Site icon Vistara News

Kannada Sahitya Parishat: 2021ನೇ ಸಾಲಿನ 54 ಕೃತಿಗಳಿಗೆ ಕಸಾಪ ದತ್ತಿ ಪ್ರಶಸ್ತಿ ಪ್ರದಾನ

Kannada Sahitya Parishat Endowment Award for 54 books

#image_title

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್‌ ಆವರಣದ (Kannada Sahitya Parishat) ಶ್ರೀ ಕೃಷ್ಣರಾಜ ಪರಿಷತ್ ಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನ 2021ನೇ ಸಾಲಿನ ವಿವಿಧ ಕೃತಿಗಳಿಗೆ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ದತ್ತಿ ಪ್ರಶಸ್ತಿಗೆ 2800 ಪುಸ್ತಕಗಳು ಆಯ್ಕೆಗೆ ಬಂದಿದ್ದವು. ಅದರಲ್ಲಿ 49 ವಿವಿಧ ದತ್ತಿ ವಿಭಾಗಕ್ಕಾಗಿ 54 ಪುಸ್ತಕಗಳನ್ನು ಆಯ್ಕೆ ಮಾಡಲಾಗಿದ್ದು, ದತ್ತಿ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಮಾಡಲಾಯಿತು.

ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿ ಡಾ. ನಿರಂಜನ ವಾನಳ್ಳಿ ಮಾತನಾಡಿ, ಮಕ್ಕಳಲ್ಲಿ ಕನ್ನಡ ಸಾಹಿತ್ಯದ ಒಲವು ಹುಟ್ಟುವಂತೆ ಮಾಡುವುದಕ್ಕೆ ಎಲ್ಲರೂ ಮುಂದಾಗಬೇಕು. ನಮ್ಮ ಭಾಷೆಯನ್ನು ನಾವೇ ಬಳಸಿದಿದ್ದರೆ ಮುಂದಿನ ಪೀಳಿಗೆಗೆ ಏನನ್ನೂ ಕೊಟ್ಟಂತಾಗುವುದಿಲ್ಲ. ಪುಸ್ತಕಗಳು ಹೆಚ್ಚು ಹೆಚ್ಚು ಪ್ರಕಟವಾಗಬೇಕು. ಪ್ರಕಟಗೊಂಡಿರುವ ಎಲ್ಲ ಪುಸ್ತಕಗಳನ್ನು ಓದುವ ಸಂಸ್ಕೃತಿ ಹೆಚ್ಚಾದಾಗ ಮಾತ್ರ ಕನ್ನಡ ಉಳಿಯುವುದು, ಬೆಳೆಯುವುದು ಎಂದು ಅಭಿಪ್ರಾಯಪಟ್ಟರು.

ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದತ್ತಿ ಪ್ರಶಸ್ತಿಗಳನ್ನು ನೀಡುವ ಮೂಲಕ ಅಮೋಘವಾಗಿರುವ ಪರಂಪರೆ ಜಾರಿಯಲ್ಲಿದೆ. ಅನೇಕ ದತ್ತಿ ದಾನಿಗಳು ವಿವಿಧ ವಿಚಾರಗಳಿಗೆ ಅವರ ಭಾವನೆಗಳಿಗೆ ತಕ್ಕಂತೆ ದತ್ತಿ ನಿಧಿಯನ್ನು ಇಟ್ಟಿರುತ್ತಾರೆ. ದತ್ತಿ ದಾನಿಗಳ ಆಶಯಕ್ಕೆ ಧಕ್ಕೆ ಆಗದಂತೆ ಕಾಲಕಾಲಕ್ಕೆ ಸರಿಯಾಗಿ ದತ್ತಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ | Sunday Read: ಹೊಸ ಪುಸ್ತಕ: ಚಾಂಡಾಳನೊಬ್ಬನ ಆತ್ಮವಿಮರ್ಶೆ

ಮುಖ್ಯಮಂತ್ರಿಗಳ ಕಾರ್ಯದರ್ಶಿ ಜಯರಾಂ ರಾಯಪುರ, ಹಿರಿಯ ಸಾಹಿತಿ ಮತ್ತು ಸಂಸ್ಕೃತಿ ಚಿಂತಕ ಪ್ರೊ. ಕಾಳೇಗೌಡ ನಾಗವಾರ ಮತ್ತಿತರರು ಇದ್ದರು.

Exit mobile version