ನಾಡಿನ ಸಾಧಕರ ಪರಿಚಯಕ್ಕೆ ಕಸಾಪದಿಂದ ಕನ್ನಡದ ಹೆಸರು, ಸಹಿ ಅಭಿಯಾನ Vistara News

ಕ ಸಾ ಪ

ನಾಡಿನ ಸಾಧಕರ ಪರಿಚಯಕ್ಕೆ ಕಸಾಪದಿಂದ ಕನ್ನಡದ ಹೆಸರು, ಸಹಿ ಅಭಿಯಾನ

ಸಾಧಕರ ಹೆಸರನ್ನು ಆಂಗ್ಲ ಭಾಷೆಯಲ್ಲಿ ಹೃಸ್ವಗೊಳಿಸುವುದರಿಂದ ಮೂಲ ಅರ್ಥದಿಂದ ದೂರವಾಗುತ್ತದೆ. ಹೀಗಾಗಿ ಹೊಸ ಪೀಳಿಗೆಗೆ ಸಾಧಕರ ಪರಿಚಯ ಮಾಡಲು ಕನ್ನಡ ಸಾಹಿತ್ಯ ಪರಿಷತ್‌, ಕನ್ನಡದ ಹೆಸರು ಮತ್ತು ಸಹಿ ಅಭಿಯಾನ ಕೈಗೊಳ್ಳಲು ನಿರ್ಧರಿಸಿದೆ.

VISTARANEWS.COM


on

Kannada Sahitya Parishat
ಕಸಾಪ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕನ್ನಡ ನಾಡಿಗೆ ದೊಡ್ಡ ಪ್ರಮಾಣದಲ್ಲಿ ಕೊಡುಗೆ ನೀಡಿದ ಹಲವು ಹಿರಿಯರು, ಸಾಧಕರ ಹೆಸರನ್ನು ರಸ್ತೆ, ಬಡಾವಣೆಗೆ ಇಡುವ ಪದ್ಧತಿ ಮೊದಲಿಂದಲೂ ಇದೆ. ಆದರೆ, ಕ್ರಮೇಣ ಆಂಗ್ಲ ಭಾಷೆಯಲ್ಲಿ ಹೃಸ್ವಗೊಳ್ಳುವ ಹೆಸರುಗಳು ಮೂಲ ಅರ್ಥದಿಂದ ದೂರವಾಗುತ್ತಿವೆ. ಹೀಗಾಗಿ ಹೊಸ ಪೀಳಿಗೆಯವರಿಗೆ ಸಾಧಕರ ಪರಿಚಯ ಮಾಡಲು ಕನ್ನಡ ಸಾಹಿತ್ಯ ಪರಿಷತ್‌ನಿಂದ ಕನ್ನಡದ ಹೆಸರು ಮತ್ತು ಸಹಿ ಅಭಿಯಾನ ಹಮ್ಮಿಕೊಳ್ಳಲಾಗುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಡಾ.ಮಹೇಶ ಜೋಶಿ ಅವರು, ಮಹಾತ್ಮ ಗಾಂಧಿ ರಸ್ತೆ ಈಗ ಎಂ.ಜಿ.ರಸ್ತೆಯಾಗಿದೆ, ಕೃಷ್ಣ ರಾಜ ಒಡೆಯರ ಹೆಸರಿನಲ್ಲಿ ಇರುವ ರಸ್ತೆ ಕೆ.ಆರ್.ರಸ್ತೆಯಾಗಿದೆ. ನರಸಿಂಹ ರಾಜ ಒಡೆಯರ್ ಅವರ ಹೆಸರಿನಲ್ಲಿ ರೂಪಿತವಾದ ಬಡಾವಣೆ ಎನ್.ಆರ್.ಕಾಲೋನಿಯಾಗಿದೆ. ಹೀಗೆ ಹತ್ತಾರು ಉದಾಹರಣೆಗಳನ್ನು ನೀಡಬಹುದು. ಕನ್ನಡ ಬರಹಗಾರರಲ್ಲಿ ಡಿ.ವಿ.ಗುಂಡಪ್ಪ ಅವರ ಹೆಸರನ್ನು ಡಿ.ವಿ.ಜಿ ಎಂದು ಬರೆಯುವ ಪದ್ಧತಿ ಜನಜನಿತವಾಗಿದ್ದು, ಅವರ ಮೂಲ ಹೆಸರೇ ಮರೆಯಾಗುವ ಅಪಾಯವಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Adhish Rajinish Wali: ಕಸಾಪ ಯುಕೆ ಗೌರವ ಯುವ ಸಂಚಾಲಕರಾಗಿ ಆದೀಶ್‌ ರಜನೀಶ್‌ ವಾಲಿ ನೇಮಕ

