Site icon Vistara News

ಇಂದು ಕರ್ನಾಟಕ- ಮಹಾರಾಷ್ಟ್ರ ರಾಜ್ಯಪಾಲರ ಸಭೆ

governors

ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿ ಭಾಗಗಳ ಸಮಸ್ಯೆ ಬಗ್ಗೆ ಇಂದು ಉಭಯ ರಾಜ್ಯಗಳ ರಾಜ್ಯಪಾಲರ ಮಹತ್ವದ ಸಭೆ ನಡೆಯಲಿದೆ.

ಇಂದು ಬೆಳಗ್ಗೆ 11ಕ್ಕೆ ಮಹಾರಾಷ್ಟ್ರದ ಕೊಲ್ಲಾಪುರದ ಛತ್ರಪತಿ ಶಿವಾಜಿ ವಿವಿ ಆವರಣದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಹಾಗೂ ಮಹಾರಾಷ್ಟ್ರ ರಾಜ್ಯಪಾಲ ಭಗತ್‌ ಸಿಂಗ್‌ ಕೋಶಿಯಾರಿ ಅವರ ಜಂಟಿ ಸಭೆ ನಡೆಯಲಿದೆ. ಸಭೆಯಲ್ಲಿ ಇತ್ತೀಚಿನ ಬೆಳವಣಿಗೆಗಳು ಸೇರಿದಂತೆ ಗಡಿಭಾಗದ ಹಲವು ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ. ಸಭೆಗೂ ಮುನ್ನ ಬೆಳಗ್ಗೆ 9ಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಕೊಲ್ಲಾಪುರ ಮಹಾಲಕ್ಷ್ಮಿದೇವಿ ದರ್ಶನ ಪಡೆಯಲಿದ್ದಾರೆ.

ಉಭಯ ರಾಜ್ಯಗಳ ರಾಜ್ಯಪಾಲರ ಸಭೆಯನ್ನು ಬೆಳಗಾವಿ ಕನ್ನಡಪರ ಸಂಘಟನೆಗಳ ಕ್ರಿಯಾಸಮಿತಿ ಸ್ವಾಗತಿಸಿದೆ. ಸಭೆ ಸೇರುವುದು ಒಳ್ಳೆಯ ಬೆಳವಣಿಗೆ. ಕಳೆದ 50 ವರ್ಷಗಳಿಂದ ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಹಿನ್ನೆಲೆ ಗಡಿಭಾಗದ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿಲ್ಲ. ಗಡಿಸಮಸ್ಯೆಯಿಂದ ಜನಸಾಮಾನ್ಯರು ಅಭಿವೃದ್ಧಿಯಿಂದ ವಂಚಿತರಾಗಬಾರದು. ಗಡಿಯಲ್ಲಿ ಮೂಲಸೌಕರ್ಯ ಸೇರಿ ವಿವಿಧ ಮಾಹಿತಿ ವಿನಿಮಯ ಆಗುತ್ತದೆ ಎಂದು ಭಾವಿಸಿದ್ದೇವೆ. ಉಭಯ ರಾಜ್ಯಗಳ ರಾಜ್ಯಪಾಲರ ಸಭೆಯಿಂದ ಒಳ್ಳೆಯ ಫಲಿತಾಂಶ ಬರಬೇಕು ಎಂದು ಕ್ರಿಯಾಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಹೇಳಿದ್ದಾರೆ.

ಇದನ್ನೂ ಓದಿ | ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ; ಸುಗ್ರೀವಾಜ್ಞೆ ಆದೇಶ ಪ್ರತಿಗೆ ರಾಜ್ಯಪಾಲರ ಅಂಕಿತ

Exit mobile version