Kannada New Movie: ನಟ ಲಿಖಿತ್ ಶೆಟ್ಟಿ ಹುಟ್ಟುಹಬ್ಬಕ್ಕೆ ʼಫುಲ್ ಮೀಲ್ಸ್ʼ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್‌ - Vistara News

ಕರ್ನಾಟಕ

Kannada New Movie: ನಟ ಲಿಖಿತ್ ಶೆಟ್ಟಿ ಹುಟ್ಟುಹಬ್ಬಕ್ಕೆ ʼಫುಲ್ ಮೀಲ್ಸ್ʼ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್‌

Kannada New Movie: ‘ಫುಲ್ ಮೀಲ್ಸ್ʼ ಚಿತ್ರವನ್ನು ನಿರ್ಮಿಸುವುದರ ಜತೆಗೆ ನಾಯಕ ನಟನಾಗಿ ನಟಿಸುತ್ತಿರುವ ಲಿಖಿತ್ ಶೆಟ್ಟಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ “ಫುಲ್ ಮೀಲ್ಸ್” ಚಿತ್ರತಂಡ ಲಿಖಿತ್ ಶೆಟ್ಟಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದೆ.

VISTARANEWS.COM


on

Likhith Shetty starrer Full Meals movie Motion poster release
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: “ಸಂಕಷ್ಟಕರ ಗಣಪತಿ”, “ಫ್ಯಾಮಿಲಿ ಪ್ಯಾಕ್”, “ಅಬ್ಬಬ್ಬ” ಚಿತ್ರಗಳ ಖ್ಯಾತಿಯ ನಟ ಲಿಖಿತ್ ಶೆಟ್ಟಿ ಪ್ರಸ್ತುತ ‘ಫುಲ್ ಮೀಲ್ಸ್ʼ ಚಿತ್ರವನ್ನು ನಿರ್ಮಿಸುವುದರ ಜತೆಗೆ ನಾಯಕ ನಟನಾಗಿ ನಟಿಸುತ್ತಿದ್ದಾರೆ. “ಫುಲ್ ಮೀಲ್ಸ್” ಚಿತ್ರದ ನಾಯಕ ಲಿಖಿತ್ ಶೆಟ್ಟಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಮೋಷನ್ ಪೋಸ್ಟರ್ (Kannada New Movie) ಬಿಡುಗಡೆ ಮಾಡುವ ಮೂಲಕ “ಫುಲ್ ಮೀಲ್ಸ್” ಚಿತ್ರತಂಡ ಲಿಖಿತ್ ಶೆಟ್ಟಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದೆ.

ಲಿಖಿತ್ ಶೆಟ್ಟಿ ಇಬ್ಬರು ನಾಯಕಿಯರ ಸಾಂಗತ್ಯದಲ್ಲಿರುವ ರೊಮ್ಯಾಂಟಿಕ್ ಥೀಮ್ ಹೊಂದಿರುವ ಈ ಸುಂದರವಾದ ಮೋಷನ್ ಪೋಸ್ಟರ್ ನೋಡುಗರ ಗಮನ ಸೆಳೆದಿದ್ದು, ಸಿನಿಮಾದ ಬಗ್ಗೆ ಕುತೂಹಲ ಮೂಡಿಸಿದೆ.

ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ಬಹುತೇಕ ಸಂಪೂರ್ಣವಾಗಿದ್ದು, ಸದ್ಯ ರೀರೆಕಾರ್ಡಿಂಗ್ ನಡೆಯುತ್ತಿದೆ. ವರ್ಷಾಂತ್ಯದೊಳಗೆ ಚಿತ್ರವನ್ನು ತೆರೆಗೆ ತರುವ ಯೋಚನೆಯಲ್ಲಿರುವುದಾಗಿ ಲಿಖಿತ್ ಶೆಟ್ಟಿ ತಿಳಿಸಿದ್ದಾರೆ.

ಇದನ್ನೂ ಓದಿ: UGCET 2024 : ಯುಜಿಸಿಇಟಿ ಆಪ್ಶನ್ ದಾಖಲಿಸಲು ಮತ್ತಷ್ಟು ದಿನ ಅವಕಾಶ

ವೆಡ್ಡಿಂಗ್ ಫೋಟೋಗ್ರಾಫರ್ ಸುತ್ತ ಸುತ್ತುವ ಕಥಾ ಹಂದರವನ್ನು ಹೊಂದಿರುವ ಸಿನಿಮಾ, ಮನೋರಂಜನೆಯ ಜತೆಗೆ ಸಾಕಷ್ಟು ಹೊಸ ವಿಷಯಗಳನ್ನು ಒಳಗೊಂಡಿದ್ದು, ಪ್ರೇಕ್ಷಕರು ಸಿನಿಮಾವನ್ನು ಇಷ್ಟಪಡುತ್ತಾರೆಂಬ ವಿಶ್ವಾಸ ಲಿಖಿತ್ ಶೆಟ್ಟಿಯವರಿಗಿದೆ.

ಚಿತ್ರದುರ್ಗದ ಪ್ರತಿಭೆ ಎನ್. ವಿನಾಯಕ ಚಿತ್ರದ ಮೂಲಕ ಮೊದಲ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಸಿನಿಮಾಗೆ ಹರೀಶ್ ಗೌಡ ಸಂಭಾಷಣೆ ಬರೆದಿದ್ದು, ಮನೋಹರ್ ಜೋಷಿ ಛಾಯಾಗ್ರಹಣ, ಗುರು ಕಿರಣ್ ಸಂಗೀತ, ದೀಪು ಎಸ್. ಕುಮಾರ್ ಸಂಕಲನ, ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ ಚಿತ್ರಕ್ಕಿದೆ.

