Kantara movie | ಕಾರ್ಯಕರ್ತರಿಗಾಗಿ ಕಾಂತಾರ ಉಚಿತ ಶೋ; ಥಿಯೇಟರ್‌ ಬುಕ್‌ ಮಾಡಿದ ಶಾಸಕ! - Vistara News

ಕರ್ನಾಟಕ

Kantara movie | ಕಾರ್ಯಕರ್ತರಿಗಾಗಿ ಕಾಂತಾರ ಉಚಿತ ಶೋ; ಥಿಯೇಟರ್‌ ಬುಕ್‌ ಮಾಡಿದ ಶಾಸಕ!

ಕುಂತರೂ ನಿಂತರೂ ಕಾಂತಾರ ಸಿನಿಮಾದ್ದೆ ಮಾತುಕತೆ ಎಂಬಂತೆ ಆಗಿದೆ. ಬಾಕ್ಸ್‌ ಆಫೀಸ್‌ ಕೊಳ್ಳೆ ಹೊಡೆಯುತ್ತಿರುವ ಕಾಂತಾರವನ್ನು (Kantara movie) ವಿಶೇಷವಾಗಿ ಸಂಭ್ರಮಿಸಲಾಗುತ್ತಿದೆ. ತರಿಕೆರೆ ಶಾಸಕರೊಬ್ಬರು ತಮ್ಮ ಕಾರ್ಯಕರ್ತರಿಗಾಗಿ ಒಂದು ಶೋವನ್ನೇ ಬುಕ್‌ ಮಾಡಿದ್ದರು.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ಕಾಂತಾರ (Kantara movie) ಹವಾ ಹೆಚ್ಚುತ್ತಿದ್ದು, ಶಿವಮೊಗ್ಗದಲ್ಲಿ ತರಿಕೆರೆ ಶಾಸಕರೊಬ್ಬರು ತಮ್ಮ ಕಾರ್ಯಕರ್ತರಿಗೆ ಉಚಿತವಾಗಿ ಕಾಂತಾರ ಸಿನಿಮಾವನ್ನು ತೋರಿಸಿದ್ದಾರೆ.

ಶಿವಮೊಗ್ಗದ ಭರತ್ ಸಿನಿಮಾಸ್‌ನಲ್ಲಿ ಬಿಜೆಪಿ ಕಾರ್ಯಕರ್ತರು ಕಾಂತಾರ ಚಿತ್ರ ವೀಕ್ಷಣೆ ಮಾಡಿದರು. ತರಿಕೆರೆ ಶಾಸಕ ಡಿ.ಎಸ್. ಸುರೇಶ್ ಕಾರ್ಯಕರ್ತರ ಜತೆ ಕುಳಿತು ಸಿನಿಮಾ ವೀಕ್ಷಣೆ ಮಾಡಿದರು. ಭರತ್ ಮಲ್ಟಿಪ್ಲೆಕ್ಸ್‌ನ ಒಂದು ಶೋದಲ್ಲಿನ ಎಲ್ಲ ಆಸನಗಳನ್ನು ಬುಕ್ ಮಾಡಿದ್ದರು.

200ಕ್ಕೂ ಹೆಚ್ಚು ಕಾರ್ಯಕರ್ತರಿಗೆ ಉಚಿತವಾಗಿ ಚಲನಚಿತ್ರ ವೀಕ್ಷಣೆಗೆ ಅವಕಾಶ ಕಲ್ಪಿಸಿದರು. ಈ ವೇಳೆ ಖುಷಿಯಿಂದ ಹೆಜ್ಜೆ ಹಾಕಿದ ಕಾರ್ಯಕರ್ತರು ಸೆಲ್ಫಿ ಕ್ಲಿಕ್ಕಿಸಿಕೊಂಡರು. ಸಿನಿಮಾ ವೀಕ್ಷಿಸಿ ಮಾತನಾಡಿದ ಶಾಸಕ ಸುರೇಶ್‌, ಕಾಂತಾರ ಚಿತ್ರ ಅತ್ಯುತ್ತಮವಾಗಿದ್ದು, ಎಲ್ಲರೂ ಚಿತ್ರವನ್ನು ನೋಡುವಂತೆ ಮನವಿ ಮಾಡಿಕೊಂಡರು.

ಇದನ್ನೂ ಓದಿ | Kantara Movie | ಕರ್ನಾಟಕದಲ್ಲಿ ಕಾಂತಾರದ ಹೊಸ ದಾಖಲೆ; ಕೆಜಿಎಫ್‌ ಕಲೆಕ್ಷನ್ ಹಿಂದಿಕ್ಕಿದ ರಿಷಬ್‌ ಸಿನಿಮಾ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Anjali Nimbalkar: ಅಪಘಾತದಲ್ಲಿ ಗಾಯಗೊಂಡ ಯುವಕನಿಗೆ ನೆರವಾದ ಅಂಜಲಿ ನಿಂಬಾಳ್ಕರ್

Anjali Nimbalkar: ಉತ್ತರ ಕನ್ನಡ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ಯಲ್ಲಾಪುರ- ಶಿರಸಿ ನಡುವೆ ಪ್ರಯಣಿಸುತ್ತಿದ್ದಾಗ, ಬೈಕ್ ಸ್ಕಿಡ್ ಆಗಿ ಬಿದ್ದಿದ್ದ ಯುವಕನನ್ನು ಗಮನಿಸಿದ್ದರು. ವಿನಾಯಕ್ ಶೆಟ್ಟರ್ ಎಂಬ ಯುವಕ ಬೈಕ್‌ ಸ್ಕಿಡ್‌ ಆಗಿ ಬಿದ್ದು ಗಾಯಗೊಂಡಿದ್ದರು.

