Site icon Vistara News

Karnataka Budget 2023 Live: ನುಡಿದಂತೆ ನಡೆದಿದ್ದೇವೆ, ಎಲ್ಲ ಗ್ಯಾರಂಟಿಗಳೂ ಹಣ ಇಟ್ಟಿದ್ದೇವೆ; ಬಜೆಟ್‌ ಬಳಿಕ ಸಿದ್ದರಾಮಯ್ಯ ಸುದ್ದಿಗೋಷ್ಠಿ

Karnataka Budget 2023 Live Updates

Karnataka Budget 2023 Live Updates In Kannada

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹುನಿರೀಕ್ಷೆಯ ಬಜೆಟ್‌ ಮಂಡನೆ ಮಾಡಿದ್ದಾರೆ. ಸಿದ್ದರಾಮಯ್ಯ ಅವರು 14ನೇ ಬಾರಿ ಬಜೆಟ್‌ ಮಂಡನೆ ಮಾಡಿದ್ದು, ಮೂಲಕ ವಿಧಾನಸಭೆಯಲ್ಲಿ ಅತಿ ಹೆಚ್ಚು ಬಜೆಟ್‌ ಮಂಡಿಸಿದ ದಾಖಲೆಗೆ ಪಾತ್ರರಾಗಿದ್ದಾರೆ. ರಾಜ್ಯದ ಜನರ ಆಶೋತ್ತರಗಳನ್ನು ಈಡೇರಿಸುವ ದಿಸೆಯಲ್ಲಿ ಮಂಡಿಸಿದ ಬಜೆಟ್‌ನ ಕ್ಷಣಕ್ಷಣದ ಮಾಹಿತಿ ಇಲ್ಲಿದೆ.

ಇದನ್ನೂ ಓದಿ: Karnataka Budget 2023: ಇಂದು ರಾಜ್ಯ ಬಜೆಟ್‌; ಸಿದ್ದರಾಮಯ್ಯ ದಾಖಲೆ, ಗ್ಯಾರಂಟಿ ಹೊರೆ; ಏನೇನು ಹೈಲೈಟ್‌?

B Somashekhar

ಆರೋಗ್ಯ, ವೈದ್ಯಕೀಯ ಶಿಕ್ಷಣಕ್ಕೆ ಸಿದ್ದರಾಮಯ್ಯ ಕೊಡುಗೆ

– ರಾಜ್ಯದಲ್ಲಿ ಈಗಾಗಲೇ ಆರಂಭಿಸಲಾಗಿರುವ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ 450 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ.

– ಪ್ರಸಕ್ತ ಸಾಲಿನಲ್ಲಿ ಗದಗ, ಕೊಪ್ಪಳ, ಕಾರವಾರ ಮತ್ತು ಕೊಡಗು ಜಿಲ್ಲೆಗಳಲ್ಲಿ 450 ಬೆಡ್‌ ಆಸ್ಪತ್ರೆಗಳ ನಿರ್ಮಾಣ ಕಾರ್ಯವನ್ನು ಆದ್ಯತೆ ಮೇಲೆ ಪೂರ್ಣಗೊಳಿಸಲಾಗುವುದು.

– ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನಲ್ಲಿ ಒಂದು ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲಾಗುವುದು.

-ಮೈಸೂರು, ಕಲಬುರಗಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಕಾರ್ಯಾರಂಭ ಮತ್ತು ಸುಟ್ಟ ಗಾಯಗಳ ಘಟಕ ಸ್ಥಾಪನೆಗೆ 155 ಕೋಟಿ ರೂ.ಗಳನ್ನು ಒದಗಿಸಲಾಗುವುದು.

-NIMHANS ಸಂಸ್ಥೆಯ ಆವರಣದಲ್ಲಿ 146 ಕೋಟಿ ರೂ.ಗಳ ವೆಚ್ಚದಲ್ಲಿ ಅಂಗಾಂಗ ಜೋಡಣೆಗೆ ಮೀಸಲಾದ ದೇಶದ ಪ್ರಥಮ ಸಾರ್ವಜನಿಕ ಆಸ್ಪತ್ರೆಯನ್ನು ಸ್ಥಾಪಿಸಲಾಗುವುದು. ಜೊತೆಯಲ್ಲಿ ನಾನ್‌ ಆಲ್ಕೋಹಾಲಿಕ್‌ ಫ್ಯಾಟಿ ಲಿವರ್‌ ಖಾಯಿಲೆಯ (NAFLD) ರೋಗಿಗಳಲ್ಲಿ ಸಿರೋಸಿಸ್‌ ಮತ್ತು ಕ್ಯಾನ್ಸರ್‌ ಪತ್ತೆ ಹಚ್ಚಲು ಒಂದು FibroScan ಅನ್ನು ಒದಗಿಸಲಾಗುವುದು.

– ಕಲಬುರಗಿಯ ಗುಲ್ಬರ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (GIMS) 200 ಹಾಸಿಗೆಯ ಹೊಸ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು 70 ಕೋಟಿ ರೂ. ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು.

B Somashekhar

ಮೊಟ್ಟೆ ಯೋಜನೆ ವಿಸ್ತರಣೆ

ವಿದ್ಯಾರ್ಥಿಗಳಿಗೆ ಮೊಟ್ಟೆ, ಚಿಕ್ಕಿ, ಬಾಳೆಹಣ್ಣು ಭಾಗ್ಯ

1 ರಿಂದ 8 ನೇ ತರಗತಿಗೆ ಸಿಮೀತವಾಗಿದ್ದ ಯೋಜನೆ 9 ಮತ್ತು 10 ನೇ ತರಗತಿಗೆ ವಿಸ್ತರಣೆ

280 ಕೋಟಿ ರೂ. ವೆಚ್ಚದಲ್ಲಿ 60 ಲಕ್ಷ ಮಕ್ಕಳಿಗೆ ಮೊಟ್ಟೆ, ಚಿಕ್ಕಿ, ಹಣ್ಣು ವಿತರಣೆ

B Somashekhar

ಪುನೀತ್ ರಾಜ್ ಕುಮಾರ್ ಹೆಸರಲ್ಲಿ ಹೊಸ ಕಾರ್ಯಕ್ರಮ

ಹಠಾತ್ ಹೃದಯಾಘಾತ ಸಾವು ತಡೆಗೆ ಅನುದಾನ

ಜಿಲ್ಲಾ,ತಾಲೂಕು ಆಸ್ಪತ್ರೆಗಳಲ್ಲಿ ವಿಶೇಷ ಘಟಕ

6 ಕೋಟಿ ರೂ. ಅನುದಾನ ನೀಡಲು ನಿರ್ಧಾರ

B Somashekhar

ಕೃಷಿಕರ ಖುಷಿ ಹೆಚ್ಚಿಸಿದ ಸಿದ್ದು ಬಜೆಟ್‌

B Somashekhar

ಅನ್ನಭಾಗ್ಯ ಯೋಜನೆಗೆ ಸಿದ್ದರಾಮಯ್ಯ ಭರಪೂರ ಹಣ

Exit mobile version