ಇದನ್ನೂ ಓದಿ: Karnataka Rain : ಗಾಳಿ-ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ಜಾನುವಾರುಗಳು ಸಾವು; ಮತ್ತೆ ಮುಳುಗಡೆಯಾದ ತ್ರಿವೇಣಿ ಸಂಗಮ

ಲಿಖಿತ್ ಶೆಟ್ಟಿ ಅವರಿಗೆ ನಾಯಕಿಯರಾಗಿ ಖುಷಿ ರವಿ ಮತ್ತು ತೇಜಸ್ವಿನಿ ಶರ್ಮ ಅಭಿನಯಿಸಿದ್ದು, ಉಳಿದಂತೆ ತಾರಾಗಣದಲ್ಲಿ ರಂಗಾಯಣ ರಘು, ಸೂರಜ್ ಲೋಕ್ರೆ, ವಿಜಯ್ ಚಂಡೂರ್, ರವಿ ಶಂಕರ್ ಗೌಡ, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಚಂದ್ರಕಲಾ ಮೋಹನ್, ಹೊನ್ನವಳ್ಳಿ ಕೃಷ್ಣ, ರಮೇಶ್ ಪಂಡಿತ್, ಚೇತನ್ ದುರ್ಗಾ, ನಾಗೇಂದ್ರ ಅರಸ್, ಮೂಗು ಸುರೇಶ್ ಸೇರಿದಂತೆ ಬಹು ದೊಡ್ಡ ತಾರಾ ಬಳಗವೇ ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Namma Metro : ವಿದ್ಯುತ್‌ ಸರಬರಾಜು ವ್ಯವಸ್ಥೆಯಲ್ಲಿ ದೋಷ; ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ವ್ಯತ್ಯಯ

Namma Metro : ಬನಶಂಕರಿಯಿಂದ ತಲಘಟ್ಟಪುರ ಮೆಟ್ರೋ ಓಡಾಟ ಸ್ಥಗಿತಗೊಂಡಿದೆ. ವಿದ್ಯುತ್‌ ಸರಬರಾಜು ವ್ಯವಸ್ಥೆಯಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ನಾಗಸಂದ್ರದಿಂದ ಆರ್‌ವಿ ರಸ್ತೆ ವರೆಗೆ ಮಾತ್ರ ಮೆಟ್ರೋ ಸಂಚಾರಿಸುತ್ತಿದೆ.

VISTARANEWS.COM


on

By

namma Metro
Koo

ಬೆಂಗಳೂರು: ಮಂಗಳವಾರ ಸಂಜೆ 5:33ರಿಂದ ಮೆಟ್ರೋ ಓಡಾಟದಲ್ಲಿ (Namma Metro) ವ್ಯತ್ಯಯ ಉಂಟಾಗಿದೆ. ವಿದ್ಯುತ್ ಸರಬರಾಜು ವ್ಯವಸ್ಥೆಯಲ್ಲಿ ದೋಷ ಉಂಟಾಗಿದೆ. ಈ ಕಾರಣಕ್ಕೆ ಹಸಿರು ಮಾರ್ಗದಲ್ಲಿ ಮೆಟ್ರೋ ರೈಲುಗಳು ನಾಗಸಂದ್ರ ಮತ್ತು ಆರ್‌ವಿ ರಸ್ತೆ ಮೆಟ್ರೋ ನಿಲ್ದಾಣದ ನಡುವೆ ಮಾತ್ರ ಓಡುತ್ತಿವೆ.

Namma Metro
Namma Metro

ಬನಶಂಕರಿ, ಜಯಪ್ರಕಾಶ್‌ ನಗರ, ಯಲಚೇನಹಳ್ಳಿ ಹಾಗೂ ಕೋಣನಕುಂಟೆ ಕ್ರಾಸ್‌, ದೊಡ್ಡಕಲ್ಲಸಂದ್ರ, ವಜ್ರಹಳ್ಳಿ, ತಲಘಟ್ಟಪುರ, ಸಿಲ್ಕ್ ಇನ್ಸ್ಟಿಟ್ಯೂಟ್ ಮಾರ್ಗದ ರೈಲುಗಳು ಓಡಾಟ ಸ್ಥಗಿತವಾಗಿದೆ. ಈ ಕುರಿತು ನಮ್ಮ ಮೆಟ್ರೋ ಅಧಿಕೃತ ಖಾತೆಯಲ್ಲಿ ತಿಳಿಸಿದೆ. ಇನ್ನೂ ಉಂಟಾದ ಅನಾನುಕೂಲತೆಗಾಗಿ ವಿಷಾದಿಸಿದೆ.

https://x.com/OfficialBMRCL/status/1818262455451373824

ದಿಢೀರ್‌ ರೈಲು ಓಡಾಟ ಸ್ಥಗಿತಗೊಂಡ ಕಾರಣದಿಂದಾಗಿ ಪ್ರಯಾಣಿಕರು ಪರದಾಡಬೇಕಾಯಿತು. ಅತಿ ಶೀಘ್ರದಲ್ಲೇ ವಿದ್ಯುತ್ ಸಮಸ್ಯೆಯನ್ನ ಬಗೆಹರಿಸೋದಾಗಿ ಬಿಎಂಆರ್‌ಸಿಎಲ್‌ ತಿಳಿಸಿದೆ.

Continue Reading

ಕರ್ನಾಟಕ

Martin Movie: ಆ.4ಕ್ಕೆ ಮಾರ್ಟಿನ್ ಚಿತ್ರದ ಟ್ರೈಲರ್‌ 1 ರಿಲೀಸ್‌; ವಿಎಫ್‌ಎಕ್ಸ್‌ ವಂಚನೆ ಬಗ್ಗೆ ನಿರ್ಮಾಪಕ ಹೇಳಿದ್ದೇನು?

