Site icon Vistara News

Kannada New Song: ಹೂಡಿ ಚಿನ್ನಿ ಕಂಠಸಿರಿಯಲ್ಲಿ ಮೂಡಿಬಂದ ʼಕೋಟಿ ಕೋಟಿ ರೊಕ್ಕ ಗಳಿಸಿʼ ಹಾಡು ರಿಲೀಸ್‌

Koti Koti Rokka Galisi kannada song released

ಬೆಂಗಳೂರು: ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ಜನಪ್ರಿಯರಾಗಿರುವ ಹಾಗೂ ಭಾರತೀಯರ ಸೇವಾ ಸಮಿತಿ ಸ್ಥಾಪಕರೂ ಆಗಿರುವ ಎಚ್.ಎಂ. ರಾಮಚಂದ್ರ (ಹೂಡಿ ಚಿನ್ನಿ) ಅವರು ಈಗ ಗಾಯಕರಾಗಿದ್ದಾರೆ‌. ಮಂಜುಕವಿ ಅವರು ಬರೆದು ಸಂಗೀತ ನೀಡಿರುವ ಸಾಮಾಜಿಕ ಸಂದೇಶ ಸಾರುವ “ಕೋಟಿ ಕೋಟಿ ರೊಕ್ಕ ಗಳಿಸಿ” ಹಾಡಿಗೆ ಧ್ವನಿಯಾಗಿದ್ದಾರೆ. ಇತ್ತೀಚೆಗೆ ಈ ಹಾಡು (Kannada New Song) ಬಿಡುಗಡೆ ಸಮಾರಂಭ ಅದ್ಧೂರಿಯಾಗಿ ನೆರವೇರಿತು.

ಶ್ರೀ ಮಹದೇವ ಸ್ವಾಮಿಜಿ, ವೃಕ್ಷಮಾತೆ ಸಾಲುಮರದ ತಿಮ್ಮಕ್ಕ, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ಚೇತನ್ ಅಹಿಂಸ, ನಿರ್ದೇಶಕ ಋಷಿ, ಭಾರತೀಯ ಸೇವಾ ಸಮಿತಿ ರಾಜ್ಯಾಧ್ಯಕ್ಷ ಅಮರ್ ಸೇರಿದಂತೆ ಅನೇಕ ಗಣ್ಯರು ಹಾಡು ಬಿಡುಗಡೆ ಮಾಡಿದರು.

ಈ ಹಾಡಿನಲ್ಲಿರುವ ಸಾಹಿತ್ಯಕ್ಕೂ ಹಾಗೂ ಹೂಡಿ ಚಿನ್ನಿ ಅವರ ಗುಣಕ್ಕೂ ಹೊಂದಾಣಿಕೆ ಆಗುತ್ತದೆ. ಹಾಗಾಗಿ ಈ ಹಾಡನ್ನು ಅವರಿಂದಲೇ ಹಾಡಿಸಬೇಕೆನಿಸಿತು. ಅವರು ಮೊದಲು ಒಪ್ಪಲಿಲ್ಲ. ಆನಂತರ ಅಭ್ಯಾಸ ಮಾಡಿ ಹಾಡಿದ್ದಾರೆ. ಎಂ.ಕೆ. ಆಡಿಯೋ ಯೂಟ್ಯೂಬ್ ಚಾನಲ್‌ನಲ್ಲಿ ಈ ಹಾಡು ಕೇಳಿ ಆನಂದಿಸಿ ಎಂದರು ಹಾಡು ಬರೆದು ಸಂಗೀತ ನೀಡಿರುವ ಮಂಜುಕವಿ.

ಇದನ್ನೂ ಓದಿ: Pralhad Joshi: ಕೇಂದ್ರದ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ; 1.3 ಕೋಟಿ ಜನರಿಂದ ನೋಂದಣಿ

ಹಾಡು ಬಿಡುಗಡೆ ಸಮಾರಂಭಕ್ಕೆ ಬಂದು ಹಾರೈಸಿದ ಎಲ್ಲಾ ಗಣ್ಯರಿಗೂ ಶರಣು ಎಂದು ಮಾತನಾಡಿದ ಹೂಡಿ ಚಿನ್ನಿ, ಮಂಜುಕವಿ ಅವರು ಬರೆದಿರುವ ಈ ಹಾಡು ಎಲ್ಲರ ಮನ ಮುಟ್ಟವಂತಿದೆ. ಈ ಗೀತೆಯನ್ನು ನೀವೇ ಹಾಡಿ ಅಂದಾಗ ನಾನು ಬೇಡ. ಬೇರೆ ಜನಪ್ರಿಯ ಗಾಯಕರು ಹಾಡಲಿ ಎಂದೆ. ಆದರೆ ಸ್ನೇಹಿತರ ಒತ್ತಾಯಕ್ಕೆ ಮಣಿದು ಅಭ್ಯಾಸ ಮಾಡಿ ಹಾಡಿದ್ದೇನೆ. ಹಾಡಿನಲ್ಲಿ ಒಳ್ಳೆಯ ಸಂದೇಶವಿದೆ. ನಮ್ಮ‌ ಈ ಪ್ರಯತ್ನಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದು ತಿಳಿಸಿದರು.

Exit mobile version