ದೇವನಹಳ್ಳಿ: ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಇಂದು ಮುಂಜಾನೆ ಕಾವೇರಿ ನೀರಿನಲ್ಲಿ ರಾಜ್ಯಕ್ಕೆ ಆದ ಅನ್ಯಾಯ (cauvery protest) ವಿರೋಧಿಸಿ, ಕರ್ನಾಟಕ ಬಂದ್ (Karnataka Bandh) ಬೆಂಬಲಿಸಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (kempegowda international airport) ಮುತ್ತಿಗೆ ಹಾಕಲು ಯತ್ನಿಸಿದರು.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅರೈವಲ್ ಗೇಟ್ ಬಳಿ ಜಮಾಯಿಸಿದ ಕರವೇ ಕಾರ್ಯಕರ್ತರು ಕಾವೇರಿ ನೀರು ಬಿಡದಂತೆ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕನ್ನಡ ಬಾವುಟಗಳನ್ನು ಕೈಯಲ್ಲಿ ಹಿಡಿದು ಘೋಷಣೆ ಕೂಗಿದರು. ಕರವೇ ಕಾರ್ಯಕರ್ತರನ್ನು ವಶಕ್ಕೆ ಪಡೆಯಲು ಪೊಲೀಸರು ಹರಸಾಹಸ ಪಟ್ಟರು. 20ಕ್ಕೂ ಅಧಿಕ ಕರವೇ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು ಎಲ್ಲರನ್ನೂ ಕಾರುಗಳಲ್ಲಿ ತುಂಬಿಕೊಂಡು ಹೋದರು.
ಗಡಿಭಾಗದಲ್ಲಿ ತೀವ್ರ ಪ್ರತಿಭಟನೆ
ಆನೇಕಲ್: ಅತ್ತಿಬೆಲೆ ಗಡಿಯಲ್ಲಿ ಜಯಕರ್ನಾಟಕ ಸಂಘಟನೆಯಿಂದ ಪ್ರತಿಭಟನೆ ನಡೆಯಿತು. ನೂರಾರು ಮಂದಿ ಜನರಿಂದ ಪ್ರತಿಭಟನಾ ಅತ್ತಿಬೆಲೆ ಟೋಲ್‌ನಿಂದ ಗಡಿ ಗೋಪುರದ ವರೆಗೆ ನಡೆಯಿತು. ಬಂದ್ ಯಶಸ್ವಿಗೊಳಿಸಬೇಕು ಎಂದು ಘೋಷಣೆ ಕೂಗಿ ಮೆರವಣಿಗೆ ನಡೆಸಿದರು.
ಕನ್ನಡ ಜಾಗೃತಿ ವೇದಿಕೆಯಿಂದಲೂ ಪ್ರತಿಭಟನೆ ನಡೆದಿದ್ದು, ತಮಿಳುನಾಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕನ್ನಡ ಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ಮಂಜುನಾಥ್ ದೇವ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಅತ್ತಿಬೆಲೆ ಗಡಿಯಲ್ಲಿ ಹೈ ಆಲರ್ಟ್ ವಿಧಿಸಲಾಗಿದ್ದು, ಪೊಲೀಸರಿಂದ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಸುಮಾರು ನೂರಕ್ಕೂ ಅಧಿಕ ಮಂದಿ ಪೊಲೀಸರ ನಿಯೋಜನೆಯಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಂದೋಬಸ್ತ್ ಮಾಡಲಾಗಿದ್ದು, ಬೆಂಗಳೂರು ಗ್ರಾಮಾಂತರ ಎಸ್ಪಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.
ಇದನ್ನೂ ಓದಿ: Karnataka Bandh : ಕಾವೇರಿ ನ್ಯಾಯಕ್ಕಾಗಿ ನಾಳೆ ಸಂಪೂರ್ಣ ಬಂದ್; ಸ್ತಬ್ಧವಾಗಲಿದೆ ಕರುನಾಡು; ಏನಿದೆ? ಏನಿಲ್ಲ?