VISTARANEWS.COM


on

anjali nimbalkar
Koo

ಕಾರವಾರ: ಅಪಘಾತದಲ್ಲಿ (Road Accident) ಗಾಯಗೊಂಡು ರಸ್ತೆ ಬದಿ ನರಳುತ್ತ ಬಿದ್ದಿದ್ದ ಯುವಕನನ್ನು ತಮ್ಮದೇ ಕಾರಿನಲ್ಲಿ ಉತ್ತರ ಕನ್ನಡ ಲೋಕಸಭೆ ಚುನಾವಣಾ ಅಭ್ಯರ್ಥಿ (Uttara Kannada lok sabha election candidate) ಅಂಜಲಿ ನಿಂಬಾಳ್ಕರ್‌ (Anjali Nimbalkar) ಆಸ್ಪತ್ರೆಗೆ ಸಾಗಿಸಿ ಮಾನವೀಯತೆ (Humanity) ಮೆರೆದಿದ್ದಾರೆ.

ಉತ್ತರ ಕನ್ನಡ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ಯಲ್ಲಾಪುರ- ಶಿರಸಿ ನಡುವೆ ಪ್ರಯಣಿಸುತ್ತಿದ್ದಾಗ, ಬೈಕ್ ಸ್ಕಿಡ್ ಆಗಿ ಬಿದ್ದಿದ್ದ ಯುವಕನನ್ನು ಗಮನಿಸಿದ್ದರು. ವಿನಾಯಕ್ ಶೆಟ್ಟರ್ ಎಂಬ ಯುವಕ ಬೈಕ್‌ ಸ್ಕಿಡ್‌ ಆಗಿ ಬಿದ್ದು ಗಾಯಗೊಂಡಿದ್ದರು.

ಹಳಿಯಾಳದಿಂದ ಶಿರಸಿಗೆ ಹೋಗುವಾಗ ಯುವಕನನ್ನು ಗಮನಿಸಿದ ಅಂಜಲಿ ನಿಂಬಾಳ್ಕರ್, ಕಾರು ನಿಲ್ಲಿಸಿ ಗಾಯಗೊಂಡವನನ್ನು ಪರಿಶೀಲಿಸಿದರು. ಸ್ವತಃ ವೈದ್ಯೆಯಾಗಿರುವ ಡಾ.ಅಂಜಲಿ ನಿಂಬಾಳ್ಕರ್ ಸೂಕ್ತ ಪ್ರಥಮ ಉಪಚಾರ ನೀಡಿ ತಕ್ಷಣ ಯುವಕನನ್ನು ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಕರೆತಂದರು. ಆಸ್ಪತ್ರೆಯಲ್ಲೂ ಚಿಕಿತ್ಸೆ ವೇಳೆ ಸಿಬ್ಬಂದಿಯೊಂದಿಗಿದ್ದು ನೆರವು ನೀಡಿದರು. ಶಿರಸಿಯ ಪಂಡಿತ್ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುವಿಗೆ ಚಿಕಿತ್ಸೆ ಕೊಡಿಸಲಾಗಿದೆ.

ಬಿಜೆಪಿಯ ಭದ್ರಕೋಟೆಯನ್ನು ಒಡೆಯುವೆ: ಅಂಜಲಿ

ಅಂಕೋಲಾ: ಜಾತಿ- ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡಿ ಬಿಜೆಪಿಗರು ಉತ್ತರ ಕನ್ನಡದ ಹೆಸರು ಕೆಡಿಸಿರುವುದನ್ನು ಸರಿಪಡಿಸಲು ನಮಗೆ ಈ ಬಾರಿ ಉತ್ತಮ ಅವಕಾಶವಿದೆ. ನಾನು ಈ ಜಿಲ್ಲೆಯವಳಲ್ಲ ಎನ್ನುವ ಬಿಜೆಪಿಗರು ಕೂಡ ನನ್ನ ಕ್ಷೇತ್ರಕ್ಕೆ ಪ್ರಚಾರಕ್ಕೆ ಬರಲೇಬೇಕು. ಬಹುಶಃ ಅವರಿಗೆ ಖಾನಾಪುರ ಬ್ಲಾಕ್ ಎಲ್ಲಿದೆ ಎನ್ನುವುದೂ ಗೊತ್ತಿರಲಿಕ್ಕಿಲ್ಲ. ಯಾಕೆಂದರೆ ಅಲ್ಲಿಗೆ ಅವರು ಬರುವುದೇ ಅಪರೂಪ ಎಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ (Uttara Kannada News) ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ಹೇಮಂತ್ ನಿಂಬಾಳ್ಕರ್ ವ್ಯಂಗ್ಯವಾಡಿದರು.

