Site icon Vistara News

Karnataka Budget 2023 Live Updates: ಬಜೆಟ್​ ಮಂಡನೆ ಮುಕ್ತಾಯ; ವಿಧಾನಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ

Karnataka Budget 2023 Live Updates CM Basavaraj bommai to present Budget Check Details In Kannada

#image_title

2023-24ನೇ ಸಾಲಿನ ಕರ್ನಾಟಕ ಬಜೆಟ್​ ಮಂಡನೆ (Karnataka Budget 2023 Live Updates) ಇಂದು. ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಈ ಸಲದ ಕೊನೇ ಬಜೆಟ್​ ಇದು. 2023ರ ಮೇ ತಿಂಗಳ ಒಳಗೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ ಬೊಮ್ಮಾಯಿ ಅವರು ಮಂಡಿಸಲಿರುವ ‘ಚುನಾವಣಾ ವರ್ಷದ ಬಜೆಟ್’ ಮೇಲೆ ಸಹಜವಾಗಿಯೇ ನಿರೀಕ್ಷೆ ಹೆಚ್ಚಾಗಿದೆ. ಬಜೆಟ್​ ಮಂಡನೆಗೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಸಲಿದ್ದು, ಬಜೆಟ್​ ಮಂಡನೆ ಬಳಿಕ ಸುದ್ದಿಗೋಷ್ಠಿಯನ್ನೂ ನಡೆಸಲಿದ್ದಾರೆ.

Lakshmi Hegde

ಬಿಸಿಲು ಕುದುರೆ ಬಜೆಟ್ ಇದು

ಬಿಜೆಪಿಯವರು ಈ ಬಜೆಟ್​ ಮೂಲಕ ರಾಜ್ಯದ ಜನರ ಕಿವಿಗೆ ಚೆಂಡು ಹೂವು ಇಟ್ಟಿದ್ದಾರೆ. ಇದೊಂದು ಬಿಸಿಲು ಕುದುರೆ ಬಜೆಟ್​ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ವ್ಯಂಗ್ಯವಾಡಿದರು. ಬಜೆಟ್​ ಮಂಡನೆ ಶುರುವಾದಾಗಿನಿಂದಲೂ ಅವರು ಎರಡೂ ಕಿವಿಗಳಿಗೆ ಚೆಂಡು ಹೂವು ಸಿಕ್ಕಿಸಿಕೊಂಡೇ ಇದ್ದಾರೆ.

Lakshmi Hegde

ಬಜೆಟ್​ಗೆ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅತ್ಯುತ್ತಮ ಬಜೆಟ್​ ಮಂಡಿಸಿದ್ದಾರೆ. ರೈತರ ಆದಾಯವನ್ನು ದ್ವಿಗುಣಗೊಳಿಸುವ ಯೋಜನೆಗಳನ್ನು ಘೋಷಿಸಿದ್ದಾರೆ. ಬೆಂಗಳೂರು ನಗರ ಅಭಿವೃದ್ಧಿಗೆ ಪೂರಕವಾಗಿ ಈ ಬಜೆಟ್ ಇದೆ ಎಂದು ಹೇಳಿದರು.

Lakshmi Hegde

ಬಜೆಟ್​ ಮಂಡನೆ ಮುಕ್ತಾಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸರ್ಕಾರದ ಕೊನೇ ಬಜೆಟ್​​ ಮಂಡನೆಯನ್ನು ಓದಿ ಮುಗಿಸಿದ್ದಾರೆ. ಅವರು 2 ಗಂಟೆ 40 ನಿಮಿಷಗಳ ಸುದೀರ್ಘ ಬಜೆಟ್​ ಮಂಡಿಸಿದರು.

Lakshmi Hegde

ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ

ಅಸಂಘಟಿತ ವಲಯದ ಕಾರ್ಮಿಕರು ಅಂದರೆ ರಾಜ್ಯದಲ್ಲಿನ ಆಟೋ ಚಾಲಕರು, ಟ್ಯಾಕ್ಸಿ ಚಾಲಕರು ಮತ್ತು ಲಾರಿ ಚಾಲಕರಿಗೆ ಹಾಗೂ ಇ-ಕಾಮರ್ಸ್‌ನಡಿ ಡೆಲಿವರಿ ಸೇವೆಯನ್ನು ನೀಡುತ್ತಿರುವವರ ಅವಲಂಬಿತರಿಗೆ ಭದ್ರತೆಯನ್ನು ಒದಗಿಸುವ ದೃಷ್ಟಿಯಿಂದ, ಇಂತಹವರು ಮರಣ ಹೊಂದಿದಲ್ಲಿ 2 ಲಕ್ಷ ರೂ. ಗಳ ವಿಮಾ ಸೌಲಭ್ಯ ಹಾಗೂ ಅಪಘಾತದಲ್ಲಿ ಮರಣ ಹೊಂದಿದಲ್ಲಿ 2 ಲಕ್ಷ ರೂ. ಗಳಂತೆ ಒಟ್ಟು 4 ಲಕ್ಷ ರೂ. ಗಳ ವಿಮಾ ಸೌಲಭ್ಯ ಕಲ್ಪಿಸಲು ‘ಮುಖ್ಯಮಂತ್ರಿ ವಿಮಾ ಯೋಜನೆ’ ಯನ್ನು ರೂಪಿಸಲಾಗುವುದು. ಇದರಿಂದ ಒಟ್ಟು 16.50 ಲಕ್ಷ ಜನರಿಗೆ ಸಹಾಯವಾಗುತ್ತದೆ.

Lakshmi Hegde

ತಂತ್ರಜ್ಞಾನ ಆಧಾರಿತ ದತ್ತಾಂಶ ಕೇಂದ್ರ

ತಂತ್ರಜ್ಞಾನ ಆಧಾರಿತ 3ನೇ ಹಂತದ ದತ್ತಾಂಶ ಕೇಂದ್ರವನ್ನು 590 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಕನ್ನಡ ಚಿತ್ರರಂಗಕ್ಕೆ ಪ್ರೋತ್ಸಾಹ ನೀಡಲು ರಾಜ್ಯದ Tier-2 ನಗರಗಳಲ್ಲಿ 100 ರಿಂದ 200 ಆಸನಗಳ ಸಾಮರ್ಥ್ಯವುಳ್ಳ ಮಿನಿ ಥಿಯೇಟರ್ ಗಳನ್ನು ಸ್ಥಾಪಿಸಲು ಪ್ರೋತ್ಸಾಹ ನೀಡಲಾಗುವುದು. 2022-23ನೇ ಸಾಲಿನಲ್ಲಿ ರಾಜ್ಯದಲ್ಲಿ ನೂತನ ಪೊಲೀಸ್ ಕಛೇರಿಗಳು, ಪೊಲೀಸ್ ಠಾಣೆಗಳ ನಿರ್ಮಾಣ, ಉನ್ನತೀಕರಣ ಮತ್ತು ಆಧುನೀಕರಣಕ್ಕೆ 348 ಕೋಟಿ ರೂ. ವೆಚ್ಚ ಮಾಡಲಾಗಿದೆ. ಅದೇ ರೀತಿ 410 ಕೋಟಿ ರೂ. ಗಳ ವೆಚ್ಚದಲ್ಲಿ ಕಾರಾಗೃಹಗಳ ನಿರ್ಮಾಣ ಮತ್ತು 51 ಕೋಟಿ ರೂ. ಗಳ ವೆಚ್ಚದಲ್ಲಿ ಕಾರಾಗೃಹ ಆಧುನೀಕರಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. .

Exit mobile version