Site icon Vistara News

BY Vijayendra: ವಿಜಯೇಂದ್ರ ನೇಮಕದಿಂದ ರಾಜ್ಯ ಬಿಜೆಪಿಗೆ ಆನೆ ಬಲ; ನಾಯಕರ ವಿಜಯೋತ್ಸವ

BY Vijayendra

BY VIjayendra Will Take Charge As BJP Karnataka President Today

ಬೆಂಗಳೂರು: ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಬಿ.ವೈ. ವಿಜಯೇಂದ್ರ ಅವರಿಗೆ ಬಿಜೆಪಿ ನಾಯಕರು ಅಭಿನಂದನೆ ಸಲ್ಲಿಸಿದ್ದು, ರಾಜ್ಯಾದ್ಯಂತ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ. ಯುವ ನಾಯಕನಿಗೆ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿ ಹಲವು ನಾಯಕರು ಶುಭ ಹಾರೈಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಬಿ.ವೈ. ವಿಜಯೇಂದ್ರ ಅವರಿಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌, ಸಂಸದ ಬಿ.ವೈ.ವಿಜಯೇಂದ್ರ ಕೇಂದ್ರ ಸಚಿವರಾದ ಭಗವಂತ ಖೂಬಾ, ರಾಜೀವ್ ಚಂದ್ರಶೇಖರ್, ಸಂಸದರಾದ ಪ್ರತಾಪ್‌ ಸಿಂಹ, ತೇಜಸ್ವಿ ಸೂರ್ಯ, ಪಿ.ಸಿ.ಮೋಹನ್‌, ಮಾಜಿ ಸಚಿವರಾದ ಗೋವಿಂದ ಕಾರಜೋಳ, ಬಿ.ಶ್ರೀರಾಮುಲು, ಮುನಿರತ್ನ, ಡಾ.ಕೆ.ಸುಧಾಕರ್‌, ಸುನೀಲ್‌ ಕುಮಾರ್‌, ರಾಜ್ಯಸಭಾ ಸದಸ್ಯ ಜಗ್ಗೇಶ್‌, ಮಾಜಿ ಸಿಎಂಗಳಾದ ಸದಾನಂದ ಗೌಡ, ಎಸ್‌.ಎಂ.ಕೃಷ್ಣ, ಶಾಸಕ ಎಸ್‌. ಸುರೇಶ್‌ ಕುಮಾರ್‌, ಎಂ.ಪಿ.ರೇಣುಕಾಚಾರ್ಯ ಮತ್ತಿತರರು ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ | BY Vijayendra: ಚತುರ ಸಂಘಟಕ, ನಿಪುಣ ರಾಜಕೀಯ ತಂತ್ರಗಾರ ಬಿ ವೈ ವಿಜಯೇಂದ್ರ

ನಿರ್ಮಲಾ ಸೀತಾರಾಮನ್‌ ಅಭಿನಂದನೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಪ್ರತಿಕ್ರಿಯಿಸಿ, ಶ್ರೀ ವಿಜಯೇಂದ್ರ ಅವರು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದಕ್ಕೆ ಅಭಿನಂದನೆಗಳು. ಕರ್ನಾಟಕದಲ್ಲಿ ಪಕ್ಷವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಮತ್ತು ರಾಜ್ಯದ ಜನರ ಕಲ್ಯಾಣಕ್ಕಾಗಿ ಶ್ರಮಿಸಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.

ಬಿ.ಎಲ್‌.ಸಂತೋಷ್ ಶುಭ ಹಾರೈಕೆ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರು ಪ್ರತಿಕ್ರಿಯಿಸಿ, ಪಕ್ಷವನ್ನು ವಿಜಯದ ಹಾದಿಯಲ್ಲಿ ನಡೆಸುವಲ್ಲಿ ಯಶಸ್ಸು ನಿಮ್ಮದಾಗಲಿ ಎಂದು ವಿಜಯೇಂದ್ರ ಅವರಿಗೆ ಶುಭ ಕೋರಿದ್ದಾರೆ.

