Karnataka Budget 2023: ರಾಜ್ಯ ಸರ್ಕಾರದ ಬಜೆಟ್‌ ಸಾಮಾನ್ಯ ಜನರ ಕಿವಿಗೆ ಹೂವು ಇಟ್ಟಂತೆ ಇದೆ: ಎಚ್.ಎಸ್. ಸುಂದರೇಶ್ - Vistara News

ಕರ್ನಾಟಕ

Karnataka Budget 2023: ರಾಜ್ಯ ಸರ್ಕಾರದ ಬಜೆಟ್‌ ಸಾಮಾನ್ಯ ಜನರ ಕಿವಿಗೆ ಹೂವು ಇಟ್ಟಂತೆ ಇದೆ: ಎಚ್.ಎಸ್. ಸುಂದರೇಶ್

Karnataka Budget 2023: ಚುನಾವಣೆಯ ಹಿನ್ನೆಲೆಯಲ್ಲಿ ಈ ಬಜೆಟ್ ಮೂಡಿ ಬಂದಿದ್ದು, ಮತದಾರನ ಕಿವಿಗೆ ಹೂ ಇಟ್ಟಿದ್ದಾರೆ ಎಂದು ದೂರಿದ್ದಾರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್.

VISTARANEWS.COM


on

District Congress President HS Sundaresh shivamogga
ಕಿವಿಗೆ ಹೂ ಇಟ್ಟುಕೊಂಡೇ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ʻಈ ಬಾರಿಯ ಬಜೆಟ್‌ ನಲ್ಲಿ ರಾಜ್ಯ ಸರ್ಕಾರ ಸಾಮಾನ್ಯ ಜನರ ಕಿವಿಗೆ ಹೂವು ಇಟ್ಟಿದ್ದಾರೆʼ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್ (HS Sundaresh) ಕಿವಿಗೆ ಹೂ ಇಟ್ಟುಕೊಂಡೇ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ.

ʻಈ ಬಾರಿಯ ಬಜೆಟ್ ಬೋಗಸ್ ಬಜೆಟ್ ಆಗಿದೆ. ದುರ್ಬಲ ಮತ್ತು ಸುಳ್ಳಿನ ಬಜೆಟ್. ಬಜೆಟ್‌ ನಲ್ಲಿ ಯಾವ ತೂಕವೂ ಇಲ್ಲ. ಕಳೆದ ವರ್ಷದ ಬಜೆಟ್‌ ನಲ್ಲಿ ಘೋಷಿಸಿದ ಮತ್ತು ಅನುಷ್ಠಾನಕ್ಕೆ ಜಾರಿಗೆ ತರದ ಅಂಶಗಳನ್ನೇ ಈ ಬಜೆಟ್‌ ನಲ್ಲೂ ಮುಂದುವರಿಸಲಾಗಿದೆʼ ಎಂದು ದೂರಿದ್ದಾರೆ.

ಇದನ್ನೂ ಓದಿ: Karnataka Election: ಎಲ್ಲ ಪಕ್ಷಗಳಲ್ಲಿ ಕುಟುಂಬ ರಾಜಕಾರಣವಿದೆ, ಆದ್ರೆ ಬಿಜೆಪಿಗೆ ಕಾರ್ಯಕರ್ತರೇ ಕುಟುಂಬ: ಜೆ.ಪಿ.ನಡ್ಡಾ

ʻಚುನಾವಣೆಯ ಹಿನ್ನೆಲೆಯಲ್ಲಿ ಈ ಬಜೆಟ್ ಮೂಡಿ ಬಂದಿದ್ದು, ಮತದಾರನ ಕಿವಿಗೆ ಹೂ ಇಟ್ಟಿದ್ದಾರೆ. ರಾಜ್ಯ ಸರ್ಕಾರವು ಕಳೆದ ಬಾರಿ ಸುಮಾರು 600 ಭರವಸೆಗಳನ್ನು ನೀಡಿತ್ತು. ಈ ಪೈಕಿ 50 ಮಾತ್ರ ಜಾರಿಗೆ ಬಂದಿದ್ದು, ಇನ್ನೂ 550 ಭರವಸೆಗಳು ಹಾಗೆಯೇ ಉಳಿದುಕೊಂಡಿವೆ. ರೈತರಿಗೆ ಈ ಬಜೆಟ್ ನಿಂದ ಯಾವ ಲಾಭವೂ ಇಲ್ಲ. ಶಿವಮೊಗ್ಗ ಜಿಲ್ಲೆಗೆ ಯಾವ ಕೊಡುಗೆಯೂ ಇಲ್ಲ. ಭದ್ರಾವತಿ ಕಾರ್ಖಾನೆಗಳ ಪುನಶ್ಚೇತನದ ಭರವಸೆಯೂ ಇಲ್ಲ. ಮಠಗಳಿಗೆ ಆದ್ಯತೆ ನೀಡುವ ಮೂಲಕ ವೋಟ್ ಬ್ಯಾಂಕ್ ರಾಜಕಾರಣ ನಡೆದಿದೆ. ಎಲ್ಲಾ ವರ್ಗಗಳ ಹಿತಾಸಕ್ತಿಯನ್ನು ಕಡೆಗಣಿಸಲಾಗಿದೆʼ ಎಂದು ದೂರಿದ್ದಾರೆ.

ಇದನ್ನೂ ಓದಿ: INDvsAUS : ಕುಟುಂಬದೊಂದಿಗೆ ಡೆಲ್ಲಿ ಸುತ್ತಿದ ಆಸ್ಟ್ರೇಲಿಯಾದ ಬ್ಯಾಟರ್ ಡೇವಿಡ್ ವಾರ್ನರ್​

“ವಿಮಾನ ನಿಲ್ದಾಣದ ಸಂತ್ರಸ್ತರ ಸಮಸ್ಯೆಯನ್ನು ಈಡೇರಿಸಿಲ್ಲ. ಕೋಟ್ಯಂತರ ರೂ. ಕಾಮಗಾರಿಗಳನ್ನು ಪ್ರಧಾನಿ ಉದ್ಘಾಟನೆ ಮಾಡುತ್ತಾರೆ ಎಂದು ಹೇಳಿದ್ದಾರೆ. ಆ ಮೂಲಕ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಶೇ. 40 ರಷ್ಟು ಕಮಿಷನ್ ಕೂಡ ಉದ್ಘಾಟನೆ ಮಾಡಿದಂತಾಗುತ್ತದೆ. ಎಲ್ಲಿ ನೋಡಿದರೂ ಭ್ರಷ್ಟಾಚಾರ, ಅವ್ಯವಹಾರ ತುಂಬಿ ತುಳುಕುತ್ತಿದೆ. ಅಭಿವೃದ್ಧಿ ಶೂನ್ಯವಾಗಿದೆ” ಎಂದು ಸುಂದರೇಶ್ ಟೀಕಿಸಿದ್ದಾರೆ.

ಇದನ್ನೂ ಓದಿ: ಗೋಧ್ರಾ ರೈಲು ಹತ್ಯಾಕಾಂಡ ದೋಷಿಗಳಿಗೆ ಗಲ್ಲು ಶಿಕ್ಷೆಯನ್ನೇ ವಿಧಿಸಿ: ಸುಪ್ರೀಂ ಕೋರ್ಟ್‌ಗೆ ಗುಜರಾತ್ ಸರ್ಕಾರ ಮನವಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Road Rage : ನಿಲ್ಲದ ರೋಡ್‌ ರೇಜ್; ನಿವೃತ್ತ ಬ್ರಿಗೇಡಿಯರ್ ಕಾರು ಅಡ್ಡಗಟ್ಟಿ ಬೆಲ್ಟ್‌ನಿಂದ ಹೊಡೆದು ಹಲ್ಲೆ

Road Rage : ಬೆಂಗಳೂರಲ್ಲಿ ರೋಡ್ ರೇಜ್ ಪ್ರಕರಣಗಳು ಕಂಟ್ರೋಲ್‌ಗೆ ಸಿಗದಂತಾಗಿದೆ. ಇಲ್ಲಿಯವರೆಗೆ ಸಾರ್ವಜನಿಕರ ಮೇಲೆ ದರ್ಪ ತೋರಿಸುತ್ತಿದ್ದವರು, ಈಗ ಮಾಜಿ ಯೋಧರ ಮೇಲೆ ಹಲ್ಲೆ ನಡೆಸಿದ್ದಾರೆ. ಸುಖಾಸುಮ್ಮನೆ ಹಲ್ಲೆ ಮಾಡಿ ಕಿರಿಕ್‌ ಮಾಡಿದ ಕಿಡಿಗೇಡಿಗಳ ಮೇಲೆ ಕೇಸ್‌ ದಾಖಲಾಗಿದ್ದು, ಪೊಲೀಸರು ಹುಡುಕಾಟ ಶುರುಮಾಡಿದ್ದಾರೆ.

VISTARANEWS.COM


on

By

Road Rage in Bengaluru
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರೋಡ್ ರೇಜ್ (Road Rage) ಕೇಸ್‌ಗಳು ಹೆಚ್ಚಾಗುತ್ತಿವೆ. ಪೊಲೀಸರ ಯಾವ ವಾರ್ನಿಂಗ್‌ಗಳು ಕೂಡ ವರ್ಕೌಟ್‌ ಆಗುತ್ತಿಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಬೆಂಗಳೂರಿನ ಬಿಇಎಲ್ ರಸ್ತೆಯಲ್ಲಿ ನಿವೃತ್ತ ಬ್ರಿಗೇಡಿಯರ್ ರವಿ ಮುನಿಸ್ವಾಮಿ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾರೆ.

