Site icon Vistara News

Kannada New Movie: ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ʼಚಿನ್ನಮ್ಮʼ ಹಾಡಿಗೆ ಗೋಲ್ಡನ್ ಸ್ಟಾರ್ ಅಭಿಮಾನಿಗಳು ಫಿದಾ

Chinnamma song from Krishnam Pranaya Sakhi released

ಬೆಂಗಳೂರು: ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ. ರುದ್ರಪ್ಪ ನಿರ್ಮಿಸಿರುವ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರದ (Kannada New Movie) “ಚಿನ್ನಮ್ಮ” ಹಾಡು‌ ಇತ್ತೀಚಿಗೆ ಮಂತ್ರಿ‌ ಮಾಲ್‌ನಲ್ಲಿ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಯಿತು.

ಬಹು ನಿರೀಕ್ಷಿತ ಈ ಚಿತ್ರ ಆಗಸ್ಟ್‌ 15ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ. ಸುಪ್ರೀಂ ಹೀರೋ ಶಶಿಕುಮಾರ್ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.‌ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಶಶಿಕುಮಾರ್ ಅಭಿನಯಿಸಿದ್ದಾರೆ. ಆನಂದ್ ಆಡಿಯೋ ಯೂಟ್ಯೂಬ್‌ನಲ್ಲಿ ಈ ಹಾಡನ್ನು ವೀಕ್ಷಿಸಬಹುದು. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಇದನ್ನೂ ಓದಿ: krishna byre gowda: ಪಹಣಿ-ಆಧಾರ್ ಲಿಂಕ್‌ ಮಾಡಲು ಜುಲೈಗೆ ಅಂತಿಮ ಗಡುವು; ಕೃಷ್ಣ ಬೈರೇಗೌಡ

ನಮ್ಮ ಚಿತ್ರದಲ್ಲಿ ಅರ್ಜುನ್ ಜನ್ಯ ಅವರು ಸಂಗೀತ ಸಂಯೋಜಿಸಿರುವ ಒಟ್ಟು ಏಳು ಹಾಡುಗಳಿವೆ. ಆ ಪೈಕಿ ಎರಡನೇ ಹಾಡು ಇಂದು ಬಿಡುಗಡೆಯಾಗಿದೆ‌. ಮೈಸೂರಿನಲ್ಲಿ ಬಿಡುಗಡೆಯಾದ ಮೊದಲ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿ, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಈ “ಚಿನ್ನಮ್ಮ” ಹಾಡು ಕೂಡ ಎಲ್ಲರಿಗೂ ಪ್ರಿಯವಾಗಲಿದೆ ಎಂದು ನಿರ್ದೇಶಕ ಶ್ರೀನಿವಾಸರಾಜು ತಿಳಿಸಿದರು.

ಗೋಲ್ಡನ್ ಸ್ಟಾರ್ ಗಣೇಶ್ ಮಾತನಾಡಿ, ನಾನು ಬಹಳ ಇಷ್ಟಪಡುವ ಗೀತರಚನೆಕಾರರಾದ ಕವಿರಾಜ್ ಅವರು ಬರೆದಿರುವ “ಚಿನ್ನಮ್ಮ” ಹಾಡು ತುಂಬಾ ಚೆನ್ನಾಗಿದೆ. ಅರ್ಜುನ್ ಜನ್ಯ ಅವರ ಸಂಗೀತ, ಕೈಲಾಶ್ ಖೇರ್ ಹಾಗೂ ಇಂದು ನಾಗರಾಜ್ ಅವರ ಗಾಯನ ಮತ್ತು ಶೇಖರ್ ಮಾಸ್ಟರ್ ಅವರ ನೃತ್ಯ ನಿರ್ದೇಶನ ಹಾಗೂ ವೆಂಕಟ್ ರಾಮಪ್ರಸಾದ್ ಅವರ ಛಾಯಾಗ್ರಹಣ ಎಲ್ಲವೂ ಸೊಗಸಾಗಿದೆ. ಈ ಹಾಡು ಚಿತ್ರೀಕರಣವಾದ ಜಾಗ ಕೂಡ ಅದ್ಭುತವಾಗಿದೆ. ಈ ಚಿತ್ರದಲ್ಲಿ ಹಿರಿಯ ನಟ ಶಶಿಕುಮಾರ್ ಅವರ ಜತೆ ನಟಿಸಿದ್ದು ಖುಷಿಯಾಗಿದೆ ಎಂದು ತಿಳಿಸಿದರು.

ಚಿತ್ರತಂಡದ ಸದಸ್ಯರ ಸಹಕಾರದಿಂದ ನಮ್ಮ‌ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವುದಾಗಿ ನಿರ್ಮಾಪಕ ಪ್ರಶಾಂತ್ ಜಿ ರುದ್ರಪ್ಪ ತಿಳಿಸಿದರು. ಕಾರ್ಯಕ್ರಮದಲ್ಲಿ ಹಾಡು ಬರೆದಿರುವ ಕವಿರಾಜ್, ನಟಿ ಶರಣ್ಯ ಶೆಟ್ಟಿ, ನಟ ಶಿವಧ್ವಜ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

ಇದನ್ನೂ ಓದಿ: Job Alert: ಗಮನಿಸಿ; GTTCಯಲ್ಲಿನ ಹುದ್ದೆಗೆ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ; ಇಲ್ಲಿದೆ ಪರಿಷ್ಕೃತ ವೇಳಾಪಟ್ಟಿ

ಬಹು ನಿರೀಕ್ಷಿತ “ಕೃಷ್ಣಂ ಪ್ರಣಯ ಸಖಿ” ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41 ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದವರು ತಾರಾಬಳಗದಲ್ಲಿದ್ದಾರೆ.

Exit mobile version