ಅಂಕೋಲಾದ ನಾಡವರ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಲೋಕಸಭಾ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಉತ್ತರ ಕನ್ನಡ 30 ವರ್ಷಗಳಿಂದ ಬಿಜೆಪಿ ಭದ್ರಕೋಟೆಯಾಗಿದೆ ಎಂದು ಹೇಳುತ್ತಾರೆ. ಆದರೆ ಈಗ ಪ್ರತಿ ಕಾರ್ಯಕರ್ತರೂ “ನಾನೇ ಅಂಜಲಿ ನಿಂಬಾಳ್ಕರ್ʼ ಎಂಬಂತೆ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತಿದ್ದಾರೆ. ಹಾಗಾಗಿ ಈ ಭದ್ರಕೋಟೆಯನ್ನು ಒಡೆಯಲು ಹೆಚ್ಚೇನೂ ಶ್ರಮ ಬೇಕಿಲ್ಲವೆಂದೆನಿಸುತ್ತಿದೆ. ರಾಜಕೀಯ ನನಗೆ ಹೊಸದಲ್ಲ. ಖಾನಾಪುರದಲ್ಲಿ ಕೇವಲ ಮಹಿಳೆಯರಿಗಾಗಿ ಎಂಸಿಎಚ್ ಆಸ್ಪತ್ರೆ ಕಟ್ಟಿದ್ದೇನೆ. ಕಾಡುಪ್ರದೇಶದಲ್ಲಿ ಅಂಥದ್ದೊಂದು ಆಸ್ಪತ್ರೆ ಕಟ್ಟಿಸಬೇಕೆಂಬುದು ನನ್ನ ಕನಸಾಗಿತ್ತು. ಬಿಜೆಪಿ ಸರ್ಕಾರವಿದ್ದರೂ ಅಂಥ ದೊಡ್ಡ ಆಸ್ಪತ್ರೆ ಕಟ್ಟಿ ತೋರಿಸಿದ್ದೀನಿ. ಜಿಲ್ಲೆಯಲ್ಲೂ ಸುಸಜ್ಜಿತ ಆಸ್ಪತ್ರೆ ಆಗಬೇಕೆಂಬ ಆಸೆ ಇಲ್ಲಿಯ ಜನರದ್ದಿದೆ. ಅದನ್ನು ಮಾಡಲು ಪ್ರಯತ್ನಿಸೋಣʼʼ ಎಂದರು.

ಇದನ್ನೂ ಓದಿ: Lok Sabha Election : ಲೊಕಸಭಾ ಚುನಾವಣೆಯ ಎರಡನೇ ಹಂತದ 88 ಕ್ಷೇತ್ರಗಳಲ್ಲಿ ಶೇ 60.96 ಮತದಾನ

Continue Reading

Lok Sabha Election 2024

Lok Sabha Election 2024: 2ನೇ ಹಂತದ ಮತದಾನ, ಎಲ್ಲಿ ಹೆಚ್ಚು, ಎಲ್ಲಿ ಕಡಿಮೆ?

Lok Sabha Election 2024: ಏಪ್ರಿಲ್​​ 26ರಂದು ಬೆಳಗ್ಗೆ 7 ಗಂಟೆಗೆ ಪ್ರಾರಂಭವಾದ ಲೋಕ ಸಭಾ ಚುನಾವಣೆಯ (Lok Sabha Election) ಎರಡನೇ ಹಂತದ ಮತದಾನವು ಶಾಂತಿಯುತವಾಗಿ ನಡೆಯಿತು. ಒಟ್ಟು 88 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು ಸಂಜೆ 7 ಗಂಟೆಯ ವೇಳೆಗೆ ಅಂದಾಜು 60.96% ಮತದಾನವನ್ನು ದಾಖಲಿಸಿದೆ ಎಂದು ಚುನಾವಣಾ ಆಯೋಗ ಹೇಳಿದೆ.

VISTARANEWS.COM


on

lok sabha election 2024 voting
Koo

ಹೊಸದಿಲ್ಲಿ: ನಿನ್ನೆ (ಏಪ್ರಿಲ್‌ 26) ಲೋಕಸಭೆ ಚುನಾವಣೆ (Lok Sabha Election 2024) ಎರಡನೇ ಹಂತದ ಮತದಾನ (voting) ನಡೆಯಿತು. ಇದರಲ್ಲಿ ಯಾವ ರಾಜ್ಯಗಳಲ್ಲಿ ಅತಿ ಹೆಚ್ಚು ಮತ್ತು ಯಾವ ರಾಜ್ಯಗಳಲ್ಲಿ ಅತಿ ಕಡಿಮೆ ಮತದಾನವಾಗಿದೆ ಎಂಬ ಮಾಹಿತಿ ಇಲ್ಲಿದೆ. ತ್ರಿಪುರಾದಲ್ಲಿ ಅತಿ ಹೆಚ್ಚು ಅಂದಾಜು 77.94% ಮತದಾನವಾಗಿದೆ.

ನಂತರ ಮಣಿಪುರ (76.46%), ಛತ್ತೀಸ್‌ಗಢ (72.51%), ಪಶ್ಚಿಮ ಬಂಗಾಳ (71.84%), ಅಸ್ಸಾಂ (70.68%), ಕರ್ನಾಟಕದಲ್ಲಿ 69.23%, J&K (67.22%), ಮತ್ತು ಕೇರಳ (64.99%) ಮತದಾನ ದಾಖಲಿಸಿವೆ. ಉತ್ತರ ಪ್ರದೇಶದಲ್ಲಿ ಅತಿ ಕಡಿಮೆ ಅಂದಾಜು ಮತದಾನವಾಗಿದೆ (53.02%). ರಾಜಸ್ಥಾನದಲ್ಲಿ 59.69%, ಮಧ್ಯಪ್ರದೇಶದಲ್ಲಿ 55.19%, ಮಹಾರಾಷ್ಟ್ರ 53.71% ಮತ್ತು ಬಿಹಾರ 53.60% ಮತದಾನವಾಗಿದೆ.

