Site icon Vistara News

Karnataka Bandh LIVE Updates: ಸುಪ್ರೀಂ ಕೋರ್ಟ್, ಕಾವೇರಿ ಪ್ರಾಧಿಕಾರದ ಮುಂದೆ ರಿವಿಶನ್ ಪಿಟಿಷನ್ ಎಂದ ಸಿಎಂ

karnataka bandh

ಬೆಂಗಳೂರು: ಸೆಪ್ಟೆಂಬರ್ 29, ಶುಕ್ರವಾರ ಕರ್ನಾಟಕ ಬಂದ್ (Karnataka Bandh LIVE Updates) ಆಚರಿಸಲಾಗುತ್ತಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ವಿವಿಧ ಕನ್ನಡ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಇದರ ನಡುವೆಯೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ) (CWMA) ಶುಕ್ರವಾರ ಸಭೆಯಲ್ಲೂ ರಾಜ್ಯಕ್ಕೆ ಹಿನ್ನಡೆಯಾಗಿದೆ. ಅ. 15ರವರೆಗೆ ತಮಿಳುನಾಡಿಗೆ ಪ್ರತಿ ದಿನವೂ 3000 ಕ್ಯೂಸೆಕ್‌ ನೀರು ಬಿಡಬೇಕು ಎಂಬ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶವನ್ನು ಪ್ರಾಧಿಕಾರ ಎತ್ತಿ ಹಿಡಿದಿದೆ. ಈಗ ತಮಿಳುನಾಡಿಗೆ 3000 ಕ್ಯೂಸೆಕ್ ನೀರು ಬಿಡುಗಡೆ ಮಾಡಲು ಸಿಡಬ್ಲ್ಯುಎಂಎ ಆದೇಶಿಸಿರುವ ಕ್ರಮವನ್ನು ಪ್ರಶ್ನಿಸಿ ರಿವಿಶನ್ ಪಿಟಿಷನ್ ಸಲ್ಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಲ್ಲದೆ, ಸುಪ್ರೀಂ ಕೋರ್ಟ್‌ನಲ್ಲಿಯೂ ಅರ್ಜಿ ಸಲ್ಲಿಸುವುದಾಗಿ ಹೇಳಿದ್ದಾರೆ. ಕರ್ನಾಟಕ ಬಂದ್ ಕ್ಷಣ ಕ್ಷಣ ಸುದ್ದಿಗಳಿಗಾಗಿ ವಿಸ್ತಾರ ನ್ಯೂಸ್ ಜಾಲತಾಣಕ್ಕೆ ಭೇಟಿ ನೀಡಿ(Karnataka Live News).

Adarsha Anche

SC Reservation : ಸರ್ಕಾರಕ್ಕೆ ಮತ್ತೊಂದು ಮೀಸಲಾತಿ ಸಂಕಟ; ನಮ್ಮನ್ನೂ ಎಸ್‌ಸಿಗೆ ಸೇರಿಸಿ ಎಂದ ಕಟಿಕರು!

ಕಟುಕ, ಕಟಿಕ ಮುಂತಾದ ಹೆಸರುಗಳಿಂದ ಕರೆಯಲ್ಪಡುವ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡುವಂತೆ ನಿಯೋಗ ಒತ್ತಾಯಿಸಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ವಿಷಯವನ್ನು ಮಂಡಿಸಲಾಗುವುದು ಎಂದು ಹೇಳಿದ್ದಾರೆ.