ಅದೇ ರೀತಿ ಎಚ್.ಎಸ್.ವಿ (ಎಚ್.ಎಸ್.ವೆಂಕಟೇಶ ಮೂರ್ತಿ), ಬಿ.ಆರ್.ಎಲ್ (ಬಿ.ಆರ್.ಲಕ್ಷ್ಮಣ ರಾವ್) ಪಿ.ಟಿ.ಎನ್, (ಪು.ತಿ.ನರಸಿಂಹಾಚಾರ್) ಕೆ.ಎಸ್.ಎನ್ (ಕೆ.ಎಸ್.ನರಸಿಂಹ ಸ್ವಾಮಿ) ಇಂತಹ ಪ್ರಯೋಗಗಳು ಸಾಮಾಜಿಕ ಜಾಲತಾಣಗಳು ಬೆಳೆಯುತ್ತಾ ಹೋದಷ್ಟು ಹೆಚ್ಚಾಗುತ್ತಿದೆ. ಸೌಂತ್ ಎಂಡ್ ಸರ್ಕಲ್‌ಗೆ ತೀನಂಶ್ರೀ ವೃತ್ತ ಎಂದು ಬೆಂಗಳೂರು ಮಹಾನಗರ ಪಾಲಿಕೆ ಅಧಿಕೃತ ನಾಮಕರಣ ಮಾಡಿದ್ದರೂ ಅದು ಜನ ಜನಿತವಾಗಿಲ್ಲ. ಟ್ಯಾಂಕ್ ಬಂಡ್ ರಸ್ತೆಗೆ ಆರ್.ನಾಗೇಂದ್ರ ರಾಯರ ಹೆಸರು ಇಟ್ಟಿದ್ದರೂ ಅದು ಆಚರಣೆಗೆ ಬಂದಿಲ್ಲ. ಇಂತಹ ಹಲವು ದೋಷಗಳನ್ನು ಪಟ್ಟಿ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಉಂಟು ಮಾಡುವ ಅಭಿಯಾನ ಆರಂಭಿಸಲು ಕನ್ನಡ ಸಾಹಿತ್ಯ ಪರಿಷತ್‌ ಅಲೋಚಿಸಿದೆ ಎಂದು ಡಾ.ಮಹೇಶ ಜೋಶಿ ಹೇಳಿದ್ದಾರೆ.

ಇದಲ್ಲದೆ ಈಗ ಹೆಸರು ಇಟ್ಟಿರುವ ಸಾಧಕರ ಕುರಿತು ಜನ ಸಾಮಾನ್ಯರಲ್ಲಿ ತಿಳಿವಳಿಕೆ ಮೂಡಿಸಿ ಅರಿವನ್ನು ಹೆಚ್ಚಿಸುವ ಉದ್ದೇಶವೂ ಕನ್ನಡ ಸಾಹಿತ್ಯ ಪರಿಷತ್‌ಗೆ ಇದೆ. ಉದಾಹರಣೆಗೆ ಬ್ಯೂಗಲ್ ರಾಕ್ ಪಾರ್ಕ್‌ ದ್ವಾರಕ್ಕೆ ಕನ್ನಡ ಸಾಹಿತ್ಯ ಪರಿಷತ್‌ ಏಳಿಗೆಗೆ ಶ್ರಮಿಸಿದ ಬೆಳ್ಳಾವೆ ವೆಂಕಟನಾರಾಯಣಪ್ಪ ಅವರ ಹೆಸರನ್ನು ಇಡಲಾಗಿದೆ. ಆದರೆ, ಅವರ ಕುರಿತ ವಿವರಗಳು ಅಲ್ಲಿ ಲಭ್ಯವಿಲ್ಲ. ಈ ವಿವರಗಳನ್ನು ಬೆಂಗಳೂರು ಮಹಾನಗರ ಪಾಲಿಕೆ ಸಹಯೋಗದಲ್ಲಿ ಅಲ್ಲಿ ಅಳವಡಿಸುವ ಉದ್ದೇಶ ಕನ್ನಡ ಸಾಹಿತ್ಯ ಪರಿಷತ್‌ಗೆ ಇದೆ ಎಂದು ಅಭಿಯಾನದ ಉದ್ದೇಶದ ಬಗ್ಗೆ ಮಾಹಿತಿ ನೀಡಿದ್ದಾರೆ.

ಕನ್ನಡದಲ್ಲಿ ಸಹಿ ಮಾಡುವ ಅಭಿಯಾನವನ್ನೂ ಕೂಡ ಕನ್ನಡ ಸಾಹಿತ್ಯ ಪರಿಷತ್ತು ರೂಪಿಸಲಿದೆ. ಸಹಿ ಎನ್ನುವುದು ವ್ಯಕ್ತಿಯ ವ್ಯಕ್ತಿತ್ವದ ಹೆಗ್ಗುರುತು ಇದ್ದಂತೆ. ಇಲ್ಲಿ ಕನ್ನಡ ಬಳಕೆಯಾದರೆ ಭಾಷೆಯ ಭಾವನಾತ್ಮಕ ಅಯಾಮದ ಜತೆಗಿನ ವ್ಯಕ್ತಿಯ ಬಾಂಧವ್ಯವೂ ಬೆಳೆಯುತ್ತದೆ. ಈ ಹಿನ್ನೆಲೆಯಲ್ಲಿ ಕನ್ನಡದಲ್ಲಿಯೇ ಸಹಿ ಮಾಡುವಂತೆ ಕನ್ನಡಿಗರೆಲ್ಲರೂ ಜಾಗೃತಿ ಉಂಟು ಮಾಡುವ ಇಂತಹ ಕನ್ನಡದ ಸಹಿಯನ್ನು ಎಲ್ಲಾ ಅಧಿಕೃತ ವ್ಯವಹಾರಗಳಲ್ಲಿಯೂ ಮಾನ್ಯ ಮಾಡುವಂತೆ ಮಾಡುವ ಅಭಿಯಾನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತೊಡಗಲಿದೆ ಎಂದು ಹೇಳಿದ್ದಾರೆ.‌