Martin Movie: ನಟ ಧ್ರುವ ಸರ್ಜಾ ಅಭಿನಯದ ʼಮಾರ್ಟಿನ್ʼ ಸಿನಿಮಾದ ಟ್ರೈಲರ್‌ 1 ಬೆಂಗಳೂರಿನ ವೀರೇಶ್ ಚಿತ್ರಮಂದಿರದಲ್ಲಿ ಆಗಸ್ಟ್ 4ರಂದು ಹಾಗೂ ಮುಂಬೈನಲ್ಲಿ ಆಗಸ್ಟ್ 5ರಂದು ರಿಲೀಸ್ ಆಗಲಿದೆ. ಈ ಬಗ್ಗೆ ಚಿತ್ರತಂಡ ಮಾಹಿತಿ ನೀಡಿದೆ.

VISTARANEWS.COM


on

Martin Movie
Koo

ಬೆಂಗಳೂರು: ನಟ ಧ್ರುವ ಸರ್ಜಾ ಅಭಿನಯದ ʼಮಾರ್ಟಿನ್ʼ ಸಿನಿಮಾ (Martin Movie) ಅ.11ರಂದು ಬಿಡುಗಡೆಯಾಗಲು ಸಜ್ಜಾಗಿದೆ. ಪಂಚ ಭಾಷೆಗಳಲ್ಲಿ ಬೆಳ್ಳಿ ತೆರೆಗೆ ಅಪ್ಪಳಿಸಲು ಸಿದ್ಧವಾಗಿರುವ ಎ.ಪಿ.ಅರ್ಜುನ್‌ ನಿರ್ದೇಶನದ ಈ ಚಿತ್ರದ ಟ್ರೈಲರ್‌ 1 ರಿಲೀಸ್ ಮಾಡಲು ನಿಗದಿ ಮಾಡಿದೆ. ಮುಂಬೈ ಮತ್ತು ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಟ್ರೈಲರ್‌ 1 ರಿಲೀಸ್‌ ಮಾಡಲು ಚಿತ್ರತಂಡ ಪ್ಲ್ಯಾನ್‌ ಮಾಡಿದೆ.

ಆಗಸ್ಟ್ 4ರಂದು ಬೆಂಗಳೂರಿನ ವೀರೇಶ್ ಚಿತ್ರಮಂದಿರದಲ್ಲಿ ಹಾಗೂ ಆಗಸ್ಟ್ 5ರಂದು ಮುಂಬೈನಲ್ಲಿ ಟ್ರೈಲರ್‌ 1 ರಿಲೀಸ್ ಆಗಲಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ನಿರ್ಮಾಪಕ ಉದಯ್ ಮೆಹ್ತಾ ಮಾಹಿತಿ ನೀಡಿದ್ದಾರೆ. ಈ ವೇಳೆ ಧ್ರುವ ಸರ್ಜಾ, ಎ.ಪಿ. ಅರ್ಜುನ್ ಉಪಸ್ಥಿತರಿದ್ದರು.

ಮೊದಲು ಕನ್ನಡಿಗರಿಗೆ ಟ್ರೇಲರ್ ತೋರಿಸುತ್ತೇವೆ ಎಂದ ಧ್ರುವ ಸರ್ಜಾ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಟ ಧ್ರುವ ಸರ್ಜಾ ಅವರು, ಆಗಸ್ಟ್‌ 4ರಂದು ಮೊದಲು ನಮ್ಮ ಕನ್ನಡಿಗರಿಗೆ ಮಾರ್ಟಿನ್‌ ಚಿತ್ರದ ಟ್ರೈಲರ್‌ 1 ತೋರಿಸುತ್ತೇವೆ. ಆ.5ರಂದು ಮುಂಬೈನಲ್ಲಿ ಟ್ರೇಲರ್ ರಿಲೀಸ್ ಆಗಲಿದೆ. ಕಾರ್ಯಕ್ರಮಕ್ಕೆ 28 ದೇಶಗಳಿಂದ ಮಾಧ್ಯಮದವರು ಬರುತ್ತಿದ್ದಾರೆ. ಅದರ ಜತೆ ಭಾರತದ ವಿವಿಧೆಡೆಯಿಂದ ರಿಪೋರ್ಟರ್ಸ್ ಬರುತ್ತಾರೆ ಎಂದು ತಿಳಿಸಿದರು.

ಆಗಸ್ಟ್ 2ರಿಂದ ಬುಕ್ ಮೈ ಶೋನಲ್ಲಿ ಟ್ರೇಲರ್ ರಿಲೀಸ್‌ ಟಿಕೆಟ್‌ ಬುಕ್ ಮಾಡಬಹುದು. ಆಗಸ್ಟ್ 4ರಂದು ಮಧ್ಯಾಹ್ನ 1 ಗಂಟೆಗೆ ಟ್ರೇಲರ್ ರಿಲೀಸ್ ಆಗಲಿದೆ ಎಂದು ಹೇಳಿದರು.

