Site icon Vistara News

Karnataka Budget 2023 Live: ನುಡಿದಂತೆ ನಡೆದಿದ್ದೇವೆ, ಎಲ್ಲ ಗ್ಯಾರಂಟಿಗಳೂ ಹಣ ಇಟ್ಟಿದ್ದೇವೆ; ಬಜೆಟ್‌ ಬಳಿಕ ಸಿದ್ದರಾಮಯ್ಯ ಸುದ್ದಿಗೋಷ್ಠಿ

Karnataka Budget 2023 Live Updates

Karnataka Budget 2023 Live Updates In Kannada

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹುನಿರೀಕ್ಷೆಯ ಬಜೆಟ್‌ ಮಂಡನೆ ಮಾಡಿದ್ದಾರೆ. ಸಿದ್ದರಾಮಯ್ಯ ಅವರು 14ನೇ ಬಾರಿ ಬಜೆಟ್‌ ಮಂಡನೆ ಮಾಡಿದ್ದು, ಮೂಲಕ ವಿಧಾನಸಭೆಯಲ್ಲಿ ಅತಿ ಹೆಚ್ಚು ಬಜೆಟ್‌ ಮಂಡಿಸಿದ ದಾಖಲೆಗೆ ಪಾತ್ರರಾಗಿದ್ದಾರೆ. ರಾಜ್ಯದ ಜನರ ಆಶೋತ್ತರಗಳನ್ನು ಈಡೇರಿಸುವ ದಿಸೆಯಲ್ಲಿ ಮಂಡಿಸಿದ ಬಜೆಟ್‌ನ ಕ್ಷಣಕ್ಷಣದ ಮಾಹಿತಿ ಇಲ್ಲಿದೆ.

ಇದನ್ನೂ ಓದಿ: Karnataka Budget 2023: ಇಂದು ರಾಜ್ಯ ಬಜೆಟ್‌; ಸಿದ್ದರಾಮಯ್ಯ ದಾಖಲೆ, ಗ್ಯಾರಂಟಿ ಹೊರೆ; ಏನೇನು ಹೈಲೈಟ್‌?

B Somashekhar

3.24 ಲಕ್ಷ ಕೋಟಿ ರೂ. ಮೊತ್ತದ ಬಜೆಟ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ ಮಂಡನೆ ಆರಂಭಿಸಿದ್ದು, 3.24 ಲಕ್ಷ ಕೋಟಿ ರೂ. ಮೌಲ್ಯದ ಬಜೆಟ್‌ ಮಂಡಿಸುತ್ತಿದ್ದಾರೆ. ಸರ್ವ ಜನಾಂಗದ ಶಾಂತಿಯ ತೋಟ, ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ತತ್ವದಲ್ಲಿ ಬಜೆಟ್‌ ಮಂಡಿಸುತ್ತಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

B Somashekhar

ಬಜೆಟ್‌ ಮಂಡನೆ ಆರಂಭ

ದಾಖಲೆಯ 14ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ ಮಂಡನೆ ಆರಂಭಿಸಿದ್ದಾರೆ. ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯವನ್ನು ಕೊಂಡೊಯ್ಯಲು ಬಜೆಟ್‌ ಮಂಡಿಸುತ್ತಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು. ಇದೇ ವೇಳೆ ಅವರು ಬಸವಣ್ಣನವರನ್ನು ಸ್ಮರಿಸಿದ್ದಾರೆ.

B Somashekhar

ವಿಧಾನಸಭೆಗೆ ಆಗಮಿಸಿದ ಸಿದ್ದರಾಮಯ್ಯ

ಬಜೆಟ್‌ ಪ್ರತಿ ಹಿಡಿದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಗೆ ಆಗಮಿಸಿದ್ದು, ಕೆಲವೇ ಕ್ಷಣಗಳಲ್ಲಿ ಬಜೆಟ್‌ ಮಂಡನೆ ಆರಂಭಿಸಲಿದ್ದಾರೆ.

Ramesha Doddapura

Karnataka Budget 2023: ಟೆಂಪಲ್‌ ರನ್‌ಗೆ ಬ್ರೇಕ್‌, ರಾಹುಕಾಲದ ನಂತರ ಬಜೆಟ್‌; ಜನತೆಯೇ ಜನಾರ್ದನ ಎಂದ ಸಿದ್ದರಾಮಯ್ಯ

ಸಾಮಾನ್ಯವಾಗಿ ಬಜೆಟ್‌ (Karnataka Budget 2023) ಮಂಡನೆಗೂ ಮುನ್ನ ದೇವಸ್ಥಾನಕ್ಕೆ ತೆರಳುವ ಸಂಪ್ರದಾಯಕ್ಕೆ ಸಿಎಂ ಸಿದ್ದರಾಮಯ್ಯ ಬ್ರೇಕ್‌ ಹಾಕಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಎರಡು ಬಜೆಟ್‌ ಮಂಡಿಸುವ ಮೊದಲು ಆರ್. ಟಿ. ನಗರದ ನಂಜುಂಡೇಶ್ವರ ದೇವಸ್ಥಾನ, ಬಾಲಬ್ರೂಯಿಯ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದರು. ಆದರೆ ಸಿದ್ದರಾಮಯ್ಯ ನೇರವಾಗಿ ವಿಧಾನಸೌಧದ ಶಾಸಕಾಂಗ ಪಕ್ಷದ ಸಭೆಗೆ ಆಗಮಿಸಿದರು.

Karnataka Budget 2023: ಟೆಂಪಲ್‌ ರನ್‌ಗೆ ಬ್ರೇಕ್‌, ರಾಹುಕಾಲದ ನಂತರ ಬಜೆಟ್‌; ಜನತೆಯೇ ಜನಾರ್ದನ ಎಂದ ಸಿದ್ದರಾಮಯ್ಯ

B Somashekhar

ವಿಧಾನಸೌಧದಲ್ಲಿ ಸಂಪುಟ ಸಭೆ ಆರಂಭ

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ಆರಂಭವಾಗಿದೆ. ಬಜೆಟ್‌ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆ ಆರಂಭವಾಗಿದ್ದು, ಸಭೆಯಲ್ಲಿ ಅನುಮೋದನೆ ಪಡೆದ ಕೆಲವೇ ನಿಮಿಷದಲ್ಲಿ ಸಿಎಂ ಬಜೆಟ್‌ ಮಂಡಿಸಲಿದ್ದಾರೆ.

Exit mobile version