ಇದನ್ನೂ ಓದಿ | ವಿಸ್ತಾರ ಯುಗಾದಿ ಕಥಾಸ್ಪರ್ಧೆ: ಟಾಪ್‌ 25ರ ಗೌರವ ಪಡೆದ ಕಥೆ: ಕಸೂತಿ‍

ಕನ್ನಡವನ್ನು ಎಲ್ಲಾ ಹಂತದಲ್ಲಿಯೂ ಸ್ಥಾಪಿಸುವ ಇನ್ನಷ್ಟು ಯೋಜನೆಗಳನ್ನು ರೂಪಿಸುತ್ತಿದ್ದೇವೆ ಎಂದು ಹೇಳಿದ ಡಾ.ಮಹೇಶ ಜೋಶಿ ಅವರು, ಅನುಷ್ಠಾನದಲ್ಲಿ ಎಲ್ಲಾ ಕನ್ನಡಿಗರ ಸಹಕಾರ ಅಗತ್ಯವಿದೆ. ಕನ್ನಡ ತಾಯಿ ಭುವನೇಶ್ವರಿಯ ನೆಲೆವೀಡಾದ ಸಿದ್ದಾಪುರಿಂದ ಈ ಅಭಿಯಾನ ಆರಂಭವಾಗಲಿದ್ದು, ಶೀಘ್ರದಲ್ಲಿಯೇ ದಿನಾಂಕವನ್ನು ನಿಗದಿ ಪಡಿಸುವುದಾಗಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ ಸಾ ಪ

HD Deve Gowda: ಎಚ್.ಡಿ. ದೇವೇಗೌಡರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ

HD Deve Gowda: ಬೆಂಗಳೂರಿನ ನಿವಾಸದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರಿಗೆ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ ಮಾಡಲಾಯಿತು.

VISTARANEWS.COM


on

Ex PM HD Devegowda
Koo

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ (HD Deve Gowda) ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಬಹುಮುಖ್ಯ ದತ್ತಿ ಪ್ರಶಸ್ತಿಯಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಯನ್ನು ಸೋಮವಾರ ಪ್ರದಾನ ಮಾಡಲಾಯಿತು. ಮಾಜಿ ಪ್ರಧಾನಿಗಳ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಮೂರ್ತಿ ಎಂ.ಎನ್. ವೆಂಕಟಾಚಲಯ್ಯ ಹಾಗೂ ಕಸಾಪ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಈ ವೇಳೆ ಮಾತನಾಡಿದ ನ್ಯಾ. ಎಂ.ಎನ್. ವೆಂಕಟಾಚಲಯ್ಯ ಅವರು, ನಾಡಿನ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದ ಮೈಸೂರು ಸಂಸ್ಥಾನದ ಅರಸರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನ ಪ್ರಶಸ್ತಿ ದೇಶದ ಮೊದಲ ಕನ್ನಡಿಗ ಪ್ರಧಾನಮಂತ್ರಿ, ರಾಜಕೀಯ ಮುತ್ಸದ್ಧಿ ಮತ್ತು ದೂರದೃಷ್ಟಿಯ ಆಡಳಿತಗಾರ ದೇವೇಗೌಡರಿಗೆ ಸಂದಿರುವುದು ನನಗೆ ಬಹಳ ಸಂತಸ ಉಂಟು ಮಾಡಿದೆ. ಅತ್ಯುನ್ನತ ಸಾಧಕರಿಗೆ ಪ್ರಶಸ್ತಿ ಸಂದಿದೆ ಎಂದು ಹೇಳಿದರು.

ನಾಡೋಜ ಮಹೇಶ್ ಜೋಶಿ ಅವರು ಮಾತನಾಡಿ, ರಾಜ್ಯ, ದೇಶಕ್ಕೆ ಮಹಾನ್ ಕೊಡುಗೆ ನೀಡಿದ ದೇವೇಗೌಡರಿಗೆ ನಾಲ್ವಡಿ ಪ್ರಶಸ್ತಿ ನೀಡುತ್ತಿರುವುದು ಆ ಪ್ರಶಸ್ತಿಯ ಗೌರವವನ್ನು ಮತ್ತಷ್ಟು ಹೆಚ್ಚಿಸಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಅಭಿವೃದ್ಧಿಯ ಹರಿಕಾರರಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಅಜರಾಮರರಾದರೆ, ದೇವೇಗೌಡರು ಸ್ವಾತಂತ್ರೋತ್ತರ ಭಾರತದಲ್ಲಿ ಆರು ದಶಕಗಳ ತಮ್ಮ ಸುದೀರ್ಘ ರಾಜಕೀಯ ಬದುಕಿನಲ್ಲಿ ನಾಡು, ದೇಶದ ಅಭಿವೃದ್ಧಿಗೆ ಆವಿಸ್ಮರಣೀಯ ಕೊಡುಗೆ ನೀಡಿದ್ದಾರೆ ಎಂದರು.

