Site icon Vistara News

Karnataka Budget 2023 : ನೇಕಾರರಿಗೆ ಭರ್ಜರಿ ಕೊಡುಗೆ; ನೇಕಾರ ಸಮ್ಮಾನ್‌ 3ರಿಂದ 5 ಸಾವಿರಕ್ಕೆ ಏರಿಕೆ, ಉಚಿತ ವಿದ್ಯುತ್‌

Budget weavers

#image_title

ಬೆಂಗಳೂರು: ಪ್ರಸಕ್ತ ವರ್ಷದಲ್ಲಿ ರಾಯಚೂರು, ಕಲಬುರಗಿ, ವಿಜಯಪುರ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನೂತನ ಮೆಗಾ ಜವಳಿ ಪಾರ್ಕ್ ಮತ್ತು ರಾಜ್ಯದ 25 ಸ್ಥಳಗಳಲ್ಲಿ ಮಿನಿ ಜವಳಿ ಪಾರ್ಕ್‌ಗಳನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು. ಇದರಿಂದಾಗಿ ಸುಮಾರು 25,000 ಜನರಿಗೆ ಉದ್ಯೋಗ ಸೃಜನೆಯಾಗಲಿದೆ ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ. ಇದರ ಜತೆಗೆ ನೇಕಾರ್‌ ಸಮ್ಮಾನ್‌ ಸಹಾಯಧನವನ್ನು ೩,೦೦೦ ರೂ.ಗಳಿಂದ ೫,೦೦೦ ರೂ.ಗಳಿಗೆ (Karnataka Budget 2023) ಏರಿಸಲಾಗಿದೆ.

ನೇಕಾರ್‌ ಸಮ್ಮಾನ್‌ ವಿದ್ಯುತ್‌ ಮಗ್ಗಕ್ಕೂ ವಿಸ್ತರಣೆ

ನಮ್ಮ ರಾಜ್ಯದ ನೇಕಾರರ ಸಾಮಾಜಿಕ ಮತ್ತು ಆರ್ಥಿಕ ಭದ್ರತೆಗೆ ವಿಶೇಷ ನೆರವು ನೀಡಲು ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ. ನೇಕಾರ ಸಮ್ಮಾನ್ ಯೋಜನೆಯಡಿ ನೀಡಲಾಗುತ್ತಿದ್ದ ಸಹಾಯಧನ 3,000 ರೂ. ಗಳಿಂದ 5,000 ರೂ. ಗಳಿಗೆ ಹೆಚ್ಚಿಸಲಾಗಿದೆ. ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ವಿದ್ಯುತ್ ಮಗ್ಗ ನೇಕಾರರು ಮತ್ತು ಮಗ್ಗ ಪೂರ್ವ ಕಾರ್ಮಿಕರಿಗೂ ಸಹ ನೇಕಾರ್ ಸಮ್ಮಾನ್ ಯೋಜನೆಯನ್ನು ಎಸ್ತರಿಸಲಾಗಿದೆ.
ನೇಕಾರ್ ಸಮ್ಮಾನ್ ಯೋಜನೆಯಿಂದ ಸುಮಾರು 1.5 ಲಕ್ಷ ನೇಕಾರರಿಗೆ ಅನುಕೂಲವಾಗಲಿದ್ದು 75 ಕೋಟಿ ರೂ. ಗಳನ್ನು ನೇರ ನಗದು ವರ್ಗಾವಣೆ ಮೂಲಕ ನೇಕಾರರ ಖಾತೆಗೆ ಜಮೆ ಮಾಡಲಾಗಿದೆ.

-ಈ ಐದು ಹೆಚ್‌ಪಿ ವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ಮಗ್ಗ ಹಾಗೂ ಮಗ್ಗ ಪೂರ್ವ ಘಟಕಗಳಿಗೆ ಉಚಿತ ವಿದ್ಯುತ್‌ ಒದಗಿಸಲಾಗುವುದು ಮತ್ತು Fixed Charges ನಲ್ಲಿ ಶೇ.50ರಷ್ಟು ರಿಯಾಯಿತಿ ನೀಡಲಾಗುವುದು.

– ನೇಕಾರರ ಪ್ಯಾಕೇಜ್ ಯೋಜನೆಯಡಿ ಜವಳಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಾಮಾನ್ಯ ವರ್ಗದ ಫಲಾನುಭವಿಗಳಿಂದ ಸ್ಥಾಪಿಸಲಾಗುವ ಅತಿ ಸಣ್ಣ ಘಟಕಗಳಿಗೆ ಒಂದು ಕೋಟಿ ರೂ. ವರೆಗಿನ ಜವಳಿ ಮತ್ತು ಸಿದ್ಧ ಉಡುಪು ಘಟಕಗಳಿಗೆ ಶೇ. 50ರಷ್ಟು ಅಥವಾ ಗರಿಷ್ಠ 50 ಲಕ್ಷ ರೂ. ಗಳ ಬಂಡವಾಳ ಸಹಾಯಧನ ನೀಡುವ ಯೋಜನೆ ಜಾರಿಗೊಳಿಸಲಾಗಿದೆ.

ಈ ನೂತನ ಜವಳಿ ಹಾಗೂ ಸಿದ್ಧ ಉಡುಪು ನೀತಿ 2019-24 ಅನ್ನು ಪರಿಷ್ಕರಿಸಲಾಗಿದ್ದು, ಅದರ ಪರಿಣಾಮವಾಗಿ ರಾಜ್ಯದಲ್ಲಿ 4,292 ಕೋಟಿ ರೂ. ಗಳ ಬಂಡವಾಳ ಹೂಡಿಕೆ ಮಾಡಲು ಉದ್ಯಮಿಗಳು ಮುಂದೆ ಬಂದಿದ್ದು, ಇದರಿಂದಾಗಿ ಜನರಿಗೆ ಉದ್ಯೋಗ ಸುಮಾರು 44,257 ಸೃಜನೆಯಾಗಲಿದೆ.

ಇದನ್ನೂ ಓದಿ : Karnataka Budget 2023: ಸ್ವಿಗ್ಗಿ, ಜೊಮೆಟೊ, ಅಮೇಜಾನ್‌ ಡೆಲಿವರಿ ಬಾಯ್‌ಗಳಿಗೆ 4 ಲಕ್ಷ ರೂ. ವಿಮೆ: ಆಟೊ, ಟ್ಯಾಕ್ಸಿ, ಲಾರಿ ಚಾಲಕರಿಗೂ ಅನ್ವಯ

Exit mobile version