ಕಾರಿನಲ್ಲಿ ಹೋಗುತ್ತಿದ್ದ ರವಿ ಮುನಿಸ್ವಾಮಿಗೆ ಕಿಡಿಗೇಡಿಗಳು ಅಡ್ಡ ಹಾಕಿದ್ದಾರೆ. ಏನೆಂದು ಕೇಳಲು ರವಿ ಅವರು ಕಾರಿನ ಗ್ಲಾಸ್ ಇಳಿಸಿದ್ದಾರೆ. ಆಗ ಗಾಡಿ ಕೀ ಕಿತ್ತುಕೊಂಡು, ಅವಾಚ್ಯ ಶಬ್ಧಗಳಿಂದ ನಿಂದಿಸಿ ನಿವೃತ್ತ ಯೋಧನನ್ನು ಕಾರಿನಿಂದ ಹೊರಗೆಳೆದಿದ್ದಾರೆ. ಅಷ್ಟೆ ಅಲ್ಲದೆ ಮೂವರು ಸುತ್ತುವರಿದು ಬೆಲ್ಟ್ ಹಾಗೂ ಕೈಗಳಿಂದ ಹಲ್ಲೆ ನಡೆಸಿದ್ದಾರೆ.

ರವಿ ಮುನಿಸ್ವಾಮಿಯವರೇ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದಂತೆ ಅವರು ಹಲ್ಲೆ ನಡೆಸುತ್ತಿದ್ದ ವೇಳೆ ತನಗೆ ವಯಸಾದ ಕಾರಣ ನಾನು ಅಸಹಾಯಕನಾಗಿದ್ದೆ ಎಂದು ಹೇಳಿಕೊಂಡಿದ್ದಾರೆ. ಘಟನೆ ವೇಳೆ ಎದೆ ಭಾಗ, ಕೈ ಬೆರಳಿಗೆ ಗಾಯವಾಗಿದೆ. ಅಷ್ಟೆ ಅಲ್ಲದೆ ಆರೋಪಿಗಳು ಹಲ್ಲೆ ನಡೆಸಿ ಮೊಬೈಲ್‌ ಅನ್ನು ಒಡೆದು ಹಾಕಿದ್ದಾರೆಂದು ಆರೋಪಿಸಿದ್ದಾರೆ.

ರವಿ ಮುನಿಸ್ವಾಮಿ ನಿವೃತ್ತ ಬ್ರಿಗೇಡಿಯರ್ ಹಾಗೂ ಕಳೆದ ಬಾರಿ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡಿದ್ದರು. ಸದ್ಯ ಸದಾಶಿವನಗರ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: Robbery case : ಎಎಸ್‌ಐ ಬೈಕ್‌ ಎಗರಿಸಿ ಹೆದ್ದಾರಿಯಲ್ಲಿ ರಾಬರಿ; ಖತರ್ನಾಕ್‌ ಗ್ಯಾಂಗ್‌ ಅರೆಸ್ಟ್‌

ಮೆಜೆಸ್ಟಿಕ್‌ ಟು ಲಾಲ್‌ಬಾಗ್‌ಗೆ ಆಟೋ ಚಾರ್ಜ್‌ 400 ರೂ; ಸೆಕೆಂಡ್‌ಗೆ 5ರೂ ಏರಿಕೆಗೆ ಪ್ರಯಾಣಿಕ ಕಕ್ಕಾಬಿಕ್ಕಿ

ಬೆಂಗಳೂರು: ಬೆಂಗಳೂರಲ್ಲಿ ಆಟೋ ಮೀಟರ್‌ಗೆ ಪ್ರಯಾಣಿಕರೊಬ್ಬರು (Auto Fare) ಬೆಚ್ಚಿ ಬಿದ್ದಿದ್ದಾರೆ. ಅಲಾಮ್ ಸುಲ್ತಾನ್ ಎಂಬಾತ ಮೆಜೆಸ್ಟಿಕ್‌ನಿಂದ ಆಟೋ ಹಿಡಿದು ಲಾಲ್ ಬಾಗ್‌ಗೆ ಬಂದು ಇಳಿದಿದ್ದರು. ಈ ವೇಳೆ ಆಟೋ ಮೀಟರ್‌ ಚಾರ್ಜ್‌ ಕಂಡು ಶಾಕ್‌ ಆಗಿದ್ದರು.

ಯಾಕಂದರೆ ಮೆಜೆಸ್ಟಿಕ್‌ನಿಂದ ಲಾಲ್‌ಬಾಗ್‌ 5 ರಿಂದ 6 ಕಿ.ಮೀ ಅಷ್ಟೇ ಅಂತರವಿದ್ದು, ಆಟೋ ಚಾರ್ಜ್‌ 400 ರೂಪಾಯಿ ತೋರಿಸಿತ್ತು. ಅಂದರೆ ಸೆಕೆಂಡ್‌ಗೆ 5 ರೂಪಾಯಿನಂತೆ ಮೀಟರ್ ಚಾರ್ಜ್‌ ಆಗಿತ್ತು. ಆಟೋ ಚಾಲಕನಿಗೆ ಅಲಾಮ್‌ ಇದನ್ನೂ ಪ್ರಶ್ನಿಸಿದ್ದಕ್ಕೆ 400 ರೂಪಾಯಿ ಆದರೂ ಡಬಲ್ ಮೀಟರ್ ಚಾರ್ಚ್ ಕೊಡಬೇಕೆಂದು ಡಿಮ್ಯಾಂಡ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಅಲಾಮ್ ಸುಲ್ತಾನ್ ಈ ಬಗ್ಗೆ ಫೋಟೊ ಸಮೇತ ಪೊಲೀಸರಿಗೆ ಪೋಸ್ಟ್ ಮಾಡಿ ದೂರು ನೀಡಿದ್ದಾರೆ. ಇನ್ನೂ ಹೆಚ್ಚುವರಿ ಹಣ ಕೊಡದ ಹಿನ್ನೆಲೆಯಲ್ಲಿ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿರುವ ಆರೋಪವೂ ಕೇಳಿ ಬಂದಿದೆ.

ಇದನ್ನೂ ಓದಿ: Theft Case : ಹಗಲಿನಲ್ಲಿ ಸ್ವಿಗ್ಗಿ ಡೆಲಿವರಿ ಬಾಯ್‌; ರಾತ್ರಿಯಲ್ಲಿ ಬೈಕ್ ಕದಿಯುವ ಕಳ್ಳ

ಟಿನ್‌ ಫ್ಯಾಕ್ಟರಿಯಿಂದ ಉಬರ್ ಆಟೋ ಹತ್ತಿದವನಿಗೆ 1 ಕೋಟಿ ರೂ. ಚಾರ್ಜ್‌

ಬೆಂಗಳೂರು: ಆಂಧ್ರ ಪ್ರದೇಶದಿಂದ ಬೆಂಗಳೂರಿಗೆ ಬಂದಿದ್ದ ಆ ವ್ಯಕ್ತಿ ತುರ್ತು ಕೆಲಸಕ್ಕೆಂದು ಉಬರ್‌ ಆಟೋ (Uber Auto) ಬುಕ್‌ ಮಾಡಿದ್ದರು. ಟಿನ್‌ ಫ್ಯಾಕ್ಟರಿಯಿಂದ ಆಟೋ ಹತ್ತಿ ಕೋರಮಂಗಲಕ್ಕೆ ಇಳಿದ ಪ್ರಯಾಣಿಕ (Uber Auto Fare) ತಬ್ಬಿಬ್ಬಾಗಿದ್ದರು. ಯಾಕೆಂದರೆ ಟಿನ್‌ ಫ್ಯಾಕ್ಟರಿಯಿಂದ ಕೋರಮಂಗಲಕ್ಕೆ ಜಸ್ಟ್‌ 15 ಕಿ.ಮೀ ದೂರದ ಪ್ರಯಾಣಕ್ಕೆ ಆಟೋ ಚಾರ್ಜ್‌ 500-1000 ರೂ. ಅಲ್ಲ ಬದಲಿಗೆ 1 ಕೋಟಿ ರೂ. (Uber Auto Fare) ತೋರಿಸಿತ್ತು.

ಆ್ಯಪ್ ಆಧಾರಿತ ಉಬರ್‌ ಆಟೋ ಬುಕ್‌ ಮಾಡಿ ಪ್ರಯಾಣಿಸಿದ ಆಂಧ್ರ ಪ್ರಯಾಣಿಕ ನಿಜಕ್ಕೂ ಕಕ್ಕಾಬಿಕ್ಕಿಯಾಗಿದ್ದರು. ಕೆಲಸ ನಿಮಿತ್ತ ಹೊರಹೋಗಲು ಉಬರ್ ಆಟೋ ಬುಕ್‌ ಮಾಡಿ ಟಿನ್‌ಫ್ಯಾಕ್ಟರಿಯಿಂದ ಆಟೋ ಹತ್ತಿ ಕೋರಮಂಗಲದಲ್ಲಿ ಬಂದು ಇಳಿದಿದ್ದರು. ಆಟೋ ಚಾರ್ಜ್‌ ಕೊಡೊಣಾ ಎಂದು ಪಾಕೆಟ್‌ನಿಂದ ಪರ್ಸ್‌ ತೆಗೆದು ಮೊಬೈಲ್‌ ನೋಡಿದಾಗ ಶಾಕ್‌ವೊಂದು ಕಾದಿತ್ತು.

