Site icon Vistara News

Kannada New Movie: ಮೋಷನ್ ಪೋಸ್ಟರ್‌ನಲ್ಲೇ ಕುತೂಹಲ ಮೂಡಿಸಿದ ವಿಭಿನ್ನ ಕಥಾಹಂದರ ಹೊಂದಿರುವ ‘ಹಗ್ಗ’

Kannada film Hagga to release in August

ಬೆಂಗಳೂರು: ವಸಂತ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರಾಜ್ ಭಾರದ್ವಾಜ್ ನಿರ್ಮಿಸಿರುವ, ಅವಿನಾಶ್ ಎನ್. ನಿರ್ದೇಶನದ “ಹಗ್ಗ” ಚಿತ್ರದ ಮೋಷನ್ ಪೋಸ್ಟರ್ ಇತ್ತೀಚಿಗೆ ಬಿಡುಗಡೆಯಾಯಿತು. ಮೇಕಿಂಗ್‌ನಲ್ಲೇ ಸದ್ದು ಮಾಡಿರುವ ಈ ಚಿತ್ರದ (Kannada New Movie) ಮೋಷನ್ ಪೋಸ್ಟರ್‌ಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಅನು ಪ್ರಭಾಕರ್, ವೇಣು, ಹರ್ಷಿಕಾ ಪೂಣಚ್ಛ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ನಿರ್ಮಾಪಕ ರಾಜ್ ಭಾರದ್ವಾಜ್ ಅವರೇ “ಹಗ್ಗ” ಚಿತ್ರಕ್ಕೆ ಕಥೆ ಬರೆದಿದ್ದು, ಚಿತ್ರಕಥೆ ರಾಜ್ ಭಾರದ್ವಾಜ್, ಅವಿನಾಶ್ ಹಾಗೂ ಮನೋಹರ್ ಅವರದು.

ಮ್ಯಾಥ್ಯೂಸ್ ಮನು ಸಂಗೀತ ನಿರ್ದೇಶನ, ಸಿನಿಟೆಕ್ ಸೂರಿ ಛಾಯಾಗ್ರಹಣ ಹಾಗೂ ಎನ್. ಎಂ. ವಿಶ್ವ ಅವರ ಸಂಕಲನವಿರುವ ಈ ಚಿತ್ರಕ್ಕೆ ಮನೋಹರ್ ಎಸ್.ಪಿ. ಸಂಭಾಷಣೆ ಬರೆದಿದ್ದಾರೆ.

ಇದನ್ನೂ ಓದಿ: Star Fashion: ಜ್ಯುವೆಲ್ಲರಿ ಶೋಗಾಗಿ ಅಪ್ಸರೆಯಂತೆ ಮಿಂಚಿದ ಮಾಲಾಶ್ರೀ ಪುತ್ರಿ ಆರಾಧನಾ!

ಅನು ಪ್ರಭಾಕರ್, ವೇಣು, ಹರ್ಷಿಕಾ ಪೂಣಚ್ಛ, ತಬಲನಾಣಿ, ಅವಿನಾಶ್, ಭವಾನಿ ಪ್ರಕಾಶ್, ಸುಧಾ ಬೆಳವಾಡಿ, ಪ್ರಿಯ ಹೆಗ್ಡೆ, ಮೈಕೋ ಮಂಜು, ಸಂಜು ಬಸಯ್ಯ, ಸದಾನಂದ ಕಾಳಿ ಮುಂತಾದವರು ತಾರಾಬಳಗದಲ್ಲಿದ್ದಾರೆ. “ಹಗ್ಗ” ಚಿತ್ರವು ಆಗಸ್ಟ್‌ನಲ್ಲಿ ತೆರೆಗೆ ಬರಲಿದೆ.

Exit mobile version