ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹುನಿರೀಕ್ಷೆಯ ಬಜೆಟ್ ಮಂಡನೆ ಮಾಡಿದ್ದಾರೆ. ಸಿದ್ದರಾಮಯ್ಯ ಅವರು 14ನೇ ಬಾರಿ ಬಜೆಟ್ ಮಂಡನೆ ಮಾಡಿದ್ದು, ಮೂಲಕ ವಿಧಾನಸಭೆಯಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆಗೆ ಪಾತ್ರರಾಗಿದ್ದಾರೆ. ರಾಜ್ಯದ ಜನರ ಆಶೋತ್ತರಗಳನ್ನು ಈಡೇರಿಸುವ ದಿಸೆಯಲ್ಲಿ ಮಂಡಿಸಿದ ಬಜೆಟ್‌ನ ಕ್ಷಣಕ್ಷಣದ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: Karnataka Budget 2023: ಇಂದು ರಾಜ್ಯ ಬಜೆಟ್; ಸಿದ್ದರಾಮಯ್ಯ ದಾಖಲೆ, ಗ್ಯಾರಂಟಿ ಹೊರೆ; ಏನೇನು ಹೈಲೈಟ್?
ಕೆಲವೇ ಕ್ಷಣಗಳಲ್ಲಿ ಬಜೆಟ್ ಮಂಡನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಣಕಾಸು ಇಲಾಖೆ ಅಧಿಕಾರಿಗಳು ಬಜೆಟ್ ಪ್ರತಿಯನ್ನು ಹಸ್ತಾಂತರಿಸಲಿದ್ದಾರೆ. ಇನ್ನೇಲು ಕೆಲವೇ ನಿಮಿಷಗಳಲ್ಲಿ ಸಿದ್ದರಾಮಯ್ಯ ಅವರು 14ನೇ ಬಜೆಟ್ ಮಂಡನೆ ಮಾಡಲಿದ್ದಾರೆ.
8 ತಿಂಗಳು ಶಾಸಕರು ಹೆಚ್ಚು ಅನುದಾನ ಕೇಳಬೇಡಿ: ಸಿದ್ದರಾಮಯ್ಯ
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಶಾಸಕರಿಗೆ ಸಿದ್ದರಾಮಯ್ಯ ಹಲವು ಸಲಹೆ ನೀಡಿದ್ದಾರೆ. ಅಲ್ಲದೆ, ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಿರುವುದರಿಂದ ಶಾಸಕರು ಎಂಟು ತಿಂಗಳು ಹೆಚ್ಚುವರಿ ಅನುದಾನ ಕೇಳಬಾರದು. ಹಾಗೆಯೆ, ಶಾಸಕರು ಮತ್ತು ಸಚಿವರು ಪ್ರತಿಪಕ್ಷಗಳ ಟ್ರ್ಯಾಪ್‌ಗೆ ಸಿಗಬಾರದು. ಸ್ಟಿಂಗ್ ಆಪರೇಷನ್‌ಗಳು ನಡೆಯುತ್ತಿರುತ್ತವೆ. ಹಾಗಾಗಿ, ಹುಷಾರಾಗಿರಿ ಎಂದು ಸಿದ್ದರಾಮಯ್ಯ ಕಿವಿಮಾತು ಹೇಳಿದರು.
ವಿಧಾನಸೌಧಕ್ಕೆ ಬಂದ ಬಜೆಟ್ ಪ್ರತಿಗಳು
ಬಜೆಟ್ ಪ್ರತಿಗಳು ಇರುವ ಬಾಕ್ಸ್‌ಗಳನ್ನು ವಿಧಾನಸೌಧಕ್ಕೆ ತರಲಾಗಿದೆ. ಬಜೆಟ್ ಮಂಡನೆಗೂ ಮುನ್ನ ಸದನದ ಎಲ್ಲ ಸದಸ್ಯರಿಗೆ ಬಜೆಟ್ ಪ್ರತಿಗಳನ್ನು ವಿತರಣೆ ಮಾಡಲಾಗುತ್ತದೆ.
ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ ಎಂದ ಡಿಕೆಶಿ
ಜನರ ಹಿತವನ್ನು ಕಾಯುವ ದೃಷ್ಟಿಯಿಂದ ಬಜೆಟ್ ಮಂಡನೆ ಮಾಡುವ ಮೂಲಕ ನಾಡಿನ ಜನರಿಗೆ ಕೊಟ್ಟಿರುವ ಮಾತನ್ನು ಉಳಿಸಿಕೊಳ್ಳುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಪ್ರತಿಪಕ್ಷಗಳ ಸಲಹೆಗಳನ್ನೂ ಸ್ವೀಕರಿಸಿ, ಎಲ್ಲರಿಗೂ ಒಪ್ಪಿತವಾಗುವ ಬಜೆಟ್ ಮಂಡಿಸುತ್ತೇವೆ ಎಂದು ಹೇಳಿದರು.
ಸಿಎಲ್‌ಪಿ ಸಭೆ ಆರಂಭ
ಬಜೆಟ್ ಮಂಡನೆಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದೆ. ಮೈಸೂರು ಪಂಚೆ ಹಾಗೂ ಶಲ್ಯ ಧರಿಸಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆಗೆ ಆಗಮಿಸಿದ್ದಾರೆ. ಸಿಎಲ್‌ಪಿ ಸಭೆಯಲ್ಲಿ ಬಜೆಟ್ ಕುರಿತು ಚರ್ಚೆ ನಡೆಯಲಿದೆ. ಇದಾದ ಬಳಿಕ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಲಿದ್ದಾರೆ.