Uber auto fare
ಪ್ರಯಾಣಿಕನಿಗೆ ಶಾಕ್‌

ಉಬರ್‌ ಆ್ಯಪ್‌ನಲ್ಲಿ ತೋರಿಸಿದ ಆಟೋ ಚಾರ್ಜ್‌ ನೋಡಿ, ಒಂದು ಕ್ಷಣ ತಲೆ ತಿರುಗುವಂತೆ ಮಾಡಿತ್ತು. ಯಾಕಂದರೆ ಟಿನ್‌ ಫ್ಯಾಕ್ಟರಿಯಿಂದ ಕೋರಮಂಗಲಗೆ 1,03,11,055 ರೂ. ಆಟೋ ಚಾರ್ಜ್ ತೋರಿತ್ತು. 207 ರೂ. ಆಗಿದ್ದ ಜಾಗದಲ್ಲಿ ಕೋಟಿ ರೂ. ನೋಡುತ್ತಿದ್ದಂತೆ ಬೆಚ್ಚಿಬಿದ್ದಿದ್ದ.

ಸದ್ಯ ಕೋಟಿ ರೂ. ಆಟೋ ಚಾರ್ಜ್‌ ತೋರಿಸುತ್ತಿದ್ದ ಉಬರ್ ಆ್ಯಪ್‌ನ ವಿಡಿಯೊ ಮಾಡಿ ಪ್ರಯಾಣಿಕ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾರೆ. ಇಂತಹ ಆ್ಯಪ್ ಆಧಾರಿತ ಆಟೋಗಳನ್ನು ಬಳಕೆ ಮಾಡದಂತೆ ಮನವಿ ಮಾಡಿದ್ದಾರೆ. ಕೂಡಲೇ ಇಂತಹ ಆ್ಯಪ್‌ಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಪ್ರಯಾಣಿಕರಿಂದ ಕಂಪೆನಿಗಳು ಹೇಗೆಲ್ಲ ಸುಲಿಗೆ ಮಾಡುತ್ತವೆ. 100-200ಪ್ರಯಾಣದ ಶುಲ್ಕಕ್ಕೆ 1 ಕೋಟಿ ರೂ. ತೋರಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Lok Sabha Election 2024: ಡಾ. ಮಂಜುನಾಥ್‌ ಬೆಂಬಲಿಸಿದ ರೈತನ ಜಮೀನಿಗೆ ಬೆಂಕಿ; ಇದು ಕೈ ಕಾರ್ಯಕರ್ತರ ಕೃತ್ಯ ಎಂದ ಬಿಜೆಪಿ!

Lok Sabha Election 2024: ಕುಣಿಗಲ್‌ನಲ್ಲಿ ಜಮೀನೊಂದಕ್ಕೆ ಬೆಂಕಿ ಹಚ್ಚಿ ಅಡಿಕೆ, ತೆಂಗು ತೋಟವನ್ನು ನಾಶ ಮಾಡಲಾಗಿದೆ. ಈ ಸಂಬಂಧ ಕುಣಿಗಲ್ ತಾಲೂಕಿನ ರೈತ ಪ್ರೇಮ್ ಕುಮಾರ್ ಕಣ್ಣೀರಿಟ್ಟಿದ್ದಾರೆ. ರಾಜಕೀಯ ದ್ವೇಷಕ್ಕೆ ನನ್ನ ತೋಟವನ್ನೇ ಹಾಳು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸಹ ಈ ಬಗ್ಗೆ ಟ್ವೀಟ್‌ ಮಾಡಿ ಕಿಡಿಕಾರಿದೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ವಾಗ್ದಾಳಿ ನಡೆಸಿದೆ. ಆದರೆ, ಈ ಬಗ್ಗೆ ಕಾಂಗ್ರೆಸ್‌ ಏನೂ ಪ್ರತಿಕ್ರಿಯೆ ನೀಡಿಲ್ಲ.

VISTARANEWS.COM


on

Lok Sabha Election 2024 Farmer farm set on fire in support of CN Manjunath
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ (Bangalore Rural Lok Sabha constituency) ಚುನಾವಣಾ ಕಣ ದಿನೇ ದಿನೆ ರಂಗೇರುತ್ತಿದೆ. ಬಿಜೆಪಿ ಹಾಗೂ ಕಾಂಗ್ರೆಸ್‌ ಮಧ್ಯೆ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದೆ. ಎರಡೂ ಪಕ್ಷಗಳಲ್ಲೂ ಗೆಲುವಿಗೆ ವಿಶೇಷ ರೀತಿಯಲ್ಲಿ ಕಾರ್ಯತಂತ್ರಗಳನ್ನು ಹೆಣೆಯಲಾಗುತ್ತಿದೆ. ಇದಲ್ಲದೆ ಗಲಾಟೆಗೂ ಅದು ಕಾರಣವಾಗಿದೆ. ಇನ್ನು ಎನ್‌ಡಿಎ ಮೈತ್ರಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ (Dr CN Manjunath) ಅವರನ್ನು ಬೆಂಬಲಿಸಿದ ವ್ಯಕ್ತಿಯೊಬ್ಬರ ತೋಟಕ್ಕೆ ದುಷ್ಕರ್ಮಿಗಳು ಬೆಂಕಿ ಹಾಕಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರಿಂದ ಈ ಕೃತ್ಯ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

ಕುಣಿಗಲ್‌ನಲ್ಲಿ ಜಮೀನೊಂದಕ್ಕೆ ಬೆಂಕಿ ಹಚ್ಚಿ ಅಡಿಕೆ, ತೆಂಗು ತೋಟವನ್ನು ನಾಶ ಮಾಡಲಾಗಿದೆ. ಈ ಸಂಬಂಧ ಕುಣಿಗಲ್ ತಾಲೂಕಿನ ರೈತ ಪ್ರೇಮ್ ಕುಮಾರ್ ಕಣ್ಣೀರಿಟ್ಟಿದ್ದಾರೆ. ರಾಜಕೀಯ ದ್ವೇಷಕ್ಕೆ ನನ್ನ ತೋಟವನ್ನೇ ಹಾಳು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ, ಈ ಬಗ್ಗೆ ಕಾಂಗ್ರೆಸ್‌ ಏನೂ ಪ್ರತಿಕ್ರಿಯೆ ನೀಡಿಲ್ಲ.

ಬಿಜೆಪಿ ಆಕ್ರೋಶ

ಈ ಸಂಬಂಧ ಟ್ವೀಟ್‌ ಮಾಡಿರುವ ಬಿಜೆಪಿಯು ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. “ರಾಜ್ಯದಲ್ಲಿ ಚುನಾವಣೆ ಗೆಲ್ಲಲು ಕೊತ್ವಾಲ್ ಗ್ಯಾಂಗ್ ಆ್ಯಕ್ಟಿವ್ ಆಗಿದೆ‌. ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರ ಆ ದಿನಗಳ ಗೂಂಡಾಗಳು ಈ ದಿನಗಳಲ್ಲೇ ಬೆಂಕಿ ಹಿಡಿದು ಭಸ್ಮ ಮಾಡಲು ನಿಂತಿದ್ದಾರೆ. ಡಾ. ಸಿ. ಎನ್. ಮಂಜುನಾಥ್ ಅವರನ್ನು ಕುಣಿಗಲ್ ತಾಲೂಕಿನ ರೈತ ಪ್ರೇಮ್ ಕುಮಾರ್ ಬೆಂಬಲಿಸಿದ ಕಾರಣಕ್ಕೆ ಅವರ ತೋಟವನ್ನೇ ಸುಟ್ಟು ಕರಕಲು ಮಾಡಿದ್ದಾರೆ. ಒಂದು ಕಡೆ ಚುನಾವಣಾ ಅಧಿಕಾರಿಗಳಿಂದ ಊಟ ಬಡಿಸಿಕೊಳ್ಳುವ ಉಪ ಮುಖ್ಯಮಂತ್ರಿಗಳು, ಎಲ್ಲೆಡೆ ಮತದಾರರನ್ನು ಬೆದರಿಸುತ್ತಾ ಧಮ್ಕಿ ಹಾಕಿದ ಪರಿಣಾಮವೇ ಈ ಘಟನೆಗೆ ಕಾರಣ” ಎಂದು ಬಿಜೆಪಿ ದೂರಿದೆ.

ಏಪ್ರಿಲ್‌ 26ರಂದು ಬೆಂಗಳೂರಲ್ಲಿ ಐಟಿ ಕಂಪನಿಗಳಿಗೆ ಕಡ್ಡಾಯ ರಜೆ

ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಏಪ್ರಿಲ್‌ 26ರಂದು ನಡೆಯಲಿದೆ. ಈ ದಿನ (Voting Day) ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕಿದೆ. ಇನ್ನು ಐಟಿ – ಬಿಟಿ (IT BT Sector) ಮಂದಿ ಮತದಾನದ ವೇಳೆ ಹಿಂದೇಟು ಹಾಕಬಾರದು. ಎಲ್ಲರೂ ಮತ ಚಲಾವಣೆ ಮಾಡಬೇಕು ಎಂಬ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಅಂದು ಕಡ್ಡಾಯವಾಗಿ ರಜೆ ನೀಡಬೇಕು ಎಂದು ಬಿಬಿಎಂಪಿ ಆಯುಕ್ತ, ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ತುಷಾರ್‌ ಗಿರಿನಾಥ್‌ (Tushar Girinath) ಆದೇಶವನ್ನು ಹೊರಡಿಸಿದ್ದಾರೆ. ಅಲ್ಲದೆ, ಮತದಾನದ ದಿನದಂದು ಸಂಬಳ ಸಹಿತ ರಜೆ ನೀಡಲು ಐಟಿ ಕಂಪನಿಗಳು ಸಹ ಒಪ್ಪಿಗೆ ನೀಡಿವೆ.

