Site icon Vistara News

Kannada New Movie: ಬಹು ನಿರೀಕ್ಷಿತ ʼಮಾಫಿಯಾʼ ಚಿತ್ರ ಜುಲೈ 26ರಂದು ತೆರೆಗೆ

Mafia Kannada movie released on July 26

ಬೆಂಗಳೂರು: ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ. ನಿರ್ಮಿಸಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ, ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿರುವ ಹಾಗೂ ಲೋಹಿತ್ ಎಚ್. ನಿರ್ದೇಶಿಸಿರುವ ಬಹು ನಿರೀಕ್ಷಿತ “ಮಾಫಿಯಾ” ಚಿತ್ರವನ್ನು (Kannada New Movie) ಜುಲೈ 26ರಂದು ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ನಡೆಸುತ್ತಿದೆ.

ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರದ ಬಿಡುಗಡೆಗೆ ಪ್ರಜ್ವಲ್ ದೇವರಾಜ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದರು. ಈಗ ಬಿಡುಗಡೆ ದಿನಾಂಕ ಸಮೀಪಿಸುತ್ತಿರುವುದರಿಂದ, ಅಭಿಮಾನಿಗಳಿಗೆ ಸಂತಸವಾಗಿದೆ. ಆಕ್ಷನ್ ಜಾನರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್‌ನಲ್ಲಿ ಚಿತ್ರೀಕರಣ ನಡೆದಿದೆ.

ಇದನ್ನೂ ಓದಿ: CM Siddaramaiah: ಅವಧಿ ಮೀರಿದ ಆಹಾರ ಪದಾರ್ಥ ಮಾರಿದರೆ ಹುಷಾರ್!‌ ಸಿಎಂ ಎಚ್ಚರಿಕೆ

ಅಪಾರ ವೆಚ್ಚದಲ್ಲಿ ಅದ್ಧೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಐದು ಸಾಹಸ ಸನ್ನಿವೇಶಗಳಿವೆ. ಈ ಚಿತ್ರಕ್ಕಾಗಿ ಪ್ರಜ್ವಲ್ ಅವರು ಸಾಕಷ್ಟು ಶ್ರಮವಹಿಸಿದ್ದಾರೆ.

ಇದನ್ನೂ ಓದಿ: MLC By Election: ಕರ್ನಾಟಕದಲ್ಲಿ ವಿಧಾನ ಪರಿಷತ್‌ ಉಪ ಚುನಾವಣೆ ಜುಲೈ 12ರಂದು

ಈ ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಎಸ್. ಪಾಂಡಿಕುಮಾರ್ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್, ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.

Exit mobile version