ಏಪ್ರಿಲ್​​ 26ರಂದು ಬೆಳಗ್ಗೆ 7 ಗಂಟೆಗೆ ಪ್ರಾರಂಭವಾದ ಲೋಕ ಸಭಾ ಚುನಾವಣೆಯ (Lok Sabha Election) ಎರಡನೇ ಹಂತದ ಮತದಾನವು ಶಾಂತಿಯುತವಾಗಿ ನಡೆಯಿತು. ಒಟ್ಟು 88 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು ಸಂಜೆ 7 ಗಂಟೆಯ ವೇಳೆಗೆ ಅಂದಾಜು 60.96% ಮತದಾನವನ್ನು ದಾಖಲಿಸಿದೆ ಎಂದು ಚುನಾವಣಾ ಆಯೋಗ ಹೇಳಿದೆ. 13 ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳ ಮತದಾರರು ಬಿಸಿ ಹವಾಮಾನ ಪರಿಸ್ಥಿತಿಗಳನ್ನು ಲೆಕ್ಕಿಸದೆ ತಮ್ಮ ಮತಗಟ್ಟೆಯಲ್ಲಿ ಉತ್ಸಾಹದಿಂದ ಮತ ಚಲಾಯಿಸಿದರು. ನವವಿವಾಹಿತರಿಂದ ಹಿಡಿದು ಹಿರಿಯ ನಾಗರಿಕರವರೆಗೆ, ಬುಡಕಟ್ಟು ಜನಾಂಗದವರಿಂದ ಐಟಿ ವೃತ್ತಿಪರರು, ಅಂಗವಿಕಲರು, ಮಹಿಳೆಯರು ಮತ್ತು ಯುವಕರು ಎಲ್ಲರೂ ತಮ್ಮ ಮತ ಚಲಾಯಿಸಿದರು. 2024ರ ಲೋಕಸಭಾ ಚುನಾವಣೆಗೆ 14 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನ ಪೂರ್ಣಗೊಂಡಿದೆ.

ತ್ರಿಪುರಾದ ಏಕೈಕ ಕ್ಷೇತ್ರದಲ್ಲಿ ಶೇ.77.93, ಛತ್ತೀಸ್ ಗಢದ ಮೂರು ಕ್ಷೇತ್ರಗಳಲ್ಲಿ ಶೇ.72.13 ಹಾಗೂ ಪಶ್ಚಿಮ ಬಂಗಾಳದ ಮೂರು ಕ್ಷೇತ್ರಗಳಲ್ಲಿ ಶೇ.71.84ರಷ್ಟು ಮತದಾನವಾಗಿದೆ. ಮಣಿಪುರದ 13 ಮತಗಟ್ಟೆಗಳಲ್ಲಿ ಶೇ.76.06ರಷ್ಟು ಮತದಾನವಾಗಿದ್ದರೆ, ಅಸ್ಸಾಂನ ಮತಗಟ್ಟೆಗಳಲ್ಲಿ ಸಂಜೆ 5 ಗಂಟೆಯವರೆಗೆ ಶೇ.70.66ರಷ್ಟು ಮತದಾನವಾಗಿದೆ. ಎರಡನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಶೇ.53.51ರಷ್ಟು ಮತದಾನವಾಗಿದೆ.

ಬಿಹಾರದಲ್ಲಿ ಮತದಾನದ ಶೇಕಡಾವಾರು ಮೊದಲ ಹಂತಕ್ಕಿಂತ ಹೆಚ್ಚಾಗಿದ್ದರೆ, ಇದು ಉತ್ತರ ಪ್ರದೇಶಕ್ಕಿಂತ 53.03% ಹೆಚ್ಚಾಗಿದೆ. ಉತ್ತರ ಪ್ರದೇಶದ ಎಂಟು ಲೋಕಸಭಾ ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯವರೆಗೆ 52.74% ಮತದಾನ ದಾಖಲಾಗಿದೆ. ಎರಡನೇ ಹಂತದಲ್ಲಿ ಮತದಾನ ನಡೆದ ರಾಜಸ್ಥಾನದ 13 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯವರೆಗೆ ಸರಾಸರಿ ಶೇಕಡಾ 59.19 ರಷ್ಟು ಮತದಾನವಾಗಿತ್ತು. ಕೆಲವು ಘಟನೆಗಳ ಹೊರತಾಗಿಯೂ, ಮತದಾನವು ಶಾಂತಿಯುತವಾಗಿ ನಡೆಯಿತು.

ಮಧ್ಯಪ್ರದೇಶದ ಆರು ಕ್ಷೇತ್ರಗಳಲ್ಲಿ ಎರಡನೇ ಹಂತದಲ್ಲಿ ಕನಿಷ್ಠ 54.83% ಮತದಾನವಾಗಿದೆ. ಕರ್ನಾಟಕದ ಹದಿನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಎರಡನೇ ಹಂತದಲ್ಲಿ ಮತದಾನ ನಡೆದಿದೆ. ಕರ್ನಾಟಕ 69. 23 ಶೇಕಡಾ ಮತದಾನವಾಗಿದೆ.

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ (Lok Sabha Election 2024) ಮೊದಲ ಹಂತದ ಮತದಾನ ನಿನ್ನೆ ನಡೆದಿತ್ತು. ಶುಕ್ರವಾರ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಲ್ಲಿ ನಾಗರಿಕರು ತಮ್ಮ ಹಕ್ಕನ್ನು ಚಲಾಯಿಸಿದ್ದರು. ದಕ್ಷಿಣ ಕರ್ನಾಟಕದ ಉಡುಪಿ – ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ಮಂಡ್ಯ, ಹಾಸನ, ದಕ್ಷಿಣ ಕನ್ನಡ, ಮೈಸೂರು – ಕೊಡಗು, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ಶುಕ್ರವಾರ ಮತದಾನ ನಡೆದಿತ್ತು.

ಇದನ್ನೂ ಓದಿ: Lok Sabha Election 2024: ಕರ್ನಾಟಕದಲ್ಲಿ ದಾಖಲೆಯ ಮತದಾನ; ಕಳೆದ ಬಾರಿಗಿಂತ ಏರಿಕೆ, ಮಂಡ್ಯದಲ್ಲಿ ಅತಿ ಹೆಚ್ಚು!