SC Reservation : ಸರ್ಕಾರಕ್ಕೆ ಮತ್ತೊಂದು ಮೀಸಲಾತಿ ಸಂಕಟ; ನಮ್ಮನ್ನೂ ಎಸ್‌ಸಿಗೆ ಸೇರಿಸಿ ಎಂದ ಕಟಿಕರು!
Deepa S

ಓವರ್‌ಟೇಕ್‌ ಮಾಡುವಾಗ ಬಸ್‌ಗೆ ಸಿಲುಕಿ ಬೈಕ್‌ ಸವಾರ ಸಾವು

ಬಸ್‌ ಓವರ್‌ಟೇಕ್‌ ಮಾಡುವಾಗ ಕೆಳಗೆ ಬಿದ್ದ ಸವಾರನ ಮೇಲೆ ಬಸ್‌ ಹರಿದು (Road Accident) ಮೃತಪಟ್ಟಿರುವ ಘಟನೆ ಕಾರವಾರ ರಾಷ್ಟ್ರೀಯ ಹೆದ್ದಾರಿ 66ರ ಬಿಣಗಾ ಘಟ್ಟದಲ್ಲಿ ನಡೆದಿದೆ. ಜೀತೇಂದ್ರ ಗೌಡ ಮೃತ ದುರ್ದೈವಿ.

Road Accident : ಓವರ್‌ಟೇಕ್‌ ಮಾಡುವಾಗ ಬಸ್‌ಗೆ ಸಿಲುಕಿ ಬೈಕ್‌ ಸವಾರ ಸಾವು
Deepa S

ಗಣಪತಿ ವಿಸರ್ಜನೆ ಮಾಡುವಾಗ ನೀರಲ್ಲಿ ಮುಳುಗಿ ಬಾಲಕ ಸಾವು

ಚಿಕ್ಕಬಳ್ಳಾಪುರ : ಇಲ್ಲಿನ ಕಡಶೀಗೇನಹಳ್ಳಿ ಗ್ರಾಮದಲ್ಲಿರುವ ಶ್ರೀರಾಮಕುಂಟೆ ಹಳ್ಳದಲ್ಲಿ (Drowned) ಗಣಪತಿ ವಿಸರ್ಜನೆ (Ganesha chathurthi) ಮಾಡಲು ಹೋಗಿ ಬಾಲಕ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಕಡಶೀಗೇನಹಳ್ಳಿ ಗ್ರಾಮದ ನಿಶಾಲ್ ತೇಜ್ (12) ಮೃತ ಬಾಲಕ.

https://vistaranews.com/karnataka/chikkaballapura/boy-drowns-in-water-during-ganpati-visarjan/467099.html

Deepa S

ಆಟವಾಡುವಾಗ ಕಾಲು ಜಾರಿ ನಾಲೆಗೆ ಬಿದ್ದ ಬಾಲಕಿ ದಾರುಣ ಸಾವು

ಹಾಸನದ ಅರಕಲಗೂಡು ತಾಲ್ಲೂಕಿನ ಮಧುರನಹಳ್ಳಿ ಗ್ರಾಮದಲ್ಲಿ ಸ್ನೇಹಿತರೊಂದಿಗೆ ಆಟವಾಡುವಾಗ ಬಾಲಕಿ ಕಾಲು ಜಾರಿ ನಾಲೆ ಬಿದ್ದು (Drowned In Canal) ಮೃತಪಟ್ಟಿರುವ ಘಟನೆ ನಡೆದಿದೆ. ಸುಪ್ರೀತಾ (5) ಮೃತ ದುರ್ದೈವಿ.

https://vistaranews.com/karnataka/hassan/drowned-in-canal-girl-dies-after-slipping-and-falling-into-canal-while-playing/467077.html

Deepa S

ಆಕಸ್ಮಿಕ ಸ್ಫೋಟ; ಮನೆ ಗೋಡೆ ಕುಸಿದು 6 ಮಂದಿ ಗಂಭೀರ

ಆಕಸ್ಮಿಕ ಸ್ಫೋಟಗೊಂಡು ಮನೆ ಗೋಡೆ ಕುಸಿದು ಆರು ಮಂದಿ ಗಾಯಗೊಂಡಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ನಗರದ ಮಧುಗಿರಿ ರಸ್ತೆಯ ಪಾರ್ಕ್‌ನಲ್ಲಿ ಘಟನೆ ನಡೆದಿದೆ.

https://vistaranews.com/karnataka/tumakuru/tumkur-blast-accidental-explosion-six-injured-as-wall-of-house-collapses/466989.html

Exit mobile version