ಮಾಜಿ ಪ್ರಧಾನಿ ಸಂತಸ

ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಯನ್ನು ಸಂತೋಷದಿಂದ ಸ್ವೀಕಾರ ಮಾಡಿದ್ದೇನೆ. ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಬೇಕಿತ್ತು. ಅನಾರೋಗ್ಯದ ಕಾರಣಕ್ಕೆ ವೈದ್ಯರ ಸಲಹೆಯ ಮೇರೆಗೆ ನಾನು ಆ ಕಾರ್ಯಕ್ರಮಕ್ಕೆ ಹಾಜರಾಗುವುದು ಕಷ್ಟ ಸಾಧ್ಯವಿತ್ತು. ಹೀಗಾಗಿ ನ್ಯಾ. ಎಂ.ಎನ್. ವೆಂಕಟಾಚಲಯ್ಯ, ನಾಡೋಜ ಮಹೇಶ್ ಜೋಶಿ ಅವರು ನನ್ನ ಮನೆಗೇ ಬಂದು ಪ್ರಶಸ್ತಿ ನೀಡಿದ್ದಾರೆ. ಇವರಿಬ್ಬರಿಗೂ ನಾನು ಕೃತಜ್ಞನಾಗಿದ್ದೇನೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದರು.

ಇದನ್ನೂ ಓದಿ | CM Siddaramaiah : ಪ್ರಧಾನಿ ರಾಜಕೀಯ ಭಾಷಣ ಸುಳ್ಳಿನ ಕಂತೆ; ಇಂದು ದೇಶವೇ ದಿವಾಳಿಯಾಗಿದೆ ಎಂದ ಸಿದ್ದರಾಮಯ್ಯ

ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ವಿವಿಧ ಪದಾಧಿಕಾರಿಗಳು, ಕನ್ನಡದ ಕಟ್ಟಾಳುಗಳು ಹಾಜರಿದ್ದು, ಮಾಜಿ ಪ್ರಧಾನಿಗಳಿಗೆ ಶುಭ ಕೋರಿದರು.

Continue Reading

ಕ ಸಾ ಪ

ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗೆ ನಾ. ಡಿಸೋಜ ಹಾಗೂ ದು. ಸರಸ್ವತಿ ಆಯ್ಕೆ

Kannada sahitya parishat: ಸಂಚಲನ ಬಳಗದವರು ಆಶಯದಂತೆ ಒಬ್ಬ ಕನ್ನಡ ಕ್ರೈಸ್ತ ಸಾಧಕರಿಗೆ ಹಾಗೂ ಇನ್ನೊಬ್ಬರು ಕನ್ನಡ ಪರ ಹೋರಾಟಗಾರಿಗೆ ಫಾದರ್‌ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.

VISTARANEWS.COM


on

By

DSouza and Du Saraswati
ಸಾಮಾಜಿಕ ಹೋರಾಟಗಾರ್ತಿ ದು. ಸರಸ್ವತಿ ಮತ್ತು ಹಿರಿಯ ಸಾಹಿತಿ ನಾ. ಡಿಸೋಜ
Koo

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು‌ (Kannada Sahitya Parishat) 2023ನೇ ಸಾಲಿನ ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗಾಗಿ ಹಿರಿಯ ಸಾಹಿತಿ ನಾ. ಡಿಸೋಜ ಹಾಗೂ ಸಾಮಾಜಿಕ ಹೋರಾಟಗಾರ್ತಿ ದು. ಸರಸ್ವತಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಸಂಬಂಧ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ (Dr. Nadoja Mahesh Joshi) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಬಾರಿ ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗಾಗಿ, ಪರಿಷತ್ತಿನ ಪಂಪ ಸಭಾಭವನದಲ್ಲಿ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರ ನೇತೃತ್ವದಲ್ಲಿ ಆಯ್ಕೆ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ದತ್ತಿ ದಾನಿಗಳ ಆಶಯದಂತೆ ಪ್ರತಿ ವರ್ಷ ಇಬ್ಬರು ಸಾಧಕರಿಗೆ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಒಬ್ಬರು ಕನ್ನಡ ಕ್ರೈಸ್ತ ಸಾಧಕರಿಗೆ ಮತ್ತು ಇನ್ನೊಬ್ಬರು ಕನ್ನಡ ಜನಪರ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದವರನ್ನು ಆಯ್ಕೆ ಮಾಡಲಾಗುತ್ತದೆ.

ಅದರಂತೆ ಈ ಬಾರಿಯ ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗಾಗಿ ಹಿರಿಯ ಕಥೆಗಾರ, ಸಾಹಿತಿಗಳಾಗಿರುವ ಕ್ರೈಸ್ತ ಧರ್ಮಕ್ಕೆ ಸೇರಿದ ಶಿವಮೊಗ್ಗದ ಸಾಗರದ ನಾ. ಡಿಸೋಜ ಹಾಗೂ ಕನ್ನಡ ಪರ ಹೋರಾಟಗಾರ್ತಿ, ರಂಗಕರ್ಮಿ ಬೆಂಗಳೂರಿನ ದು. ಸರಸ್ವತಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ತಲಾ ಹತ್ತು ಸಾವಿರ ರೂ.ನಗದು, ಫಲ ತಾಂಬೂಲ ಹಾಗೂ ಸ್ಮರಣಿಕೆಯನ್ನು ಒಳಗೊಂಡಿರುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.