ಮತದಾನ ಸಂಬಂಧ ಐಟಿಬಿಟಿ ಕಂಪನಿಗಳಿಗೆ ಬಿಬಿಎಂಪಿಯಿಂದ ಆದೇಶವನ್ನು ರವಾನೆ ಮಾಡಲಾಗಿದೆ. ಮತದಾನದ ದಿನ ಕಂಪನಿಗಳು ಕಡ್ಡಾಯವಾಗಿ ರಜೆ ನೀಡಬೇಕು. ಸಿಬ್ಬಂದಿ ಮತದಾನ ಮಾಡುವ ಸಂಬಂಧ ರಜೆಯನ್ನು ಕೊಡಬೇಕು. ಈಗಾಗಲೇ ರಾಜ್ಯ ಸರ್ಕಾರ ಕೂಡ ರಜೆಯನ್ನು ಘೋಷಣೆ ಮಾಡಿದೆ. ಅಲ್ಲದೆ, ಈ ಸಂಬಂಧ ಬಿಬಿಎಂಪಿಯಿಂದ ಔಟರ್ ರಿಂಗ್‌ರೋಡ್ ಅಸೋಸಿಯೇಷನ್‌ಗೆ ಪತ್ರವೂ ರವಾನೆಯಾಗಿದೆ.

ಇನ್ನು ಮತದಾನ ಹೆಚ್ಚಳ ಸಂಬಂಧ ಐಟಿ ಬಿಟಿ ಕಂಪನಿಗಳ ಜತೆಗೆ ಬಿಬಿಎಂಪಿ ಇಂದು (ಮಂಗಳವಾರ) ಸಭೆ ನಡೆಸಲಾಗಿದೆ. ಸಭೆ ಮಾಡಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಲಾಗುತ್ತಿದೆ. ಅಲ್ಲದೆ, ತಮ್ಮ ತಮ್ಮ ನೌಕರರು ತಪ್ಪದೇ ಮತದಾನ ಮಾಡಲು ಯಾವ ರೀತಿ ಪ್ರೋತ್ಸಾಹವನ್ನು ನೀಡಬಹುದು ಎಂಬ ಬಗ್ಗೆಯೂ ಚರ್ಚೆಗಳು ನಡೆಯಿತು.

ಒಪ್ಪಿದ ಐಟಿ ಬಿಟಿ ಕಂಪನಿಗಳು

ಮತದಾನದ ದಿನದಂದು ಸಂಬಳ ಸಹಿತ ರಜೆ ನೀಡಲು ಐಟಿ ಕಂಪನಿಗಳು ಸಹ ಒಪ್ಪಿಗೆ ನೀಡಿವೆ. ಬಿಬಿಎಂಪಿ ಜತೆ ನಡೆದ ಸಭೆಯಲ್ಲಿ ಪೇಡ್ ಲೀವ್‌ಗೆ ಒಪ್ಪಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ 5 ಸಾವಿರಕ್ಕೂ ಅಧಿಕ ಐಟಿ ಬಿಟಿ ಕಂಪನಿಗಳು ಬಿಬಿಎಂಪಿ ಮನವಿಗೆ ಸ್ಪಂದಿಸಿವೆ.

ಕರ್ನಾಟಕದಲ್ಲಿ ಮತದಾನ ನಡೆಯುವ 2 ದಿನವೂ ಸಾರ್ವತ್ರಿಕ ರಜೆ ಘೋಷಣೆ

ಕರ್ನಾಟಕದಲ್ಲಿ ಏಪ್ರಿಲ್ 26 ಹಾಗೂ ಮೇ 7 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯುತ್ತಿರುವುದರಿಂದ ಮತದಾನ ನಡೆಯುವ (Voting Day) ಆ ಎರಡು ದಿನವೂ ಸಾರ್ವತ್ರಿಕ ರಜೆಯನ್ನು (Government Holiday) ಘೋಷಿಸಲಾಗಿದೆ. ಸರ್ಕಾರಿ ನೌಕರರಿಗೆ ವೇತನ ಸಹಿತ ರಜೆಯನ್ನು (Paid leave) ಘೋಷಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಈಗಾಗಲೇ ಆದೇಶಿಸಿದ್ದಾರೆ.

ಏಪ್ರಿಲ್ 26 ರಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆದರೆ, 2ನೇ ಹಂತದ ಮತದಾನವು ಮೇ 7ರಂದು ನಡೆಯಲಿದೆ. ಈ ದಿನಗಳಂದು ಎಲ್ಲ ರಾಜ್ಯ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಎಲ್ಲ ವ್ಯಾವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಹಾಗೂ ಇನ್ನಿತರ ಸಂಸ್ಥೆಗಳಲ್ಲಿ ಕಾಯಂ ಆಗಿ ಹಾಗೂ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ನೌಕರರಿಗೆ ವೇತನ ಸಹಿತ ರಜೆ ಘೋಷಣೆ ಮಾಡಿರುವುದಾಗಿ ಸರ್ಕಾರದ ಅಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದರು.

ದೇಶದಲ್ಲಿ ಏಳು ಹಂತದಲ್ಲಿ ಹಂತದಲ್ಲಿ ಮತದಾನ ನಡೆಯಲಿದೆ. ಏಪ್ರಿಲ್‌ 19ರಂದು ಮೊದಲ ಹಂತದ ಚುನಾವಣೆ ಆರಂಭವಾಗಲಿದ್ದು, ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದಲ್ಲಿ ಎರಡು ಮತ್ತು ಮೂರನೇ ಹಂತದಲ್ಲಿ ತಲಾ 14 ಜಿಲ್ಲೆಗಳಂತೆ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ ಏಪ್ರಿಲ್‌ 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ.

ಏಪ್ರಿಲ್‌ 26ರಂದು ಮತದಾನ ನಡೆಯುವ ಕ್ಷೇತ್ರಗಳು: ದಕ್ಷಿಣ ಕರ್ನಾಟಕ

1.ಉಡುಪಿ-ಚಿಕ್ಕಮಗಳೂರು (ಸಾಮಾನ್ಯ)

2.ಹಾಸನ (ಸಾಮಾನ್ಯ)

3.ದಕ್ಷಿಣ ಕನ್ನಡ (ಸಾಮಾನ್ಯ)

4.ಚಿತ್ರದುರ್ಗ (ಪರಿಶಿಷ್ಟ ಜಾತಿ ಮೀಸಲು)

5..ತುಮಕೂರು (ಸಾಮಾನ್ಯ)

6.ಮಂಡ್ಯ (ಸಾಮಾನ್ಯ)

7.ಮೈಸೂರು-ಕೊಡಗು (ಸಾಮಾನ್ಯ)

8.ಚಾಮರಾಜನಗರ (ಪರಿಶಿಷ್ಟ ಜಾತಿ ಮೀಸಲು)

9. ಬೆಂಗಳೂರು ಗ್ರಾಮಾಂತರ (ಸಾಮಾನ್ಯ)

10 ಬೆಂಗಳೂರು ಉತ್ತರ (ಸಾಮಾನ್ಯ)

11. ಬೆಂಗಳೂರು ಕೇಂದ್ರ (ಸಾಮಾನ್ಯ)

12. ಬೆಂಗಳೂರು ದಕ್ಷಿಣ (ಸಾಮಾನ್ಯ)

13.ಚಿಕ್ಕಬಳ್ಳಾಪುರ (ಸಾಮಾನ್ಯ)

14.ಕೋಲಾರ (ಪರಿಶಿಷ್ಟ ಜಾತಿ ಮೀಸಲು)\

Lok Sabha Election 2024 Karnataka declares 2 day general holiday

ಎರಡನೇ ಹಂತದ ಮತದಾನದ ವಿವರ ಹೀಗಿದೆ

ಚುನಾವಣೆ ಘೋಷಣೆ: ಮಾರ್ಚ್‌ 16

ಗಜೆಟ್‌ ನೋಟಿಫಿಕೇಶನ್‌: ಮಾರ್ಚ್‌ 28

ನಾಮಪತ್ರ ಸಲ್ಲಿಕೆಗೆ ಕೊನೆ ದಿನಾಂಕ: ಏಪ್ರಿಲ್‌ 04

ನಾಮಪತ್ರ ಪರಿಶೀಲನೆ: ಏಪ್ರಿಲ್‌ 05

ನಾಮಪತ್ರ ಹಿಂದೆಗೆತಕ್ಕೆ ಕೊನೆ ದಿನ: ಏಪ್ರಿಲ್‌ 08

ಮತದಾನದ ದಿನಾಂಕ: ಏಪ್ರಿಲ್‌ 26, ಶುಕ್ರವಾರ

Lok Sabha Election 2024 Karnataka declares 2 day general holiday

ಮೇ 7ರಂದು ಚುನಾವಣೆ ನಡೆಯಲಿರುವ ಕ್ಷೇತ್ರಗಳು: ಉತ್ತರ ಕರ್ನಾಟಕ

1.ಚಿಕ್ಕೋಡಿ (ಸಾಮಾನ್ಯ)

