Karnataka Election 2023: 24 ಶಾಸಕರಿಗೆ ಕೊಕ್‌, 75 ಹೊಸ ಮುಖಗಳಿಗೆ ಆದ್ಯತೆ; ಬಿಜೆಪಿ ಟಿಕೆಟ್‌ ಹಂಚಿಕೆ ಸೂತ್ರ ಇಲ್ಲಿದೆ - Vistara News

ಕರ್ನಾಟಕ

Karnataka Election 2023: 24 ಶಾಸಕರಿಗೆ ಕೊಕ್‌, 75 ಹೊಸ ಮುಖಗಳಿಗೆ ಆದ್ಯತೆ; ಬಿಜೆಪಿ ಟಿಕೆಟ್‌ ಹಂಚಿಕೆ ಸೂತ್ರ ಇಲ್ಲಿದೆ

Karnataka Election 2023: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಟಿಕೆಟ್‌ ಪಡೆದ 224 ಅಭ್ಯರ್ಥಿಗಳಲ್ಲಿ ಹೊಸ ಮುಖಗಳು ಎಷ್ಟು? ಯಾವ ಹಾಲಿ ಶಾಸಕರಿಗೆ ಕೊಕ್‌ ನೀಡಲಾಗಿದೆ? ಜಾತಿವಾರು ಲೆಕ್ಕಾಚಾರ ಹೇಗಿದೆ? ಇಲ್ಲಿದೆ ಸಂಕ್ಷಿಪ್ತ ಮಾಹಿತಿ.

VISTARANEWS.COM


on

Karnataka BJP Candidates Analysis
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ (Karnataka Election 2023) ಕಾವಿಗಿಂತ ಬಿಜೆಪಿ ಘೋಷಿಸಿದ ಅಭ್ಯರ್ಥಿಗಳು, ಹೊಸ ಮುಖಗಳಿಗೆ ಮಣೆ ಹಾಕಿರುವುದು, ಆಡಳಿತ ವಿರೋಧಿ ಅಲೆ ಇರುವ ಶಾಸಕರಿಗೆ ಟಿಕೆಟ್‌ ನೀಡದಿರುವುದು, ಹಿರಿಯರಿಗೆ ಮಣೆ ಹಾಕುವ ಜತೆಗೆ ಕಿರಿಯರಿಗೂ ಆದ್ಯತೆ ನೀಡಿರುವುದು, ಜಾತಿ ಲೆಕ್ಕಾಚಾರ, ಟಿಕೆಟ್‌ ವಂಚಿತರಿಂದ ಉಂಟಾದ ಭಿನ್ನಮತದ ಕುರಿತೇ ಜಾಸ್ತಿ ಚರ್ಚೆಯಾಗಿದೆ. ನಾಮಪತ್ರ ಸಲ್ಲಿಕೆಯಾಗಿ, ಅಭ್ಯರ್ಥಿಗಳು ಪ್ರಚಾರ ಆರಂಭಿಸಿದರೂ ಚರ್ಚೆ ಮುಂದುವರಿಯುತ್ತಿದೆ.

ಹಾಗಾದರೆ, ರಾಜ್ಯ ವಿಧಾನಸಭೆ ಚುನಾವಣೆಗಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಬಿಜೆಪಿ ಅನುಸರಿಸಿದ ಸೂತ್ರ ಹೇಗಿದೆ? ಜಾತಿ ಲೆಕ್ಕಾಚಾರ, ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಗೆಲುವು, ಹಿರಿತನ, ಪ್ರಭಾವ, ಜಾತಿಯ ಬೆಂಬಲವನ್ನೂ ಹೊರತುಪಡಿಸಿ ಬಿಜೆಪಿ ಹೇಗೆ ಕ್ರಾಂತಿಕಾರಕ ಬದಲಾವಣೆ ತಂದಿದೆ? ಯಾರಿಗೆ ಮಣೆ ಹಾಕಿದೆ? ಯಾರಿಗೆ ಕೊಕ್‌ ನೀಡಿದೆ ಎಂಬುದರ ಸಂಪೂರ್ಣ ಹಾಗೂ ಸಂಕ್ಷಿಪ್ತ ವಿಶ್ಲೇಷಣೆ ಇಲ್ಲಿದೆ.

24 ಶಾಸಕರಿಗೆ ಕೊಕ್‌

ಯಾವುದೇ ಚುನಾವಣೆಯಲ್ಲಿ ಹಾಲಿ ಶಾಸಕರು ಮತ್ತೆ ಗೆಲ್ಲುವ ಸಾಧ್ಯತೆ ಹೆಚ್ಚಿರುತ್ತದೆ. ಐದು ವರ್ಷದಲ್ಲಿ ಮಾಡಿದ ಅಭಿವೃದ್ಧಿ, ಹೊಂದಿರುವ ಪ್ರಭಾವ, ಜಾತಿ, ಸಮುದಾಯ, ಜನಬೆಂಬಲ ಸೇರಿ ಹಲವು ಕಾರಣಗಳಿಂದ ಅವರು ಪ್ರಭಾವಿಗಳಾಗಿರುತ್ತಾರೆ. ಹಾಗಾಗಿ, ಹಾಲಿ ಶಾಸಕರಿಗೆ ಮತ್ತೆ ಟಿಕೆಟ್‌ ನೀಡುವುದು ಯಾವುದೇ ರಾಜಕೀಯ ಪಕ್ಷದ ಲೆಕ್ಕಾಚಾರ. ಆದರೆ, ಈ ಲೆಕ್ಕಾಚಾರವನ್ನೇ ಬಿಜೆಪಿ ಬುಡಮೇಲು ಮಾಡಿದೆ.

ಇಷ್ಟೆಲ್ಲ ಶಾಸಕರಿಗೆ ಕೊಕ್

ಈ ಬಾರಿ 24 ಶಾಸಕರಿಗೆ ಬಿಜೆಪಿ ಟಿಕೆಟ್‌ ನಿರಾಕರಿಸಿದೆ. ಆಡಳಿತವಿರೋಧಿ ಅಲೆ, ವಯಸ್ಸು, ಭ್ರಷ್ಟಾಚಾರ ಆರೋಪ, ಅಭಿವೃದ್ಧಿಯ ನಿರ್ಲಕ್ಷ್ಯ, ಯುವಕರಿಗೆ ಟಿಕೆಟ್‌ ನೀಡುವ ತಂತ್ರದ ಭಾಗವಾಗಿ ಬಿಜೆಪಿಯು 24 ಶಾಸಕರಿಗೆ ಟಿಕೆಟ್‌ ನೀಡಿಲ್ಲ. ಕೆ.ಎಸ್.ಈಶ್ವರಪ್ಪ, ಜಗದೀಶ್‌ ಶೆಟ್ಟರ್‌, ರಾಮಪ್ಪ ಲಮಾಣಿ, ಗೂಳಿಹಟ್ಟಿ ಶೇಖರ್, ಆನಂದ್‌ ಸಿಂಗ್‌ ಸೇರಿ 24 ಶಾಸಕರಿಗೆ ಟಿಕೆಟ್‌ ನೀಡಿಲ್ಲ. ಬಿ.ಎಸ್‌.ಯಡಿಯೂರಪ್ಪ ಅವರು ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿಯಲು ಸ್ವಯಂ ತೀರ್ಮಾನ ತೆಗೆದುಕೊಂಡಿದ್ದಾರೆ. ಉಳಿದವರಿಗೆ ಬಿಜೆಪಿ ಕೊಕ್‌ ನೀಡಿದೆ.

