ಕಾರಟಗಿ: ಸಾರ್ವತ್ರಿಕ ವಿಧಾನಸಭಾ ಚುನಾವಣೆ (Karnataka election 2023) ಹಿನ್ನೆಲೆಯಲ್ಲಿ ಕನಕಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ, ಬಿಜೆಪಿ ರಾಜ್ಯ ಉಪಾಧ್ಯಕ್ಷ, ಚುನಾವಣಾ ಪ್ರಚಾರ ಸಮಿತಿ ಸದಸ್ಯ ಬಿ.ವೈ. ವಿಜಯೇಂದ್ರ ರೋಡ್ ಶೋ ನಡೆಸಿದರು.
ಕಾರಟಗಿಯ ಪಟ್ಟಣ ಪಂಚಾಯತ್ ಬಳಿಯಿಂದ ನವಲಿ ಸರ್ಕಲ್‌ವರೆಗೆ ರೋಡ್ ಶೋ ನಡೆಸಿ ಬಿಜೆಪಿ ಅಭ್ಯರ್ಥಿ ಬಸವರಾಜ ದಡೇಸೂಗೂರು ಪರ ಮತಯಾಚಿಸಿದರು.
ಇದನ್ನೂ ಓದಿ: Hanuman Chalisa : ಏನಿದು ಹನುಮಾನ್ ಚಾಲೀಸಾ? ಇದರ ಮಹತ್ವವೇನು?
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಲು ಈಗಿನ ಅಭ್ಯರ್ಥಿ ಬಸವರಾಜ ದಡೇಸೂಗೂರ ಕಾರಣ. ಕನಕಗಿರಿ ಕ್ಷೇತ್ರದ ಜನರು ನಮ್ಮ ತಂದೆ ಮೇಲೆ ಪ್ರೀತಿ ವಿಶ್ವಾಸವಿಟ್ಟಿದ್ದೀರಿ. ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ದಡೇಸೂಗೂರು ಅವರಿಗೆ ಮತ ಹಾಕಿದರೆ ಅದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮತ ಹಾಕಿದಂತೆ ಎಂದು ಮನವಿ ಮಾಡಿದರು.
ಕನಕಗಿರಿ ಕ್ಷೇತ್ರದಲ್ಲಿ ಮತ್ತೆ ಕಮಲ ಅರಳುವುದು. ಕನಕಗಿರಿ ವಿಧಾನಸಭಾ ಕ್ಷೇತ್ರದ ಪ್ರತಿಯೊಬ್ಬರೂ ಬಿಜೆಪಿಗೆ ಮತ ಹಾಕುವ ಮೂಲಕ ಅತಿ ಹೆಚ್ಚು ಅಂತರದಿಂದ ಗೆಲ್ಲಿಸಿ ಎಂದು ಮನವಿ ಮಾಡಿದರು.
ಇದನ್ನೂ ಓದಿ: IPL 2023: ಬುಧವಾರದ ಡಬಲ್ ಹೆಡರ್ ಪಂದ್ಯಗಳ ಬಳಿಕ ಐಪಿಎಲ್ ಅಂಕಪಟ್ಟಿ ಈ ರೀತಿ ಇದೆ
ಶ್ರೀಗಳ ದರ್ಶನ ಪಡೆದ ಬಿ.ವೈ. ವಿಜಯೇಂದ್ರ
ಇನ್ನು ಗಂಗಾವತಿ ತಾಲೂಕಿನ ಮರಳಿ ಗ್ರಾಮದಲ್ಲಿ ಕಿತ್ತೂರು ಚೆನ್ನಮ್ಮ ಮೂರ್ತಿ ಪ್ರತಿಷ್ಠಾಪನ ಕಾರ್ಯಕ್ರಮಕ್ಕೆ ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ವಿಜಯೇಂದ್ರ ಅವರು ಕನಕಗಿರಿ ವಿಧಾನಸಭಾ ಕ್ಷೇತ್ರದ ಪ್ರಚಾರದಲ್ಲಿ ಭಾಗವಹಿಸುವ ಮಾರ್ಗ ಮಧ್ಯದಲ್ಲಿ ವಿಜಯೇಂದ್ರ ಹಾಗೂ ಕನಕಗಿರಿ ಬಿಜೆಪಿ ಅಭ್ಯರ್ಥಿ ಬಸವರಾಜ ದಡೇಸೂಗೂರು ಅವರು ಭೇಟಿಯಾಗಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.