ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹುನಿರೀಕ್ಷೆಯ ಬಜೆಟ್ ಮಂಡನೆ ಮಾಡಿದ್ದಾರೆ. ಸಿದ್ದರಾಮಯ್ಯ ಅವರು 14ನೇ ಬಾರಿ ಬಜೆಟ್ ಮಂಡನೆ ಮಾಡಿದ್ದು, ಮೂಲಕ ವಿಧಾನಸಭೆಯಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆಗೆ ಪಾತ್ರರಾಗಿದ್ದಾರೆ. ರಾಜ್ಯದ ಜನರ ಆಶೋತ್ತರಗಳನ್ನು ಈಡೇರಿಸುವ ದಿಸೆಯಲ್ಲಿ ಮಂಡಿಸಿದ ಬಜೆಟ್‌ನ ಕ್ಷಣಕ್ಷಣದ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: Karnataka Budget 2023: ಇಂದು ರಾಜ್ಯ ಬಜೆಟ್; ಸಿದ್ದರಾಮಯ್ಯ ದಾಖಲೆ, ಗ್ಯಾರಂಟಿ ಹೊರೆ; ಏನೇನು ಹೈಲೈಟ್?
ರಾಜ್ಯದಲ್ಲಿ 3 ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ
1. ಕಲಬುರಗಿ
2. ಮೈಸೂರು
3. ಬೆಳಗಾವಿ
ಜಗಮಗಿಸಲಿದೆ ಬೆಂಗಳೂರು ಮೆಟ್ರೋ
Karnataka Budget 2023: ದಲಿತರನ್ನು ವಂಚಿಸುತ್ತಿದ್ದ ಸೆಕ್ಷನ್ 7(D)ಗೆ ಬ್ರೇಕ್: ಸಿದ್ದರಾಮಯ್ಯ ಮಹತ್ವದ ಘೋಷಣೆ
ಎಸ್‌ಸಿಎಸ್‌ಟಿ ಸಮುದಾಯಗಳಿಗೆ ಅನುದಾನವನ್ನು ನಿಗದಿಪಡಿಸಿದ್ದರೂ ಜನರಲ್ ಆಗಿರುವ ಅಭಿವೃದ್ಧಿ ಯೋಜನೆಗಳಿಗೂ ಅದೇ ಹಣವನ್ನು ಬಳಸುವ ಪರಿಪಾಠಕ್ಕೆ ಬ್ರೇಕ್ ಹಾಕಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಎಸ್‌ಸಿಎಸ್‌ಪಿ ಟಿಎಸ್‌ಪಿ ಹಣವನ್ನು ಬೇರೆ ಯೋಜನೆಗೆ ವರ್ಗಾಯಿಸಲು ಅವಕಾಶ ನೀಡುವ 7(D) ಸೆಕ್ಷನ್ ಅನ್ನು ಕೈಬಿಡಲಾಗುವುದು ಎಂದು ಬಜೆಟ್‌ನಲ್ಲಿ (Karnataka budget 2023) ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
Karnataka Budget 2023: ದಲಿತರನ್ನು ವಂಚಿಸುತ್ತಿದ್ದ ಸೆಕ್ಷನ್ 7(D)ಗೆ ಬ್ರೇಕ್: ಸಿದ್ದರಾಮಯ್ಯ ಮಹತ್ವದ ಘೋಷಣೆ
ಕೃಷಿ ಋಷಿಗಳಿಗೆ ಬಡ್ಡಿ ಇಲ್ಲದೆ ಸಾಲ
ಇಂದಿರಾ ಕ್ಯಾಂಟೀನ್ ಮತ್ತೆ ಆರಂಭಕ್ಕೆ ನಿರ್ಧಾರ
– ಮೊದಲನೇ ಹಂತದಲ್ಲಿ ಬಿಬಿಎಂಪಿ ಹಾಗೂ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಪುನರಾರಂಭ ಮಾಡಲು ನಿರ್ಧಾರ ಮಾಡಲಾಗಿದೆ
– ಎರಡನೇ ಹಂತದಲ್ಲಿ ಎಲ್ಲ ಹೊಸ ಪಟ್ಟಣ ಹಾಗೂ ಬಿಬಿಎಂಪಿ ಹೊಸ ವಾರ್ಡ್‌ಗಳಲ್ಲಿ ಕ್ಯಾಂಟೀನ್ ಆರಂಭ
– ಪ್ರಸಕ್ತ ಸಾಲಿನಲ್ಲಿ ಇಂದಿರಾ ಕ್ಯಾಂಟೀನ್ ದುರಸ್ತಿ, ನವೀಕರಣ ಹಾಗೂ ನಿರ್ವಹಣೆಗೆ100 ಕೋಟಿ ರೂ. ಮೀಸಲು