ನಿರ್ದೇಶಕನ ವಿರುದ್ಧ ದೂರು ನೀಡಿಲ್ಲ: ನಿರ್ಮಾಪಕ ಉದಯ್ ಮೆಹ್ತಾ

ಮಾರ್ಟಿನ್‌ ಚಿತ್ರದ ವಿಎಫ್‌ಎಕ್ಸ್‌ಗಾಗಿ ನಿರ್ದೇಶಕ ಎ.ಪಿ. ಅರ್ಜುನ್‌ 50 ಲಕ್ಷ ರೂ. ಕಮಿಷನ್‌ ಪಡೆದಿದ್ದಾರೆ ಎಂಬ ಆರೋಪದ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಪ್ರತಿಕ್ರಿಯಿಸಿ, ಪ್ರಕರಣದಲ್ಲಿ ಆರೋಪಿಗಳ ಬಂಧನವಾಗಿರುವ ವಿಷಯ ಎಲ್ಲರಿಗೂ ಗೊತ್ತಿದೆ. ನಾನು ನೆನ್ನೆ ಭಾರತಕ್ಕೆ ಬಂದೆ, ಈ ಬಗ್ಗೆ ಕೂಲಂಕಷವಾಗಿ ಚರ್ಚೆ ಮಾಡುತ್ತೇನೆ. ನಮ್ಮ ಟೀಮ್‌ನ ಯಾವ ಸದಸ್ಯನ ಮೇಲೂ ಕಂಪ್ಲೇಂಟ್ ಕೊಟ್ಟಿಲ್ಲ. ನಾನು ಕಂಪ್ಲೇಂಟ್ ಕೊಟ್ಟಿರುವುದು ಸತ್ಯ ರೆಡ್ಡಿ ಎಂಬುವವರ ಡಿಜಿಟಲ್ ಕಂಪನಿ ವಿರುದ್ಧ ಎಂದು ತಿಳಿಸಿದರು.

15 ವರ್ಷಗಳಿಂದ ನಾನು ಸಿನಿಮಾ ರಂಗದಲ್ಲಿದೇನೆ. ಇದುವರೆಗೂ ನಾನು ಯಾವುದೇ ವಿವಾದ ಮಾಡಿಲ್ಲ. ನಾನು ಫ್ಯಾಷನೇಟ್ ಪ್ರೊಡ್ಯೂಸರ್, ನನಗೆ ಈ ರೀತಿ ಮೋಸವಾಗುತ್ತದೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಇಲ್ಲಿ ಅನುಭವ ಲೆಕ್ಕಕ್ಕೆ ಬರೋಲ್ಲ, ಸಡನ್ ಅಪಘಾತವಾದಾಗ ಏನೂ ಮಾಡಲು ಆಗುವುದಿಲ್ಲ ಎಂದು ತಿಳಿಸಿದರು.

ಕಮಿಷನ್‌ ಪಡೆದಿರುವುದು ಸಾಬೀತಾದ್ರೆ 1 ಕೋಟಿ ಕೊಡ್ತೇನೆ: ನಿರ್ದೇಶಕ ಎ.ಪಿ.ಅರ್ಜುನ್

50 ಲಕ್ಷ ಕಮಿಷನ್‌ ಆರೋಪ ಬಗ್ಗೆ ನಿರ್ದೇಶಕ ಪ್ರತಿಕ್ರಿಯಿಸಿ, ಸುದ್ದಿ ಮಾಡುವವರು ಆಧಾರಗಳನ್ನು ಇಟ್ಟುಕೊಟ್ಟು ಪ್ರಸಾರ ಮಾಡಬೇಕು. ನಾನು ಕೇವಲ 5000 ರೂ. ಕಮಿಷನ್‌ ಪಡೆದಿರುವುದು ಸಾಬೀತಾದರೂ ನಿಮಗೆ 1 ಕೋಟಿ ರೂ. ಕೊಡುತ್ತೇನೆ. ಈ ರೀತಿ ಸುಳ್ಳು ಆರೋಪಗಳಿಂದ ನಮ್ಮ ಕುಟುಂಬಸ್ಥರು ಗಾಬರಿಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Actor Shahrukh Khan: ಅಮೆರಿಕದಲ್ಲಿ ಶಾರುಖ್ ಖಾನ್‌ಗೆ ಶಸ್ತ್ರಚಿಕಿತ್ಸೆ; ಬಾಲಿವುಡ್‌ ಬಾದ್‌ಶಾಗೆ ಕಾಡುತ್ತಿರುವ ಸಮಸ್ಯೆ ಏನು?

‘ಮಾರ್ಟಿನ್’ ಚಿತ್ರದ ವಿಎಫ್‌ಎಕ್ಸ್‌ ವರ್ಕ್‌ ಜವಾಬ್ದಾರಿಯನ್ನು ಡಿಜಿಟಲ್‌ ಟೆರೇನ್ ಕಂಪನಿಗೆ ನೀಡಲಾಗಿತ್ತು. ಇದಕ್ಕಾಗಿ ನಿರ್ಮಾಪಕ ಉದಯ್‌ ಕೊಟ್ಟಿದ್ದ 2.5 ಕೋಟಿ ರೂ.ಗಳಲ್ಲಿ 50 ಲಕ್ಷ ರೂ.ಗಳನ್ನು ನಿರ್ದೇಶಕ ಎ.ಪಿ.ಅರ್ಜುನ್ ಕಮಿಷನ್‌ ಆಗಿ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ನಿರ್ದೇಶಕ ಎ.ಪಿ.ಅರ್ಜುನ್ ಹಾಗೂ ನಿರ್ಮಾಪಕ ಉದಯ್‌ ಮೆಹ್ತಾ ಸ್ಪಷ್ಟನೆ ನೀಡಿದ್ದಾರೆ.

