Karkala Physical Abuse: ಕಾರ್ಕಳದ ಅತ್ಯಾಚಾರ ಸಂತ್ರಸ್ತೆ ರಕ್ತದಲ್ಲಿ ಡ್ರಗ್ಸ್ ಪತ್ತೆ; ಆರೋಪಿಗಳ ರಿಪೋರ್ಟ್‌ ನೆಗೆಟಿವ್! - Vistara News

ಕರ್ನಾಟಕ

Karkala Physical Abuse: ಕಾರ್ಕಳದ ಅತ್ಯಾಚಾರ ಸಂತ್ರಸ್ತೆ ರಕ್ತದಲ್ಲಿ ಡ್ರಗ್ಸ್ ಪತ್ತೆ; ಆರೋಪಿಗಳ ರಿಪೋರ್ಟ್‌ ನೆಗೆಟಿವ್!

‌ಕಾರ್ಕಳ ಹಿಂದು ಯುವತಿ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ರಕ್ತದಲ್ಲಿ ಮಾದಕ ವಸ್ತು ಇರುವ ಬಗ್ಗೆ ಪಾಸಿಟಿವ್ ವರದಿ ಬಂದಿದೆ. ಆದರೆ, ಇಬ್ಬರು ಆರೋಪಿಗಳ ವರದಿ ನೆಗೆಟಿವ್‌ ಬಂದಿದೆ ಎಂದು ಉಡುಪಿ ಎಸ್‌.ಪಿ. ಡಾ. ಅರುಣ್ ಕೆ. ತಿಳಿಸಿದ್ದಾರೆ.

VISTARANEWS.COM


on

Karkala Physical Abuse
ಕಾರ್ಕಳ ಹಿಂದು ಯುವತಿ ಅತ್ಯಾಚಾರ ಪ್ರಕರಣದ 1ನೇ ಆರೋಪಿ ಅಲ್ತಾಫ್.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಉಡುಪಿ‌: ಕಾರ್ಕಳ ಹಿಂದು ಯುವತಿ ಅತ್ಯಾಚಾರ ಪ್ರಕರಣದ (Karkala Physical Abuse) ಸಂತ್ರಸ್ತ ಯುವತಿಯ ಬ್ಲಡ್ ಟೆಸ್ಟ್ ರಿಪೋರ್ಟ್ ಮಾಹಿತಿ ಲಭ್ಯವಾಗಿದ್ದು, ಸಂತ್ರಸ್ತೆಯ ರಕ್ತದಲ್ಲಿ ಮಾದಕ ವಸ್ತು ಇರುವ ಬಗ್ಗೆ ಪಾಸಿಟಿವ್ ವರದಿ ಬಂದಿದೆ. ಆದರೆ, ಇಬ್ಬರು ಆರೋಪಿಗಳ ವರದಿ ನೆಗೆಟಿವ್‌ ಬಂದಿದೆ ಎಂದು ಉಡುಪಿ ಎಸ್‌.ಪಿ. ಡಾ. ಅರುಣ್ ಕೆ. ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಎಸ್‌.ಪಿ. ಡಾ. ಅರುಣ್ ಕೆ. ಅವರು, ಪ್ರಕರಣದ 1ನೇ ಆರೋಪಿ ಅಲ್ತಾಫ್ ಹಾಗೂ ಬಿಯರ್ ಬಾಟಲ್ ತಂದುಕೊಟ್ಟ 2ನೇ ಆರೋಪಿ ರಿಚರ್ಡ್ ಬ್ಲಡ್ ಟೆಸ್ಟ್‌ ರಿಪೋರ್ಟ್ ನೆಗೆಟಿವ್ ಬಂದಿದೆ. ಆರೋಪಿ ಅಲ್ತಾಫ್ ವಿಚಾರಣೆ ವೇಳೆ ಕಾರಿನಲ್ಲಿದ್ದ ಒಂದು ಪುಡಿಯನ್ನು ತೋರಿಸಿದ್ದ. ಇದನ್ನೇ ಸಂತ್ರಸ್ತ ಯುವತಿ ತೆಗೆದುಕೊಂಡಿದ್ದಾಗಿ ಹೇಳಿಕೆ ನೀಡಿದ್ದಾನೆ. ಸದ್ಯ ಆ ಪೌಡರ್ ಅನ್ನು ನಾವು ಎಫ್ಎಸ್ಎಲ್‌ಗೆ ಕಳಿಸಲಾಗಿದ್ದು, ಯಾವ ಡ್ರಗ್ಸ್ ಎಂದು ಪರಿಶೀಲನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಪ್ರಕರಣದ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ಪ್ರಕರಣ ದಾಖಲಾಗಿದೆ. ಈ ಡ್ರಗ್‌ ಅನ್ನು ಎಲ್ಲಿಂದ ಪಡೆದಿದ್ದಾರೆ ಮತ್ತು ಎಲ್ಲಿಂದ ಬಂದಿದೆ ಎನ್ನುವ ಕುರಿತು ಅಪರಾಧ ಕ್ರಮಾಂಕ : 146/24 ಕಲಂ. 8(c), 22(b) NDPS Act, Sec. 3(5) BNS ನಲ್ಲಿ ಪ್ರಕರಣ ದಾಖಲಾಗಿದೆ. ಡ್ರಗ್ ಎಲ್ಲಿಂದ ಬಂದಿದೆ ಎಂಬುದರ ಬಗ್ಗೆ ಪೂರ್ಣ ತನಿಖೆ ಮಾಡಲಾಗುವುದು. ಸಂತ್ರಸ್ತೆಯು ಜಡ್ಜ್ ಮುಂದೆ ಹೇಳಿಕೆ ಕೊಡಲಿದ್ದು, ವೈದ್ಯಕೀಯ ಪರೀಕ್ಷೆ ಆದ ನಂತರ ಈ ಪ್ರಕ್ರಿಯೆ ನಡೆಯಲಿದೆ. ಆದಷ್ಟು ಬೇಗನೆ ಅತ್ಯಾಚಾರ ಪ್ರಕರಣದ ತನಿಖೆಯನ್ನು ಮುಕ್ತಾಯಗೊಳಿಸಲಾಗುವುದು ಎಂದು ಉಡುಪಿ ಎಸ್ಪಿ ಡಾ.ಅರುಣ್ ಕೆ. ತಿಳಿಸಿದ್ದಾರೆ.