ಬಿಜೆಪಿ ಟಿಕೆಟ್‌ ಹಂಚಿಕೆಯ ಸಂಪೂರ್ಣ ವಿಶ್ಲೇಷಣೆ ಹೀಗಿದೆ

ಜಾತಿವಾರು ಲೆಕ್ಕಾಚಾರ ಹೀಗಿದೆ

224 ಕ್ಷೇತ್ರಗಳಲ್ಲಿ ಬಿಜೆಪಿಯು 12 ಮಹಿಳೆಯರಿಗೆ ಹಾಗೂ 212 ಕ್ಷೇತ್ರಗಳಲ್ಲಿ ಪುರುಷರಿಗೆ ಟಿಕೆಟ್‌ ನೀಡಿದೆ. ಇನ್ನು ಜಾತಿವಾರು ಲೆಕ್ಕಾಚಾರದ ಪ್ರಕಾರ, 132 ಸಾಮಾನ್ಯ ಕೆಟಗರಿಯ ಅಭ್ಯರ್ಥಿಗಳು, ಒಬ್ಬ ಅಲ್ಪಸಂಖ್ಯಾತರು (ಜೈನ್)‌, 36 ಒಬಿಸಿ, 37 ಎಸ್‌ಸಿ ಹಾಗೂ 18 ಎಸ್‌ಟಿ ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಲಾಗಿದೆ. ಹಾಗೆಯೇ, ಕಳೆದ ಬಾರಿ ಸೋತ 27 ಅಭ್ಯರ್ಥಿಗಳು, ಮೊದಲ ಬಾರಿ ಶಾಸಕರಾದ 40, ಎರಡು ಬಾರಿ ಆಯ್ಕೆಯಾದ 25, ಮೂರು ಬಾರಿ ಆಯ್ಕೆಯಾದ 33, ಇದೇ ಮೊದಲ ಬಾರಿಗೆ ಸ್ಪರ್ಧಿಸುತ್ತಿರುವ 75 ಹಾಗೂ ಹಲವು ಬಾರಿ ಸ್ಪರ್ಧಿಸಿದ 24 ಜನರಿಗೆ ಬಿಜೆಪಿ ಟಿಕೆಟ್‌ ನೀಡಿದೆ.

ಇದನ್ನೂ ಓದಿ: Karnataka Election 2023: ಚುನಾವಣೆಗೆ ಮುನ್ನ ಶಿವಮೊಗ್ಗದಲ್ಲಿ ನಡೆಯಲಿದೆ ಪ್ರಧಾನಿ ನರೇಂದ್ರ ಮೋದಿ ರ‍್ಯಾಲಿ

ಶೈಕ್ಷಣಿಕ ಹಿನ್ನೆಲೆ ಹೇಗಿದೆ?

ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ಶೈಕ್ಷಣಿಕ ಹಿನ್ನೆಲೆಯನ್ನೂ ಗಮನಿಸಲಾಗಿದೆ. ಹಾಗಾಗಿಯೇ, ಪದವಿ ಪಡೆದ 134, ಡಾಕ್ಟರೇಟ್‌ ಪಡೆದ ಒಬ್ಬರು, ಸ್ನಾತಕೋತ್ತರ ಪದವಿ ಪಡೆದ 37, ದ್ವಿತೀಯ ಪಿಯುಸಿ ಪಾಸಾದ 26, ಎಸ್‌ಎಸ್‌ಎಲ್‌ಸಿ ತೇರ್ಗಡೆಯಾದ 20, ಎಂಟನೇ ಕ್ಲಾಸ್‌ ಪಾಸಾದ ನಾಲ್ವರು ಹಾಗೂ 7ನೇ ತರಗತಿ ಉತ್ತೀರ್ಣರಾದ ಇಬ್ಬರಿಗೆ ಬಿಜೆಪಿ ಟಿಕೆಟ್‌ ನೀಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿಕ್ಷಣ

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯೂ ತಡವಾಗಿಯಾದರೂ ಗುರುವಾರ ಪ್ರಕಟಗೊಂಡಿದೆ. ಪರೀಕ್ಷೆ ಫೇಲಾದರೂ, ಕಡಿಮೆ ಅಂಕ ಬಂದರೂ ವಿದ್ಯಾರ್ಥಿಗಳು ಬೇಸರವಾಗುವ ಅವಶ್ಯಕತೆ ಇಲ್ಲ. ಯಾಕೆಂದರೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಮತ್ತೆರಡು ಬಾರಿ ಅವಕಾಶವನ್ನು ಪರೀಕ್ಷಾ ಮಂಡಳಿ ಕಲ್ಪಿಸಿಕೊಟ್ಟಿದೆ.

VISTARANEWS.COM


on

By

Sslc exam Result 2024
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮೇ 9ರಂದು 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಂಡಿದೆ. ವಿದ್ಯಾರ್ಥಿಗಳು ಈ ಬಾರಿಯ ಪರೀಕ್ಷೆಯಲ್ಲಿ ಫೇಲ್‌ ಆಗಿಬಿಟ್ಟವಿ, ಕಡಿಮೆ ಅಂಕ ಬಂತಲ್ಲ ಎಂದು ಬೇಜಾರಾಗುವ ಅವಶ್ಯಕತೆ ಇಲ್ಲ. ಯಾಕೆಂದರೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವಿದ್ಯಾರ್ಥಿಗಳಿಗೆ (SSLC Result 2024) ಗುಡ್‌ನ್ಯೂಸ್‌ ನೀಡಿದೆ.

