌‌‌‌‌‌ ವಿಜಯ ಪತಾಕೆ ಹಾರಿಸಿದ್ದಾರೆ. ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಹಾಗೂ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌, ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಅವರ ಪುತ್ರ ಸಮರ್ಥ್‌ ಉಪಸಮರದಲ್ಲಿ ಗೆದ್ದು ಬೀಗಿದ್ದಾರೆ. ಇವರಿಗೆ ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಸೋಲನುಭವಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಏ.9ರಂದು ಉಪಚುನಾವಣೆ ನಡೆದಿತ್ತು.

Continue Reading
Advertisement
Latest9 hours ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

Latest10 hours ago

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

ಪ್ರಮುಖ ಸುದ್ದಿ10 hours ago

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

Latest11 hours ago

ಹಿಜಾಬ್‌ ಓಕೆ, ಕೇಸರಿ ಶಾಲುಗೆ ನೋ: ಪರ- ವಿರೋಧ ಚರ್ಚೆ ಶುರು

Latest12 hours ago

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

Latest15 hours ago

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

Latest1 day ago

ಮನಸೆಳೆದ ಎಸ್‌ಜೆಬಿಐಟಿ ವಿದ್ಯಾರ್ಥಿಗಳ ʼವರ್ಚಸ್ವ ಫ್ಲ್ಯಾಶ್ ಮಾಬ್ʼ

ಅವಿಭಾಗೀಕೃತ1 day ago

ಬೆಂಗಳೂರಿಗೆ ʼಆರನೇ ಗ್ಯಾರಂಟಿʼ – ʼನನ್ನ ಖಾತೆ ನನ್ನ ಹಕ್ಕುʼ

ಪ್ರಮುಖ ಸುದ್ದಿ2 days ago

ಅಗ್ನಿ ಪರೀಕ್ಷೆ ಗೆದ್ದ ‘ವಿಜಯ್‌‌‌’, ಎಐಎಡಿಎಂಕೆಯಲ್ಲಿ ಭಿನ್ನಮತ ಸ್ಫೋಟ

ಸಿನಿಮಾ2 days ago

ನಟ, ನಿರ್ಮಾಪಕ ದಿಲೀಪ್‌ ರಾಜ್‌ ಇನ್ನಿಲ್ಲ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