ಮಾರ್ಟಿನ್ ಚಿತ್ರಕ್ಕೆ ಮಣಿ ಶರ್ಮಾ ಅವರ ಸಂಗೀತ ಮತ್ತು ಸತ್ಯ ಹೆಗಡೆ ಅವರ ಛಾಯಾಗ್ರಹಣವಿದೆ. ಮಾರ್ಟಿನ್‌ ಸಿನಿಮಾದಲ್ಲಿ ಕನ್ನಡದ ಕಲಾವಿದರ ಜತೆಗೆ ಹಿಂದಿ, ತೆಲುಗು, ತಮಿಳು ಚಿತ್ರರಂಗದ ಕಲಾವಿದರು ನಟಿಸಿದ್ದಾರೆ. ಅಚ್ಯುತ್‌ ಕುಮಾರ್‌, ನಿಕಿತನ್‌ ಧೀರ್‌, ನವಾಬ್‌ ಶಾ ಸೇರಿದಂತೆ ಹಲವರು ಪ್ರಮುಖ ಪಾತ್ರಗಳಲ್ಲಿದ್ದಾರೆ. ‘ಧೀರನ್‌ ಅಧಿಕಾರಂ ಒಂಡ್ರು’ತಮಿಳು ಚಿತ್ರದ ಮೂಲಕ ಗಮನ ಸೆಳೆದಿದ್ದ ನಟ ರೋಹಿತ್‌ ಪಾಠಕ್‌ ಸಹ ‘ಮಾರ್ಟಿನ್‌’ನಲ್ಲಿ ಬಹು ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

Continue Reading

ದೇಶ

Nirmala Sitharaman: ಕಾಂಗ್ರೆಸ್‌ ಅವಧಿ ಬಜೆಟ್‌ನಲ್ಲಿ 26 ರಾಜ್ಯಗಳ ಹೆಸರೇ ಇರಲಿಲ್ಲ; ನಿರ್ಮಲಾ ಸೀತಾರಾಮನ್‌ ಟಾಂಗ್

Nirmala Sitharaman: ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನುದಾನ ನೀಡಿಲ್ಲ ಎಂಬುದಾಗಿ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ನಿರ್ಮಲಾ ಸೀತಾರಾಮನ್‌ ಅವರು ಸಂಸತ್‌ನಲ್ಲಿ ಸ್ಪಷ್ಟನೆ ನೀಡಿದ್ದಾರೆ. ಬಜೆಟ್‌ ಭಾಷಣದಲ್ಲಿ ರಾಜ್ಯಗಳ ಹೆಸರು ಇಲ್ಲ ಎಂದ ಮಾತ್ರಕ್ಕೆ ಆ ರಾಜ್ಯಕ್ಕೆ ಅನುದಾನ ಹೋಗುವುದಿಲ್ಲ ಎಂಬ ಅರ್ಥವಲ್ಲ ಎಂದಿದ್ದಾರೆ.

VISTARANEWS.COM


on

Nirmala Sitharaman
Koo

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಕೆಲ ದಿನಗಳ ಹಿಂದೆ ಮಂಡಿಸಿದ ಬಜೆಟ್‌ನಲ್ಲಿ (Union Budget 2024) ಕರ್ನಾಟಕಕ್ಕೆ ಹೆಚ್ಚಿನ ಅನುದಾನ ಕೊಟ್ಟಿಲ್ಲ ಎಂದು ರಾಜ್ಯ ಕಾಂಗ್ರೆಸ್‌ ನಾಯಕರು ಆರೋಪಿಸುತ್ತಿದ್ದಾರೆ. ಜನರು ಕೂಡ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ದಕ್ಷಿಣ ಭಾರತದ ಹಲವು ರಾಜ್ಯಗಳು ಟೀಕಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ಸಂಸತ್‌ನಲ್ಲಿ ನಿರ್ಮಲಾ ಸೀತಾರಾಮನ್‌ ಅವರು ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ್ದು, “ಕಾಂಗ್ರೆಸ್‌ ನೇತೃತ್ವದ ಯುಪಿಎ ಅವಧಿಯ ಬಜೆಟ್‌ನಲ್ಲೂ 26 ರಾಜ್ಯಗಳ ಹೆಸರು ಇರಲಿಲ್ಲ. ಹಾಗಂತ, ಆ ರಾಜ್ಯಗಳಿಗೆ ಅನುದಾನ ನೀಡಿಲ್ಲ ಎಂದು ಅರ್ಥವೇ” ಎಂಬುದಾಗಿ ಪ್ರಶ್ನಿಸಿದ್ದಾರೆ.

“ಬಜೆಟ್‌ ಭಾಷಣದಲ್ಲಿ ಕೆಲ ರಾಜ್ಯಗಳ ಹೆಸರು ಇಲ್ಲದ ಕಾರಣ, ಕೇಂದ್ರ ಸರ್ಕಾರವು ಆ ರಾಜ್ಯಗಳಿಗೆ ಅನುದಾನವನ್ನೇ ಕೊಟ್ಟಿಲ್ಲ ಎಂಬ ರೀತಿ ಪ್ರತಿಪಕ್ಷಗಳು ಬಿಂಬಿಸುತ್ತಿಲ್ಲ. ಆದರೆ, ನಾನು 2004-05ರಿಂದಲೂ ಮಂಡಿಸಿದ ಬಜೆಟ್‌ ಪ್ರತಿಗಳನ್ನು ಗಮನಿಸಿದ್ದೇನೆ. 2004-05ರ ಬಜೆಟ್‌ನಲ್ಲಿ ಅಂದರೆ ಯುಪಿಎ ಅವಧಿಯಲ್ಲಿ ಪ್ರಸ್ತುತಪಡಿಸಿದ ಬಜೆಟ್‌ ಭಾಷಣದಲ್ಲಿ 17 ರಾಜ್ಯಗಳ ಹೆಸರು ಇರಲಿಲ್ಲ. 2006-07ರಲ್ಲಿ 16, 2009ರಲ್ಲಿ 26 ರಾಜ್ಯಗಳ ಹೆಸರುಗಳೇ ಇರಲಿಲ್ಲ. ಹಾಗಂತ, ಈ ರಾಜ್ಯಗಳಿಗೆ ಹಣವೇ ನೀಡಲಿಲ್ಲವೇ” ಎಂಬುದಾಗಿ ಬಜೆಟ್‌ ಕುರಿತ ಚರ್ಚೆಯ ವೇಳೆ ನಿರ್ಮಲಾ ಸೀತಾರಾಮನ್‌ ಅವರು ಪ್ರತಿಪಕ್ಷಗಳನ್ನು ಪ್ರಶ್ನಿಸಿದ್ದಾರೆ.