2.ಬೆಳಗಾವಿ (ಸಾಮಾನ್ಯ)

3.ಬಾಗಲಕೋಟೆ (ಸಾಮಾನ್ಯ)

4.ಬಿಜಾಪುರ (ಪರಿಶಿಷ್ಟ ಜಾತಿ ಮೀಸಲು)

5.ಕಲಬುರಗಿ (ಪರಿಶಿಷ್ಟ ಜಾತಿ ಮೀಸಲು)

6.ರಾಯಚೂರು(ಪರಿಶಿಷ್ಟ ಪಂಗಡ ಮೀಸಲು)

7.ಬೀದರ್ (ಸಾಮಾನ್ಯ)

8,ಕೊಪ್ಪಳ (ಸಾಮಾನ್ಯ)

9.ಬಳ್ಳಾರಿ (ಪರಿಶಿಷ್ಟ ಪಂಗಡ ಮೀಸಲು)

10. ಹಾವೇರಿ (ಸಾಮಾನ್ಯ)

11. ಧಾರವಾಡ (ಸಾಮಾನ್ಯ)

12.ಉತ್ತರ ಕನ್ನಡ (ಸಾಮಾನ್ಯ)

13.ದಾವಣಗೆರೆ (ಸಾಮಾನ್ಯ)

14.ಶಿವಮೊಗ್ಗ (ಸಾಮಾನ್ಯ)

Lok Sabha Election 2024 Karnataka declares 2 day general holiday

ಎರಡನೇ ಹಂತದ ಮತದಾನದ ವಿವರ ಹೀಗಿದೆ

ಚುನಾವಣೆ ಘೋಷಣೆ: ಮಾರ್ಚ್‌ 16

ಗಜೆಟ್‌ ನೋಟಿಫಿಕೇಶನ್‌: ಏಪ್ರಿಲ್‌ 12

ನಾಮಪತ್ರ ಸಲ್ಲಿಕೆಗೆ ಕೊನೆ ದಿನಾಂಕ: ಏಪ್ರಿಲ್‌ 19

ನಾಮಪತ್ರ ಪರಿಶೀಲನೆ: ಏಪ್ರಿಲ್‌ 20

ನಾಮಪತ್ರ ಹಿಂದೆಗೆತಕ್ಕೆ ಕೊನೆ ದಿನ: ಏಪ್ರಿಲ್‌ 22

ಮತದಾನದ ದಿನಾಂಕ: ಮೇ 07, ಮಂಗಳವಾರ

ಇದನ್ನೂ ಓದಿ: Lok Sabha Election 2024: ಡಿಕೆಶಿ – ಎಚ್‌ಡಿಕೆ ವೈಯಕ್ತಿಕ ಕಾದಾಟಕ್ಕೆ ಇದೇ ಕಾರಣ! ಏನಿದು ಇನ್‌ಸೈಡ್‌ ಕಹಾನಿ?

ಈಗ ರಾಜ್ಯದ ರಾಜಕೀಯ ಸ್ಥಿತಿ ಗತಿ ಹೇಗಿದೆ?

ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳಿದ್ದು, ಎಲ್ಲ ಕಡೆ ಕಾಂಗ್ರೆಸ್‌ ಮತ್ತು ಎನ್‌ಡಿಎ ನಡುವೆ ಪ್ರಬಲ ಪೈಪೋಟಿ ಇದೆ. 2019ರ ಚುನಾವಣೆಯಲ್ಲಿ ಬಿಜೆಪಿ 25 ಕ್ಷೇತ್ರಗಳಲ್ಲಿ ಗೆದ್ದಿದ್ದರೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ತಲಾ ಒಂದು ಹಾಗೂ ಒಬ್ಬ ಪಕ್ಷೇತರ ಅಭ್ಯರ್ಥಿ ಗೆದಿದ್ದರು.

ಈ ಬಾರಿ ಬಿಜೆಪಿ ಮತ್ತು ಜೆಡಿಎಸ್‌ ಗಳು ಚುನಾವಣಾಪೂರ್ವ ಮೈತ್ರಿ ಮಾಡಿಕೊಂಡಿದ್ದು 28 ಕ್ಷೇತ್ರಗಳನ್ನು ಹಂಚಿಕೊಂಡಿವೆ. ಬಿಜೆಪಿ 25 ಮತ್ತು ಜೆಡಿಎಸ್‌ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ ಎಂದು ಹೇಳಲಾಗಿದೆ. (ಇನ್ನೂ ಅಂತಿಮವಾಗಿಲ್ಲ.) ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮತ್ತು ಎನ್‌ಡಿಎ ನಡುವೆ ಹೋರಾಟ ನಡೆಯಲಿದೆ.

Continue Reading

ಸಿನಿಮಾ

‌Actor Dwarakish: ಚಿತ್ರರಂಗ ಮಾತ್ರವಲ್ಲ, ರಾಜಕೀಯಕ್ಕೂ ಎಂಟ್ರಿ ಕೊಟ್ಟಿದ್ದ ದ್ವಾರಕೀಶ್!

‌Actor Dwarakish: ಅಂಬರೀಶ್, ಅನಂತನಾಗ್ ರೀತಿಯಲ್ಲಿ ವಿಧಾನ ಸಭೆ ಪ್ರವೇಶ ಮಾಡುವ ಆಸೆ ಹೊಂದಿದ್ದ ನಟ ದ್ವಾರಕೀಶ್‌ ಅವರು, 2004 ರಲ್ಲಿ ಆಪ್ತಮಿತ್ರ ಸಿನಿಮಾ ಶೂಟಿಂಗ್ ಸಮಯದಲ್ಲಿ ರಾಜಕೀಯ ಪ್ರವೇಶ ಮಾಡಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಹುಣಸೂರಿನಿಂದ ಸ್ಪರ್ಧೆ ಮಾಡಿದ್ದರು.

VISTARANEWS.COM


on

Actor Dwarakish
Koo

ಬೆಂಗಳೂರು: ನಟ ದ್ವಾರಕೀಶ್ (‌Actor Dwarakish) ಅವರು ಬರೀ ನಟ, ನಿರ್ಮಾಪಕ ಅಷ್ಟೇ ಅಲ್ಲ, ರಾಜಕೀಯವಾಗಿಯೂ ಗುರುತಿಸಿಕೊಂಡಿದ್ದರು. ಅಂಬರೀಶ್, ಅನಂತನಾಗ್ ಅವರ ರೀತಿಯಲ್ಲಿ ವಿಧಾನಸಭೆ ಪ್ರವೇಶ ಮಾಡುವ ಆಸೆ ಹೊಂದಿದ್ದ ಅವರು, 2004ರಲ್ಲಿ ಆಪ್ತಮಿತ್ರ ಸಿನಿಮಾ ಶೂಟಿಂಗ್ ಸಮಯದಲ್ಲಿ ರಾಜಕೀಯ ಪ್ರವೇಶ ಮಾಡಿದ್ದರು. ಹೀಗಾಗಿ ಆಪ್ತಮಿತ್ರ ಸಿನಿಮಾಕ್ಕೂ ರಾಜಕೀಯಕ್ಕೂ ನಂಟು ಇದೆ.

ʼಕನ್ನಡ ನಾಡುʼ ಪಕ್ಷದಲ್ಲಿ ಗುರುತಿಸಿಕೊಂಡು ಕೆಲಸ ಮಾಡಿದ ದ್ವಾರಕೀಶ್‌ ಅವರು, 2004ರಲ್ಲಿ ಆ ಪಕ್ಷದಿಂದ ಹುಣಸೂರಿನಿಂದ ಸ್ಪರ್ಧೆ ಮಾಡಿದ್ದರು. ಹುಣಸೂರು ತಮ್ಮ ಹುಟ್ಟೂರು ಆಗಿದ್ದರಿಂದ ಅಲ್ಲಿ ಜನರು ಕೈ ಹಿಡಿಯುತ್ತಾರೆ ಎಂದು ಚುನಾವಣಾ ಕಣಕ್ಕಿಳಿದಿದ್ದರು. ಕ್ಷೇತ್ರದಾದ್ಯಂತ ಪ್ರಚಾರಕ್ಕೆ ಹೋದಾಗ ಉತ್ತಮ ಬೆಂಬಲ ಸಿಕ್ಕಿತ್ತು. ಆದರೆ ಚುನಾವಣೆಯಲ್ಲಿ ಕೇವಲ 2300 ಮತಗಳನ್ನು ಪಡೆದು ಡೆಪಾಸಿಟ್ ಸಹ ಕಳೆದುಕೊಂಡರು.

