Site icon Vistara News

Karnataka Bandh LIVE Updates: ಸುಪ್ರೀಂ ಕೋರ್ಟ್, ಕಾವೇರಿ ಪ್ರಾಧಿಕಾರದ ಮುಂದೆ ರಿವಿಶನ್ ಪಿಟಿಷನ್ ಎಂದ ಸಿಎಂ

karnataka bandh

ಬೆಂಗಳೂರು: ಸೆಪ್ಟೆಂಬರ್ 29, ಶುಕ್ರವಾರ ಕರ್ನಾಟಕ ಬಂದ್ (Karnataka Bandh LIVE Updates) ಆಚರಿಸಲಾಗುತ್ತಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ವಿವಿಧ ಕನ್ನಡ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಇದರ ನಡುವೆಯೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ) (CWMA) ಶುಕ್ರವಾರ ಸಭೆಯಲ್ಲೂ ರಾಜ್ಯಕ್ಕೆ ಹಿನ್ನಡೆಯಾಗಿದೆ. ಅ. 15ರವರೆಗೆ ತಮಿಳುನಾಡಿಗೆ ಪ್ರತಿ ದಿನವೂ 3000 ಕ್ಯೂಸೆಕ್‌ ನೀರು ಬಿಡಬೇಕು ಎಂಬ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶವನ್ನು ಪ್ರಾಧಿಕಾರ ಎತ್ತಿ ಹಿಡಿದಿದೆ. ಈಗ ತಮಿಳುನಾಡಿಗೆ 3000 ಕ್ಯೂಸೆಕ್ ನೀರು ಬಿಡುಗಡೆ ಮಾಡಲು ಸಿಡಬ್ಲ್ಯುಎಂಎ ಆದೇಶಿಸಿರುವ ಕ್ರಮವನ್ನು ಪ್ರಶ್ನಿಸಿ ರಿವಿಶನ್ ಪಿಟಿಷನ್ ಸಲ್ಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಲ್ಲದೆ, ಸುಪ್ರೀಂ ಕೋರ್ಟ್‌ನಲ್ಲಿಯೂ ಅರ್ಜಿ ಸಲ್ಲಿಸುವುದಾಗಿ ಹೇಳಿದ್ದಾರೆ. ಕರ್ನಾಟಕ ಬಂದ್ ಕ್ಷಣ ಕ್ಷಣ ಸುದ್ದಿಗಳಿಗಾಗಿ ವಿಸ್ತಾರ ನ್ಯೂಸ್ ಜಾಲತಾಣಕ್ಕೆ ಭೇಟಿ ನೀಡಿ(Karnataka Live News).

B Somashekhar

ಕೋಲಾರದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ

ಕರ್ನಾಟಕ ಬಂದ್‌ ಹಿನ್ನೆಲೆಯಲ್ಲಿ ಕೋಲಾರದಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗಿದೆ. ಕನ್ನಡ ಸಂಘಟನೆಗಳ ಕಾರ್ಯಕರ್ತರು ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ಹಾಗಾಗಿ, ನಗರದಲ್ಲಿ ಜನಜೀವನ ಸಂಪೂರ್ಣವಾಗಿ ಸ್ತಬ್ಧಗೊಂಡಿದೆ.


B Somashekhar

ಬಸ್‌ ಸಂಚಾರ, ಹೋಟೆಲ್‌ ಸ್ಥಗಿತಗೊಳಿಸಲು ತೀರ್ಮಾನ

ರಾಜ್ಯ ಬಂದ್‌ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಸ್‌ ಸಂಚಾರ, ಹೋಟೆಲ್‌ ಸೇರಿ ಎಲ್ಲ ಸೇವೆಗಳನ್ನು ಸ್ಥಗಿತಗೊಳಿಸುವ ಮೂಲಕ ಬಂದ್‌ ಯಶಸ್ವಿಗೊಳಿಸಲು ಕನ್ನಡ ಸಂಘಟನೆಗಳು ತೀರ್ಮಾನಿಸಿವೆ. ಹಾಗಾಗಿ, ಕನ್ನಡ ಸಂಘಟನೆಗಳ ಕಾರ್ಯಕರ್ತರು ಮಲ್ಲೇಶ್ವರದ ಕುವೆಂಪು ಸರ್ಕಲ್‌ ಬಳಿ ಪ್ರತಿಭಟನೆಗೆ ಯೋಜನೆ ರೂಪಿಸಿವೆ.

B Somashekhar

ಬಂದ್‌ಗೆ ಚಿತ್ರರಂಗ ಬೆಂಬಲ, ಶಿವಣ್ಣ ನೇತೃತ್ವದಲ್ಲಿ ರ‍್ಯಾಲಿ

ಕರ್ನಾಟಕ ಬಂದ್‌ಗೆ ಕನ್ನಡ ಚಿತ್ರರಂಗ ಸಂಪೂರ್ಣ ಬೆಂಬಲ ಘೋಷಿಸಿದ್ದು, ನಟ ಶಿವರಾಜ್‌ ಕುಮಾರ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಫಿಲಂ ಚೇಂಬರ್‌ನಿಂದ ಟೌನ್‌ಹಾಲ್‌ವರೆಗೆ ಪ್ರತಿಭಟನಾ ರ‍್ಯಾಲಿ ನಡೆಯಲಿದ್ದು, ಶಿವಣ್ಣ ಇದರ ನೇತೃತ್ವ ವಹಿಸಿಕೊಳ್ಳಲಿದ್ದಾರೆ. ಬೆಳಗ್ಗೆ 11 ಗಂಟೆಯಿಂದ ರ‍್ಯಾಲಿ ನಡೆಯಲಿದ್ದು, ಕನ್ನಡ ಚಿತ್ರರಂಗದ ಹಲವು ನಟರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

Mallikarjun Tippar

ಸೆಪ್ಟೆಂಬರ್ 29 ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಈ ಕರ್ನಾಟಕ ಬಂದ್ ಇರಲಿದೆ. ಬೆಂಗಳೂರಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Mallikarjun Tippar

ವಿವಿಧ ಕನ್ನಡ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಈ ಬಂದ್‌ಗ ನಾಡಿನ ಅನೇಕ ಸಂಘ ಸಂಸ್ಥೆಗಳು ಬೆಂಬಲ ನೀಡಿವೆ.

Exit mobile version