“ಸಂಸತ್‌ನ ಎಲ್ಲ ಸದಸ್ಯರಿಗೂ ನಾನು ಒಂದು ಮನವಿ ಮಾಡುತ್ತೇನೆ. ಬಜೆಟ್‌ ಭಾಷಣದಲ್ಲಿ ಯಾವುದಾದರೂ ರಾಜ್ಯಗಳ ಹೆಸರು ಇಲ್ಲ ಎಂದರೆ, ಆ ರಾಜ್ಯಗಳಿಗೆ ಹಣ ನೀಡುವುದಿಲ್ಲ ಎಂದು ಅರ್ಥವಲ್ಲ. ಸುಳ್ಳು ಹಾಗೂ ಜನರ ದಾರಿ ತಪ್ಪಿಸುವ ರೀತಿ ಅಭಿಯಾನ ಆರಂಭಿಸಲಾಗುತ್ತಿದೆ. ಒಂದು ರಾಜ್ಯದ ಹೆಸರನ್ನು ಬಜೆಟ್‌ ಭಾಷಣದಲ್ಲಿ ಪ್ರಸ್ತಾಪಿಸಿಲ್ಲ ಎಂದ ಮಾತ್ರಕ್ಕೆ, ಆ ರಾಜ್ಯಕ್ಕೆ ಅನುದಾನವನ್ನೇ ನೀಡಿಲ್ಲ ಎಂಬ ರೀತಿ ಹೇಳುತ್ತಿರುವುದು ನೋವು ತಂದಿದೆ” ಎಂಬುದಾಗಿ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನುದಾನ ನೀಡಿಲ್ಲ ಎಂಬುದಾಗಿ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ನಿರ್ಮಲಾ ಸೀತಾರಾಮನ್‌ ಅವರು ಸ್ಪಷ್ಟನೆ ನೀಡಿದ್ದರು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದರು. ಆಯವ್ಯಯದ ಲೆಕ್ಕಾಚಾರದ ಮೂಲಪಾಠವೇ ಗೊತ್ತಿಲ್ಲದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದರು.

ನಿರ್ಮಲಾ ಸೀತಾರಾಮನ್ ಅವರ ಪ್ರಕಾರ ಹಿಂದಿನ ಯುಪಿಎ ಸರ್ಕಾರ (2004-2014) ಹತ್ತು ವರ್ಷಗಳ ಅವಧಿಯಲ್ಲಿ ಕರ್ನಾಟಕಕ್ಕೆ ನೀಡಿರುವ ಅನುದಾನ ರೂ.60,779 ಕೋಟಿ. ಎನ್‌ಡಿಎ ಸರ್ಕಾರ (2014-2024) ಹತ್ತು ವರ್ಷಗಳ ಅವಧಿಯಲ್ಲಿ ನೀಡಿದ್ದ ಹಣ ರೂ.2,36,955 ಕೋಟಿ ಎಂದು ಸಚಿವೆ ಹೇಳಿದ್ದಾರೆ. ಆದರೆ ಹತ್ತು ವರ್ಷಗಳ ಅವಧಿಯಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ ಎಷ್ಟು ಪಟ್ಟು ಹೆಚ್ಚಾಗಿದೆ ಎನ್ನುವುದನ್ನು ಅವರು ಮರೆತಿದ್ದಾರೆ. ಇದು ಅವರ ಅಜ್ಞಾನವೋ, ಇಲ್ಲವೇ ಜನತೆಯ ದಾರಿ ತಪ್ಪಿಸುವ ಹುನ್ನಾರವೋ? ಎಂಬುದನ್ನು ಅವರೇ ಸ್ಪಷ್ಟಪಡಿಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದರು.

ಇದನ್ನೂ ಓದಿ: HD Devegowda: ಮೋದಿ ಬಜೆಟ್‌ಗೆ ಎಚ್‌.ಡಿ.ದೇವೇಗೌಡರ ಮೆಚ್ಚುಗೆ; ಬೆಂಗಳೂರು ನೀರಿನ ಸಮಸ್ಯೆ ಬಗೆಹರಿಸಲು ಮನವಿ

Continue Reading

ಮಳೆ

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka rain : ಚಿಕ್ಕಮಗಳೂರಿನ ಭದ್ರಾ ನದಿಯ ಅಬ್ಬರಕ್ಕೆ ಮತ್ತೊಂದು ಹಸು ಕೊಚ್ಚಿ ಹೋದರೆ, ಬೈಂದೂರಿನಲ್ಲಿ ಬೃಹತ್‌ ಗಾತ್ರದ ಮೊಸಳೆ ಪ್ರತ್ಯಕ್ಷಗೊಂಡಿದೆ. ಮಲಪ್ರಭಾ ನದಿಯಲ್ಲಿ ಪ್ರವಾಹದ ಪರಿಸ್ಥಿತಿ ಇದ್ದರೆ, ನೇತ್ರಾವತಿ ಅಬ್ಬರಕ್ಕೆ ಮನೆಗಳು ಜಲಾವೃತಗೊಂಡಿದೆ.