ಇದನ್ನೂ ಓದಿ | Actor Dwarakish: ಕರುನಾಡ ಕುಳ್ಳ, ಹಿರಿಯ ನಟ ದ್ವಾರಕೀಶ್‌ ಇನ್ನಿಲ್ಲ

ಅಂದು ಕನ್ನಡ ನಾಡು ಪಕ್ಷದಿಂದ ಗೆದ್ದಿದ್ದು ಕೇವಲ ಸುರಪುರದ ರಾಜುಗೌಡ ಮಾತ್ರ (ಈಗ ಉಪಚುನಾವಣೆ ನಡೆಯಿತ್ತಿದ್ದು, ರಾಜುಗೌಡ ಬಿಜೆಪಿ ಅಭ್ಯರ್ಥಿ ಆಗಿದ್ದಾರೆ). ಆಪ್ತಮಿತ್ರ ಸಿನಿಮಾ ಶೂಟಿಂಗ್ ನಡುವೆಯೇ ದ್ವಾರಕೀಶ್‌ ಅವರು ಪ್ರಚಾರ ನಡೆಸಿದರು. ಆದರೆ ಕ್ಷೇತ್ರದ ಜನ ಕೈ ಹಿಡಿದಿರಲಿಲ್ಲ, ಆಪ್ತಮಿತ್ರ ಸಿನಿಮಾ ಮಾತ್ರ ಕೈ ಹಿಡಿದಿತ್ತು. ಬ್ಯಾಲೆಟ್‌ನಲ್ಲಿ ಸೋಲಿಸಿದ್ದ ಜನ‌, ಸಿನಿಮಾ ಮಂದಿರದಲ್ಲಿ ದ್ವಾರಕೀಶ್ ಅವರನ್ನು ನಿರ್ಮಾಪಕ ಹಾಗೂ ಸಹನಟನಾಗಿ ಗೆಲ್ಲಿಸಿದ್ದರು.

ಅಣ್ಣಾವ್ರಿಗೆ ಆಪ್ತ, ವಿಷ್ಣುವರ್ಧನ್‌ಗೆ ಆಪ್ತಮಿತ್ರ ದ್ವಾರಕೀಶ್;‌ ಇವರ ನಂಟು ಹೇಗಿತ್ತು?

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಚಂಡ ಕುಳ್ಳ, ನಟ, ಹಾಸ್ಯ ಕಲಾವಿದ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಛಾಪು ಮೂಡಿಸಿದ್ದ ದ್ವಾರಕೀಶ್‌ (81) (Actor Dwarakish) ಅವರು ಮಂಗಳವಾರ (ಏಪ್ರಿಲ್‌ 16) ನಿಧನರಾಗಿದ್ದಾರೆ. ಬಹುಮುಖ ಪ್ರತಿಭೆ, ಗಮನ ಸೆಳೆಯುವ ವ್ಯಕ್ತಿತ್ವ ಹೊಂದಿದ್ದ ದ್ವಾರಕೀಶ್‌ ಅವರು ಸ್ನೇಹಜೀವಿಯೂ ಆಗಿದ್ದರು. ಅದರಲ್ಲೂ, ಡಾ.ರಾಜಕುಮಾರ್‌ (Dr Rajkumar), ಡಾ.ವಿಷ್ಣುವರ್ಧನ್‌ (Dr Vishnuvardhan) ಅವರೊಂದಿಗೆ ಉತ್ತಮ ಸ್ನೇಹ, ಬಾಂಧವ್ಯ ಹೊಂದಿದ್ದರು. ಅದರಲ್ಲೂ, ವಿಷ್ಣುವರ್ಧನ್‌ ಅವರ ಜತೆ ಹೆಚ್ಚು ಆತ್ಮೀಯತೆ ಹೊಂದಿದ್ದರು.

ವಿಷ್ಣುವರ್ಧನ್-ದ್ವಾರಕೀಶ್‌ ಜೋಡಿ ಮೋಡಿ

ಕನ್ನಡ ಸಿನಿಮಾ ರಂಗದಲ್ಲಿ ವಿಷ್ಣುವರ್ಧನ್‌ ಹಾಗೂ ದ್ವಾರಕೀಶ್‌ ಅವರ ಜೋಡಿಯು ಮೋಡಿ ಮಾಡಿತ್ತು. ಕಳ್ಳ-ಕುಳ್ಳ, ಕಿಟ್ಟು-ಪುಟ್ಟು, ಸಿಂಗಾಪೂರ್‌ನಲ್ಲಿ ರಾಜ-ಕುಳ್ಳ, ಗುರು-ಶಿಷ್ಯರು, ಕಿಲಾಡಿಗಳು ಸೇರಿ ಹಲವು ಸೂಪರ್‌ ಡೂಪರ್‌ ಹಿಟ್‌ ಆದ ಸಿನಿಮಾಗಳಲ್ಲಿ ಇವರ ಜೋಡಿಯು ಮೋಡಿ ಮಾಡಿತ್ತು. ದ್ವಾರಕೀಶ್‌ ನಿರ್ದೇಶನದ ಮೊದಲ ಚಿತ್ರ ನೀ ಬರೆದ ಕಾದಂಬರಿಯು ಕೂಡ ಭಾರಿ ಹಿಟ್‌ ಆಯಿತು. “ಒಂದು ದಿನವೂ ವಿಷ್ಣುವರ್ಧನ್‌ ಕಾಲ್‌ಶೀಟ್‌ ಇಲ್ಲ ಎಂದಿರಲಿಲ್ಲ” ಎಂಬುದಾಗಿ ಆಗಾಗ ದ್ವಾರಕೀಶ್‌ ಅವರು ಹೇಳುತ್ತಲೇ ಇದ್ದರು.

ಗೆಳೆಯನಿಗಾಗಿ ಸಿನಿಮಾ ಮಾಡಿದ ವಿಷ್ಣು

ಆಪ್ತಮಿತ್ರ ಸಿನಿಮಾ ಬಿಡುಗಡೆಗೂ ಮೊದಲು ದ್ವಾರಕೀಶ್‌ ಅವರು ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದ್ದರು. ಅವರು ಮನೆ ಕೂಡ ಮಾರಿಕೊಂಡು ಸಂಕಷ್ಟದಲ್ಲಿ ಕಾಲ ಕಳೆಯುತ್ತಿದ್ದರು. ಆಗ, ದ್ವಾರಕೀಶ್‌ ನೆರವಿಗೆ ಧಾವಿಸಿದ ವಿಷ್ಣುವರ್ಧನ್‌ ಅವರು ಒಂದು ರೂಪಾಯಿ ಕೂಡ ಸಂಭಾವನೆ ಪಡೆಯದೆ ದ್ವಾರಕೀಶ್‌ ನಿರ್ಮಾಣದ ಆಪ್ತಮಿತ್ರ ಸಿನಿಮಾದಲ್ಲಿ ನಟಿಸಿದರು. ಆಪ್ತ ಮಿತ್ರ ಸಿನಿಮಾವು ಹಿಟ್‌ ಆಗಿ, ಕಾಲವನ್ನು ತಡೆಯೋರು ಯಾರೂ ಇಲ್ಲ ಎಂದು ವಿಷ್ಣು-ದ್ವಾರಕೀಶ್‌ ಜೋಡಿ ಹಾಡು ಮನೆಮಾತಾಗಿದ್ದಲ್ಲದೆ, ದ್ವಾರಕೀಶ್‌ ಅವರು ಮತ್ತೆ ಸ್ವಂತ ಮನೆಗೆ ಯಜಮಾನರಾದರು. ಅಷ್ಟರಮಟ್ಟಿಗೆ, ಇವರ ಜೋಡಿ, ಸ್ನೇಹವು ಗಟ್ಟಿಯಾಗಿತ್ತು.

ಸ್ನೇಹದ ಸೊಗಸಿನ ಮಧ್ಯೆ ಮುನಿಸು

ವಿಷ್ಣುವರ್ಧನ್‌ ಹಾಗೂ ದ್ವಾರಕೀಶ್‌ ಅವರ ಮಧ್ಯೆ ಆಗಾಗ ಮುನಿಸು, ರಾಜಿ ನಡೆಯುತ್ತಲೇ ಇದ್ದವು. ನಾನು ಯಾವಾಗ ವಿಷ್ಣುವರ್ಧನ್‌ ಜತೆ ಮುನಿಸಿಕೊಂಡು, ನಂತರ ಒಂದಾಗಿ ಸಿನಿಮಾ ಮಾಡಿದ್ದೇನೆಯೋ, ಆ ಸಿನಿಮಾಗಳೆಲ್ಲ ಹಿಟ್‌ ಆಗಿವೆ ಎಂದು ದ್ವಾರಕೀಶ್‌ ಅವರೇ ಹೇಳುತ್ತಿದ್ದರು. ಆದರೆ, ಆಪ್ತಮಿತ್ರ ಸಿನಿಮಾ ಬಳಿಕ ದ್ವಾರಕೀಶ್‌ ಅವರು ವಿಷ್ಣುವರ್ಧನ್‌ ಅವರ ಬಗ್ಗೆ ನೀಡಿದ ಹೇಳಿಕೆಯು ಇಬ್ಬರ ಮಧ್ಯೆ ಮತ್ತೆ ಬಿರುಕು ಮೂಡಿಸಿತು.

ಇನ್ನು, ವಿಷ್ಣುವರ್ಧನ್‌ ಅವರ ಅಗಲಿಕೆಯ ಬಳಿಕ ಯಾವಾಗ ಮಾತನಾಡಿದರೂ ದ್ವಾರಕೀಶ್‌ ಅವರು ವಿಷ್ಣುವರ್ಧನ್‌ ಹೆಸರು ಪ್ರಸ್ತಾಪಿಸದೆ ಇರುತ್ತಿರಲಿಲ್ಲ. “ಸೂಪರ್‌ ಸ್ಟಾರ್‌ ಆಗಿದ್ದ ವಿಷ್ಣುವರ್ಧನ್‌ ಇಲ್ಲದೆ ನಾನಿಲ್ಲ. ಆದರೂ, ಆತನನ್ನು ಚೆನ್ನಾಗಿ ನಡೆಸಿಕೊಳ್ಳಲಿಲ್ಲ” ಎಂದು ದ್ವಾರಕೀಶ್‌ ಅವರು ಆಗಾಗ ಬೇಸರ ವ್ಯಕ್ತಪಡಿಸುತ್ತಿದ್ದರು.