ಇದನ್ನೂ ಓದಿ | Murder Case : ಭಕ್ತನ ಮೈಮೇಲೆ ದೆವ್ವ ಸೇರಿದೆ ಎಂದು ಚೆನ್ನಾಗಿ ಬಡಿದು ಕೊಂದ ಚರ್ಚ್‌ ಫಾದರ್‌!

ಏನಿದು ಪ್ರಕರಣ?

ಇನ್‌ಸ್ಟಾಗ್ರಾಂನಲ್ಲಿ ಸ್ನೇಹ ಬೆಳೆಸಿದ ಹಿಂದು ಯುವತಿಯನ್ನು (Hindu girl) ಕರೆದೊಯ್ದ ಮುಸ್ಲಿಂ ಯುವಕ, ಆಕೆಗೆ ಬಿಯರ್‌ನಲ್ಲಿ ಮತ್ತು ಬರಿಸುವ ಔಷಧ ಸೇರಿಸಿ ಕುಡಿಸಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಿದ್ದ ಘಟನೆ ಆ.23ರಂದು ಕಾರ್ಕಳ ಠಾಣೆ ವ್ಯಾಪ್ತಿಯಲ್ಲಿ ನಡೆದಿತ್ತು. ಇದಕ್ಕೆ ಆರೋಪಿಯ ಇಬ್ಬರು ಸ್ನೇಹಿತರು ಸಹಕರಿಸಿದ್ದರಿಂದ ಸಾಮೂಹಿಕ ಅತ್ಯಾಚಾರ ನಡೆದಿದೆ ಎನ್ನಲಾಗಿದೆ. ಈ ಪ್ರಕರಣವು ಕಾರ್ಕಳ ನಗರದಲ್ಲಿ ಕೋಮು ಉದ್ವಿಗ್ನತೆಗೆ ಕಾರಣವಾಗಿದೆ.

