ಬೆಂಗಳೂರು: ರಾಜ್ಯದ ಶಿಕ್ಷಣ ವಲಯದ ಅಭಿವೃದ್ಧಿಗಾಗಿ ಅನೇಕ ಹೊಸ ಯೋಜನೆಗಳನ್ನು ಘೋಷಿಸಲಾಗಿದೆ. ಹಲವಾರು ಹಳೆಯ ಯೋಜನೆಳನ್ನು ವಿಸ್ತರಿಸಲಾಗಿದ್ದು, ಅವುಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ.
1.. ನೂತನ ʼಮುಖ್ಯಮಂತ್ರಿ ವಿದ್ಯಾಶಕ್ತಿ’ ಯೋಜನೆಯಡಿ ಸರ್ಕಾರಿ ಪದವಿಪೂರ್ವ ಮತ್ತು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ. 8 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ.
೨. ʼಹಳ್ಳಿ ಮುತ್ತುʼ ಎಂಬ ಯೋಜನೆಯಡಿ ಗ್ರಾಮೀಣ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶಾಲಾ ಶಿಕ್ಷಣವನ್ನು ಪೂರೈಸುವ 500 ಅತ್ಯುತ್ತಮ ವಿದ್ಯಾರ್ಥಿಗಳಿಗೆ ಅವರು ಸಿಇಟಿ ಮೂಲಕ ಸರ್ಕಾರಿ ಕೋಟಾದಲ್ಲಿ ಆಯ್ಕೆಯಾದ ವೃತ್ತಿಪರ ಶಿಕ್ಷಣದ ಸಂಪೂರ್ಣ ಶುಲ್ಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಭರಿಸಲಾಗುವುದು.
೩. ಸಾರಿಗೆ ನಿಗಮಗಳ ಮೂಲಕ 100 ಕೋಟಿ ರೂ. ವೆಚ್ಚದಲ್ಲಿ 1000 ಹೊಸ ಬಸ್ಸುಗಳ ಕಾರ್ಯಾಚರಣೆ. “ಮಕ್ಕಳ ಬಸ್ಸು’ ಎಂಬ ಯೋಜನೆ. ಇದರಿಂದ ಹೆಚ್ಚುವರಿ 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ.
೪. ರಾಜ್ಯದ 10.32 ಲಕ್ಷ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆಯಡಿ 725 ಕೋಟಿ ರೂ. ಮೊತ್ತ. ಭೂರಹಿತ ಕೃಷಿ ಕೂಲಿ ಕಾರ್ಮಿಕರು, ನೇಕಾರರು, ಮೀನುಗಾರರು, ಯೆಲ್ಲೋಬೋರ್ಡ್ ಟ್ಯಾಕ್ಸಿ ಚಾಲಕರು, ಆಟೋರಿಕ್ಷಾ ಚಾಲಕರು, ಸಿಂಪಿಗರ ಮಕ್ಕಳಿಗೂ ವಿಸ್ತರಣೆ.
೫. ʼವಿವೇಕ ಯೋಜನೆʼಯಡಿಯಲ್ಲಿ 7,601 ಶಾಲಾ ಮತ್ತು ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿ 1194 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನ. ಇಲಾಖೆಯ ಇತರೆ ಯೋಜನೆಗಳಡಿ ಹೆಚ್ಚುವರಿ 1,955 ಕೊಠಡಿ 382 ಕೋಟಿ ರೂ. ವೆಚ್ಚದಲ್ಲಿ ಅನುಮೋದನೆ.
೬. ಹೊಸ ಕೇಂದ್ರ ಪುರಸ್ಕೃತ ಯೋಜನೆ ʼಪಿಎಂ ಶ್ರೀʼ ಉತ್ತಮ ಮೂಲಭೂತ ಸೌಕರ್ಯ ಮತ್ತು ಸೂಕ್ತ ಕಲಿಕಾ ಸಂಪನ್ಮೂಲಗಳನ್ನು ಮಕ್ಕಳಿಗೆ ಒದಗಿಸಲು 100 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನ.
೭. ನರೇಗಾ ಸಂಯೋಜನೆಯೊಂದಿಗೆ 250 ಕೋಟಿ ರೂ. ಅಂದಾಜು ವೆಚ್ಚದಲ್ಲಿ 7,750 ಶೌಚಾಲಯ ನಿರ್ಮಾಣ.
