Site icon Vistara News

Kannada New Movie: ʼಲವ್ 360ʼ ಖ್ಯಾತಿಯ ಪ್ರವೀಣ್ ಕುಮಾರ್ ಅಭಿನಯದ ‘ದೇಸಾಯಿ’ ಚಿತ್ರ ಈ ವಾರ ತೆರೆಗೆ

Desai Kannada movie release this week

ಬೆಂಗಳೂರು: ವೀರಭದ್ರೇಶ್ವರ ಕ್ರಿಯೇಟಿವ್ ಫಿಲಂಸ್ ಲಾಂಛನದಲ್ಲಿ ಮಹಾಂತೇಶ ವಿ. ಚೋಳಚಗುಡ್ಡ ಕಥೆ ಬರೆದು ನಿರ್ಮಿಸಿರುವ ಹಾಗೂ ನಾಗಿರೆಡ್ಡಿ ಭಡ ನಿರ್ದೇಶನದ “ದೇಸಾಯಿ” ಚಿತ್ರ ಈ ವಾರ ರಾಜ್ಯಾದ್ಯಂತ (Kannada New Movie) ಬಿಡುಗಡೆಯಾಗುತ್ತಿದೆ.

“ದೇಸಾಯಿ” ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರವಾಗಿದೆ. ಉತ್ತರ ಕರ್ನಾಟಕದ ಶೈಲಿಯ ಕಥಾಹಂದರ ಹೊಂದಿರುವ ಈ ಚಿತ್ರದ ರಚನೆ ಹಾಗೂ ನಿರ್ದೇಶನ ನಾಗಿರೆಡ್ಡಿ ಭಡ ಅವರದು. ಬಾದಾಮಿ, ಬಾಗಲಕೋಟೆ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.

“ಲವ್ 360” ಖ್ಯಾತಿಯ ಪ್ರವೀಣ್ ಕುಮಾರ್ ಈ ಚಿತ್ರದ ನಾಯಕನಾಗಿ ಅಭಿನಯಿಸಿದ್ದು, ನಾಯಕಿಯಾಗಿ ಮೈಸೂರಿನ ರಾಧ್ಯ ಇದ್ದಾರೆ. “ಒರಟ” ಪ್ರಶಾಂತ್, ಚೆಲುವರಾಜು, ಮಧುಸೂದನ್ ರಾವ್, ಕಲ್ಯಾಣಿ, ಹರಿಣಿ, ನಟನ ಪ್ರಶಾಂತ್, ಮಂಜುನಾಥ್ ಹೆಗಡೆ, ಸೃಷ್ಟಿ (ಕಾಂತಾರ) ಮುಂತಾದವರು ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: Gold Rate Today: ಚಿನ್ನದ ದರದಲ್ಲಿ ಯಾವುದೇ ಏರಿಳಿತವಿಲ್ಲ; ಆಭರಣ ಖರೀದಿಸುವವರು ಬೆಲೆ ಚೆಕ್‌ ಮಾಡಿ

ಕಳೆದ ಇಪ್ಪತ್ತು ವರ್ಷಗಳಿಂದ ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ಸಕ್ರಿಯರಾಗಿರುವ ನಾಗಿರೆಡ್ಡಿ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ. ನಿರ್ಮಾಪಕ ಮಹಾಂತೇಶ್ ಅವರಿಗೂ “ದೇಸಾಯಿ” ಮೊದಲ ನಿರ್ಮಾಣದ ಚಿತ್ರ.

Exit mobile version