Continue Reading

ಮಳೆ

Karnataka Weather : ಒಳನಾಡಿನಲ್ಲಿ ವಿಪರೀತ ಬಿಸಿಲು; ಕರಾವಳಿಯಲ್ಲಿ ಬಿಸಿಗಾಳಿ, ಮಲೆನಾಡಿನಲ್ಲಿ ಗುಡುಗು ಮಳೆ

Karnataka Weather Forecast : ಉತ್ತರ ಕರ್ನಾಟಕದಲ್ಲಿ ತಾಪಮಾನ ಏರಿಕೆಯಿಂದ ಜನರು ತತ್ತರಿಸಿ ಹೋಗಲಿದ್ದಾರೆ. ಕರಾವಳಿಯಲ್ಲಿ ಬಿಸಿಗಾಳಿಯು (Hot weather) ಬೀಸಲಿದ್ದು, ದಕ್ಷಿಣ ಒಳನಾಡಲ್ಲಿ ಶುಷ್ಕ ವಾತಾವರಣ (Dry Weather) ಇರಲಿದೆ. ಮಲೆನಾಡಿನ ಕೆಲವಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Rain News) ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

Karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ವಾರಾಂತ್ಯದಲ್ಲಿ ರಾಜ್ಯಾದ್ಯಂತ ಹಗುರದಿಂದ ಕೂಡಿದ ಮಳೆಯಾಗುವ (Rain news) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ಮಲೆನಾಡಿನ ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದ್ದರೆ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲ ಭಾಗಗಳಲ್ಲಿ ಶುಷ್ಕ ಹವಾಮಾನ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ತಿಂಗಳಾಂತ್ಯದವರೆಗೂ ತಾಪಮಾನ ಹೆಚ್ಚಳ

ಗರಿಷ್ಠ ತಾಪಮಾನವು ಏಪ್ರಿಲ್‌ 30ರವರೆಗೆ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ ಮಧ್ಯಾಹ್ನ 12ರಿಂದ 3ಗಂಟೆವರೆಗೆ ಹೊರಾಂಗಣ ಚಟುವಟಿಕೆಗಳಿಂದ ದೂರ ಇರುವಂತೆ ತಜ್ಞರು ಸೂಚಿಸಿದ್ದಾರೆ. ಇನ್ನೂ ಕರಾವಳಿ ಕರ್ನಾಟಕದಲ್ಲಿ ವಾತಾವರಣವು ಬಿಸಿಯಾಗಿರಲಿದೆ. ಕೆಲವೊಮ್ಮೆ ಬಿಸಿ ಗಾಳಿಯೂ ಬೀಸಲಿದೆ.

ಯೆಲ್ಲೋ ಅಲರ್ಟ್‌

ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ತಾಪಮಾನ ವಿಪರೀತ ಏರಿಕೆ ಆಗಲಿದೆ. ಹೀಗಾಗಿ ಈ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Flower Crown Trend: ಬಣ್ಣಬಣ್ಣದ ಫಂಕಿ ಫ್ಲವರ್‌ ಕ್ರೌನ್‌ಗೆ ಯುವತಿಯರು ಫಿದಾ

ಸೆಕೆಗಾಲದಲ್ಲಿ ಟ್ರೆಂಡಿಯಾದ 3 ಮಿಕ್ಸ್‌ ಮ್ಯಾಚ್‌ ಹೇರ್‌ಸ್ಟೈಲ್ಸ್!

ಈ ಬಾರಿಯ ಸಮ್ಮರ್‌ ಸೀಸನ್‌ನಲ್ಲಿ ಸೆಕೆಯಾಗದ 3 ಬಗೆಯ ಸಮ್ಮರ್‌ ಮಿಕ್ಸ್‌ ಮ್ಯಾಚ್‌ ಹೇರ್‌ಸ್ಟೈಲ್‌ಗಳು (Summer Hairstyles) ಟ್ರೆಂಡಿಯಾಗಿವೆ. ತಕ್ಷಣಕ್ಕೆ ನೋಡಲು ಹಳೆಯ ಹೇರ್‌ಸ್ಟೈಲ್‌ ಎಂದೆನಿಸಿದರೂ ಅವುಗಳ ಜೊತೆಗೆ ನಾನಾ ಬಗೆಯ ವಿನ್ಯಾಸಗಳು ಸೇರಿಕೊಂಡಿವೆ.

Summer Hairstyles

ಸೈಡಿಗೆ ಸರಿದ ಫ್ರೀ ಹೇರ್‌ಸ್ಟೈಲ್‌ಗಳು

“ಈ ಸಮ್ಮರ್‌ನಲ್ಲಿ ಫ್ರೀ ಹೇರ್‌ಸ್ಟೈಲ್‌ಗಳು ಸೈಡಿಗೆ ಸರಿದಿವೆ. ಕೇವಲ ಹೇರ್‌ ಕಂಡೀಷನ್‌ ಕೋಣೆಗಳಲ್ಲಿ ಹಾಗೂ ಇನ್‌ಡೋರ್‌ ಆವರಣದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಮಾತ್ರ ಈ ಹೇರ್‌ ಸ್ಟೈಲ್‌ಗಳಲ್ಲಿ ಹೆಣ್ಣುಮಕ್ಕಳು ಕಾಣಸಿಗುತ್ತಿದ್ದಾರೆ. ಇನ್ನು ಹೊರಾಂಗಣದಲ್ಲಿ ಸೆಕೆಯಾಗದ ಹಾಗೂ ಆರಾಮ ಎಂದೆನಿಸುವ ಕಂಫರ್ಟಬಲ್‌ ಕೂದಲ ವಿನ್ಯಾಸಗಳು ಚಾಲ್ತಿಯಲ್ಲಿವೆ. ಇದು ಕೇವಲ ಮಹಿಳೆಯರಿಗೆ ಮಾತ್ರ ಸೀಮಿತವಾಗಿಲ್ಲ! ಟೀನೇಜ್‌ ಹಾಗೂ ಯುವತಿಯರಲ್ಲೂ ಕಾಮನ್‌ ಆಗಿವೆ” ಎನ್ನುತ್ತಾರೆ ಹೇರ್‌ಸ್ಟೈಲಿಸ್ಟ್‌ ನಮಿತಾ. ಅವರ ಪ್ರಕಾರ, ಶಾರ್ಟ್‌ ಹೇರ್‌ಸ್ಟೈಲ್‌ಗಳು ಈ ಸೀಸನ್‌ನಲ್ಲಿ ತೀರಾ ಕಾಮನ್‌ ಆಗಿವೆ ಎನ್ನುತ್ತಾರೆ.