ಅಂದಹಾಗೇ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಈಗಾಗಲೇ ಎಸ್‌ಎಸ್‌ಎಲ್‌ಸಿ 1, 2, 3ರ ಹೊಸ ಪರೀಕ್ಷಾ ಮಾದರಿಯನ್ನು ಪರಿಚಯಿಸಿದೆ. ಇದರ ಕ್ರಮವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ 1ರಲ್ಲಿ ಅನುತೀರ್ಣರಾಗಿದ್ದರೆ ಅಥವಾ ಕಡಿಮೆ ಅಂಕ ಪಡೆದು ಜಸ್ಟ್‌ ಪಾಸ್‌ ಆಗಿದ್ದರೆ ಅಂತಹ ವಿದ್ಯಾರ್ಥಿಗಳು ಪರೀಕ್ಷೆ 2ರಲ್ಲಿ ಅಂಕವನ್ನು ಸರಿದೂಗಿಸಿಕೊಳ್ಳಬಹುದಾಗಿದೆ. ಕೇವಲ ಫೇಲ್‌ ಆದವರು, ಕಡಿಮೆ ಅಂಕ ಬಂದವರು ಮಾತ್ರವಲ್ಲ ಹೆಚ್ಚು ಅಂಕ ಗಳಿಸಲು ಯಾವುದೇ ವಿದ್ಯಾರ್ಥಿಯಾದರು ಪರೀಕ್ಷೆ 2 ಹಾಗೂ 3ರಲ್ಲಿ ಹಾಜರಾಗಬಹುದು. ಇದಕ್ಕಾಗಿ ಶಿಕ್ಷಣ ಇಲಾಖೆಯಿಂದಲೇ ಮುಂದಿನ 1 ತಿಂಗಳಲ್ಲಿ ಪರಿಹಾರ ಬೋಧನೆಯನ್ನು ಆಯೋಜಿಸಲಾಗುತ್ತದೆ. ಇದರಿಂದಾಗಿ ಪರೀಕ್ಷೆ 2-3ಕ್ಕೆ ಉತ್ತಮವಾಗಿ ಸಿದ್ಧರಾಗಲು ಸಹಾಯವಾಗುತ್ತದೆ.

ಎಸ್‌ಎಸ್‌ಎಲ್‌ಸಿಯ ಮೊದಲನೇ ಪರೀಕ್ಷೆಯಲ್ಲಿ ಯಾವುದೇ ವಿದ್ಯಾರ್ಥಿಯು ಫೇಲ್‌ ಆಗಿದ್ದರೆ, ಆ ವಿದ್ಯಾರ್ಥಿಯ ಫಲಿತಾಂಶವನ್ನು NC ಎಂದು ತೋರಿಸಲಾಗುತ್ತದೆ. NC ಅಂದರೆ Not Completed ಎಂದು ಪ್ರಕಟಿಸಲಾಗುತ್ತದೆ. ಈ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ 2-3ರಲ್ಲಿ ಬರೆದ ಪರೀಕ್ಷೆಗಳ ಪೈಕಿ ಗಳಿಸಿದ ಗರಿಷ್ಠ ಅಂಕಗಳ ಆಧಾರದ ಮೇಲೆ ಅಂತಿಮ ಫಲತಾಂಶವನ್ನು ಪ್ರಕಟಿಸಲಾಗುತ್ತದೆ. ಈ ಮೂಲಕ ಕಡಿಮೆ ಬಂದ ಫಲಿತಾಂಶವನ್ನು ಉತ್ತಮಗೊಳಿಸಿ ವಿದ್ಯಾರ್ಥಿಗಳಿಗೆ ಎರಡೆರಡು ಬಾರಿ ಅವಕಾಶ ಕೊಟ್ಟು ಅವರ ಏಳಿಗೆಗೆ ಇದು ಸಹಕಾರಿ ಆಗಲಿದೆ.

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

ಎಸ್‌ಎಸ್‌ಎಲ್‌ಸಿ ರಿಸಲ್ಟ್‌; ಫಸ್ಟ್‌ ಬೆಂಚ್‌ಗೆ ಬಂದ ಉಡುಪಿ; ಲಾಸ್ಟ್‌ ಬೆಂಚ್‌ನಲ್ಲೇ ಉಳಿದ ಯಾದಗಿರಿ!

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Exam Result 2024) ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. 2022-23ರಲ್ಲಿ 83.89% ಇದ್ದರೆ, ಈ ಬಾರಿ 73.40% ಮಂದಿ ಪಾಸ್, ಶೇಕಡಾ 10.49% ರಷ್ಟು ಫಲಿತಾಂಶ ಕುಸಿತವಾಗಿದೆ. ಕಳೆದ ವರ್ಷ ಮೊದಲ ಸ್ಥಾನವನ್ನು ಚಿತ್ರದುರ್ಗ, ಎರಡನೇ ಸ್ಥಾನವನ್ನು ಮಂಡ್ಯ , ಮೂರನೇ ಸ್ಥಾನವನ್ನು ಹಾಸನ ಹಾಗೂ ಕೊನೆ ಸ್ಥಾನವನ್ನು ಯಾದಗಿರಿ ಪಡೆದಿತ್ತು. ಈ ವರ್ಷವೂ ಫಲಿತಾಂಶದಲ್ಲಿ ಯಾದಗಿರಿಯು ಕೊನೆ ಸ್ಥಾನವನ್ನೇ ಗಳಿಸಿದ್ದು, ಶೇಕಡಾವಾರು 50.59ರಷ್ಟು ಫಲಿತಾಂಶ ಬಂದಿದೆ. ಇನ್ನೂ ಉಡುಪಿ ಜಿಲ್ಲೆ ಕಳೆದ ಬಾರಿ 14ಕ್ಕೆ ಸ್ಥಾನದಲ್ಲಿತ್ತು, ಆದರೆ ಈ ಬಾರಿ ಶೇ.94ರಷ್ಟು ಫಲಿತಾಂಶದೊಂದಿಗೆ ಮೊದಲ ಸ್ಥಾನವನ್ನು ಗಳಿಸಿದೆ. ದಕ್ಷಿಣ ಕನ್ನಡ ಎರಡನೇ ಹಾಗೂ ಶಿವಮೊಗ್ಗ ಮೂರನೇ ಸ್ಥಾನ ಗಳಿಸಿದೆ.