ಈ ಸಂಬಂಧ ಮಾತನಾಡಿರುವ ಅವರು ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಯನ್ನು ಸಂಚಲನ ಬಳಗದವರು 2017ರಲ್ಲಿ ಈ ದತ್ತಿ ನಿಧಿ ಸ್ಥಾಪಿಸಿದ್ದರು. ಇದುವರೆಗೆ 12 ಜನರಿಗೆ ಕನ್ನಡ ಸಾಹಿತ್ಯ ಪರಿಷತ್ತು ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರದಾನ ಮಾಡಲಾಗಿದೆ. ಪ್ರಸ್ತುತ ದತ್ತಿ ಪ್ರಶಸ್ತಿಯನ್ನು ದತ್ತಿ ದಾನಿಗಳು ಆಶಯದಂತೆ ಒಬ್ಬ ಕನ್ನಡ ಕ್ರೈಸ್ತ ಸಾಧಕರಿಗೆ ಹಾಗೂ ಇನ್ನೊಬ್ಬರು ಕನ್ನಡ ಪರ ಹೋರಾಟಗಾರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.

ಇದನ್ನೂ ಓದಿ: ಕನ್ನಡ ಚಳುವಳಿ ವೀರಸೇನಾನಿ ಮ. ರಾಮಮೂರ್ತಿ ದತ್ತಿ ಪ್ರಶಸ್ತಿಗೆ ಜಿ.ಕೆ. ಸತ್ಯ ಆಯ್ಕೆ

ನಿತ್ಯ ಬದುಕಿನಲ್ಲಿ ಕನ್ನಡ ನಾಡು- ನುಡಿಯ ಕುರಿತು ಅಪಾರ ಗೌರವ ಹೊಂದಿರುವ ಹಿರಿಯ ಸಾಧಕರಿಗೆ ಕನ್ನಡ ಸಾಹಿತ್ಯ ಪರಿಷತ್ತು ಅಭಿನಂದಿಸುತ್ತದೆ. ಪ್ರಶಸ್ತಿ ಪುರಸ್ಕಾರ ಪಡೆದ ಇಬ್ಬರೂ ತಮ್ಮ ಕ್ಷೇತ್ರದಲ್ಲಿ ನಿರಂತರ ಸೇವೆ ಮಾಡುತ್ತಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಪ್ರಶಸ್ತಿ ಪುರಸ್ಕೃತರಿಂದ, ಕನ್ನಡ ನಾಡಿನ ನೆಲಮೂಲ ಸಂಸ್ಕೃತಿಯನ್ನು ಉಳಿಸಿ- ಬೆಳೆಸುವಲ್ಲಿ ನಿರಂತರ ಪ್ರಯತ್ನ ಮುಂದುವರಿಯಲಿದೆ ಎಂದು ತಿಳಿಸಿದರು.

ಈ ಆಯ್ಕೆ ಸಮಿತಿಯಲ್ಲಿ ದತ್ತಿ ದಾನಿಗಳಾದ ಸಂಚಲನ ಬಳಗದವರ ಪರವಾಗಿ ರೀಟಾ ರೀನಿ ಹಾಗೂ ರಫಾಯಲ್ ರಾಜ್ ಸೇರಿ ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ. ಪದ್ಮಿನಿ ನಾಗರಾಜು ಹಾಗೂ ಗೌರವ ಕೋಶಾಧ್ಯಕ್ಷರಾದ ಡಾ. ಬಿ.ಎಂ.ಪಟೇಲ್ ಪಾಂಡು ಅವರು ಉಪಸ್ಥಿತರಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕ ಸಾ ಪ

ಕನ್ನಡ ಚಳವಳಿ ವೀರಸೇನಾನಿ ಮ. ರಾಮಮೂರ್ತಿ ದತ್ತಿ ಪ್ರಶಸ್ತಿಗೆ ಜಿ.ಕೆ. ಸತ್ಯ ಆಯ್ಕೆ

ಕನ್ನಡ ಚಳವಳಿ ವೀರಸೇನಾನಿ ಮ. ರಾಮಮೂರ್ತಿ ದತ್ತಿ ಪ್ರಶಸ್ತಿಗೆ ಕಲಾವಿದ ಹಾಗೂ ಕನ್ನಡ ಹೋರಾಟಗಾರಾದ ಜಿ.ಕೆ. ಸತ್ಯ ಅವರು ಆಯ್ಕೆ ಆಗಿದ್ದಾರೆ. ಈ ಸಂಬಂಧ ಕನ್ನಡ ಸಾಹಿತ್ಯ ಪರಿಷತ್ತಿನ ಆಯ್ಕೆ ಸಮಿತಿಯಲ್ಲಿ ನಿರ್ಧಾರವಾಗಿದೆ.

