Site icon Vistara News

Karnataka Budget 2023: ಆಯ್ದ 100 ವಿದ್ಯಾರ್ಥಿಗಳಿಗೆ ಸಾಂಪ್ರದಾಯಿಕ ಕೌಶಲ್ಯ ಪುನರುಜ್ಜೀವನ ತರಬೇತಿ

Skill-Developement

ಬೆಂಗಳೂರು: ಪ್ರಸಕ್ತ ವರ್ಷದಲ್ಲಿ 5 ಲಕ್ಷ ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿಯನ್ನು ನೀಡಲಾಗುವುದು. ಸಾಂಪ್ರದಾಯಿಕ ಕೌಶಲ್ಯಗಳ ಪುನರುಜ್ಜೀವನಕ್ಕಾಗಿ ಬಿದಿರಿನ ಉತ್ಪನ್ನಗಳಲ್ಲಿ ಮೇದಾರ ಸಮುದಾಯಕ್ಕೆ, ಚನ್ನಪಟ್ಟಣ ಗೊಂಬೆಗಳ ತಯಾರಿಕೆಗೆ, ಕಿನ್ನಾಳ ಕಲೆಗಾಗಿ ಚಿತ್ರಗಾರ ಸಮುದಾಯಕ್ಕೆ ಹಾಗೂ ಕುಂಬಾರಿಕೆ, ಬಿದರಿ ಕಲೆ, ಕಸೂತಿ ಮುಂತಾದ ಕಲೆಗಳಲ್ಲಿ ಆಯ್ದ ತಲಾ 100 ಅಭ್ಯರ್ಥಿಗಳಿಗೆ ಉನ್ನತ ಮಟ್ಟದ ಕೌಶಲ್ಯವರ್ಧನಾ ತರಬೇತಿ ನೀಡಲಾಗುವುದು ಎಂದು ಸಿಎಂ ಈ ವರ್ಷದ ಬಜೆಟ್‌ನಲ್ಲಿ ಪ್ರಕಟಿಸಿದ್ದಾರೆ.

ಕೌಶಲ್ಯಾಭಿವೃದ್ಧಿ ಇಲಾಖೆಯಡಿಯಲ್ಲಿ ಘೋಷಿಸಲಾದ ಹೊಸ ಕಾರ್ಯಕ್ರಮಗಳು ಹೀಗಿವೆ:

ಕೌಶಲ್ಯಾಭಿವೃದ್ಧಿ ಇಲಾಖೆಯಡಿಯಲ್ಲಿ ಇದುವರೆಗೂ ಖಾಸಗಿ ಸಂಸ್ಥೆಗಳ ಮೂಲಕ ನಡೆಯುತ್ತಿದ್ದ ಕೌಶಲ್ಯ ತರಬೇತಿಯನ್ನು ಸರ್ಕಾರಿ ಐಟಿಐ, ಪಾಲಿಟೆಕ್ನಿಕ್‌ಗಳ ಮೂಲಕವೇ ನೀಡಿ, ಕೌಶಲ್ಯ ತರಬೇತಿಯನ್ನು ಹೆಚ್ಚಿನ ಸಾಂಸ್ಥೀಕರಣ ಹಾಗೂ ವ್ಯವಸ್ಥೀಕರಣಗೊಳಿಸುವುದು.

ವಿದೇಶಿ ಉದ್ಯೋಗಾಕಾಂಕ್ಷಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಲು ಅಂತಾರಾಷ್ಟ್ರೀಯ ವಲಸೆ ಕೇಂದ್ರದ ವತಿಯಿಂದ 8 ಜಿಲ್ಲೆಗಳಲ್ಲಿ ಸಂಪನ್ಮೂಲ ಮತ್ತು ಮಾಹಿತಿ ಕೇಂದ್ರ. ವಿದೇಶಾಂಗ ವ್ಯವಹಾರಗಳ ಸಚಿವಾಲಯ 4 ಜಿಲ್ಲೆಗಳಲ್ಲಿ ಪೂರ್ವ ನಿರ್ಗಮನದ ತರಬೇತಿ ಕೇಂದ್ರ ಸ್ಥಾಪಿಸಲು ಅನುಮೋದನೆ.‌

ಇದನ್ನೂ ಓದಿ: Karnataka Budget 2023 : ಒಂದು ಲಕ್ಷ ಸರ್ಕಾರಿ ಹುದ್ದೆಗಳಿಗೆ ನೇಮಕ; ಬಜೆಟ್‌ನಲ್ಲಿ ಬೊಮ್ಮಾಯಿ ಘೋಷಣೆ

ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿ 50 ವರ್ಷಗಳನ್ನು ಪೂರೈಸಿದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಪಾರಂಪರಿಕ ಸಂಸ್ಥೆಗಳಾಗಿ ಅಭಿವೃದ್ಧಿ ಪಡಿಸಿ, ಆ ಭಾಗದ ಯುವಕರಿಗೆ ಕೈಗಾರಿಕೆಗಳ ಬೇಡಿಕೆಗಳಿಗನುಗುಣವಾಗಿ ತಾಂತ್ರಿಕ ಜ್ಞಾನವನ್ನು ನೀಡಲು ಹೊಸ ಯಂತ್ರೋಪಕರಣ ಮತ್ತು ಸಲಕರಣೆಗಳನ್ನು 100 ಕೋಟಿ ರೂ. ಗಳ ವೆಚ್ಚದಲ್ಲಿ ಖರೀದಿ.

ʼಕಲಿಕೆ ಜೊತೆಗೆ ಕೌಶಲ್ಯ’ ಎಂಬ ವಿನೂತನ ಕಾರ್ಯಕ್ರಮದಡಿ ಕೈಗಾರಿಕಾ ಆದ್ಯತಾ ಮತ್ತು ಉದ್ಯಮಶೀಲತಾ ತರಬೇತಿಗಳನ್ನು ಸರ್ಕಾರಿ ಪ್ರಥಮ ದರ್ಜೆ, ಇಂಜಿನಿಯರಿಂಗ್‌, ಹಾಗೂ ಐ.ಟಿ.ಐ ಕಾಲೇಜುಗಳ ಮೂಲಕ ವಿದ್ಯಾರ್ಥಿಗಳಿಗೆ ನೀಡಿಕೆ. ಇದೇ ಮಾದರಿಯಲ್ಲಿ ಕ್ರೈಸ್‌ ಸಂಸ್ಥೆಯ ಅಧೀನದ ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೂ ಹೆಚ್ಚುವರಿ ತಾಂತ್ರಿಕ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ.

ಬೆ೦ಗಳೂರು ನಗರದಲ್ಲಿ ವಿಶೇಷ ಚೇತನ ಮಕ್ಕಳಿಗೆ ಹೊಂದುವಂತಹ ಕೌಶಲ್ಯ ತರಬೇತಿ ನೀಡಿ ಅವರನ್ನು ಉದ್ಯೋಗಸ್ಥರನ್ನಾಗಿ ಮಾಡಲು ಅಲ್ಪಾವಧಿ ತರಬೇತಿ ಕೋರ್ಸ್‌ಗಳಿಗೆ ಒತ್ತು ನೀಡಿ ವಿಶೇಷ ಕೌಶಲ್ಯ ತರಬೇತಿ.

ಇದನ್ನೂ ಓದಿ: karnataka budget 2023 : ಕ್ರೀಡಾಸಕ್ತರ ಪಾಲಿಗೂ ಸೂಪರ್ ಬಜೆಟ್​ ಕೊಟ್ಟ ಸಿಎಂ ಬೊಮ್ಮಾಯಿ

Exit mobile version