ಜಿಲ್ಲೆಗಳ ಶೇಕಡಾವಾರು ಫಲಿತಾಂಶ ಇಂತಿದೆ

1) ಉಡುಪಿ- 94%
2) ದಕ್ಷಿಣ ಕನ್ನಡ-92.12%
3) ಶಿವಮೊಗ್ಗ -88.67%
4) ಕೊಡಗು- 88.67%
5) ಉತ್ತರ ಕನ್ನಡ-86.54%
6) ಹಾಸನ-86.28%
7) ಮೈಸೂರು-85.5%
8) ಶಿರಸಿ-84.64%
9)ಬೆಂಗಳೂರು ಗ್ರಾಮಾಂತರ-83.67%
10) ಚಿಕ್ಕಮಗಳೂರು-83.39%
11) ವಿಜಯಪುರ- 79.82%
12) ಬೆಂಗಳೂರು ದಕ್ಷಿಣ-79%
13) ಬಾಗಲಕೋಟೆ-77.92%
14)ಬೆಂಗಳೂರು ಉತ್ತರ- 77.09%
15) ಹಾವೇರಿ-75.85%
16) ತುಮಕೂರು-75.16%
17)ಗದಗ- 74.76%
18)ಚಿಕ್ಕಬಳ್ಳಾಪುರ- 73.61%
19)ಮಂಡ್ಯ-73.59%
20) ಕೋಲಾರ-73.57%
21)ಚಿತ್ರದುರ್ಗ-72.85%
22) ಧಾರವಾಡ-72.67%
23) ದಾವಣಗೆರೆ- 72.48%
24) ಚಾಮರಾಜನಗರ-71.59%
25) ಚಿಕ್ಕೋಡಿ-69.82%
26) ರಾಮನಗರ-69.53%
27) ವಿಜಯನಗರ-65.61%
28) ಬಳ್ಳಾರಿ-64.99%
29) ಬೆಳಗಾವಿ-64.93%
30) ಮಧುಗಿರಿ-62.44%
31) ರಾಯಚೂರು- 61.2%
32) ಕೊಪ್ಪಳ- 61.16%
33) ಬೀದರ್‌- 57.52%
34) ಕಲಬುರಗಿ- 53.04%
35) ಯಾದಗಿರಿ- 50.59%

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

2023ರ ಜಿಲ್ಲಾವಾರು ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೀಗಿತ್ತು

ಚಿತ್ರದುರ್ಗ -96.8%.
ಮಂಡ್ಯ-96.74%.
ಹಾಸನ-96.68%.
ಬೆಂಗಳೂರು ಗ್ರಾಮಾಂತರ-96.48%.
ಚಿಕ್ಕಬಳ್ಳಾಪುರ-96.15%.
ಕೋಲಾರ-94.6%.
ಚಾಮರಾಜನಗರ -94.32%.
ಮಧುಗಿರಿ- 93.23%.
ಕೊಡಗು-93.19%.
ವಿಜಯನಗರ- 91.41%.
ವಿಜಯಪುರ- 91.23%.
ಚಿಕ್ಕೋಡಿ – 91.07%.
ಉತ್ತರಕನ್ನಡ – 90.53%.
ದಾವಣಗೆರೆ- 90.43%.
ಕೊಪ್ಪಳ- 90.27%.
ಮೈಸೂರು ಜಿಲ್ಲೆ- 89.75%.
ಚಿಕ್ಕಮಗಳೂರು-89.69%.
ಉಡುಪಿ- 89.49%.
ದಕ್ಷಿಣ ಕನ್ನಡ- 89.47%.
ತುಮಕೂರು- 89.43%.
ರಾಮನಗರ- 89.42%.
ಹಾವೇರಿ – 89.11%.
ಶಿರಸಿ- 87.39%.
ಧಾರವಾಡ-86.55%.
ಗದಗ-86.51%.
ಬೆಳಗಾವಿ-85.85%.
ಬಾಗಲಕೋಟೆ-85.14%.
ಕಲಬುರಗಿ-84.51%.
ಶಿವಮೊಗ್ಗ-84.04%.
ರಾಯಚೂರು- 84.02%.
ಬಳ್ಳಾರಿ- 81.54%.
ಬೆಂಗಳೂರು ಉತ್ತರ – 80.93%.
ಬೆಂಗಳೂರು ದಕ್ಷಿಣ – 78.95%.
ಬೀದರ್ – 78.73%.
ಯಾದಗಿರಿ- 75.49%.

ಮಾಧ್ಯಮವಾರು ಫಲಿತಾಂಶ

ಕನ್ನಡ – 69.34%
ಆಂಗ್ಲ – 88.29%
ಉರ್ದು – 63.49%
ಮರಾಠಿ – 69.32%
ತೆಲುಗು – 75.59%

ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ವಿವರ

625ಕ್ಕೆ 625 ಅಂಕವನ್ನು ಒಬ್ಬ ವಿದ್ಯಾರ್ಥಿ ಮಾತ್ರ ಪಡೆದುಕೊಂಡಿದ್ದಾರೆ. 624 ಅಂಕಗಳನ್ನು 7 ಮಂದಿ, 623 ಅಂಕಗಳನ್ನು 14 ಮಂದಿ ಹಾಗೂ 622 ಅಂಕಗಳನ್ನು 21 ಮಂದಿ, 621 ಅಂಕಗಳನ್ನು 44 ಮಂದಿ, 620 ಅಂಕಗಳನ್ನು 64 ಮಂದಿ ಅಂಕಗಳನ್ನು ಪಡೆದಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024: ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ ಸರ್ಕಸ್ ಮಾಡಿದ್ದು, ಶೇಕಡಾ 20 ಗ್ರೇಸ್ ಮಾರ್ಕ್ಸ್‌ ಕೊಟ್ಟರೂ ಕಡಿಮೆ ಫಲಿತಾಂಶ ದಾಖಲಾಗಿದೆ. ಈ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಗಮನಿಸಿದಾಗ ಅಪಾರ ಸಂಖ್ಯೆಯಲ್ಲಿ ಅಂದರೆ ಕಳೆದ ಬಾರಿಗಿಂತ ಶೇಕಡಾ 30ರಷ್ಟು ಕುಸಿತವನ್ನು ಕಾಣಲಾಗಿತ್ತು. ಇದರಿಂದ ಚಿಂತೆಗೊಳಗಾದ ಶಿಕ್ಷಣ ಇಲಾಖೆಯು ಕೊನೆಗೆ ಪಾಸಿಂಗ್‌ ಮಾರ್ಕ್ಸ್‌ ಅನ್ನೇ ಕಡಿಮೆ ಮಾಡಿದೆ. 35 ಅಂಕಗಳ ಬದಲಿಗೆ 25 ಅಂಕವನ್ನು ಪಡೆದ ವಿದ್ಯಾರ್ಥಿಯೂ ಪಾಸ್‌ ಎಂದು ಮಾಡಲಾಗಿದೆ.

VISTARANEWS.COM


on

SSLC Result 2024 secret behind 20 percent grace marks
Koo

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Result 2024) ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಆದರೆ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. 2022-23ರಲ್ಲಿ 83.89% ಇದ್ದರೆ, ಈ ಬಾರಿ 73.40% ಮಂದಿ ಪಾಸ್, ಶೇಕಡಾ 10.49 ರಷ್ಟು ಫಲಿತಾಂಶ ಕುಸಿತವಾಗಿದೆ. ಇದು ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿತ್ತು. ಈ ಹಿನ್ನೆಲೆಯಲ್ಲಿ ಬರೋಬ್ಬರಿ 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌ ಅನ್ನು ಕೊಟ್ಟು ಒಟ್ಟಾರೆ 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳನ್ನು ಪಾಸ್‌ ಮಾಡಲಾಗಿದೆ.

ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ ಸರ್ಕಸ್ ಮಾಡಿದ್ದು, ಶೇಕಡಾ 20 ಗ್ರೇಸ್ ಮಾರ್ಕ್ಸ್‌ ಕೊಟ್ಟರೂ ಕಡಿಮೆ ಫಲಿತಾಂಶ ದಾಖಲಾಗಿದೆ. ಈ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಗಮನಿಸಿದಾಗ ಅಪಾರ ಸಂಖ್ಯೆಯಲ್ಲಿ ಅಂದರೆ ಕಳೆದ ಬಾರಿಗಿಂತ ಶೇಕಡಾ 30ರಷ್ಟು ಕುಸಿತವನ್ನು ಕಾಣಲಾಗಿತ್ತು. ಇದರಿಂದ ಚಿಂತೆಗೊಳಗಾದ ಶಿಕ್ಷಣ ಇಲಾಖೆಯು ಕೊನೆಗೆ ಪಾಸಿಂಗ್‌ ಮಾರ್ಕ್ಸ್‌ ಅನ್ನೇ ಕಡಿಮೆ ಮಾಡಿದೆ.

ಅಂದರೆ ಈ ವರೆಗೆ ಇದ್ದ ಪಾಸಿಂಗ್‌ ಮಾರ್ಕ್ಸ್‌ ಶೇಕಡಾ 35 ಅನ್ನು ಶೇಕಡಾ 25ಕ್ಕೆ ಇಳಿಸಿದೆ. ಅಂದರೆ 35 ಅಂಕಗಳ ಬದಲಿಗೆ 25 ಅಂಕವನ್ನು ಪಡೆದ ವಿದ್ಯಾರ್ಥಿಯೂ ಪಾಸ್‌ ಎಂದು ಮಾಡಲಾಗಿದೆ. ಅಲ್ಲದೆ, ಕೃಪಾಂಕದ ಪ್ರಮಾಣವನ್ನು ಶೇ. 10 ರಿಂದ ಶೇ. 20ಕ್ಕೆ ಹೆಚ್ಚಿಸಲಾಗಿದೆ. ಈ ಎರಡೂ ಕ್ರಮದಿಂದಾಗಿ ಒಟ್ಟಾರೆ 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ಈ ಕ್ರಮದ ನಂತರ ಒಟ್ಟಾರೆ ಫಲಿತಾಂಶವು ಶೇಕಡಾ 73.40ರಷ್ಟಾಗಿದೆ. ಇಲ್ಲದಿದ್ದರೆ ಭಾರಿ ಪ್ರಮಾಣದಲ್ಲಿ ಮಕ್ಕಳು ಅನುತ್ತೀರ್ಣರಾಗುತ್ತಿದ್ದರು.

ವೆಬ್‌ ಕಾಸ್ಟಿಂಗ್‌ನಲ್ಲಿ ನಡೆದ ಪರೀಕ್ಷೆ

ಪ್ರಪ್ರಥಮ ಬಾರಿಗೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳ ಮೂಲಕ ವೆಬ್ ಕಾಸ್ಟಿಂಗ್ ಮಾಡುವ ಹೊಸ ಪದ್ಧತಿಯನ್ನು ಪರಿಚಯಿಸಲಾಗಿದೆ. ಪರೀಕ್ಷಾ ಕೊಠಡಿಗಳ ದೃಶ್ಯಾವಳಿಗಳನ್ನು ಮೇಲ್ವಿಚಾರಣೆ ಮಾಡಲು ಎಲ್ಲ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿತ್ತು. ಆದರೆ, ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿದೆ. ಮೊದಲ ಬಾರಿಗೆ ವೆಬ್‌ ಕಾಸ್ಟಿಂಗ್ ವಿಧಾನವನ್ನು ಪರಿಚಯಿಸಿದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಡಿಮೆಯಾಗಿರುವ ಫಲಿತಾಂಶವನ್ನು ಉತ್ತಮ ಪಡಿಸಲು ಸರ್ಕಾರ ನಿರ್ಧರಿಸಿದೆ.

ಈ ಹಿನ್ನೆಲೆಯಲ್ಲಿ, ಒಂದು ಬಾರಿಯ ಕ್ರಮವಾಗಿ, 2024ರ ಎಲ್ಲ 3 ಎಸ್ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಎಲ್ಲ ವಿಷಯಗಳಲ್ಲಿ ನೀಡುವ ಕೃಪಾಂಕಗಳನ್ನು ಆಕರ್ಷಿಸಲು ಪಡೆಯಬೇಕಾದ ಅರ್ಹ ಅಂಕಗಳನ್ನು ಶೇ. 35 ರಿಂದ ಶೇ. 25ಕ್ಕೆ ಇಳಿಸಲಾಗಿದೆ ಮತ್ತು ಕೃಪಾಂಕದ ಪ್ರಮಾಣವನ್ನು ಶೇ. 10 ರಿಂದ ಶೇ. 20ಕ್ಕೆ ಹೆಚ್ಚಿಸಲಾಗಿದೆ. ಈ ಕ್ರಮದ ನಂತರ ಒಟ್ಟಾರೆ ಫಲಿತಾಂಶವು, ಮೇಲಿನ ಕೋಷ್ಟಕದಲ್ಲಿನಂತೆ, 73.40% ಆಗಿದೆ. ಮುಂಬರುವ ವರ್ಷಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ನೂತನ ವ್ಯವಸ್ಥೆಗೆ ಉತ್ತಮವಾಗಿ ಹೊಂದಿಕೊಳ್ಳುವುದರಿಂದ ಫಲಿತಾಂಶ ವೃದ್ಧಿಯ ಅಗತ್ಯವಿರುವುದಿಲ್ಲ ಎಂದು ಶಿಕ್ಷಣ ಇಲಾಖೆ ಅಭಿಪ್ರಾಯಪಟ್ಟಿದೆ.

ಫಸ್ಟ್‌ ಬೆಂಚ್‌ಗೆ ಬಂದ ಉಡುಪಿ; ಲಾಸ್ಟ್‌ ಬೆಂಚ್‌ನಲ್ಲೇ ಉಳಿದ ಯಾದಗಿರಿ!