ಅಣ್ಣಾವ್ರಿಗೂ ಆಪ್ತರಾಗಿದ್ದ ದ್ವಾರಕೀಶ್

ಡಾ.ರಾಜಕುಮಾರ್‌ ಅವರಿಗೆ ದ್ವಾರಕೀಶ್‌ ಅವರು ಅತ್ಯಾಪ್ತರಾಗಿದ್ದರು. ಇವರಿಗೆ ಎರಡು ಸಿನಿಮಾಗಳನ್ನು ದ್ವಾರಕೀಶ್‌ ನಿರ್ಮಾಣ ಮಾಡಿದ್ದರು. ಅದರಲ್ಲೂ, ಮೇಯರ್‌ ಮುತ್ತಣ್ಣ ಸಿನಿಮಾದಲ್ಲಿ ರಾಜಕುಮಾರ್‌ ಹಾಗೂ ದ್ವಾರಕೀಶ್‌ ಅವರು ಒಟ್ಟಿಗೆ ನಟಿಸಿದ್ದರು. ಸತ್ಯ ಹರಿಶ್ಚಂದ್ರ ಸಿನಿಮಾದಲ್ಲೂ ರಾಜಕುಮಾರ್‌ ಅವರೊಂದಿಗೆ ನಟಿಸಿ ಅವರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು. “ಡಾ.ರಾಜಕುಮಾರ್‌ ಅವರು ಯಾವಾಗ ಸಿಕ್ಕರೂ ನನ್ನನ್ನು ಆತ್ಮೀಯವಾಗಿ ಮಾತನಾಡಿಸುತ್ತಿದ್ದರು. ಅವರೊಂದಿಗೆ ಹೆಚ್ಚು ಸಿನಿಮಾ ಮಾಡಲು ಆಸೆ ಇತ್ತು. ಆದರೆ, ಅವರು ತುಂಬ ಬ್ಯುಸಿ ಇರುತ್ತಿದ್ದರು. ಆತ್ಮೀಯತೆ ಮಾತ್ರ ಚೆನ್ನಾಗಿತ್ತು” ಎಂದು ದ್ವಾರಕೀಶ್‌ ಹೇಳಿದ್ದರು.

ಮುನಿಸು, ಸಿಟ್ಟು, ಸೆಡವಿನ ಮಧ್ಯೆಯೂ ದ್ವಾರಕೀಶ್‌ ಅವರು ಕನ್ನಡ ಚಿತ್ರರಂಗದಲ್ಲಿ ಒಳ್ಳೆಯ ಸ್ನೇಹ ಸಂಪಾದಿಸಿದ್ದರು. ರೆಬೆಲ್‌ ಸ್ಟಾರ್‌ ಅಂಬರೀಶ್‌, ಸೂಪರ್‌ ಸ್ಟಾರ್‌ ರಜನಿಕಾಂತ್‌, ಶಂಕರ್‌ನಾಗ್‌ ಅವರ ಜತೆಯೂ ದ್ವಾರಕೀಶ್‌ ಅವರು ಉತ್ತಮ ಬಾಂಧವ್ಯ ಹೊಂದಿದ್ದರು.

ಇದನ್ನೂ ಓದಿ | Actor Dwarakish: ಕನ್ನಡ ಸಿನಿಮಾದ ʼಪ್ರಚಂಡ ಕುಳ್ಳʼ ದ್ವಾರಕೀಶ್ ಬಗ್ಗೆ ನೀವರಿಯದ 12 ವಿಶಿಷ್ಟ ಸಂಗತಿಗಳು ಇಲ್ಲಿವೆ

Continue Reading

ಬೆಂಗಳೂರು

Robbery case : ಎಎಸ್‌ಐ ಬೈಕ್‌ ಎಗರಿಸಿ ಹೆದ್ದಾರಿಯಲ್ಲಿ ರಾಬರಿ; ಖತರ್ನಾಕ್‌ ಗ್ಯಾಂಗ್‌ ಅರೆಸ್ಟ್‌

Robbery case : ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಯ ಎಎಸ್‌ಐ ನಾಗರಾಜ್‌ರ ಬೈಕ್‌ ಕದ್ದು, ಅದರಲ್ಲೇ ದರೋಡೆ ಮಾಡುತ್ತಿದ್ದ ಗ್ಯಾಂಗ್‌ವೊಂದು ಅರೆಸ್ಟ್‌ ಆಗಿದೆ. ರಾತ್ರಿಯಾದರೆ ಹೆದ್ದಾರಿಗೆ ಬರುತ್ತಿದ್ದ ಈ ದರೋಡೆಕೋರರು ವಾಹನವನ್ನು ಅಡ್ಡಗಟ್ಟಿ ಸುಲಿಗೆ ಮಾಡುತ್ತಿದ್ದರು.

VISTARANEWS.COM


on

By

Robbery Case In Bengaluru
Koo

ಬೆಂಗಳೂರು: ಅದೊಂದು ರಾಬರಿ ಗ್ಯಾಂಗ್‌ (Robbery case) ಕಾಟಕ್ಕೆ ಹೆದ್ದಾರಿ ಸವಾರರು ಅಕ್ಷರಶಃ ಹೆದರಿದ್ದರು. ಹೆದ್ದಾರಿಯಲ್ಲಿ ಓಡಾಡುವ ವಾಹನಗಳನ್ನೇ ಟಾರ್ಗೆಟ್‌ ಮಾಡುತ್ತಿದ್ದ ದರೋಡೆಕೋರರು ಕೃತ್ಯ ಎಸಗಿ ಕ್ಷಣಾರ್ಧದಲ್ಲಿ ಎಸ್ಕೇಪ್ ಆಗುತ್ತಿದ್ದರು. ಅದರಲ್ಲೂ ಪೊಲೀಸ್‌ ಗಾಡಿಯನ್ನೇ ಕದ್ದು, ಅದರಲ್ಲೇ ರಾಬರಿ ಮಾಡುತ್ತಿದ್ದ ಕಿರಾತಕರನ್ನು ಬಂಧಿಸಿದ್ದಾರೆ.

ಕಳೆದ ಮಾ. 31ರ ಮಧ್ಯರಾತ್ರಿ ದಾಬಸ್ ಪೇಟೆ ಬಳಿ ರಾಬರಿಯೊಂದು ನಡೆದಿತ್ತು. ಮಧ್ಯರಾತ್ರಿ 1-30ರ ಸುಮಾರಿಗೆ ಶಿವಮೊಗ್ಗಕ್ಕೆ ಹೋಗುತ್ತಿದ್ದ ಕ್ಯಾಂಟರ್‌ ವಾಹನಕ್ಕೆ ಅಡ್ಡ ಹಾಕಿದ್ದರು. ಚಾಲಕನಿಗೆ ಚಾಕುವಿನಿಂದ ಇರಿದು, ಆತನ ಬಳಿ ಇದ್ದ ಮೊಬೈಲ್ ಕಸಿದುಕೊಂಡಿದ್ದರು. ನಂತರ ಗೂಗಲ್ ಪೇ, ಫೋನ್ ಪೇನ್‌ ಮೂಲಕ ಹಣವನ್ನೆಲ್ಲಾ ದೋಚಿದ್ದರು.

ಈ ಸಂಬಂಧ ಚಾಲಕ ದೂರು ನೀಡಿದ್ದ. ಪ್ರಕರಣ ದಾಖಲಿಸಿಕೊಂಡ ಬೆನ್ನಲ್ಲೆ ಪೊಲೀಸರು ವಿಶೇಷ ತಂಡವನ್ನು ರಚಿಸಿ ಎಲ್ಲ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಗ್ಯಾಂಗ್‌ ಬೇರೆ ಕೇಸ್‌ಗಳಲ್ಲೂ ಭಾಗಿಯಾಗಿರುವ ವಿಚಾರ ತಿಳಿದುಬಂದಿದೆ. ಕಾಮಾಕ್ಷಿಪಾಳ್ಯ ಎಎಸ್‌ಐ ನಾಗರಾಜ್ ಅವರ ಬೈಕ್‌ ಕದ್ದು, ಅದರಲ್ಲೇ ರಾಬರಿ ಮಾಡಿರುವ ವಿಚಾರ ಕೂಡ ಬೆಳಕಿಗೆ ಬಂದಿದೆ. ಕಳೆದ ತಿಂಗಳ 28ರಂದು ಎಎಸ್‌ಐ ನಾಗರಾಜ್‌ ಅವರ ಬೈಕ್‌ ಕಳ್ಳತನವಾಗಿತ್ತು. ಈ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೇ ಬೈಕ್‌ ಬಳಸಿ ಹೆದ್ದಾರಿಯಲ್ಲಿ ರಾಬರಿ ಮಾಡಿರುವುದು ಬೆಳಕಿಗೆ ಬಂದಿದೆ.