ಕಾರ್ಕಳ ಠಾಣೆ ವ್ಯಾಪ್ತಿಯಲ್ಲಿ ಯುವತಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಎ1 ಅಲ್ತಾಫ್ ಹಾಗೂ ಈತನಿಗೆ ಬಿಯರ್ ಬಾಟಲ್ ತಂದುಕೊಟ್ಟಿದ್ದ ಇಬ್ಬರು ಆರೋಪಿಗಳ ಪೈಕಿ ಸುಬೇರ್ ಎಂಬಾತನನ್ನು ಬಂಧಿಸಲಾಗಿತ್ತು. ಸದ್ಯ ಸಂತ್ರಸ್ತೆಗೆ ಮಣಿಪಾಲ ಕೆಎಂಸಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಂತ್ರಸ್ತೆಗೆ ಆರೋಪಿ ಜೊತೆಗೆ ಮೂರು ತಿಂಗಳಿಂದ ಪರಿಚಯವಿತ್ತು. ಇನ್ಸ್ಟಾಗ್ರಾಮ್ ಮೂಲಕ ಪರಸ್ಪರ ಪರಿಚಯ ಹೊಂದಿದ್ದರು ಎನ್ನಲಾಗದೆ. ಶುಕ್ರವಾರ ಆರೋಪಿ ಅಲ್ತಾಫ್ ಕರೆ ಮಾಡಿ ಸಂತ್ರಸ್ತೆಗೆ ಬರಲು ಹೇಳಿದ್ದ. ಆಕೆ ಬಂದಾಗ ಅಲ್ಲಿಂದ ಅಪಹರಿಸಿದ್ದ. ಬಿಯರ್‌ನಲ್ಲಿ ಏನನ್ನೊ ಬೆರೆಸಿ ಕುಡಿಸಿ ಮತ್ತು ಬರಿಸಿ ಅತ್ಯಾಚಾರ ಮಾಡಿದ್ದಾಗಿ ಸಂತ್ರಸ್ತೆ ತಿಳಿಸಿದ್ದಳು.

ಇದನ್ನೂ ಓದಿ | Crime News : ತನ್ನನ್ನು ಬಿಟ್ಟು ಹೆಂಡತಿಗೆ ಹೆಚ್ಚು ಹಣ ಕೊಡುತ್ತಿ ದ್ದ ಪ್ರಿಯತಮನ ಮರ್ಮಾಂಗ ಕತ್ತರಿಸಿದ ಮಹಿಳೆ

ಯುವತಿ ಜೇನು ಕೃಷಿ ಇಲಾಖೆಯಲ್ಲಿ ಕೆಲಸಕ್ಕಿದ್ದಳು. ಇನ್‌ಸ್ಟಾಗ್ರಾಂನಲ್ಲಿ ಇವರಿಗೆ ಸ್ನೇಹ ಬೆಳೆದಿತ್ತು ಎಂದು ತಿಳಿದುಬಂದಿದ್ದು, ಮಾದಕ ಪದಾರ್ಥ ನೀಡಿ ಹಿಂದು ಯುವತಿಯ ರೇಪ್ ಎಸಗಿದ ಪ್ರಕರಣದಲ್ಲಿ ಕಾರ್ಕಳ ನಗರ ಠಾಣೆಯಲ್ಲಿ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ನಿರ್ಜನ ಪ್ರದೇಶದಲ್ಲಿ ರೇಪ್ ಮಾಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ರಾಮಲಿಂಗಾರೆಡ್ಡಿ ಜೊತೆ ಮಾತನಾಡುತ್ತೇನೆ – ಡಿಕೆಶಿ

VISTARANEWS.COM


on

ಖಾತೆ ಹಂಚಿಕೆಯಿಂದ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಮಲಿಂಗಾರೆಡ್ಡಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಮಾತನಾಡುತ್ತೇನೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಸಚಿವ ಖಾತೆ ಹಂಚಿಕೆಯ ನಂತರ ರಾಮಲಿಂಗಾರೆಡ್ಡಿ ರಾಜೀನಾಮೆ, ಮುನಿಯಪ್ಪ ಅಸಮಾಧಾನ ಬಹಿರಂಗಗೊಂಡಿದ್ದು, ಈ ಕುರಿತು ಮೊದಲ ಬಾರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ರಾಮಲಿಂಗಾ ರೆಡ್ಡಿ ಅವರಿಗೆ ನಾವು ಮಾತು ಕೊಟ್ಟಿದ್ದು ನಿಜ. ಅವರು ಹಿರಿಯ ನಾಯಕರು. ಬೆಂಗಳೂರಿನ ಅಭಿವೃದ್ಧಿ ಜವಾಬ್ದಾರಿ ನೀಡುವ ಕುರಿತು ಚರ್ಚೆ ನಡೆದಿತ್ತು. ಆದರೆ ಹೈಕಮಾಂಡ್ ತೀರ್ಮಾನ ಮಾಡಿದೆ. ಅದನ್ನು ಮೀರಿ ನಾವು ಏನೂ ಮಾಡಲು ಸಾಧ್ಯವಿಲ್ಲ” ಎಂದು ಹೇಳಿದರು.