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. 2022-23ರಲ್ಲಿ 83.89% ಇದ್ದರೆ, ಈ ಬಾರಿ 73.40% ಮಂದಿ ಪಾಸ್, ಶೇಕಡಾ 10.49% ರಷ್ಟು ಫಲಿತಾಂಶ ಕುಸಿತವಾಗಿದೆ. ಕಳೆದ ವರ್ಷ ಮೊದಲ ಸ್ಥಾನವನ್ನು ಚಿತ್ರದುರ್ಗ, ಎರಡನೇ ಸ್ಥಾನವನ್ನು ಮಂಡ್ಯ , ಮೂರನೇ ಸ್ಥಾನವನ್ನು ಹಾಸನ ಹಾಗೂ ಕೊನೆ ಸ್ಥಾನವನ್ನು ಯಾದಗಿರಿ ಪಡೆದಿತ್ತು. ಈ ವರ್ಷವೂ ಫಲಿತಾಂಶದಲ್ಲಿ ಯಾದಗಿರಿಯು ಕೊನೆ ಸ್ಥಾನವನ್ನೇ ಗಳಿಸಿದ್ದು, ಶೇಕಡಾವಾರು 50.59ರಷ್ಟು ಫಲಿತಾಂಶ ಬಂದಿದೆ. ಇನ್ನೂ ಉಡುಪಿ ಜಿಲ್ಲೆ ಕಳೆದ ಬಾರಿ 14ಕ್ಕೆ ಸ್ಥಾನದಲ್ಲಿತ್ತು, ಆದರೆ, ಈ ಬಾರಿ ಶೇ.94ರಷ್ಟು ಫಲಿತಾಂಶದೊಂದಿಗೆ ಮೊದಲ ಸ್ಥಾನವನ್ನು ಗಳಿಸಿದೆ. ದಕ್ಷಿಣ ಕನ್ನಡ ಎರಡನೇ ಹಾಗೂ ಶಿವಮೊಗ್ಗ ಮೂರನೇ ಸ್ಥಾನ ಗಳಿಸಿದೆ.

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

ಜಿಲ್ಲೆಗಳ ಶೇಕಡಾವಾರು ಫಲಿತಾಂಶ ಇಂತಿದೆ

1) ಉಡುಪಿ- 94%
2) ದಕ್ಷಿಣ ಕನ್ನಡ-92.12%
3) ಶಿವಮೊಗ್ಗ -88.67%
4) ಕೊಡಗು- 88.67%
5) ಉತ್ತರ ಕನ್ನಡ-86.54%
6) ಹಾಸನ-86.28%
7) ಮೈಸೂರು-85.5%
8) ಶಿರಸಿ-84.64%
9)ಬೆಂಗಳೂರು ಗ್ರಾಮಾಂತರ-83.67%
10) ಚಿಕ್ಕಮಗಳೂರು-83.39%
11) ವಿಜಯಪುರ- 79.82%
12) ಬೆಂಗಳೂರು ದಕ್ಷಿಣ-79%
13) ಬಾಗಲಕೋಟೆ-77.92%
14)ಬೆಂಗಳೂರು ಉತ್ತರ- 77.09%
15) ಹಾವೇರಿ-75.85%
16) ತುಮಕೂರು-75.16%
17)ಗದಗ- 74.76%
18)ಚಿಕ್ಕಬಳ್ಳಾಪುರ- 73.61%
19)ಮಂಡ್ಯ-73.59%
20) ಕೋಲಾರ-73.57%
21)ಚಿತ್ರದುರ್ಗ-72.85%
22) ಧಾರವಾಡ-72.67%
23) ದಾವಣಗೆರೆ- 72.48%
24) ಚಾಮರಾಜನಗರ-71.59%
25) ಚಿಕ್ಕೋಡಿ-69.82%
26) ರಾಮನಗರ-69.53%
27) ವಿಜಯನಗರ-65.61%
28) ಬಳ್ಳಾರಿ-64.99%
29) ಬೆಳಗಾವಿ-64.93%
30) ಮಧುಗಿರಿ-62.44%
31) ರಾಯಚೂರು- 61.2%
32) ಕೊಪ್ಪಳ- 61.16%
33) ಬೀದರ್‌- 57.52%
34) ಕಲಬುರಗಿ- 53.04%
35) ಯಾದಗಿರಿ- 50.59%

ಮಾಧ್ಯಮವಾರು ಫಲಿತಾಂಶ

ಕನ್ನಡ – 69.34%
ಆಂಗ್ಲ – 88.29%
ಉರ್ದು – 63.49%
ಮರಾಠಿ – 69.32%
ತೆಲುಗು – 75.59%

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ವಿವರ

625ಕ್ಕೆ 625 ಅಂಕವನ್ನು ಒಬ್ಬ ವಿದ್ಯಾರ್ಥಿ ಮಾತ್ರ ಪಡೆದುಕೊಂಡಿದ್ದಾರೆ. 624 ಅಂಕಗಳನ್ನು 7 ಮಂದಿ, 623 ಅಂಕಗಳನ್ನು 14 ಮಂದಿ ಹಾಗೂ 622 ಅಂಕಗಳನ್ನು 21 ಮಂದಿ, 621 ಅಂಕಗಳನ್ನು 44 ಮಂದಿ, 620 ಅಂಕಗಳನ್ನು 64 ಮಂದಿ ಅಂಕಗಳನ್ನು ಪಡೆದಿದ್ದಾರೆ.

Continue Reading

ಚಿನ್ನದ ದರ

Gold Rate Today: ಚಿನ್ನದ ಮಾರುಕಟ್ಟೆ ಇಳಿಮುಖ; 22 ಮತ್ತು 24 ಕ್ಯಾರಟ್‌ ಬಂಗಾರದ ದರಗಳಲ್ಲಿ ಇಳಿಕೆ

Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಕಳೆದ ಎರಡು ದಿನಗಳಿಂದ ಇಳಿಯುತ್ತಿದೆ. 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಬೆಲೆ ಇಂದು ತುಸು ಇಳಿಕೆಯಾಗಿದೆ. ಬೆಲೆಗಳೆಷ್ಟಿವೆ ಗಮನಿಸಿ.

VISTARANEWS.COM


on

gold rate today sreeleela
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹10 ಹಾಗೂ ₹11 ಇಳಿಕೆಯಾಗಿವೆ. ನಿನ್ನೆ ಕೂಡ ಇದೇ ಪ್ರಮಾಣದಲ್ಲಿ ದರ (Gold Price today) ಇಳಿಕೆಯಾಗಿತ್ತು. ವಾರಾಂತ್ಯದಲ್ಲಿ ಚಿನ್ನದ ಬೆಲೆಗಳು ಏರಿಕೆ ಕಂಡಿದ್ದವು.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,615ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹52,920 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹66,150 ಮತ್ತು ₹6,61,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,216 ಆಗಿದ್ದರೆ, ಎಂಟು ಗ್ರಾಂ ಬೆಲೆ ₹57,728 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72,160 ಮತ್ತು ₹7,21,600 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹85.20, ಎಂಟು ಗ್ರಾಂ ₹681.60 ಮತ್ತು 10 ಗ್ರಾಂ ₹852ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,520 ಮತ್ತು 1 ಕಿಲೋಗ್ರಾಂಗೆ ₹85,200 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ66,30072,310
ಮುಂಬಯಿ66,15072,160
ಬೆಂಗಳೂರು66,15072,160
ಚೆನ್ನೈ66,15072,160

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: Gold Rate Today: ವೀಕೆಂಡ್‌ನಲ್ಲಿ ಬೆಲೆ ಏರಿಕೆ ಕಾಣದ ಚಿನ್ನ, ಈಗಲೇ ಖರೀದಿಸಿದರೆ ಚೆನ್ನ

Continue Reading

ಬೆಂಗಳೂರು

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024: ರಾಜ್ಯಾದ್ಯಂತ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 78 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಫಲಿತಾಂಶದಲ್ಲಿ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದರೆ, ಅತ್ತ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸಿಕ್ಸರ್‌ ಬಾರಿಸಿದ್ದಾರೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳನ್ನು ಹಿಂದಿಕ್ಕಿರುವ ಅನುದಾನರಹಿತ ಶಾಲೆಗಳು ಫಲಿತಾಂಶದಲ್ಲಿ ಮುನ್ನುಗಿವೆ.