VISTARANEWS.COM


on

By

karnataka Rain
Koo

ಚಿಕ್ಕಮಗಳೂರು: ಭಾರಿ ಮಳೆಗೆ (Karnataka rain) ಚಿಕ್ಕಮಗಳೂರಿನಲ್ಲಿ ಭದ್ರಾ ನದಿ ಉಕ್ಕಿ ಹರಿಯುತ್ತಿದ್ದು, ಮತ್ತೊಂದು ಹಸು ಬಲಿಯಾಗಿದೆ. ಚಿಕ್ಕಮಗಳೂರಿನ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಬಳಿ ಘಟನೆ ನಡೆದಿದೆ. ಹೆಬ್ಬಾಳ ಸೇತುವೆ ಮೇಲೆ 5-6 ಅಡಿ ನೀರು ಹರಿಯುತ್ತಿದ್ದು, ಸೇತುವೆ ತುದಿಯಲ್ಲಿದ್ದ ಹಸು ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ಕಳೆದ ವಾರವೂ ಹಸುವೊಂದು ಇದೇ ಸೇತುವೆ ಮೇಲೆ ಕೊಚ್ಚಿ ಹೋಗಿತ್ತು. ಇದೀಗ ಮತ್ತೊಂದು ಹಸು ನೋಡನೋಡುತ್ತಿದ್ದಂತೆ ಕೊಚ್ಚಿ ಹೋಗಿದೆ. ಕುದುರೆಮುಖ ಘಟ್ಟ ಪ್ರದೇಶದಲ್ಲಿ ಕಳೆದ ರಾತ್ರಿಯಿಂದ ನಿರಂತರ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ.

ಮಲಪ್ರಭಾ ನದಿಯಲ್ಲಿ ಪ್ರವಾಹದ ಪರಿಸ್ಥಿತಿ

ಮಲಪ್ರಭಾ ನದಿಯಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೊಣ್ಣೂರ ಬಳಿಯ ಹಳೆಯ ಸೇತುವೆ ಮುಳುಗಡೆಯಾಗಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಬಳಿಯ ಸೇತುವೆ ಮುಳುಗಡೆಯಾಗಿದೆ. ಹುಬ್ಬಳ್ಳಿ-ವಿಜಯಪುರ ಸಂಪರ್ಕ ಕಲ್ಪಿಸುವ ಹಳೆಯ ಸೇತುವೆ ಇದಾಗಿದ್ದು, ವಾಹನಗಳ ಸಂಚಾರ ಸ್ಥಗಿತಗೊಂಡಿದೆ. ಹೊಸ ಸೇತುವೆ ಮೇಲೆ ಮಾತ್ರ ವಾಹನಗಳು ಸಂಚಾರಿಸುತ್ತಿವೆ. ಮಲಪ್ರಭಾ ನದಿಗೆ 5,000 ಹೆಚ್ಚು ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ನದಿ ಪಾತ್ರದ ಕೊಣ್ಣೂರು, ವಾಸನ, ಲಖಮಾಪುರ ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗಿದೆ.

ಇದನ್ನೂ ಓದಿ: Yakshagana Artist: ಬಡಗುತಿಟ್ಟು ಯುವ ಯಕ್ಷಗಾನ ಕಲಾವಿದ ನೇಣಿಗೆ ಶರಣು

ನೇತ್ರಾವತಿ ಅಬ್ಬರಕ್ಕೆ ಮನೆಗಳು ಜಲಾವೃತ

ಕ್ಷಣ ಕ್ಷಣಕ್ಕೂ ನೇತ್ರಾವತಿ ನದಿ ನೀರಿನ ಹರಿವು ಏರಿಕೆ ಆಗುತ್ತಿದ್ದು, ಬಂಟ್ವಾಳದ ಮಣಿಹಳ್ಳದ ಕಡವಿನಬಾಗಿಲು ಬಳಿ ಏಳು ಮನೆಗಳು ಜಲಾವೃತಗೊಂಡಿದೆ. ನದಿ ನೆರೆ ನೀರಿನಿಂದ ಮನೆಗಳು ಮುಳುಗಿದೆ. ಅಪಾಯದ ಮಟ್ಟವನ್ನು ಮೀರಿ ನೇತ್ರಾವತಿ ನದಿ ಹರಿಯುತ್ತಿದ್ದು, ಮನೆಗಳು ಕುಸಿಯುವ ಭೀತಿ ಇದೆ. ಮನೆಯಂಗಳದಲ್ಲಿ ಎದೆ ಮಟ್ಟದಲ್ಲಿ ಹರಿಯುತ್ತಿದೆ. ಬಂಟ್ವಾಳದ ಹಲವು ಭಾಗಗಳಲ್ಲಿ ಭಾರೀ ನೆರೆ ಸೃಷ್ಟಿಯಾಗಿದೆ. ಶಂಭೂರು ಡ್ಯಾಂನಿಂದ ಅಪಾರ ಪ್ರಮಾಣದ ನೀರು ಬಿಡುಗಡೆಯಾಗುತ್ತಿದೆ. ಸ್ಥಳೀಯ ನಿವಾಸಗಳನ್ನು ಸ್ಥಳಾಂತರ ಮಾಡಲು ಜಿಲ್ಲಾಡಳಿತ ಸೂಚನೆ ನೀಡಿದೆ.

