Site icon Vistara News

Karnataka Budget 2023 : ಅಂಗನವಾಡಿ ಕಾರ್ಯಕರ್ತೆಯರಿಗೆ ಉಪಧನ; ಇದಕ್ಕಾಗಿ 40 ಕೋಟಿ ರೂ. ಅನುದಾನ

karnataka budget 2023

karnataka budget 2023

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಅವರ ಸೇವೆಯನ್ನು ಗುರುತಿಸಿರುವ ಸರ್ಕಾರವು 2023-24 ಸಾಲಿನಿಂದ ಅವರಿಗೆ ಉಪಧನವನ್ನು (Gratuity) ನೀಡಲು ನಿರ್ಧರಿಸಿದೆ. ಇದಕ್ಕಾಗಿ 40 ಕೋಟಿ ರೂ. ಗಳ ಅನುದಾನವನ್ನು ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಲಾದ ರಾಜ್ಯ ಬಜೆಟ್‌ನಲ್ಲಿ (karnataka budget 2023) ಮೀಸಲಿಡಲಾಗಿದೆ.

25 ವರ್ಷಗಳ ಅರ್ಹತಾ ಸೇವೆಯನ್ನು ಪೂರ್ಣಗೊಳಿಸಿದ ಹಾಗೂ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ 50,000 ರೂ. ಗಳು ಹಾಗೂ ಅಂಗನವಾಡಿ ಸಹಾಯಕಿಯರಿಗೆ 30,000 ರೂ. ಗಳ ಆರ್ಥಿಕ ಭದ್ರತೆಯನ್ನು ಒಂದು ಬಾರಿಗೆ ನೀಡಿ ಸ್ವಯಂ ನಿವೃತ್ತಿ ಪಡೆಯಲು ಅವಕಾಶ ನೀಡಲಾಗುವುದು ಎಂದು ಕೂಡ ಪ್ರಕಟಿಸಲಾಗಿದೆ.

ಮಕ್ಕಳ ಪೌಷ್ಟಿಕತೆ ಹೆಚ್ಚಿಸಲು ಹೊಸ ಇಲಾಖೆ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯನ್ನು ವಿಭಜಿಸಿ ಮಕ್ಕಳ ಪೌಷ್ಟಿಕತೆ ಕುರಿತು ಒಂದು ಪ್ರತ್ಯೇಕ ಇಲಾಖೆ ರೂಪಿಸುವ ಕುರಿತು ಬಜೆಟ್‌ನಲ್ಲಿ ಪ್ರಕಟಿಸಲಾಗಿದೆ. ಮಹಿಳಾ ಸಬಲೀಕರಣ ಇಲಾಖೆಯನ್ನು ಪ್ರತ್ಯೇಕವಾಗಿ ರೂಪಿಸಲಾಗುತ್ತದೆ ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Karnataka Budget 2023 : ಮಹಿಳಾ ಕೃಷಿ ಕಾರ್ಮಿಕರಿಗೆ ತಿಂಗಳಿಗೆ 500 ರೂ., ಸ್ವಸಹಾಯ ಸಂಘಗಳಿಗೆ ಬಡ್ಡಿರಹಿತ ಸಾಲ

Exit mobile version