VISTARANEWS.COM


on

By

SSLC Result 2024 78 schools get zero results in SSLC exams
Koo

ಬೆಂಗಳೂರು: ಮಾರ್ಚ್‌-ಏಪ್ರಿಲ್ 2024ರ ಎಸ್ಎಸ್‌ಎಲ್‌ಸಿ ಪರೀಕ್ಷೆಯನ್ನು (SSLC Result 2024) ಮಾ. 25 ರಿಂದ ಏ. 06 ರವರೆಗೆ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ರಾಜ್ಯಾದ್ಯಂತ ನಡೆಸಲಾಗಿತ್ತು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ಏ.15ರಿಂದ 24ರವರೆಗೆ ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ 237 ಮೌಲ್ಯಮಾಪನ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಒಟ್ಟು 61,160 ಮೌಲ್ಯಮಾಪಕರು ಪಾಲ್ಗೊಂಡಿದ್ದರು. ಈ ಬಾರಿ ಪರೀಕ್ಷೆಗೆ ಒಟ್ಟು 8,59,967 ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 6,31,204 ಮಂದಿ ಉತ್ತೀರ್ಣರಾಗಿದ್ದು, ಶೇ. 73.40ರಷ್ಟು ಫಲಿತಾಂಶ ಬಂದಿದೆ. ಇನ್ನೂ ಈ ಬಾರಿ 78 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದರೆ, ಅತ್ತ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸಿಕ್ಸರ್‌ ಬಾರಿಸಿದ್ದಾರೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳನ್ನು ಹಿಂದಿಕ್ಕಿರುವ ಅನುದಾನರಹಿತ ಶಾಲೆಗಳು ಫಲಿತಾಂಶದಲ್ಲಿ ಮುನ್ನುಗಿವೆ.

ಬಾಲಕಿಯರೇ ಫಸ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 8,59,967 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅದರಲ್ಲಿ 2,87,416‌ ಹುಡುಗರು, 3,43,788 ಹುಡುಗಿಯರು ಪಾಸ್‌ ಆಗಿದ್ದಾರೆ. ಈ ಮೂಲಕ ಬಾಲಕರು ಶೇ. 65.90 ಹಾಗೂ ಬಾಲಕಿಯರು ಶೇ. 81.11 ಫಲಿತಾಂಶದ ಮೂಲಕ ಮೇಲುಗೈ ಸಾಧಿಸಿದ್ದಾರೆ.

ಸಿಕ್ಸರ್‌ ಬಾರಿಸಿದ ಗ್ರಾಮೀಣ ವಿದ್ಯಾರ್ಥಿಗಳು

ಇನ್ನೂ ಪ್ರತಿ ಬಾರಿಯಂತೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳೇ ಫಲಿತಾಂಶದಲ್ಲಿ ಮುಂದಿದ್ದಾರೆ. ನಗರ ಪ್ರದೇಶದಲ್ಲಿ 4,93,900 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 3,59,703 ವಿದ್ಯಾರ್ಥಿಗಳು ಪಾಸ್‌ ಆಗಿದ್ದು ಶೇ. 72ರಷ್ಟು ಫಲಿತಾಂಶ ಬಂದಿದೆ. ಗ್ರಾಮೀಣ ಭಾಗದಲ್ಲಿ 3,66,067 ವಿದ್ಯಾರ್ಥಿಗಳು ಹಾಜರಾಗಿದ್ದು, 2,71,501 ಉತ್ತೀರ್ಣರಾಗಿದ್ದು, ಶೇ. 74.17 ರಷ್ಟು ಫಲಿತಾಂಶ ಬಂದಿದೆ.

ಸರ್ಕಾರಿ ಶಾಲೆಗಳನ್ನು ಹಿಂದಿಕ್ಕಿದ ಅನುದಾನರಹಿತ ಶಾಲೆ

ಈ ಬಾರಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳನ್ನು ಹಿಂದಿಕ್ಕಿ ಅನುದಾನರಹಿತ ಶಾಲೆಗಳು ಮುಂದಿದೆ. 5906 ಸರ್ಕಾರಿ ಶಾಲೆಗಳಿಂದ 3,36,533 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು. ಈ ಪೈಕಿ 2,43, 851 ವಿದ್ಯಾರ್ಥಿಗಳು ಪಾಸ್‌ ಆಗಿದ್ದು, 72.46% ಶೇಕಡಾವಾರು ಫಲಿತಾಂಶ ಬಂದಿದೆ. 3,606 ಅನುದಾನಿತ ಶಾಲೆಗಳಿಂದ 2,07,821 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1,50,094 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ. 72.22ರಷ್ಟು ಫಲಿತಾಂಶ ಬಂದಿದೆ. 6144 ಅನುದಾನರಹಿತ ಶಾಲೆಗಳಿಂದ 2,58,753 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇವರಲ್ಲಿ 2,23,720 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಸ್‌ ಆಗಿದ್ದು, 86.46 ರಷ್ಟು ಫಲಿತಾಂಶ ಬಂದಿದೆ.

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ ರಿಸಲ್ಟ್‌; ಫಸ್ಟ್‌ ಬೆಂಚ್‌ಗೆ ಬಂದ ಉಡುಪಿ; ಲಾಸ್ಟ್‌ ಬೆಂಚ್‌ನಲ್ಲೇ ಉಳಿದ ಯಾದಗಿರಿ!

78 ಶಾಲೆಗಳಲ್ಲಿ ಶೂನ್ಯ ಫಲಿತಾಂಶ

ರಾಜ್ಯದಲ್ಲಿ 78 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. 3 ಸರ್ಕಾರಿ ಶಾಲೆಗಳು ಹಾಗೂ 13 ಅನುದಾನಿತ ಶಾಲೆಗಳು ಸೇರಿದಂತೆ 62 ಅನುದಾನಿತ ಶಾಲೆಗಳು ಶೂನ್ಯ ಫಲಿತಾಂಶ ಬಂದಿದೆ. ಕಳೆದ ಬಾರಿ 34 ಶಾಲೆಗಳು ಶೂನ್ಯ ಫಲಿತಾಂಶ ಬಂದಿತ್ತು. ಈ ಬಾರಿ ಶೂನ್ಯ ಫಲಿತಾಂಶವು ದುಪ್ಪಟ್ಟಾಗಿದೆ.

