ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಸದ್ಯ ಸದ್ದು ಮಾಡುತ್ತಿರುವ ಸಿನಿಮಾಗಳಲ್ಲಿ ‘ಫ್ಯಾಮಿಲಿ ಡ್ರಾಮ’ ಕೂಡ ಒಂದು. ಈಗಾಗಲೇ ಟ್ರೈಲರ್ ಮೂಲಕ ಗಮನ ಸೆಳೆದಿರುವ ಫ್ಯಾಮಿಲಿ ಡ್ರಾಮ ಸದ್ಯ ಇಂಟ್ರೆಸ್ಟಿಂಗ್ ಟೈಟಲ್ ಟ್ರ್ಯಾಕ್ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ಯುವ ಪ್ರತಿಭೆಗಳೇ ಸೇರಿಕೊಂಡು ಮಾಡಿರುವ ‘ಫ್ಯಾಮಿಲಿ ಡ್ರಾಮಾ’ ಹಾಡು ಕೂಡ ಚಿತ್ರದ (Kannada New Movie) ಮೇಲಿನ ಕುತೂಹಲ ಹೆಚ್ಚಿಸಿದೆ. ಇತ್ತೀಚಿಗಷ್ಟೇ ರಿಲೀಸ್ ಆಗಿದ್ದ ಟ್ರೈಲರ್ ಸಖತ್ ಕ್ರಿಯೇಟಿವ್ ಆಗಿದ್ದು, ಇದೊಂದು ಮಾಮೂಲಿ ಸಿನಿಮಾವಲ್ಲ, ವಿನೂತನ ಮತ್ತು ವಿಭಿನ್ನವಾದ ಸಿನಿಮಾ ಎನ್ನುವುದನ್ನು ಹೇಳುತ್ತಿದೆ.
ಫ್ಯಾಮಿಲಿ ಡ್ರಾಮಾ, ಆಕರ್ಷ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಚೊಚ್ಚಲ ಸಿನಿಮಾ. ಈ ಚಿತ್ರದಲ್ಲಿ ಅಭಯ್, ಅನನ್ಯಾ ಅಮರ್, ಸಿಂಧು ಶ್ರೀನಿವಾಸ್ ಮೂರ್ತಿ, ರೇಖಾ, ಪೂರ್ಣಚಂದ್ರ ಮೈಸೂರು ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ.
ಬಹುತೇಕ ಹೊಸ ಪ್ರತಿಭೆಗಳೇ ಸೇರಿಕೊಂಡು ಮಾಡಿರುವ ಈ ಸಿನಿಮಾಗೆ ಡಬ್ಬುಗುಡಿ ಮುರಳಿಕೃಷ್ಣ ಅವರು ತಮ್ಮ ಡಿಎಂಕೆ (DMK) ಎಂಟರ್ಟೈನ್ಮೆಂಟ್ ಮೂಲಕ ಬಂಡವಾಳ ಹೂಡಿದ್ದಾರೆ.
ಸದ್ಯ ರಿಲೀಸ್ ಆಗಿರುವ ಟೈಟಲ್ ಟ್ರ್ಯಾಕ್ ಈಗ ಎಲ್ಲರ ಗಮನ ಸೆಳೆಯುತ್ತದೆ. ಗಾಯಕ ವಾಸುಕಿ ವೈಭವ್ ಧ್ವನಿಯಲ್ಲಿ ಮೂಡಿ ಬಂದಿರುವ ‘ ಲಿ ಲಿ ಫ್ಯಾಮಿಲಿ ಹಾಡು…’ ಹಾಡು ಕೇಳೋಕೆ ಎಷ್ಟು ಮಜವಾಗಿದೆಯೋ ನೋಡೊಕು ಅಷ್ಟೇ ಕುತೂಹಲಕಾರಿಯಾಗಿದೆ.
ಅಂದಹಾಗೆ ಈ ಹಾಡಿಗೆ ಚೇತನ್ ಅಮ್ಮಯ್ಯ ಸಂಗೀತ ಸಂಯೋಜನೆ ಮಾಡಿದ್ದು, ಶರತ್ ವಶಿಷ್ಠ ಹಾಗೂ ಚೇತನ್ ಅಮ್ಮಯ್ಯ ಜಂಟಿಯಾಗಿ ಸಾಹಿತ್ಯ ಬರೆದಿದ್ದಾರೆ. ಈ ಹಾಡಿನಲ್ಲಿ ಪಾರ್ಟಿ ನಡೆಯುತ್ತಿದ್ದು ನಟ ಅಭಯ್, ಸಿಂಧು, ಅನಯ್ಯಾ ಎಂಡ್ ಗ್ಯಾಂಗ್ ಯಾರನ್ನೊ ಕೊಲೆ ಮಾಡಲು ಸ್ಕೆಚ್ ಹಾಕಿದ್ದಾರೆ. ಆದರೆ ಹಾಡಿನ ಕೊನೆಯಲ್ಲಿ ಅವರ ಸ್ಕೆಚ್ ಫ್ಲಾಪ್ ಆಗಿರುವ ಹಾಗೆ ಅನ್ನಿಸುತ್ತದೆ. ಆದರೆ ಮುಂದೇನಾಗುತ್ತೆ ಎನ್ನುವುದು ಸಿನಿಮಾದಲ್ಲಿಯೇ ನೋಡಬೇಕು. ಈ ಹಾಡು ಸಿನಿಮಾದ ಮೇಲಿನ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.