೮. ರಾಜ್ಯದ 93 ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿ ಎಲ್ಲಾ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ 632 ಕೋಟಿ ರೂ. ಗಳ ವೆಚ್ಚದಲ್ಲಿ ಕೊಠಡಿ ದುರಸ್ತಿ, ಹೊಸ ಕೊಠಡಿ ಮುಂತಾದ ಅಭಿವೃದ್ಧಿ ಕಾರ್ಯಗಳು.
೯. 73 ಕರ್ನಾಟಕ ಪಬ್ಲಿಕ್ ಶಾಲೆಗಳು ಮತ್ತು 50 ಆದರ್ಶ ವಿದ್ಯಾಲಯಗಳಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ʼಸೃಷ್ಟಿʼ ಟಿಂಕರಿಂಗ್ ಪ್ರಯೋಗಾಲಯಗಳ ಸ್ಥಾಪನೆ.
೧೦. 23 ತಾಲ್ಲೂಕುಗಳಲ್ಲಿ ಹೊಸದಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳ ಸ್ಥಾಪನೆ. ಉತ್ತಮ ಎಸ್.ಎಸ್.ಎಲ್.ಸಿ. ಫಲಿತಾಂಶಕ್ಕಾಗಿ 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ʼ“ಅಭ್ಯುದಯ ಕಾರ್ಯಕ್ರಮʼ ಅನುಷ್ಠಾನ.
೧೧. ಚಿಕ್ಕಮಗಳೂರಿನಲ್ಲಿ ಹೊಸ ವಿಶ್ವವಿದ್ಯಾಲಯ ಸ್ಥಾಪನೆ. ಶಿಗ್ಗಾಂವ್ ತಾಲ್ಲೂಕಿನ ಬಂಕಾಪುರದಲ್ಲಿರುವ ಪಾಲಿಟೆಕ್ನಿಕನ್ನು ಸರ್ಕಾರಿ ಇಂಜಿನಿಯರಿಂಗ್ ಕಾಲೇಜನ್ನಾಗಿ ಉನ್ನತೀಕರಣ.
ಇದನ್ನೂ ಓದಿ: Karnataka Budget 2023: ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್‌ನಲ್ಲಿ ಏನೇನಿದೆ?; ಇಲ್ಲಿದೆ ಕೆಲವು ಮುಖ್ಯಾಂಶ
೧೨. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರು, ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಕರು ಹಾಗೂ ಸಹಾಯಕರು ಮತ್ತು ಗ್ರಂಥಪಾಲಕರ ಮಾಸಿಕ ಗೌರವಧನವನ್ನು 1,000 ರೂ.ದಂತೆ ಹೆಚ್ಚಿಸಲು ನಿರ್ಧರಿಸಲಾಗಿದೆ.
೧೩. ಅತ್ಯುತ್ತಮ ಸಾಧನೆ ಮಾಡುವ ವಿಶ್ವವಿದ್ಯಾಲಯಗಳಿಗೆ ತಲಾ 50 ಲಕ್ಷ ರೂ. ಗಳಂತೆ ಪ್ರೋತ್ಸಾಹಧನ.
೧೪. ಪ್ರತಿ ಜಿಲ್ಲೆಯಲ್ಲಿ ಒಂದರಂತೆ, ಅತಿ ಹೆಚ್ಚು ದಾಖಲಾತಿ ಹೊ೦ದಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸರ್ಕಾರಿ ಪಾಲಿಟೆಕ್ನಿಕ್‌ಗಳಿಗೆ ʼವೃದ್ಧಿʼ ಯೋಜನೆಯಡಿ ತಲಾ 2 ಕೋಟಿ ರೂ. ನಂತೆ ಒಟ್ಟು 124 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಸೌಲಭ್ಯ.
೧೫. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್.
೧೬. ವಿದ್ಯಾರ್ಥಿನಿಯರ ದೈಹಿಕ ಸಾಮರ್ಥ್ಯ ಮತ್ತು ಆತ್ಮವಿಶ್ವಾಸ ವೃದ್ಧಿಗೆ ಎಲ್ಲಾ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಯೋಗ ತರಬೇತಿ.
ಇದನ್ನೂ ಓದಿ: Karnataka Budget 2023 : ಒಂದು ಲಕ್ಷ ಸರ್ಕಾರಿ ಹುದ್ದೆಗಳಿಗೆ ನೇಮಕ; ಬಜೆಟ್‌ನಲ್ಲಿ ಬೊಮ್ಮಾಯಿ ಘೋಷಣೆ