VISTARANEWS.COM


on

By

G k sathya
ಹಿರಿಯ ಕಲಾವಿದ ಜಿ.ಕೆ ಸತ್ಯ
Koo

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ (Kannada Sahitya Parishat) ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರ ಅಧ್ಯಕ್ಷತೆಯಲ್ಲಿ ಸಮಿತಿ ಸಭೆ ನಡೆದಿದೆ. ಈ ಸಭೆಯಲ್ಲಿ 2023ನೇ ಸಾಲಿನ ಕನ್ನಡ ಚಳವಳಿ ವೀರಸೇನಾನಿ ಮ.ರಾಮಮೂರ್ತಿ ದತ್ತಿ ಪ್ರಶಸ್ತಿಗೆ ಕನ್ನಡ ಪರ ಹೋರಾಟಗಾರ ಹಿರಿಯ ಕಲಾವಿದರಾದ ಜಿ.ಕೆ. ಸತ್ಯ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಬೆಂಗಳೂರು ನಗರ ಜಿಲ್ಲಾ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾಗಿದ್ದ ಟಿ. ತಿಮ್ಮೇಶ್‌ ಅವರು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪಿಸಿರುವ ಕನ್ನಡ ಚಳವಳಿ ವೀರಸೇನಾನಿ ಮ.ರಾಮಮೂರ್ತಿ ದತ್ತಿ ಪ್ರಶಸ್ತಿಯು ಹತ್ತು ಸಾವಿರ ರೂ. ನಗದು ಹೊಂದಿದೆ. ಜತೆಗೆ ಸ್ಮರಣಿಕೆ ಹಾಗೂ ಫಲ ತಾಂಬೂಲಗಳನ್ನೂ ಒಳಗೊಂಡಿದೆ. ಕನ್ನಡ ಚಳವಳಿ ಸೇನಾನಿ ಮ. ರಾಮಮೂರ್ತಿ ಅವರು ರಾಜ್ಯಾದ್ಯಂತ ಕನ್ನಡ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹೋರಾಟಕ್ಕೆ ಶಕ್ತಿ ಮತ್ತು ಚೈತನ್ಯವನ್ನು ತುಂಬಿದವರು.

ಇವರ ಹೆಸರಿನಲ್ಲಿರುವ ಈ ದತ್ತಿ ಪ್ರಶಸ್ತಿಯನ್ನು ರಾಜ್ಯದಲ್ಲಿ ಕನ್ನಡದ ಹೋರಾಟದಲ್ಲಿ ತೊಡಗಿಸಿಕೊಂಡಿರುವ 50 ವರ್ಷ ಮೀರಿದ ವಯೋಮಾನದ ಕನ್ನಡ ಕಾರ್ಯಕರ್ತರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ಇದುವರೆಗೆ 8 ಜನ ಕನ್ನಡ ಚಳುವಳಿಗಾರರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಈ ಸಾಲಿನ ಕನ್ನಡ ಚಳವಳಿ ವೀರಸೇನಾನಿ ಮ.ರಾಮಮೂರ್ತಿ ದತ್ತಿ ಪ್ರಶಸ್ತಿಗಾಗಿ ಕನ್ನಡ ಪರ ಹೋರಾಟಗಾರ ಹಿರಿಯ ಕಲಾವಿದ ಜಿ.ಕೆ. ಸತ್ಯ ಅವರು ಆಯ್ಕೆ ಆಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿರುವ ಜಿ.ಕೆ. ಸತ್ಯ ಕನ್ನಡದ ಅತ್ಯಂತ ಜನಪ್ರಿಯ ವರ್ಣಚಿತ್ರಕಾರರು. ಅವರು ಚಿತ್ರಕಲೆಗೆ ಸೀಮಿತವಾಗದೆ ಕನ್ನಡ ಹೋರಾಟಗಳಲ್ಲಿ ಅತ್ಯಂತ ಕ್ರಿಯಾಶೀಲವಾಗಿ ತೊಡಗಿಸಿಕೊಂಡವರು. ಕನ್ನಡ ಚಳವಳಿಗಾರರಾದ ಅ.ನ.ಕೃ, ಮ.ರಾಮಮೂರ್ತಿ, ನಾಡಿಗೇರರು ಮೊದಲಾದವರ ನಿಕಟ ಒಡನಾಡಿಯಾಗಿದ್ದರು. ಗೋಕಾಕ್ ಚಳುವಳಿ ಅನುಷ್ಟಾನಕ್ಕೆ ಹೋರಾಡಿದ ಪ್ರಮುಖ ನೇತಾರರಲ್ಲಿ ಒಬ್ಬರು. ಕನ್ನಡ ಶಕ್ತಿ ಕೇಂದ್ರದ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿಗಳೂ ಆಗಿದ್ದರು. ಸದಾ ಕನ್ನಡ, ಕನ್ನಡಿಗ, ಕರ್ನಾಟಕದ ಹಿತರಕ್ಷಣೆಗೆ ಹೋರಾಡುತ್ತಾ ಬಂದಿರುವ ಸತ್ಯ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತು ಅಭಿನಂದಿಸುತ್ತಿದೆ ಎಂದು ನಾಡೋಜ. ಡಾ.ಮಹೇಶ ಜೋಶಿ ತಿಳಿಸಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿಯ ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಬೆಂಗಳೂರು ನಗರ ಮಾಜಿ ಜಿಲ್ಲಾಧ್ಯಕ್ಷರಾದ ಟಿ.ತಿಮ್ಮೇಶ್, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಡಾ. ಪದ್ಮಿನಿ ನಾಗರಾಜು ಹಾಗೂ ಗೌರವ ಕೋಶಾಧ್ಯಕ್ಷರಾದ ಡಾ. ಬಿ.ಎಂ.ಪಟೇಲ್ ಪಾಂಡು ಅವರು ಉಪಸ್ಥಿತರಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕ ಸಾ ಪ

Adhish Rajinish Wali: ಕಸಾಪ ಯುಕೆ ಗೌರವ ಯುವ ಸಂಚಾಲಕರಾಗಿ ಆದೀಶ್‌ ರಜನೀಶ್‌ ವಾಲಿ ನೇಮಕ

Adhish Rajinish Wali: ಈ ಹಿಂದೆ ಲಂಡನ್‌ನಲ್ಲಿ ಪದವಿ ಸ್ವೀಕರಿಸುವಾಗ ಕನ್ನಡ ಧ್ವಜ ಪ್ರದರ್ಶಿಸುವ ಮೂಲಕ ಮೆಚ್ಚುಗೆ ಪಡೆದಿದ್ದ ಕನ್ನಡಿಗ ಆದೀಶ್‌ ರಜನೀಶ್‌ ವಾಲಿ, ಕನ್ನಡ ಸಾಹಿತ್ಯ ಪರಿಷತ್‌ ಯುಕೆ ಗೌರವ ಯುವ ಸಂಚಾಲಕರಾಗಿ ನೇಮಕಗೊಂಡಿದ್ದಾರೆ.