ಇದನ್ನೂ ಓದಿ: Bengaluru News: ಬೆಂಗಳೂರಿನ ವಿದ್ಯಾರ್ಥಿನಿಗೆ ಐಐಟಿ ಬಾಂಬೆಯ ಪ್ರತಿಷ್ಠಿತ ಪ್ರಶಸ್ತಿ
ಇನ್ನು ನಿರ್ಮಾಪಕ ಮುರಳಿಕೃಷ್ಣ ಅವರು ಈ ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ. ಅಂದಹಾಗೆ ಮುರಳಿಕೃಷ್ಣ ಅವರು ಯುಎಸ್‌ನಲ್ಲಿ ನೆಲೆಸಿದ್ದಾರೆ. ವಿದೇಶದಲ್ಲಿದ್ದರೂ ತಮ್ಮ ನೆಲದ ಮೇಲಿನ ಪ್ರೀತಿ, ಸಿನಿಮಾಗಳ ಮೇಲಿನ ಆಸಕ್ತಿ ಕಳೆದುಕೊಂಡಿಲ್ಲ. ಉತ್ತಮ ಸಿನಿಮಾಗಳನ್ನು ಮಾಡಬೇಕು ಎನ್ನುವ ದೊಡ್ಡ ಕನಸು ಹೊತ್ತಿರುವ ಮುರುಳಿಯವರು ಚಿತ್ರರಂಗದ ಬಗ್ಗೆ ಒಂದಷ್ಟು ತಿಳಿದುಕೊಂಡು ‘ಫ್ಯಾಮಿಲಿ ಡ್ರಾಮ’ ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ.
ಕನ್ನಡದ ‘ಫ್ಯಾಮಿಲಿ ಡ್ರಾಮ’ ಸಿನಿಮಾ ರಿಲೀಸ್‌ನ ಬ್ಯುಸಿಯ ಜತೆಗೆ ನಿರ್ಮಾಪಕರು ಈಗಾಗಲೇ ತೆಲುಗಿನಲ್ಲಿ ಮೂರು ಸಿನಿಮಾಗಳ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ತಮ್ಮ DMK ಎಂಟರ್ಟೈನ್ಮೆಂಟ್ ನಿರ್ಮಾಣ ಸಂಸ್ಥೆ ಮೂಲಕ ಸಾಕಷ್ಟು ಹೊಸ ಪ್ರತಿಭೆಗಳಿಗೆ ಅವಕಾಶ ಕೊಡಬೇಕು ಹಾಗೂ ದೊಡ್ಡ ಬಜೆಟ್‌ನ ಸ್ಟಾರ್ ಸಿನಿಮಾ ನಿರ್ಮಾಣ ಮಾಡುವ ದೊಡ್ಡ ಕನಸನ್ನು ಕಂಡಿದ್ದಾರೆ. ಅವರ ಮುಂದಿನ ಎಲ್ಲಾ ಯೋಜನೆಗಳಿಗೆ ‘ಫ್ಯಾಮಿಲಿ ಡ್ರಾಮ’ ಉತ್ತಮ ವೇದಿಕೆಯಾಗಲಿದೆ ಎನ್ನುವ ಭರವಸೆ ಹೊಂದಿದ್ದಾರೆ.
ಇದನ್ನೂ ಓದಿ: Lakshmi Hebbalkar: ಅಂಗನವಾಡಿ ಬಲವರ್ಧನೆಗೆ ಕೇಂದ್ರದ ನೆರವು ಕೋರಿದ ಲಕ್ಷ್ಮೀ ಹೆಬ್ಬಾಳಕರ್
ಫ್ಯಾಮಿಲಿ ಡ್ರಾಮ ಉತ್ತಮ ಕಂಟೆಂಟ್ ಜತೆಗೆ ಟೆಕ್ನಿಕಲ್ ವಿಚಾರಗಳು ಸಹ ಗಮನ ಸೆಳೆಯುತ್ತಿದೆ. ಡಾರ್ಕ್ ಕಾಮಿಡಿ ಸಿನಿಮಾ ಇದಾಗಿದ್ದು, ಮುಗ್ದ ಕುಟುಂಬವೊಂದು ಕೊಲೆ ಮಾಡಿ ಸಂಕಷ್ಚಕ್ಕೆ ಸಿಲುಕುವ ಕಥೆಯಾಗಿದೆ. ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆ ಮೂಡಿಸಿರುವ ಫ್ಯಾಮಿಲಿ ಡ್ರಾಮ ಸದ್ಯದಲ್ಲೇ ಚಿತ್ರಮಂದಿರಕ್ಕೆ ಎಂಟ್ರಿ ಕೊಡಲು ಸಜ್ಜಾಗಿದೆ.