ಹೈ ಬನ್‌ ಹೇರ್‌ಸ್ಟೈಲ್‌

ನೆತ್ತಿಯ ಮೇಲೆ ಹಾಕುವಂತಹ ಹೈ ಬನ್‌ ಹೇರ್‌ಸ್ಟೈಲ್‌ಗಳು ಇದೀಗ ಬಿಸಿಲಿನ ಝಳದಲ್ಲಿ ಹೈಲೈಟ್‌ ಆಗುತ್ತಿವೆ. ಕೆಳಗಿನಿಂದ ಮೇಲಿನವರೆಗೂ ಕೂದಲನ್ನು ಕಟ್ಟಿ ಹಾಕುವಂತಹ ವಿನ್ಯಾಸದಲ್ಲಿ ಹಾಗೂ ನೆತ್ತಿಯ ಮೇಲೆ ಸುತ್ತಿ ಅಥವಾ ಹರಡಿದಂತೆ ಕಾಣುವ ರೀತಿಯಲ್ಲಿ ಹಾಕುವ ಹೇರ್‌ಬನ್‌ಗಳು ಈ ಸೀಸನ್‌ನಲ್ಲಿ ಟ್ರೆಂಡಿಯಾಗಿವೆ. ಇವು ನೋಡಲು ಕೂಡ ಆಕರ್ಷಕವಾಗಿ ಕಾಣಿಸುತ್ತವೆ. ಜೊತೆಗೆ ಸೆಕೆಯಾಗುವುದಿಲ್ಲ!

Summer Hairstyles

ಪೋನಿಟೈಲ್‌ ವಿತ್‌ ಫ್ರಿಂಝ್‌ ಹೇರ್‌ಸ್ಟೈಲ್‌

ಮುಂಭಾಗದಲ್ಲಿ ಹುಡುಗಿಯರ ಹಣೆಯನ್ನು ಕವರ್‌ ಮಾಡುವ ಫ್ರಿಂಝ್‌ ಹೇರ್‌ಸ್ಟೈಲ್‌ ಹಿಂದೆ ಸಿಂಪಲ್‌ ಪೋನಿಟೈಲ್‌ ಕೂಡ ಈ ಸೀಸನ್‌ನಲ್ಲಿ ಮರಳಿದೆ. ನೋಡಲು ಸಿಂಪಲ್ಲಾಗಿ ಕಾಣಿಸುವ ಈ ಹೇರ್‌ಸ್ಟೈಲ್‌ ನೋಡಿದಾಗ ಖಾಲಿ ಎಂದೆನಿಸುವುದಿಲ್ಲ. ಬದಲಿಗೆ ಎರಡು ಹೇರ್‌ಸ್ಟೈಲ್‌ ಕಾಂಬಿನೇಷನ್‌ ಇದಾಗಿರುತ್ತದೆ.

ಹನ್‌ ಹೇರ್‌ಸ್ಟೈಲ್‌

ಅರ್ಧ ಫ್ರೀ ಹೇರ್‌ಸ್ಟೈಲ್‌ ಹಾಗೂ ಅರ್ಧ ಕಟ್ಟಿದ ಬನ್‌ ಹೇರ್‌ಸ್ಟೈಲ್‌ ಕಾಂಬೀನೇಷನ್‌ ಈ ಸೀಸನ್‌ನ ಹನ್‌ ಹೇರ್‌ಸ್ಟೈಲ್‌ನಲ್ಲಿ ಸೇರಿದೆ. ಇವೆರಡರೊಳಗೆ ಹಣೆ ಮುಂಭಾಗದ ಫಿಂಝ್‌ ಹೇರ್‌ಸ್ಟೈಲ್‌ ಮಿಕ್ಸ್‌ ಆಗಿದೆ. ಇವೆಲ್ಲದರ ಸಮಾಗಮ ಫ್ರಿಂಝ್‌ ಹನ್‌ ಹೇರ್‌ಸ್ಟೈಲ್‌. ಇದು ಈ ಸೀಸನ್‌ನಲ್ಲಿ ಇದು ಹುಡುಗಿಯರ ಫೇವರೇಟ್‌ ಲಿಸ್ಟ್‌ನಲ್ಲಿದೆ.

