Site icon Vistara News

Karnataka Budget 2023 Live: ನುಡಿದಂತೆ ನಡೆದಿದ್ದೇವೆ, ಎಲ್ಲ ಗ್ಯಾರಂಟಿಗಳೂ ಹಣ ಇಟ್ಟಿದ್ದೇವೆ; ಬಜೆಟ್‌ ಬಳಿಕ ಸಿದ್ದರಾಮಯ್ಯ ಸುದ್ದಿಗೋಷ್ಠಿ

Karnataka Budget 2023 Live Updates

Karnataka Budget 2023 Live Updates In Kannada

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹುನಿರೀಕ್ಷೆಯ ಬಜೆಟ್‌ ಮಂಡನೆ ಮಾಡಿದ್ದಾರೆ. ಸಿದ್ದರಾಮಯ್ಯ ಅವರು 14ನೇ ಬಾರಿ ಬಜೆಟ್‌ ಮಂಡನೆ ಮಾಡಿದ್ದು, ಮೂಲಕ ವಿಧಾನಸಭೆಯಲ್ಲಿ ಅತಿ ಹೆಚ್ಚು ಬಜೆಟ್‌ ಮಂಡಿಸಿದ ದಾಖಲೆಗೆ ಪಾತ್ರರಾಗಿದ್ದಾರೆ. ರಾಜ್ಯದ ಜನರ ಆಶೋತ್ತರಗಳನ್ನು ಈಡೇರಿಸುವ ದಿಸೆಯಲ್ಲಿ ಮಂಡಿಸಿದ ಬಜೆಟ್‌ನ ಕ್ಷಣಕ್ಷಣದ ಮಾಹಿತಿ ಇಲ್ಲಿದೆ.

ಇದನ್ನೂ ಓದಿ: Karnataka Budget 2023: ಇಂದು ರಾಜ್ಯ ಬಜೆಟ್‌; ಸಿದ್ದರಾಮಯ್ಯ ದಾಖಲೆ, ಗ್ಯಾರಂಟಿ ಹೊರೆ; ಏನೇನು ಹೈಲೈಟ್‌?

B Somashekhar

ರೈಲು ಯೋಜನೆ ಕಾಮಗಾರಿ ಪೂರ್ಣಗೊಳಿಸಲು ಕ್ರಮ

8,766 ಕೋಟಿ ರೂ.ಗಳ ರಾಜ್ಯದ ಹೂಡಿಕೆಯೊಂದಿಗೆ, 1,110 ಕಿ.ಮೀ. ಉದ್ದದ, ಒಂಬತ್ತು ರೈಲ್ವೆ ಯೋಜನಾ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು. ಇದರ ಜತೆಗೆ, ರಸ್ತೆ ಮಾರ್ಗದ ವಾಹನ ದಟ್ಟಣೆಯನ್ನು ನಿವಾರಿಸಿ ಸುಗಮ ರೈಲು ಸಂಚಾರಕ್ಕಾಗಿ ಅನುಮೋದಿತ ರೈಲ್ವೆ ಮೇಲ್ಸೇತುವೆ / ಕೆಳ ಸೇತುವೆಗಳ ನಿರ್ಮಾಣದ ಸುಮಾರು 803 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಲು ಕ್ರಮ ತೆಗೆದುಕೊಳ್ಳಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

B Somashekhar

ಪ್ರವಾಸೋದ್ಯಮಕ್ಕೆ ಉತ್ತೇಜನ

ಪ್ರವಾಸೋದ್ಯಮ ಮತ್ತು ಉದ್ಯಮ ವಲಯಗಳನ್ನು ಉತ್ತೇಜಿಸಲು ಹಾಗೂ ವಿಪತ್ತು ನಿರ್ವಹಣೆಯ ಸಮಯದಲ್ಲಿ ರಕ್ಷಣಾ ಕಾರ್ಯಗಳಿಗೆ ನೆರವಾಗುವ ಉದ್ದೇಶದಿಂದ ಧರ್ಮಸ್ಥಳ, ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಹೊಸ ಏರ್‌ಸ್ಟ್ರಿಪ್‌ಗಳನ್ನು (Airstrip) ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

B Somashekhar

ಸಿದ್ದರಾಮಯ್ಯ ಬಜೆಟ್‌ ಹೈಲೈಟ್ಸ್…‌

B Somashekhar

ಬುಡಕಟ್ಟು ಪಂಗಡಗಳಿಗೆ 50 ಕೋಟಿ ರೂ. ಮೀಸಲು

ರಾಜ್ಯದ 8 ಜಿಲ್ಲೆಗಳಲ್ಲಿ ವಾಸಿಸುತ್ತಿರುವ 11 ಬುಡಕಟ್ಟು ಪಂಗಡಗಳಾದ ಕೊರಗ, ಜೇನುಕುರುಬ, ಸೋಲಿಗ, ಎರವ, ಕಾಡುಕುರುಬ, ಮಲೆಕುಡಿಯ, ಸಿದ್ಧಿ, ಹಸಲರು, ಗೌಡಲು, ಗೊಂಡ ಮತ್ತು ಬೆಟ್ಟಕುರುಬ ಜನಾಂಗದ ಕುಟುಂಬಗಳಿಗೆ ಪೌಷ್ಟಿಕ ಆಹಾರ ಯೋಜನೆಯನ್ನು ವಾರ್ಷಿಕ ಆರು ತಿಂಗಳುಗಳಿಗೆ ನೀಡಲಾಗುತ್ತಿದ್ದು, ಇದನ್ನು 12 ತಿಂಗಳಿಗೆ ವಿಸ್ತರಿಸಲಾಗುವುದು. ಇದಕ್ಕೆ ವಾರ್ಷಿಕವಾಗಿ 50 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

B Somashekhar

ಅಸಂಘಟಿತ ವಲಯಗಳ ನೌಕರರಿಗೆ ನೆರವು

ʻGig workersʼ, ಅಂದರೆ ಸ್ವಿಗ್ಗಿ, ಜೊಮಾಟೋ, ಅಮೆಜಾನ್‌, ಮುಂತಾದ ಇ-ಕಾಮರ್ಸ್‌ ಸಂಸ್ಥೆಗಳಲ್ಲಿ ಪೂರ್ಣಕಾಲಿಕ/ಅರೆಕಾಲಿಕ ನೌಕರರಾಗಿ ಕಾರ್ಯನಿರ್ವಹಿಸುತ್ತಿರುವವರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವ ದೃಷ್ಟಿಯಿಂದ, ಇಂತಹವರಿಗೆ ಎರಡು ಲಕ್ಷ ರೂ.ಗಳ ಜೀವವಿಮಾ ಸೌಲಭ್ಯ ಹಾಗೂ ಎರಡು ಲಕ್ಷ ರೂ.ಗಳ ಅಪಘಾತ ವಿಮಾ ಸೌಲಭ್ಯ ಸೇರಿದಂತೆ ಒಟ್ಟು ನಾಲ್ಕು ಲಕ್ಷ ರೂ.ಗಳ ವಿಮಾ ಸೌಲಭ್ಯ ಕಲ್ಪಿಸಲಾಗುವುದು ಮತ್ತು ಇದರ ಸಂಪೂರ್ಣ ವಿಮಾ ಕಂತನ್ನು ಸರ್ಕಾರದ ವತಿಯಿಂದ ಭರಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದರು.

Exit mobile version