ಬೆಂಗಳೂರು: ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿ.ಎಸ್.ಆರ್.) ಅಡಿಯಲ್ಲಿ ಕರ್ಣಾಟಕ ಬ್ಯಾಂಕ್‌ನಿಂದ ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಚೇರಿಗೆ (Kannada Sahitya Parishat) ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆಧುನಿಕ ಕಂಪ್ಯೂಟರ್‌ಗಳು ಹಾಗೂ ಪೀಠೋಪಕರಣಗಳಿಗೆ ೨೦ ಲಕ್ಷ ರೂ.ಗಳನ್ನು ಮಂಜೂರು ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.
ನಿರಂತರವಾಗಿ ಕನ್ನಡ ಅಭಿವೃದ್ಧಿಯ ಕಾಯಕದಲ್ಲಿ ತೊಡಗಿರುವ ಕನ್ನಡ ಸಾಹಿತ್ಯ ಪರಿಷತ್ ಜತೆ ನಾಡಿನ ಹೆಮ್ಮೆಯ ಕರ್ಣಾಟಕ ಬ್ಯಾಂಕ್ ಕೈ ಜೋಡಿಸಿರುವುದಕ್ಕೆ ಸಮಸ್ತ ಕನ್ನಡಿಗರ ಪರವಾಗಿ ಪರಿಷತ್ ಆಭಾರಿಯಾಗಿದೆ. ಕನ್ನಡ ಬಾಷೆ, ನಾಡು- ನುಡಿ ಸಂಸ್ಕೃತಿಯ ಅಭ್ಯುದಯಕ್ಕೆ ಸಹಕಾರ ನೀಡುತ್ತಿರುವ ಕರ್ಣಾಟಕ ಬ್ಯಾಂಕ್ ನಾಡಿಗೆ ಮಾದರಿಯಾಗಿದೆ. ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಚೇರಿಗೆ ಅಗತ್ಯವಿರುವ ಪೀಠೋಪಕರಣಗಳು, ಕಂಪ್ಯೂಟರ್‌ಗಳು ಹಾಗೂ ಪ್ರಿಂಟರ್‌ಗಳನ್ನು ಕೊಡುಗೆಯಾಗಿ ನೀಡುವ ಮೂಲಕ ಕನ್ನಡದ ಕೆಲಸದಲ್ಲಿ ತೊಡಗಿಕೊಂಡಿದೆ ಎಂದು ಕೃತಜ್ಞತೆ ಸಲ್ಲಿಸಿದ್ದಾರೆ.
ಇದನ್ನೂ ಓದಿ | National Youth Festival | ಯುವಶಕ್ತಿಯೇ ಭಾರತದ ಪಯಣದ ಚಾಲಕ ಶಕ್ತಿ: ಪ್ರಧಾನಿ ನರೇಂದ್ರ ಮೋದಿ ಬಣ್ಣನೆ
ಕರ್ಣಾಟಕ ಬ್ಯಾಂಕ್ ಉಪ ಪ್ರಧಾನ ವ್ಯವಸ್ಥಾಪಕ ನಾಗರಾಜ್ ಉಪಾಧ್ಯಾಯ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್‌ಗೆ ಬೇಕಾಗಿರುವ ಉಪಕರಣಗಳನ್ನು ಈಗಾಗಲೇ ಸರಬರಾಜು ಮಾಡಿರುವ ಸಂಸ್ಥೆಗೆ ಕರ್ಣಾಟಕ ಬ್ಯಾಂಕ್ ಸಿಎಸ್ಆರ್ ನಿಧಿಯಡಿಯಲ್ಲಿ ಹಣ ಬಿಡುಗಡೆ ಮಾಡಲಾಗಿದೆ. ಪರಿಷತ್ತು ದೃಢೀಕರಣಾ ಪತ್ರದ ಆಧಾರದಲ್ಲಿ ಬ್ಯಾಂಕ್ ಮಂಜೂರು ಮಾಡಿದ ಹಣವನ್ನು ಬಿಡುಗಡೆ ಮಾಡಲಾಗುವುದು. ಕನ್ನಡ ಸಾಹಿತ್ಯ ಪರಿಷತ್ ಕನ್ನಡಕ್ಕಾಗಿ ಹಗಲು ಇರುಳು ಕೆಲಸ ಮಾಡುತ್ತಿದೆ. ನಮ್ಮ ಬ್ಯಾಂಕ್ ಕನ್ನಡ ನಾಡು ನುಡಿ ಭಾಷೆಯ ಮೇಲೆ ಅಪಾರವಾದ ಗೌರವ ಇಟ್ಟುಕೊಂಡ ಹಿನ್ನೆಲೆಯಲ್ಲಿ ಪರಿಷತ್ತಿನ ಕಾರ್ಯವನ್ನು ಕಂಡು ನಮ್ಮ ಕೊಡುಗೆಯನ್ನು ನೀಡಿದ್ದೇವೆ ತಿಳಿಸಿದರು.
ಕರ್ಣಾಟಕ ಬ್ಯಾಂಕ್ ಸಾಮಾಜಿಕ ಹೊಣೆಗಾರಿಕೆ ನಿಧಿಯ (ಸಿ.ಎಸ್.ಆರ್.) ಅಡಿಯಲ್ಲಿ ಈಗಾಗಲೇ ಮೊದಲ ಹಂತವಾಗಿ ೧೭,೪೮,೧೪೬ ರೂಪಾಯಿ ನೀಡಿದ್ದು, ಈ ಬಾರಿ ೨,೫೧,೮೫೪ ರೂ. ನೀಡುವುದರೊಂದಿಗೆ ಒಟ್ಟು ೨೦,೦೦,೦೦೦ ರೂ.ಗಳನ್ನು ಮಂಜೂರು ಮಾಡಿದೆ.
ಕರ್ನಾಟಕ ಬ್ಯಾಂಕ್ ಚಾಮರಾಜಪೇಟೆ ಶಾಖೆಯ ಹಿರಿಯ ಶಾಖಾ ವ್ಯವಸ್ಥಾಪಕ ಕುಮಾರಸ್ವಾಮಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಗೌರವ ಕೋಶಾಧ್ಯಕ್ಷ ಬಿ.ಎಂ.ಪಟೇಲಪಾಂಡು ಉಪಸ್ಥಿತರಿದ್ದರು.
ಇದನ್ನೂ ಓದಿ | Karnataka Tableau | ಮೊದಲಿಗೆ ತಿರಸ್ಕರಿಸಿ, ಕೊನೆ ಗಳಿಗೆಯಲ್ಲಿ ಕರ್ನಾಟಕ ಟ್ಯಾಬ್ಲೋಗೆ ಓಕೆ ಎಂದಿದ್ದೇಕೆ?