“ರಾಮಲಿಂಗಾ ರೆಡ್ಡಿ ಅವರು ಸದ್ಯ ಹೊರಗಡೆ ಇದ್ದಾರೆ. ಅವರು ಬಂದ ಬಳಿಕ ಖುದ್ದಾಗಿ ನಾನೇ ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ. ಈ ವಿಚಾರವನ್ನು ಸೌಹಾರ್ದಯುತವಾಗಿ ಬಗೆಹರಿಸಲು ಪ್ರಯತ್ನಿಸುತ್ತೇನೆ” ಎಂದರು.

ಇನ್ನು ಕೆ.ಹೆಚ್‌. ಮುನಿಯಪ್ಪ ಅವರ ಅಸಮಾಧಾನದ ಬಗ್ಗೆ ಪ್ರತಿಕ್ರಿಯಿಸಿ, ಅವರ ಜೊತೆಯೂ ಮಾತಾಡಿದ್ದೇನೆ. ಪಕ್ಷ ಏನೇ ಜವಾಬ್ದಾರಿ ಕೊಟ್ಟರೂ ಅದನ್ನು ನಿರ್ವಹಿಸುತ್ತೇನೆಂದು ಅವರು ಹೇಳಿದ್ದಾರೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು.

Continue Reading

Latest

ರಾಹುಲ್ ಗಾಂಧಿ ಸಮ್ಮುಖದಲ್ಲಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ

VISTARANEWS.COM


on

ರಾಜ್ಯದಲ್ಲಿ ರಾಜ್ಯಸಭಾ ಚುನಾವಣೆಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರು ರಾಹುಲ್‌ ಗಾಂಧಿ ಅವರೊಂದಿಗೆ ವಿಧಾನಸೌಧಕ್ಕೆ ಆಗಮಿಸಿ, ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ನ ಹಲವು ಹಿರಿಯ ನಾಯಕರು ಉಪಸ್ಥಿತರಿದ್ದರು.

ಜೂನ್ 18ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಮೊದಲ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಸಿದ್ದಾರೆ.

ಎರಡನೇ ಅಭ್ಯರ್ಥಿಯಾಗಿ ಪವನ್‌ ಖೇರಾ ಹಾಗೂ ಮೂರನೇ ಅಭ್ಯರ್ಥಿಯಾಗಿ ಮನ್ಸೂರ್‌ ಆಲಿ ಖಾನ್‌ ನಾಳೆ ಜೂನ್‌ 6 ರಂದು ನಾಮಪತ್ರ ಸಲ್ಲಿಸಲಿದ್ದಾರೆ.

Continue Reading

Latest

ಲೋಕಭವನದಲ್ಲಿ ಡಿಕೆಶಿ ಪಟ್ಟಾಭಿಷೇಕಕ್ಕೆ ಭರ್ಜರಿ ಸಿದ್ಧತೆ

VISTARANEWS.COM


on

ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಸಮಾರಂಭಕ್ಕೆ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಕಾರ್ಯಕ್ರಮದ ವೇದಿಕೆಯನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದ್ದು, ಸಂಪ್ರದಾಯ ಮತ್ತು ಆಧುನಿಕ ವ್ಯವಸ್ಥೆಗಳ ಸಮನ್ವಯಕ್ಕೆ ಒತ್ತು ನೀಡಲಾಗಿದೆ.