Summer Hairstyles

ಬೇಸಿಗೆ ಹೇರ್‌ಸ್ಟೈಲ್‌ ಫಾಲೋ ಮಾಡಲು ಹೀಗೆ ಮಾಡಿ

  • ಹೊರಗಡೆ ಹೋಗುವಾಗ ಮೇಲಿನ ಹೇರ್‌ಸ್ಟೈಲ್‌ಗಳನ್ನು ಮಾಡಿ.
  • ಮುಖದ ಆಕಾರಕ್ಕೆ ತಕ್ಕಂತೆ ಇವನ್ನು ಆಯ್ಕೆ ಮಾಡಿ.
  • ಫ್ರಿಂಝ್‌ ಮಾಡದಿದ್ದವರೂ ಸೈಡ್‌ಲಾಕ್ಸ್‌ ಕೂದಲ ವಿನ್ಯಾಸ ಮಾಡಬಹುದು.
  • ತೀರಾ ಟೈಟಾಗಿ ಕಟ್ಟಬೇಡಿ. ತಲೆ ನೋವಾಗಬಹುದು.
  • ಮೇಲಿನ ಹೇರ್‌ಸ್ಟೈಲ್ಸ್‌ ನಿಮಗೆ ಸ್ಲಿಮ್‌ ಲುಕ್‌ ನೀಡಬಹುದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವಿಜಯನಗರ

Vijayanagara News: ಕುಡಿಯುವ ನೀರಿನ ಪೈಪ್‌ಲೈನ್‌ಗಳು ಹಾಳಾಗದಂತೆ ಕಾಮಗಾರಿ ಅನುಷ್ಠಾನಗೊಳಿಸಿ: ಜಿಪಂ ಸಿಇಒ

Vijayanagara News: ಹೊಸಪೇಟೆ ನಗರದ ಜಿ.ಪಂ. ಕಚೇರಿಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಗುರುವಾರ ಜಿ.ಪಂ. ಸಿಇಒ ಸದಾಶಿವ ಪ್ರಭು ಬಿ. ವಿಡಿಯೋ ಸಂವಾದ ಸಭೆ ನಡೆಸಿದರು.

VISTARANEWS.COM


on

Implement the work without damaging the drinking water pipelines says ZP CEO Sadashiva Prabhu
Koo

ಹೊಸಪೇಟೆ: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ (Drinking Water) ಪೂರೈಕೆಗಾಗಿ ಪೈಪ್‌ಲೈನ್‌ಗಳನ್ನು ಅಳವಡಿಸಲಾಗಿರುತ್ತದೆ. ಆದ್ದರಿಂದ ಅನುಷ್ಠಾನ ಇಲಾಖೆಗಳು ಪೈಪ್‌ಲೈನ್‌ಗಳು ಇರುವುದನ್ನು ಗುರುತಿಸಿ, ಅವು ಹಾಳಾಗದಂತೆ ಸಿವಿಲ್ ಕಾಮಗಾರಿಗಳನ್ನು ನಡೆಸಬೇಕು ಎಂದು ಜಿ.ಪಂ. ಸಿಇಒ ಸದಾಶಿವ ಪ್ರಭು ಬಿ. ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ (Vijayanagara News) ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ, ಕೆಆರ್‌ಐಡಿಎಲ್, ಪಿಡಬ್ಲ್ಯೂಡಿ, ಕರ್ನಾಟಕ ರಾಜ್ಯ ಹ್ಯಾಬಿಟೇಷನ್ ಸೆಂಟರ್, ನಿರ್ಮಿತಿ ಕೇಂದ್ರ, ಜೆಸ್ಕಾಂ ಮತ್ತು ಬಿಎಸ್‌ಎನ್‌ಎಲ್ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಗುರುವಾರ ವಿಡಿಯೋ ಸಂವಾದ ಸಭೆಯಲ್ಲಿ ಅವರು ಮಾತನಾಡಿದರು.

ಇದನ್ನೂ ಓದಿ: Lok Sabha Election 2024: ಕರ್ನಾಟಕದಲ್ಲಿ ದಾಖಲೆಯ ಮತದಾನ; ಕಳೆದ ಬಾರಿಗಿಂತ ಏರಿಕೆ, ಮಂಡ್ಯದಲ್ಲಿ ಅತಿ ಹೆಚ್ಚು!

ಕುಡಿಯುವ ನೀರಿನ ಪೈಪ್‌ಲೈನ್ ಮತ್ತು ಜಲಜೀವನ್ ಮಿಷನ್ ಯೋಜನೆಯಡಿ ಪೈಲ್‌ಲೈನ್‌ಗಳು ಅನುಷ್ಠಾನ ಇಲಾಖೆಗಳ ಕಾಮಗಾರಿ ಸಂದರ್ಭದಲ್ಲಿ ಹಾಳಾಗಿರುವ ಬಗ್ಗೆ ಜಿಲ್ಲೆಯ ಅನೇಕ ಪಂಚಾಯಿತಿಗಳಿಂದ ದೂರುಗಳು ಬರುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ಕಾಮಗಾರಿಗಳನ್ನು ಪ್ರಾರಂಭಿಸುವ ಮುಂಚಿತವಾಗಿ ಸಂಬಂಧಪಟ್ಟ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಲಿಖಿತವಾಗಿ ಸಂಪರ್ಕಿಸಿ ಕಾಮಗಾರಿ ಅನುಷ್ಠಾನ ಸ್ಥಳದಲ್ಲಿ ಕಂಟ್ರೋಲ್ ವಾಲ್ವ್‌ಗಳು ಇಲ್ಲದಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಕಾಮಗಾರಿಗಳನ್ನು ಮುಂಜಾಗ್ರತೆಯಿಂದ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಹಾಜರಿದ್ದ ಬಿಎಸ್‌ಎನ್‌ಎಲ್ ಅಧಿಕಾರಿಗಳು, ಗ್ರಾಮೀಣ ಪ್ರದೇಶದಲ್ಲಿ ಬಿಎಸ್‌ಎನ್‌ಎಲ್ ಕೇಬಲ್‌ಗಳು ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ತುಂಬಾ ಹಾಳಾಗಿ ಗ್ರಾಮೀಣ ಪ್ರದೇಶದಲ್ಲಿ ಇಂಟರ್‌ನೆಟ್ ಸಂಪರ್ಕ ಮತ್ತಿತರ ಸಂವಹನ ಕಾರ್ಯಕ್ಕೆ ಅಡಚಣೆಯಾಗುತ್ತಿರುವ ಬಗ್ಗೆ ಸಿಇಒ ಅವರ ಗಮನಕ್ಕೆ ತಂದರು. ಈ ಬಗ್ಗೆ ಇಲಾಖೆಯೊಂದಿಗೆ ಸಮನ್ವಯ ಮಾಡಿಕೊಂಡು ಕಾಮಗಾರಿಗಳ ಅನುಷ್ಠಾನಕ್ಕೆ ಸಿಇಒ ಅವರು ಸೂಚನೆ ನೀಡಿದರು.