VISTARANEWS.COM


on

Mahesh Joshi handed over the appointment order letter to Adhish Rajinish Wali
ಆದೀಶ್‌ ರಜನೀಶ್‌ ವಾಲಿಗೆ ಕಸಾಪ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಅವರು ನೇಮಕಾತಿ ಆದೇಶ ಪತ್ರ ಹಸ್ತಾಂತರಿಸಿದರು.
Koo

ಬೆಂಗಳೂರು: ಹೊರದೇಶದ ಕನ್ನಡಿಗರು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನೊಂದಿಗೆ ಸಮನ್ವಯ ಸಾಧಿಸುವ ಉದ್ದೇಶದಿಂದ ಯುನೈಟೆಡ್ ಕಿಂಗ್‌ಡಮ್‌ನ(UK) ಕನ್ನಡ ಸಾಹಿತ್ಯ ಪರಿಷತ್‌ನ ಗೌರವ ಯುವ ಸಂಚಾಲಕರಾಗಿ ಲಂಡನ್‌ನ ಕನ್ನಡಿಗ ಆದೀಶ್‌ ರಜನೀಶ್‌ ವಾಲಿ ಅವರನ್ನು ಕಸಾಪ ನೇಮಕ ಮಾಡಿದೆ.

ಈ ಹಿಂದೆ ಸಿಟಿ ಯೂನಿವರ್ಸಿಟಿ ಆಫ್‌ ಲಂಡನ್‌ನಲ್ಲಿ ಪದವಿ ಸ್ವೀಕರಿಸುವಾಗ ಕನ್ನಡ ಧ್ವಜ ಪ್ರದರ್ಶಿಸುವ ಮೂಲಕ ಬೀದರ್‌ನ ಆದೀಶ್‌ ರಜನೀಶ್‌ ವಾಲಿ ಕನ್ನಡಿಗರ ಮೆಚ್ಚುಗೆ ಪಡೆದಿದ್ದರು. ನಂತರ ಯುವಕನಿಗೆ ಕಸಾಪದಿಂದ ಸನ್ಮಾನ ಮಾಡಿ, ಸದಸ್ಯತ್ವ ನೀಡಲಾಗಿತ್ತು. ಇದೀಗ ವಿದೇಶದಲ್ಲಿ ಕನ್ನಡಪರ ಕಾರ್ಯ ಮಾಡಲು ಮುಂದಿನ ಆದೇಶದವರೆಗೆ ಯುಕೆ ಗೌರವ ಯುವ ಸಂಚಾಲಕರಾಗಿ ನೇಮಕ ಮಾಡಲಾಗಿದೆ.

ಈ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ನಾಡೋಜ ಮಹೇಶ ಜೋಶಿ ಅವರು ಮಾತನಾಡಿ, ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜಾನಪದ ರಕ್ಷಣೆ, ಪ್ರಸಾರ ಮತ್ತು ಅಭಿವೃದ್ಧಿಯ ಮೂಲ ಧೈಯೋದ್ದೇಶವನ್ನು ಕನ್ನಡ ಸಾಹಿತ್ಯ ಪರಿಷತ್‌ ಹೊಂದಿದೆ. ಪರಿಷತ್ತನ್ನು ‘ಜನಸಾಮಾನ್ಯರ ಪರಿಷತ್ತನ್ನಾಗಿಸುವ ನಿಟ್ಟಿನಲ್ಲಿ ಕಾರ್ಯಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಯುನೈಟೆಡ್ ಕಿಂಗ್‌ಡಮ್‌ ಗೌರವ ಯುವ ಸಂಚಾಲಕರಾಗಿ ಕನ್ನಡಿಗ ಆದೀಶ್‌ ರಜನೀಶ್‌ ವಾಲಿ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | ಗೋ ಸಂಪತ್ತು: ವಿದೇಶಗಳಲ್ಲಿ ಮಿಂಚುತ್ತಿವೆ ಭಾರತೀಯ ಗೋ ತಳಿಗಳು!

ಹೊರದೇಶದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಚಟುವಟಿಕೆಗಳನ್ನು ವಿಸ್ತರಿಸಲಾಗುತ್ತಿದ್ದು, ಹೊರದೇಶದಲ್ಲಿರುವ ಕನ್ನಡಿಗರನ್ನು ಪರಿಷತ್ತಿಗೆ ಸದಸ್ಯರನ್ನಾಗಿಸಲು, ಕನ್ನಡಪರ ಕಾರ್ಯಚಟುವಟಿಕೆಗಳನ್ನು ಹೊರದೇಶದಲ್ಲಿ ನಡೆಸಲು, ಕನ್ನಡ ಸಾಹಿತ್ಯ ಸಮಾವೇಶ, ಸಮ್ಮೇಳನಗಳ ಯೋಜನೆಯನ್ನು ಕಾರ್ಯಾನುಷ್ಠಾನಗೊಳಿಸಲು ಕ್ರಮ ಕೈಗೊಂಡಿರುವುದಾಗಿ ಹೇಳಿದ್ದಾರೆ.