ಬೈಂದೂರಿನಲ್ಲಿ ಪ್ರತ್ಯಕ್ಷವಾದ ಬೃಹತ್ ಗಾತ್ರದ ಮೊಸಳೆ

ಉಡುಪಿಯ ಬೈಂದೂರು ತಾಲೂಕಿನ ನಾಗೂರು ಉಡುಪರ ಹಿತ್ತಲಿನಲ್ಲಿ ಬೃಹತ್‌ ಗಾತ್ರದ ಮೊಸಳೆ ಪತ್ತೆಯಾಗಿದೆ. ತೋಟದಲ್ಲಿ ಸಿಹಿ ನೀರಿನ ಬಾವಿಯಲ್ಲಿ ಮೊಸಳೆ ತೇಲಾಡುತ್ತಿತ್ತು. ಮೊಸಳೆ ನೋಡಿ ಹೌಹಾರಿದ ಸ್ಥಳೀಯರು, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಈ ಭಾಗದಲ್ಲಿ ಮೊಸಳೆಗಳು ಕಾಣ ಸಿಗುವುದೇ ಅಪರೂಪ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

ನಾಗೂರಿನ ರತ್ನಾಕರ ಉಡುಪ ಎನ್ನುವವರ ಬಾವಿಯಲ್ಲಿ ಬೃಹತ್ ಗಾತ್ರದ ಮೊಸಳೆ ಪತ್ತೆಯಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಕೋಳಿ ಮಾಂಸ ಹಾಕಿ ಮೊಸಳೆ ಹಿಡಿಯುವ ಯತ್ನದಲ್ಲಿದ್ದಾರೆ. ಇತ್ತೀಚೆಗೆ ಸುರಿದ ಭಾರಿ ಮಳೆಯ ಹಿನ್ನೆಲೆಯಲ್ಲಿ ಮೊಸಳೆ ತೇಲಿ ಬಂದಿರುವ ಶಂಕೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Custard Apple Benefits
Latest27 mins ago

Custard Apple Benefits: ಕ್ಯಾನ್ಸರ್‌ ಸೇರಿದಂತೆ ಹಲವು ರೋಗಗಳನ್ನು ತಡೆಯುವ ಶಕ್ತಿ ಸೀತಾಫಲಕ್ಕಿದೆ!

namma Metro
ಬೆಂಗಳೂರು33 mins ago

Namma Metro : ವಿದ್ಯುತ್‌ ಸರಬರಾಜು ವ್ಯವಸ್ಥೆಯಲ್ಲಿ ದೋಷ; ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ವ್ಯತ್ಯಯ

Martin Movie
ಕರ್ನಾಟಕ42 mins ago

Martin Movie: ಆ.4ಕ್ಕೆ ಮಾರ್ಟಿನ್ ಚಿತ್ರದ ಟ್ರೈಲರ್‌ 1 ರಿಲೀಸ್‌; ವಿಎಫ್‌ಎಕ್ಸ್‌ ವಂಚನೆ ಬಗ್ಗೆ ನಿರ್ಮಾಪಕ ಹೇಳಿದ್ದೇನು?

Neeraj Chopra
ಪ್ರಮುಖ ಸುದ್ದಿ45 mins ago

Neeraj Chopra : ನಮಸ್ಕಾರ ಪ್ಯಾರಿಸ್​​; ಒಲಿಂಪಿಕ್ಸ್​ ಕ್ರೀಡಾಗ್ರಾಮ ತಲುಪಿದ ಚಿನ್ನದ ಹುಡುಗ ನೀರಜ್ ಚೋಪ್ರಾ

Nirmala Sitharaman
ದೇಶ54 mins ago

Nirmala Sitharaman: ಕಾಂಗ್ರೆಸ್‌ ಅವಧಿ ಬಜೆಟ್‌ನಲ್ಲಿ 26 ರಾಜ್ಯಗಳ ಹೆಸರೇ ಇರಲಿಲ್ಲ; ನಿರ್ಮಲಾ ಸೀತಾರಾಮನ್‌ ಟಾಂಗ್

Paris Olympics 2024
ಪ್ರಮುಖ ಸುದ್ದಿ1 hour ago

Paris Olympics 2024 : 7 ತಿಂಗಳ ಗರ್ಭಿಣಿಯಾಗಿದ್ದರೂ ಒಲಿಂಪಿಕ್ಸ್​ ಫೆನ್ಸಿಂಗ್​ ಸ್ಪರ್ಧೆಯಲ್ಲಿ ಭಾಗವಹಿಸಿ ಮೊದಲ ಪಂದ್ಯ ಗೆದ್ದ ಈಜಿಫ್ಟ್​​ನ ನಾದಾ ಹಫೀಜ್​

karnataka Rain
ಮಳೆ1 hour ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Actor Shahrukh Khan
ಸಿನಿಮಾ2 hours ago

Actor Shahrukh Khan: ಅಮೆರಿಕದಲ್ಲಿ ಶಾರುಖ್ ಖಾನ್‌ಗೆ ಶಸ್ತ್ರಚಿಕಿತ್ಸೆ; ಬಾಲಿವುಡ್‌ ಬಾದ್‌ಶಾಗೆ ಕಾಡುತ್ತಿರುವ ಸಮಸ್ಯೆ ಏನು?

Girl
ದೇಶ2 hours ago

ಜಾಬ್‌ ಸಿಕ್ಕಿದೆ ಎಂದು ಗೆಳೆಯರಿಗೆ ಪಾರ್ಟಿ ಕೊಟ್ಟ ಯುವತಿ; ಕುಡಿದ ಸ್ನೇಹಿತರು ಆಕೆಯನ್ನೇ ರೇಪ್ ಮಾಡಿದರು!

Sarabjot Singh
ಪ್ರಮುಖ ಸುದ್ದಿ2 hours ago

Sarabjot Singh : ಭಾರತಕ್ಕೆ 2ನೇ ಒಲಿಂಪಿಕ್ಸ್ ಪದಕ ತಂದುಕೊಟ್ಟ ಮನು ಭಾಕರ್ ಶೂಟಿಂಗ್ ಪಾಲುದಾರ ಸರಬ್ಜೋತ್ ಸಿಂಗ್​ ಹಿನ್ನೆಲೆ ಇಲ್ಲಿದೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 hour ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ5 hours ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ6 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 day ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 day ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ1 day ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