Site icon Vistara News

Kannada Sahitya Sammelana | ಸ್ಥಳೀಯರ ಮನೆಯಲ್ಲಿ ಸಾಮಾನ್ಯನಂತೆ ವಾಸ್ತವ್ಯ ಮಾಡುವೆ: ಡಾ. ಮಹೇಶ ಜೋಶಿ

parishat executive meeting regarding next kannada sahitya sammelana

ಬೆಂಗಳೂರು: ಹಾವೇರಿಯಲ್ಲಿ ನಡೆಯುವ ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಗರ್ಭಿತವಾಗಿ ನಡೆಸುವ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಹಾಗೂ ಹಾವೇರಿ ಜಿಲ್ಲಾಡಳಿತ ಕಾರ್ಯ ಪ್ರವೃತ್ತವಾಗಿದೆ. ಪ್ರಸಕ್ತ ಅಕ್ಷರ ಸಮ್ಮೇಳನವು (Kannada Sahitya Sammelana) ಜನಸಾಮಾನ್ಯ ಕನ್ನಡಿಗರ ಜಾತ್ರೆಯಾಗಬೇಕು. ಪ್ರತಿ ಮನೆ ಮನೆಗಳಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಬೇಕು ಎನ್ನುವ ಅಭಿಲಾಷೆಯಿಂದ ಹಾವೇರಿಯ ಜನ ಸಾಮಾನ್ಯರ ಮನೆಯಲ್ಲಿ ವಾಸ್ತವ್ಯ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕನ್ನಡ ಸಾಹಿತ್ಯ ಪರಿಷತ್‌ ಜನ ಸಾಮಾನ್ಯರ ಪರಿಷತ್‌ʼ ಎನ್ನುವ ಪರಿಕಲ್ಪನೆಯಲ್ಲಿ ಮುನ್ನಡೆಯುತ್ತಿರುವಾಗ ʻಮನೆ-ಮನೆಗೆ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷರುʼ ಎನ್ನುವ ಕಾರ್ಯಕ್ರಮದ ಅಡಿಯಲ್ಲಿ ನೂರಾರು ಜನರ ಮನೆಗೆ ಭೇಟಿ ಕೊಟ್ಟಿದ್ದು, ಈ ಮೂಲಕ ಪರಿಷತ್‌ನ ಧ್ಯೇಯ್ಯೋದ್ದೇಶವನ್ನು ಜನರ ಮನೆಯಂಗಳಕ್ಕೆ ತಲುಪಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Hiremath Samsthan Bhalki | ಡಿ.22ರಂದು ಡಾ. ಚನ್ನಬಸವ ಪಟ್ಟದ್ದೇವರ 133ನೇ ಜಯಂತ್ಯುತ್ಸವ, ವಿದ್ಯಾಚೇತನ ಸಮಾವೇಶ

೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ೨೦೨೩ರ ಜನವರಿ ೪ರಿಂದ ೮ರವರೆಗೆ ಹಾವೇರಿಯಲ್ಲಿ ವಾಸ್ತವ್ಯ ಮಾಡಲಿದ್ದು, ಸಮ್ಮೇಳನ ನಡೆಯುವ ಸ್ಥಳದ ಬಳಿಯ ಅಜ್ಜಯ್ಯನ ಗುಡಿಯ ಸುತ್ತಮುತ್ತಲಿನ ಯಾವುದಾದರೂ ಒಂದು ಮನೆಯಲ್ಲಿ ಉಳಿದುಕೊಳ್ಳಲು ನಿರ್ಧಾರ ಮಾಡಿದ್ದು, ಯಾವುದೇ ರೀತಿಯ ವಿಶೇಷ ಭೋಜನ, ಸವಲತ್ತು ಇತ್ಯಾದಿಗಳನ್ನು ಅಪೇಕ್ಷಿಸುವುದಿಲ್ಲ ಎಂದು ಹೇಳಿದ್ದಾರೆ.

ಹಾವೇರಿಯಲ್ಲಿ ಸಮ್ಮೇಳನ ನಡೆಯುವ ಸ್ಥಳದ ಹತ್ತಿರ ಇರುವ ಅಜ್ಜಯ್ಯನ ದೇವಸ್ಥಾನದ ಸುತ್ತಮುತ್ತಲಿನಲ್ಲಿ ಇರುವ ಯಾವುದಾದರೂ ಮನೆಯವರು ವಾಸ್ತವ್ಯಕ್ಕೆ ಅನೂಕುಲ ಮಾಡಿಕೊಡಲು ಇಚ್ಛಿಸುವವರು ʻಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್‌ ಪಂಪಮಹಾಕವಿ ರಸ್ತೆ, ಚಾಮರಾಜಪೇಟೆ ಬೆಂಗಳೂರು ೫೬೦೦೧೮ʼ ವಿಶೇಷಾಧಿಕಾರಿ ಸೋಮಶೇಖರ್ ರಾಥೋಡ-೯೪೮೦೬೨೮೩೯೮, ಇ-ಮೇಲ್ ವಿಳಾಸ- nadojamj@gmail.com ದೂರವಾಣಿ ಸಂಖ್ಯೆ ೦೮೦-೨೬೬೨೩೫೮೪, ೨೬೬೧೨೯೯೧ ಸಂಪರ್ಕಿಸಿ, ತಮ್ಮ ಮನೆಯ ವಿಳಾಸವನ್ನು ನೀಡಬಹುದು ಎಂದು ಕೋರಿದ್ದಾರೆ.

ಇದನ್ನೂ ಓದಿ | Reservation demand | ಸಚಿವರ ಮಾತಿಗೆ ಒಪ್ಪದ ಹೋರಾಟಗಾರರು, ಮಾದಾರ ಚನ್ನಯ್ಯ ಶ್ರೀಗಳ ಮಾತಿನಿಂದ ಧರಣಿ ಅಂತ್ಯ

Exit mobile version