ಇದನ್ನೂ ಓದಿ: Pandya Brothers : ಪಾಂಡ್ಯ ಸಹೋದರರ ಮನೆಗೆ ಹೊಸ ಅತಿಥಿ ಆಗಮನ, ಖುಷಿಯಲ್ಲಿ ಕುಟುಂಬ

ಸಭೆಯಲ್ಲಿ ಅನುಷ್ಠಾನ ಇಲಾಖೆಗಳ ಕಾರ್ಯಪಾಲಕ ಅಭಿಯಂತರರು, ಯೋಜನಾ ನಿರ್ದೇಶಕರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಮತ್ತು ಜಿಲ್ಲಾ ಪಂಚಾಯಿತಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading
Advertisement
Anupama Parameswaran Paradha next
ಟಾಲಿವುಡ್14 mins ago

Anupama Parameswaran: ಅನುಪಮಾ ಪರಮೇಶ್ವರನ್ ಹೊಸ ಸಿನಿಮಾ ಅನೌನ್ಸ್‌: ನಟಿಯ ಲುಕ್‌ಗೆ ಫ್ಯಾನ್ಸ್‌ ಫಿದಾ!

PU Board exam girl writing exam
ಪ್ರಮುಖ ಸುದ್ದಿ35 mins ago

Public Exam: ಇನ್ನು ಮುಂದೆ ವರ್ಷಕ್ಕೆರಡು ಬಾರಿ ಬೋರ್ಡ್‌ ಪರೀಕ್ಷೆ ? ಪರಿಶೀಲನೆಗೆ ಸಿಬಿಎಸ್‌ಇಗೆ ಸೂಚನೆ

ಕ್ರೈಂ1 hour ago

Child Welfare commission: ಅಕ್ರಮವಾಗಿ ಸಾಗಿಸುತ್ತಿದ್ದ 95 ಮುಸ್ಲಿಂ ಮಕ್ಕಳ ರಕ್ಷಣೆ

jai sriram slogan viral news
ವೈರಲ್ ನ್ಯೂಸ್1 hour ago

Jai SriRam Slogan: ಉತ್ತರಪತ್ರಿಕೆಯಲ್ಲಿ `ಜೈ ಶ್ರೀರಾಮ್’ ಬರೆದ ವಿದ್ಯಾರ್ಥಿಗಳು ಪಾಸ್;‌ ಪ್ರಾಧ್ಯಾಪಕರು ವಜಾ!

Ayushman Bharat Yojana
ಆರೋಗ್ಯ1 hour ago

 Ayushman Bharat Yojana: ಆಪತ್ಕಾಲದಲ್ಲಿ ಆಯುಷ್ಮಾನ್‌ ಭಾರತ್‌ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

Sushant Singh Rajput
ಬಾಲಿವುಡ್2 hours ago

Sushant Singh Rajput: ಸುಶಾಂತ್‌ ಸಿಂಗ್‌ ಸಾವಿಗೆ ನ್ಯಾಯಕ್ಕಾಗಿ ಆನ್‌ಲೈನ್ ಅಭಿಯಾನ ಶುರು ಮಾಡಿದ ಸಹೋದರಿ!

donkey milk
ವಾಣಿಜ್ಯ2 hours ago

Donkey milk: ಕತ್ತೆ ಹಾಲು ಲೀಟರ್‌ಗೆ 7000 ರೂ! ಈ ಹಾಲಿಗೆ ಏಕಿಷ್ಟು ಡಿಮ್ಯಾಂಡ್‌?

ವಿದೇಶ2 hours ago

US Sanction: ಭಾರತೀಯ ಮೂಲದ 3 ಕಂಪನಿಗಳಿಗೆ ಅಮೆರಿಕ ನಿರ್ಬಂಧ

Kalki 2898 AD to release on this date
ಟಾಲಿವುಡ್2 hours ago

Kalki 2898 AD: ಪ್ರಭಾಸ್, ದೀಪಿಕಾ, ಅಮಿತಾಭ್‌ ಮುಖ್ಯಭೂಮಿಕೆಯ ʻಕಲ್ಕಿ 2898 ADʼ ರಿಲೀಸ್‌ ಡೇಟ್‌ ಅನೌನ್ಸ್‌!

nota vote
ಪ್ರಮುಖ ಸುದ್ದಿ2 hours ago

NOTA: ಅತಿ ಹೆಚ್ಚು `ನೋಟಾ’ ಬಿದ್ದರೆ ಹೊಸ ಚುನಾವಣೆ ಮಾಡಬಹುದೇ? ಸುಪ್ರೀಂ ಪ್ರಶ್ನೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ23 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 202423 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 202424 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ1 day ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20242 days ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ3 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

ಟ್ರೆಂಡಿಂಗ್‌