ಎಸ್‌ಎಂಎಸ್‌ ಮೂಲಕವೂ ಬರುತ್ತೆ ರಿಸಲ್ಟ್‌

ವಿದ್ಯಾರ್ಥಿಗಳ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು https://karresults.nic.in ವೀಕ್ಷಿಸಬಹುದು. ಪರೀಕ್ಷಾ ಫಲಿತಾಂಶವನ್ನು ವಿದ್ಯಾರ್ಥಿಯ ನೋಂದಾಯಿತ ಮೊಬೈಲ್ ಸಂಖ್ಯೆಗೆ ಮೇ 9ರ ಬೆಳಗ್ಗೆ 10.30 ರ ನಂತರ ಎಸ್.ಎಂ.ಎಸ್ ಮೂಲಕ ರವಾನಿಸಲಾಗುತ್ತದೆ. ಶಾಲೆಗಳ ಕ್ರೋಢೀಕೃತ ಫಲಿತಾಂಶ ಪಟ್ಟಿ ಹಾಗೂ ತಾತ್ಕಾಲಿಕ ಅಂಕಪಟ್ಟಿಯನ್ನು ಮಂಡಲಿಯ ಜಾಲತಾಣ https://kseab.karnataka.gov.in ಗುರುವಾರ 1 ಗಂಟೆಯ ನಂತರ ನೀಡಲಾಗುವುದು. ಶಾಲಾ ಹಂತದಲ್ಲಿ ಅಂದೇ ಮುದ್ರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಪರೀಕ್ಷಾ ಫಲಿತಾಂಶವನ್ನು ಪ್ರೌಢಶಾಲೆಗಳಲ್ಲಿ ಆ ದಿನವೇ ಪ್ರಕಟಿಸಲಾಗುವುದು.

ವೆಬ್‌ ಕಾಸ್ಟಿಂಗ್‌ ಪದ್ಧತಿ

ಪ್ರಪ್ರಥಮ ಬಾರಿಗೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳ ಮೂಲಕ ವೆಬ್ ಕಾಸ್ಟಿಂಗ್ ಮಾಡುವ ಹೊಸ ಪದ್ಧತಿಯನ್ನು ಪರಿಚಯಿಸಲಾಗಿತ್ತು. ಪರೀಕ್ಷಾ ಕೊಠಡಿಗಳ ದೃಶ್ಯಾವಳಿಗಳನ್ನು ಮೇಲ್ವಿಚಾರಣೆ ಮಾಡಲು ಎಲ್ಲಾ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿತ್ತು. ಈ ಕ್ರಮವು ವಿನೂತನವಾಗಿದ್ದು, ಪರೀಕ್ಷೆಯ ಸಮಗ್ರತೆಯನ್ನು ಪುನರ್‌ಸ್ಥಾಪಿಸಲು ಸಹಾಯಕವಾಗಿದೆ. ಈ ಮೂಲಕ ಪರೀಕ್ಷಾ ಅಕ್ರಮಗಳನ್ನು ಆಶ್ರಯಿಸದೆ ಪರೀಕ್ಷೆಗಳನ್ನು ಬರೆಯುವ ಅಭ್ಯಾಸವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವಲ್ಲಿ ಸಫಲವಾಗಿದ್ದು, ಈ ಕ್ರಮವನ್ನು ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರನ್ನೊಳಗೊಂಡಂತೆ ಎಲ್ಲರೂ ಸ್ವಾಗತಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Sslc exam Result 2024
ಶಿಕ್ಷಣ1 min ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

T20 World Cup 2024
ಕ್ರೀಡೆ7 mins ago

T20 World Cup 2024: ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಪಪುವಾ ನ್ಯೂಗಿನಿಯಾ, ಐರ್ಲೆಂಡ್

Sunita Williams
ವಿದೇಶ16 mins ago

Sunita Williams: ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮತ್ತೆ ಸ್ಥಗಿತ; ಮೇ 17ಕ್ಕೆ ಮುಂದೂಡಿಕೆ

Ananya Panday Aditya Roy Kapur parties with Sara Ali Khan
ಬಾಲಿವುಡ್18 mins ago

Ananya Panday: ಅನನ್ಯಾ ಪಾಂಡೆ ಜತೆ ಆದಿತ್ಯ ರಾಯ್ ಕಪೂರ್ ಬ್ರೇಕಪ್‌? ಸೈಫ್‌ ಪುತ್ರಿ ಜತೆ ಲವ್‌ ಸ್ಟಾರ್ಟ್‌!

SSLC Result 2024 secret behind 20 percent grace marks
ಕರ್ನಾಟಕ28 mins ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

gold rate today sreeleela
ಚಿನ್ನದ ದರ41 mins ago

Gold Rate Today: ಚಿನ್ನದ ಮಾರುಕಟ್ಟೆ ಇಳಿಮುಖ; 22 ಮತ್ತು 24 ಕ್ಯಾರಟ್‌ ಬಂಗಾರದ ದರಗಳಲ್ಲಿ ಇಳಿಕೆ

SSLC Result 2024 78 schools get zero results in SSLC exams
ಬೆಂಗಳೂರು46 mins ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

Viral video
ವೈರಲ್ ನ್ಯೂಸ್46 mins ago

Viral Video: ಬಸ್‌, ರೈಲಿನಲ್ಲಿ ಮಾತ್ರ ಅಲ್ಲ.. ಫ್ಲೈಟ್‌ನಲ್ಲೂ ನಡೆಯುತ್ತೆ ಸೀಟಿಗಾಗಿ ಮಾರಾಮಾರಿ

SSLC Result 2024 SSLC students get 20 percent grace marks but result is very poor
ಶಿಕ್ಷಣ1 hour ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

Andre Russell
ಕ್ರೀಡೆ1 hour ago

Andre Russell: ಸ್ಟಾರ್​​ ನಟಿಯೊಂದಿಗೆ ಕೇಸರಿ ಲುಂಗಿಯಲ್ಲಿ ಮಸ್ತ್​ ಸ್ಟೆಪ್ಸ್ ಹಾಕಿದ ಆಂಡ್ರೆ ರಸೆಲ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Sslc exam Result 2024
ಶಿಕ್ಷಣ1 min ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ28 mins ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು46 mins ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ1 hour ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು3 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ3 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

ಟ್ರೆಂಡಿಂಗ್‌