ಇದನ್ನೂ ಓದಿ | BY Vijayendra: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ನೇಮಕ; ಯುವ ನಾಯಕನಿಗೆ ಪಟ್ಟ

ಬಸವರಾಜ ಬೊಮ್ಮಾಯಿ ಹರ್ಷ

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯಿಸಿ, ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಯುವ ನಾಯಕ ಬಿ. ವೈ. ವಿಜಯೇಂದ್ರ ರವರಿಗೆ ಹಾರ್ದಿಕ ಅಭಿನಂದನೆಗಳು. ನಿಮ್ಮ ಅಧ್ಯಕ್ಷ ಅವಧಿಯಲ್ಲಿ ಪಕ್ಷ ಮತ್ತಷ್ಟು ಸಂಘಟನಾತ್ಮಕವಾಗಿ ಬಲಗೊಂಡು ಇನ್ನಷ್ಟು ಶಕ್ತಿಯುತವಾಗಿ ಹೊರಹೊಮ್ಮಲಿ ಎಂದು ಆಶಿಸುತ್ತೇನೆ ಎಂದು ತಿಳಿಸಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡ, ಕುಮಾರಸ್ವಾಮಿ ಶುಭ ಹಾರೈಕೆ

ರಾಜ್ಯ ಬಿಜೆಪಿ ನೂತನ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಪಕ್ಷದ ನಾಯಕರಷ್ಟೆ ಅಲ್ಲದೆ ಇತರ ಪಕ್ಷಗಳ ನಾಯಕರೂ ಅಭಿನಂದನೆ ಸಲ್ಲಿಸಿದ್ದಾರೆ. ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಕರೆ ಮಾಡಿ, ಶುಭಾಶಯ ಕೋರಿದ್ದಾರೆ. ಇನ್ನು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು, ಕರ್ನಾಟಕ ಬಿಜೆಪಿ ಪಕ್ಷದ ಅಧ್ಯಕ್ಷರಾಗಿ ನೇಮಕಗೊಂಡಿರುವ ಶಾಸಕ ಬಿ.ವೈ.ವಿಜಯೇಂದ್ರ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ಯುವನಾಯಕರಾಗಿ ಸಂಘಟನೆಯಲ್ಲಿ ಈಗಾಗಲೇ ಕ್ರಿಯಾಶೀಲರಾಗಿರುವ ಅವರಿಗೆ ಕಿರಿಯ ವಯಸ್ಸಿನಲ್ಲಿಯೇ ಬಹುದೊಡ್ಡ ಜವಾಬ್ದಾರಿ ಅರಸಿ ಬಂದಿದೆ. ತಮಗೆ ವಹಿಸಿರುವ ಈ ಗುರುತರ ಹೊಣೆಯನ್ನು ಅವರು ಸಮರ್ಥವಾಗಿ ನಿಭಾಯಿಸುತ್ತಾರೆ ಎಂಬ ವಿಶ್ವಾಸ ನನಗಿದೆ. ಶ್ರೀ ವಿಜಯೇಂದ್ರ ಅವರಿಗೆ ಶುಭವಾಗಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.

ಶುಭ ಕೋರಿದ ನಳಿನ್‌ ಕುಮಾರ್‌ ಕಟೀಲ್‌

ಕೇಂದ್ರ ಸಚಿವ ಭಗವಂತ ಖೂಬಾ ಟ್ವೀಟ್

ಬಿ.ವೈ,ವಿಜಯೇಂದ್ರ ಶುಭಾಶಯ

ಮಾಜಿ ಸಚಿವ ಶ್ರೀರಾಮುಲು ಅಭಿನಂದನೆ

ಆರ್‌. ಅಶೋಕ್‌ ಪ್ರತಿಕ್ರಿಯೆ

ಸಂಸದ ಪ್ರತಾಪ್‌ ಸಿಂಹ ಅಭಿನಂದನೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version