Continue Reading
Advertisement
kaivara tatayya
ಅಂಕಣ19 mins ago

ತಾತಯ್ಯ ತತ್ವಾಮೃತಂ: ಭಕ್ತಿತತ್ವದಿಂದ ಮೋಕ್ಷ ಸಾಧನೆ

Madhu Bangarappa Beluru Gopalakrishna
ಅಂಕಣ34 mins ago

ಮೊಗಸಾಲೆ ಅಂಕಣ: ಒಣಗಿದ ಜಿಲ್ಲೆಯಲ್ಲಿ ಜೋಗದ ಬದಲು ಕಚ್ಚಾಟದ ರೋಗ

Rain News
ಉಡುಪಿ34 mins ago

Karnataka Weather : ಮೈಸೂರು ಸೇರಿ 11 ಜಿಲ್ಲೆಗಳಿಗೆ ಮಳೆ ಅಲರ್ಟ್‌!

Vistara Editorial, Let the strengthening government schools
ಕರ್ನಾಟಕ49 mins ago

ವಿಸ್ತಾರ ಸಂಪಾದಕೀಯ: ಸರ್ಕಾರಿ ಶಾಲೆಗಳ ಬಲವರ್ಧನೆಗೆ ತಜ್ಞರ ಸೂತ್ರಗಳು ಜಾರಿಯಾಗಲಿ

Dina Bhavishya
ಪ್ರಮುಖ ಸುದ್ದಿ2 hours ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

Sphoorti Salu
ಸುವಚನ2 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

HD Kumaraswamy
ಕರ್ನಾಟಕ7 hours ago

HD Kumaraswamy: ಕಲ್ಲಡ್ಕ ಪ್ರಭಾಕರ ಭಟ್ ಗುಣಗಾನ ಮಾಡಿದ ಎಚ್‌ಡಿಕೆ; ಶ್ರೀರಾಮ ಶಾಲೆ ಕ್ರೀಡೋತ್ಸವದಲ್ಲಿ ಭಾಗಿ

Car accident
ಕರ್ನಾಟಕ8 hours ago

Car Accident: ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ನಾಲ್ವರ ದುರ್ಮರಣ

Houses without infrastructure are not completed PMAY houses
ದೇಶ8 hours ago

ಮೂಲಸೌಕರ್ಯ ಒದಗಿಸದ ಮನೆಗಳು ಪೂರ್ಣಗೊಂಡ ಪಿಎಂಎವೈ ಮನೆಗಳಲ್ಲ!

UP Yoddhas vs Telugu Titans
ಕ್ರೀಡೆ8 hours ago

Pro Kabaddi: ಯೋಧಾಸ್​ ಆರ್ಭಟಕ್ಕೆ ಮುಳುಗಿದ ತೆಲುಗು ಟೈಟಾನ್ಸ್‌

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

DCC Bank Recruitment 2023
ಉದ್ಯೋಗ11 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Karnataka bandh Majestic
ಕರ್ನಾಟಕ3 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

galipata neetu
ಕಿರುತೆರೆ1 week ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Dina Bhavishya
ಪ್ರಮುಖ ಸುದ್ದಿ2 hours ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

read your daily horoscope predictions for december 9 2023
ಪ್ರಮುಖ ಸುದ್ದಿ1 day ago

Dina bhavishya: ಗೌಪ್ಯ ವಿಷಯ ಹೇಳುವಾಗ ಈ ರಾಶಿಯವರು ಎಚ್ಚರ!

Actress Leelavathi felicitated
South Cinema1 day ago

Actress Leelavathi: ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ನೀಡಿ ಗೌರವಿಸಿದ್ದ ಫಿಲ್ಮ್‌ ಚೇಂಬರ್

Actress Leelavati and Rajkumar film
South Cinema1 day ago

Actress Leelavathi: ಲೀಲಾವತಿಗೆ ಸಂದ ಪ್ರಶಸ್ತಿಗಳ ಗರಿ; ಇಲ್ಲಿದೆ ಸಿನಿ ಜರ್ನಿ ಲಿಸ್ಟ್‌

Actress Leelavati and Rajkumar film
South Cinema2 days ago

Actress Leelavathi: ತೆರೆಯಲ್ಲಿ ಮೋಡಿ ಮಾಡಿದ್ದ ಡಾ.ರಾಜ್‌ಕುಮಾರ್‌-ಲೀಲಾವತಿ ಜೋಡಿ!

PM Narenda modi and Moulvi thanveer Peera
ಕರ್ನಾಟಕ2 days ago

CM Siddaramaiah: ಮೌಲ್ವಿ ಫೋಟೊ ಹಾಕಿ ಮೋದಿ ಟಾರ್ಗೆಟ್‌ ಮಾಡಿದ ಯತ್ನಾಳ್‌ ಎಂದ ಸಿದ್ದರಾಮಯ್ಯ

Dina Bhavishya
ಪ್ರಮುಖ ಸುದ್ದಿ2 days ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ3 days ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Veer Savarkar and Priyank Kharge
ಕರ್ನಾಟಕ3 days ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

CM-Siddaramaiah
ಕರ್ನಾಟಕ3 days ago

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

ಟ್ರೆಂಡಿಂಗ್‌