ಬೆಂಗಳೂರು: ಕನ್ನಡ ಮಾತೆಯಾದ ʻಶ್ರೀ ಭುವನೇಶ್ವರಿʼ ತಾಯಿಯ ಬೃಹತ್ ಮೂರ್ತಿ ಹಾಗೂ ಥೀಮ್ ಪಾರ್ಕ್ ಅನ್ನು ಬೆಂಗಳೂರು ನಗರದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೂತನ ವರ್ಷದ ಬಜೆಟ್‌ನಲ್ಲಿ ಘೋಷಿಸಿದ್ದಾರೆ.
ನಾಡಿನ ಭಾಷೆ ಹಾಗೂ ಸಾಂಸ್ಕೃತಿಕ ವಲಯವನ್ನು ಕೇಂದ್ರೀಕರಿಸಿಕೊಂಡು ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿರುವ ಹಲವು ಯೋಜನೆಗಳು ಇಂತಿವೆ:
೧.. ʻನಮ್ಮ ಜಿಲ್ಲೆ ನಮ್ಮ ಸಂಸ್ಕೃತಿʼ ಎಂಬ ಕಾರ್ಯಕ್ರಮದಡಿಯಲ್ಲಿ ಪ್ರತಿ ಜಿಲ್ಲೆಯಲ್ಲಿ ಎಲ್ಲಾ ವರ್ಗದ ಸ್ಥಳೀಯ ಕಲಾವಿದರನ್ನು ಒಳಗೊಂಡಂತೆ ಜಾನಪದ ಹಬ್ಬ ಆಯೋಜನೆ.
೨. ಗಡಿನಾಡು ಪ್ರದೇಶದಲ್ಲಿ ಕನ್ನಡ ಭಾಷೆ, ಕಲೆ, ಶಿಕ್ಷಣ ಮತ್ತು ಸಂಸ್ಕೃತಿಯ ವಿಕಾಸಕ್ಕೆ, ಗಡಿ ಪ್ರದೇಶದ ರಸ್ತೆಗಳ ಹಾಗೂ ಸಮಗ್ರ ಅಭಿವೃದ್ಧಿಗೆ ವಿವಿಧ ಇಲಾಖೆಗಳ ಮುಖಾಂತರ 150 ಕೋಟಿ ರೂ. ಮಂಜೂರು.
೩. ಕನ್ನಡವನ್ನು ಹೊರ ಜಗತ್ತಿಗೆ ಪರಿಚಯಿಸುವ ನಿಟ್ಟಿನಲ್ಲಿ ದಾವಣಗೆರೆಯಲ್ಲಿ 3ನೇ ವಿಶ್ವ ಕನ್ನಡ ಸಮ್ಮೇಳನ ಆಯೋಜನೆ.
೪. ಬೆಂಗಳೂರಿನ ಸಂಸ್ಕೃತಿ ಹಾಗೂ ಧಾರ್ಮಿಕ ಶ್ರದ್ಧೆಯ ಅವಿಭಾಜ್ಯ ಅಂಗವಾದ ಕರಗ ಉತ್ಸವಕ್ಕೆ ಸರ್ಕಾರದಿಂದ ವಿಶೇಷ ಅನುದಾನ.
ಇದನ್ನೂ ಓದಿ: Karnataka Budget 2023 : ಒಂದು ಲಕ್ಷ ಸರ್ಕಾರಿ ಹುದ್ದೆಗಳಿಗೆ ನೇಮಕ; ಬಜೆಟ್‌ನಲ್ಲಿ ಬೊಮ್ಮಾಯಿ ಘೋಷಣೆ
೫. ಆಡಳಿತದಲ್ಲಿ, ಕೈಗಾರಿಕೋದ್ಯಮಗಳಲ್ಲಿ, ಶಿಕ್ಷಣ ಕ್ಷೇತ್ರದಲ್ಲಿ ಕನ್ನಡದ ವ್ಯಾಪಕ ಬಳಕೆಗಾಗಿ ಹಾಗೂ ಕನ್ನಡಿಗರ ಹಿತಾಸಕ್ತಿಯ ರಕ್ಷಣೆಗಾಗಿ ʻಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಅಧಿನಿಯಮʼ ಜಾರಿಗೆ.
೬. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಮತ್ತು ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದ ಮಹನೀಯರ ಜೀವನಗಾಥೆಗಳು ಪಠ್ಯಪುಸ್ತಕಗಳಲ್ಲಿ ಅಳವಡಿಕೆ.
೭. ಕನ್ನಡ ಪುಸ್ತಕ ಪ್ರಾಧಿಕಾರದ ಚಟುವಟಿಕೆಗಳಿಗೆ 2 ಕೋಟಿ ರೂ. ನೆರವು.
೮. ಕನ್ನಡದ ರಾಜವಂಶಗಳ ಇತಿಹಾಸ ಹಾಗೂ ಕೊಡುಗೆಗಳ ಬಗ್ಗೆ ಕನ್ನಡ ವಿಶ್ವವಿದ್ಯಾಲಯದ ವತಿಯಿಂದ ಅಧ್ಯಯನ.
೯. ಕರ್ನಾಟಕ ಏಕೀಕರಣದಲ್ಲಿ ಮಹತ್ವದ ಪಾತ್ರ ವಹಿಸಿದ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಚಟುವಟಿಕೆಗಳಿಗೆ ನೆರವು.
ಇದನ್ನೂ ಓದಿ: karnataka budget 2023 : ಕ್ರೀಡಾಸಕ್ತರ ಪಾಲಿಗೂ ಸೂಪರ್ ಬಜೆಟ್ ಕೊಟ್ಟ ಸಿಎಂ ಬೊಮ್ಮಾಯಿ