ಈ ಬಾರಿ ಪ್ರಮಾಣ ವಚನ ಸಮಾರಂಭದಲ್ಲಿ ಹೊಸ ಸಂಪ್ರದಾಯಕ್ಕೆ ಚಾಲನೆ ನೀಡಲು ಸಿದ್ಧತೆ ನಡೆಸಲಾಗಿದೆ. ಡಿ.ಕೆ. ಶಿವಕುಮಾರ್ ಹಾಗೂ ಸಚಿವರು ಪೂರ್ವಾಭಿಮುಖವಾಗಿ ನಿಂತು ಪ್ರಮಾಣ ವಚನ ಸ್ವೀಕರಿಸಲಿದ್ದು, ಅದಕ್ಕೆ ಅನುಕೂಲವಾಗುವಂತೆ ವೇದಿಕೆಯ ವಿನ್ಯಾಸ ರೂಪಿಸಲಾಗಿದೆ. ಜ್ಯೋತಿಷಿಗಳ ಸಲಹೆ ಹಾಗೂ ಶುಭ ಮುಹೂರ್ತದ ಆಧಾರದ ಮೇಲೆ ವೇದಿಕೆ ಮತ್ತು ಆಸನ ವ್ಯವಸ್ಥೆಗಳನ್ನು ಸಿದ್ಧಪಡಿಸಲಾಗಿದೆ ಎನ್ನಲಾಗಿದೆ.

ಪದಗ್ರಹಣ ವೇದಿಕೆಯ ಮೇಲೆ ಸುಮಾರು 20 ಆಸನಗಳ ವ್ಯವಸ್ಥೆ ಮಾಡಲಾಗಿದ್ದು, ಗಣ್ಯರು ಮತ್ತು ವಿಶೇಷ ಆಹ್ವಾನಿತರಿಗೆ ಪ್ರತ್ಯೇಕ ಆಸನಗಳನ್ನು ಕಲ್ಪಿಸಲಾಗಿದೆ. ಸ್ವಾಮೀಜಿಗಳಿಗಾಗಿ ವೇದಿಕೆಯ ಸಮೀಪ ಸ್ವಲ್ಪ ಎತ್ತರದ ಪ್ರತ್ಯೇಕ ಆಸನ ವ್ಯವಸ್ಥೆಯೂ ಮಾಡಲಾಗಿದೆ.

ಕಾರ್ಯಕ್ರಮಕ್ಕೆ ಆಗಮಿಸುವ ಅತಿಥಿಗಳ ಅನುಕೂಲಕ್ಕಾಗಿ ಗ್ಲಾಸ್ ಹೌಸ್ ಆವರಣದಲ್ಲಿ ಮೂರು ಪ್ರತ್ಯೇಕ ಸ್ಥಳಗಳಲ್ಲಿ ಒಟ್ಟು 3,500 ಜನರಿಗೆ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ. ಜೊತೆಗೆ, ಕಾರ್ಯಕ್ರಮವನ್ನು ಎಲ್ಲರೂ ವೀಕ್ಷಿಸಲು ಲೋಕಭವನದ ಒಳಭಾಗದಲ್ಲಿ ಆರು ಎಲ್‌ಇಡಿ ಪರದೆಗಳನ್ನು ಅಳವಡಿಸಲಾಗಿದೆ.

ಈ ಸಮಾರಂಭಕ್ಕಾಗಿ 2 ಸಾವಿರಕ್ಕೂ ಹೆಚ್ಚು ವಿಐಪಿ ಪಾಸ್‌ಗಳನ್ನು ವಿತರಿಸಲಾಗಿದ್ದು, ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಭದ್ರತೆ ಹಾಗೂ ಪ್ರವೇಶ ವ್ಯವಸ್ಥೆಗಳನ್ನು ಕೂಡ ಕಟ್ಟುನಿಟ್ಟಾಗಿ ರೂಪಿಸಲಾಗಿದೆ.

ಇನ್ನು ಲೋಕಭವನದ ಮುಖ್ಯ ಪ್ರವೇಶ ದ್ವಾರವನ್ನು ಅದ್ಧೂರಿಯಾಗಿ ಅಲಂಕರಿಸಲಾಗಿದ್ದು, ದ್ವಾರದ ಮುಂಭಾಗದಲ್ಲಿ ಬೃಹತ್ ಕಮಾನು ನಿರ್ಮಿಸಲಾಗಿದೆ. ಕಮಾನಿಗೆ ಬಣ್ಣ ಬಣ್ಣದ ವಸ್ತ್ರಗಳು ಹಾಗೂ ವಿವಿಧ ಬಗೆಯ ಹೂಗಳಿಂದ ವಿಶೇಷ ಅಲಂಕಾರ ಮಾಡಲಾಗಿದ್ದು, ಕಾರ್ಯಕ್ರಮಕ್ಕೆ ವಿಶೇಷ ಮೆರಗನ್ನು ತಂದಿದೆ. .

ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಸಮಾರಂಭಕ್ಕೆ ಸಕಲ ಸಿದ್ಧತೆಗಳು ಅಂತಿಮ ಹಂತ ತಲುಪಿವೆ.

Continue Reading

Latest

ಡಿಕೆ ಶಿವಕುಮಾರ್ ಪದಗ್ರಹಣ ಸಮಾರಂಭಕ್ಕೆ ರಾಹುಲ್ ಗಾಂಧಿಗೆ ಆಹ್ವಾನ

VISTARANEWS.COM


on

ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಸಮಾರಂಭಕ್ಕೆ ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಗಮಿಸಲಿದ್ದಾರೆ.

ನಾಳೆ ಜೂನ್‌ 3 ರಂದು ಸಂಜೆ 4:05ಕ್ಕೆ ಬೆಂಗಳೂರಿನ ಲೋಕಭವನದಲ್ಲಿ ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ರಾಹುಲ್ ಗಾಂಧಿ ಕರ್ನಾಟಕಕ್ಕೆ ಬರಲಿದ್ದಾರೆ.

ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ನಾಳೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌, ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣ್‌ದೀಪ್‌ ಸಿಂಗ್‌ ಸುರ್ಜೇವಾಲಾ ಸೇರಿದಂತೆ ಪಕ್ಷದ ಹಲವು ರಾಷ್ಟ್ರೀಯ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ. ಡಿ.ಕೆ. ಶಿವಕುಮಾರ್ ಅವರು ರಾಹುಲ್ ಗಾಂಧಿ ಹಾಗೂ ಖರ್ಗೆ ಅವರಿಗೆ ಈಗಾಗಲೇ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ.

Continue Reading
Advertisement
Latest2 hours ago

ಟೀಮ್‌ ಇಂಡಿಯಾಗೆ ವೈಭವ್‌ ಸೂರ್ಯವಂಶಿ ಎಂಟ್ರಿ

Latest4 hours ago

ಸಿಇಟಿ ಫಲಿತಾಂಶ ಪ್ರಕಟ

ಅವಿಭಾಗೀಕೃತ5 hours ago

ರಾಮಲಿಂಗಾರೆಡ್ಡಿ ರಾಜೀನಾಮೆ ಕಗ್ಗಂಟಿಗೆ ತೆರೆ? ಸುರ್ಜೇವಾಲಾ ಮಾತುಕತೆ ಯಶಸ್ವಿ?

Latest24 hours ago

ರಾಮಲಿಂಗಾರೆಡ್ಡಿ ಜೊತೆ ಮಾತನಾಡುತ್ತೇನೆ – ಡಿಕೆಶಿ

Latest1 day ago

ಬಿಜೆಪಿಗೆ ರಾಜೀನಾಮೆ ಬಳಿಕ ಹೊಸ ರಾಜಕೀಯ ಚಳವಳಿ ಘೋಷಿಸಿದ ಅಣ್ಣಾಮಲೈ; ತಮಿಳುನಾಡಿನಲ್ಲಿ ಏಕಾಂಗಿ ಹೋರಾಟದ ನಿರ್ಧಾರ

Latest1 day ago

ರಾಹುಲ್ ಗಾಂಧಿ ಸಮ್ಮುಖದಲ್ಲಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ

Latest1 day ago

ಖಾತೆ ಹಂಚಿಕೆ ಬಗ್ಗೆ ಮುನಿಯಪ್ಪ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಜೀನಾಮೆ ಚಿಂತನೆ?

Latest1 day ago

ರಾಮಲಿಂಗಾ ರೆಡ್ಡಿ ರಾಜೀನಾಮೆ ಕಾಂಗ್ರೆಸ್ ಒಳಜಗಳದ ಪರಿಣಾಮ: ವಿಜಯೇಂದ್ರ ವಾಗ್ದಾಳಿ

Latest1 day ago

ಅಣ್ಣಾಮಲೈ ರಾಜೀನಾಮೆ ಸ್ವೀಕಾರ : ಹೊಸ ಪಕ್ಷ ಘೋಷಣೆ ಕುರಿತು ಇಂದು ಮಹತ್ವದ ಸುದ್ದಿಗೋಷ್ಠಿ

Latest1 day ago

ರಾಜ್ಯಸಭಾ ಚುನಾವಣೆಗೆ ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಲಿರುವ ಮಲ್ಲಿಕಾರ್ಜುನ ಖರ್ಗೆ

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