2023-24ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ (Karnataka Budget 2023 Live Updates) ಇಂದು. ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಈ ಸಲದ ಕೊನೇ ಬಜೆಟ್ ಇದು. 2023ರ ಮೇ ತಿಂಗಳ ಒಳಗೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ ಬೊಮ್ಮಾಯಿ ಅವರು ಮಂಡಿಸಲಿರುವ ‘ಚುನಾವಣಾ ವರ್ಷದ ಬಜೆಟ್’ ಮೇಲೆ ಸಹಜವಾಗಿಯೇ ನಿರೀಕ್ಷೆ ಹೆಚ್ಚಾಗಿದೆ. ಬಜೆಟ್ ಮಂಡನೆಗೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಸಲಿದ್ದು, ಬಜೆಟ್ ಮಂಡನೆ ಬಳಿಕ ಸುದ್ದಿಗೋಷ್ಠಿಯನ್ನೂ ನಡೆಸಲಿದ್ದಾರೆ.
ರಾಜ್ಯ ತೆರಿಗೆಗಳು-2023-24
ಮೋಟಾರು ವಾಹನ – 10,500 ಕೋಟಿ ರೂ- ಶೇಕಡಾ 6 ಹೆಚ್ಚಳ
ನೊಂದಣಿ ಮುದ್ರಾಂಕ – 19,000 ಕೋಟಿ ರೂ.- ಶೇ.12 ಹೆಚ್ಚಳ.
ರಾಜ್ಯ ಅಬಕಾರಿ- 35,000 ಕೋಟಿ ರೂಪಾಯಿ-ಶೇ.21 ಹೆಚ್ಚಳ
ವಾಣಿಜ್ಯ ತೆರಿಗೆಗಳು – 97,000 ಕೋಟಿ ರೂ.- ಶೇಕಡಾ – 59
ರಾಮನಗರದಲ್ಲಿ ರಾಮಮಂದಿರ ನಿರ್ಮಾಣ ಮಾಡುವುದಾಗಿ ಬಜೆಟ್ನಲ್ಲಿ ಘೋಷಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ದಾವಣಗೆರೆಯಲ್ಲಿ ಸಂತ ಸೇವಾಲಾಲ್ ಜನ್ಮಸ್ಥಳ ಅಭಿವೃದ್ಧಿಗೆ 5 ಕೋಟಿ ರೂ.ಮೀಸಲಿಡುವುದಾಗಿ ತಿಳಿಸಿದರು. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ಸಿಎಂ ಹೇಳಿದರು.
ಸಾರಿಗೆ ಇಲಾಖೆಗೆ 3840 ಕೋಟಿ ಸಹಾಯ ಹಸ್ತ
ತುಮಕೂರು, ಹಾವೇರಿ, ಯಲಹಂಕ, ಕಸ್ತೂರಿನಗರ, ಸಕಲೇಶ್ಪುರ, ಕೆಜಿಎಫ್, ಚಿಂತಾಮಣಿ, ಸಾಗರ, ಗೋಕಾಕ್, ರಾಣೆಬೆನ್ನೂರು, ದಾಂಡೇಲಿ, ಶಿರಸಿ, ಬಾಲ್ಕಿಗಳಲ್ಲಿ ಸ್ವಯಂ ಚಾಲಿತ ಚಾಲನಾ ಪಥ ನಿರ್ಮಾಣಕ್ಕೆ 85 ಕೋಟಿ ರೂಪಾಯ ಮೀಸಲು.
ರೈತಸಿರಿ ಯೋಜನೆಯಡಿ ಪ್ರೋತ್ಸಾಹ ಧನ
2023ನೇ ಸಿರಿಧಾನ್ಯಗಳ ವರ್ಷದ ಅಂಗವಾಗಿ ಉತ್ಪಾದನೆ ಹೆಚ್ಚಿಸಲು ರೈತ ಸಿರಿ ಯೋಜನೆಯಡಿ ಕಿರುಧಾನ್ಯ ಬೆಳೆಗಾರರಿಗೆ 10 ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡುವುದಾಗಿ ಬಜೆಟ್ನಲ್ಲಿ ಘೋಷಣೆ.
ನೀರಾವರಿ ಕ್ಷೇತ್ರಕ್ಕೆ 25 ಸಾವಿರ ಕೋಟಿ ರೂಪಾಯಿ, ಕೃಷಿ ಕ್ಷೇತ್ರಕ್ಕೆ 39,031 ಕೋಟಿ ರೂಪಾಯಿ ಮೀಸಲು, ರೈತರ ಬಡ್ಡಿ ರಹಿತ ಸಾಲದ ಮೊತ್ತ 3 ಲಕ್ಷ ರೂ.ದಿಂದ 5 ಲಕ್ಷಕ್ಕೆ ಏರಿಕೆ. ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆಯಡಿ 10 ಸಾವಿರ ರೂಪಾಯಿ ಸಹಾಯ ಧನ ನೀಡುವುದಾಗಿ ಬಜೆಟ್ನಲ್ಲಿ ಘೋಷಣೆ