ಸದ್ಯ ರಾಬರಿ ಗ್ಯಾಂಗ್‌ ಅನ್ನು ಪತ್ತೆ ಹಚ್ಚಿರುವ ದಾಬಸ್ ಪೇಟೆ ಪೊಲೀಸರು ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಸುಹೇಲ್, ಆದಿ, ವಿಜಯ್, ಧನುಷ್ ಸೇರಿ ಒಟ್ಟು ಆರು ಜನರ ಗ್ಯಾಂಗ್ ಪೊಲೀಸ್‌ ಬಲೆಗೆ ಬಿದ್ದಿದ್ದಾರೆ. ಬಂಧಿತರಿಂದ ಬೈಕ್‌ ಸೇರಿ 6 ಮೊಬೈಲ್‌ಗಳು, ಮೂರುವರೆ ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: Lok Sabha Election 2024 : ಜಯನಗರದಲ್ಲಿ ಸೀಜ್‌ ಆದ ಕೋಟ್ಯಂತರ ಹಣ; ಇಬ್ಬರ ವಿರುದ್ಧ ಎಫ್‌ಐಆರ್‌

ಹಗಲಿನಲ್ಲಿ ಸ್ವಿಗ್ಗಿ ಡೆಲಿವರಿ ಬಾಯ್‌; ರಾತ್ರಿಯಲ್ಲಿ ಬೈಕ್ ಕದಿಯುವ ಕಳ್ಳ

ಬೆಂಗಳೂರು: ಬೈಯ್ಯಪ್ಪನಹಳ್ಳಿ ಪೊಲೀಸರು ನಟೋರಿಯಸ್ ಬೈಕ್ ಕಳ್ಳನನ್ನು (Theft Case) ಬಂಧಿಸಿದ್ದಾರೆ. ದೀಪಕ್ ಅಲಿಯಾಸ್‌ ದೀಪು ಬಂಧಿತ ಆರೋಪಿಯಾಗಿದ್ದಾನೆ. ದೀಪಕ್‌ ಸ್ವಿಗ್ಗಿ ಡೆಲಿವರಿ ಬಾಯ್ (Swiggy Boy) ಆಗಿ ಕೆಲಸ ಮಾಡುತ್ತಿದ್ದ. ಈತನ ಮೇಲೆ ವಿವಿಧ ಪೊಲೀಸ್ ಠಾಣೆಯಲ್ಲಿ ಸುಮಾರು 14 ಪ್ರಕರಣ ದಾಖಲಾಗಿವೆ.

ಬೆಳಗಿನಿಂದ ಸಂಜೆವರೆಗೂ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿ, ರಾತ್ರಿ ವೇಳೆ ಮನೆ ಮುಂದೆ ನಿಲ್ಲಿಸಿದ ಬೈಕ್ ಕದಿಯುತ್ತಿದ್ದ. ಕದ್ದ ಬೈಕ್‌ಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ. ಬೈಕ್‌ ಮಾರಾಟಕ್ಕೂ ಮೊದಲು ದಾಖಲಾತಿಯನ್ನೆಲ್ಲ ನಂತರ ಕೊಡುತ್ತೇನೆ ಎಂದು ಯಮಾರಿಸಿ, ಕಡಿಮೆ ಬೆಲೆಗೆ ಬೈಕ್ ಮಾರುತ್ತಿದ್ದ.

ಸದ್ಯ ಬೈಯ್ಯಪ್ಪನಹಳ್ಳಿ ಪೊಲೀಸರು ಈ ಖತರ್ನಾಕ್‌ ಕಳ್ಳನಿಂದ ಮೂರು ಲಕ್ಷ ಮೌಲ್ಯದ ಐದು ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಬೈಯ್ಯಪ್ಪನಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Road Accident : ಹುಬ್ಬಳ್ಳಿಯಲ್ಲಿ ಭೀಕರ ಅಪಘಾತಕ್ಕೆ ಮೂವರು ಬಲಿ, ಮತ್ತೋರ್ವ ಗಂಭೀರ

ಬುಲೆಟ್‌ ಬೈಕ್‌ ಕದಿಯಲು ಕಳ್ಳನ ಒದ್ದಾಟ

ಮನೆ ಮುಂದೆ ನಿಲ್ಲಿಸಿದ್ದ ಬುಲೆಟ್‌ ಬೈಕ್ ಕಳ್ಳತನಕ್ಕೆ ಕಳ್ಳನೊಬ್ಬ ವಿಫಲ ಯತ್ನ ನಡೆಸಿದ್ದಾನೆ. ಬುಲೆಟ್ ಬೈಕ್‌ನ ಹ್ಯಾಂಡಲ್ ಲಾಕ್‌ ಕಾಲಿನಿಂದ ಒದ್ದು ಮುರಿಯಲು ಯತ್ನಿಸಿದ್ದಾನೆ. ಬೈಕ್ ಕದಿಯಲು ಕಳ್ಳನ ಒದ್ದಾಟವು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಏಪ್ರಿಲ್‌ 14ರ ಮಧ್ಯರಾತ್ರಿ 2:25ರ ಸುಮಾರಿಗೆ ಕಳ್ಳನೊಬ್ಬ ಬೆಂಗಳೂರಿನ ಜೆ.ಪಿ ನಗರದ ಮನೆ ಬಳಿ ಬಂದಿದ್ದ. ಒಂದೆರಡು ನಿಮಿಷ ಬುಲೆಟ್‌ ಬೈಕ್‌ ಅನ್ನೇ ನೋಡುತ್ತಾ, ಜತೆಗೆ ಧರಿಸಿದ್ದ ಟೀ ಶರ್ಟ್‌ನಲ್ಲೇ ಮುಖವನ್ನು ಮುಚ್ಚಿಕೊಂಡಿದ್ದ. ನಂತರ ಬುಲೆಟ್‌ ಬೈಕ್‌ ಏರಿ ಕುಳಿತು ಅತ್ತಿಂದಿತ್ತ ಕಣ್ಣಾಡಿಸಿ ಕಾಲಿನಿಂದ ಒದ್ದು ಹ್ಯಾಂಡಲ್‌ ಮುರಿಯಲು ಯತ್ನಿಸಿದ್ದಾನೆ. ಹೀಗೆ ನಾಲ್ಕೈದು ಬಾರಿ ಪ್ರಯತ್ನಿಸಿದ ನಂತರ ಮತ್ತ ಮನೆ ಮುಂದೆಯೇ ಬೈಕ್‌ ನಿಲ್ಲಿಸಿ, ಬಂದ ದಾರಿಗೆ ಸುಂಕವಿಲ್ಲ ಎಂದು ತಿಳಿದು ಹೊರಟು ಹೋಗಿದ್ದಾನೆ. ಸದ್ಯ ಕಳ್ಳನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
IPL 2024
ಪ್ರಮುಖ ಸುದ್ದಿ8 mins ago

IPL 2024 : ನಾವು ಪುಟಿದೆದ್ದು ತಿರುಗೇಟು ನೀಡ್ತೇವೆ; ಆರ್​ಸಿಬಿ ಕೋಚ್​ ಭರವಸೆಯ ನುಡಿ

Road Rage in Bengaluru
ಬೆಂಗಳೂರು11 mins ago

Road Rage : ನಿಲ್ಲದ ರೋಡ್‌ ರೇಜ್; ನಿವೃತ್ತ ಬ್ರಿಗೇಡಿಯರ್ ಕಾರು ಅಡ್ಡಗಟ್ಟಿ ಬೆಲ್ಟ್‌ನಿಂದ ಹೊಡೆದು ಹಲ್ಲೆ

Lok Sabha Election 2024 Farmer farm set on fire in support of CN Manjunath
Lok Sabha Election 202444 mins ago

Lok Sabha Election 2024: ಡಾ. ಮಂಜುನಾಥ್‌ ಬೆಂಬಲಿಸಿದ ರೈತನ ಜಮೀನಿಗೆ ಬೆಂಕಿ; ಇದು ಕೈ ಕಾರ್ಯಕರ್ತರ ಕೃತ್ಯ ಎಂದ ಬಿಜೆಪಿ!

Actor Dwarakish
ಸಿನಿಮಾ49 mins ago

‌Actor Dwarakish: ಚಿತ್ರರಂಗ ಮಾತ್ರವಲ್ಲ, ರಾಜಕೀಯಕ್ಕೂ ಎಂಟ್ರಿ ಕೊಟ್ಟಿದ್ದ ದ್ವಾರಕೀಶ್!

Uttarakaanda Movie
ಸ್ಯಾಂಡಲ್ ವುಡ್55 mins ago

Uttarakaanda Movie: ಶಿವಣ್ಣ- ಧನಂಜಯ್‌ ಅಭಿನಯದ ʼಉತ್ತರಕಾಂಡʼ ಚಿತ್ರಕ್ಕೆ ಚೈತ್ರಾ ಆಚಾರ್‌ ಎಂಟ್ರಿ

IND vs BNG
ಕ್ರೀಡೆ1 hour ago

IND vs BNG: ಬಾಂಗ್ಲಾ ಟಿ20 ಸರಣಿಗೆ ಆಯ್ಕೆಯಾದ ಕನ್ನಡತಿ ಶ್ರೇಯಾಂಕಾ ಪಾಟೀಲ್

Aditya Srivastava
ಪ್ರಮುಖ ಸುದ್ದಿ1 hour ago

UPSC Results 2023: ಎಂಎನ್‌ಸಿ ಕೆಲಸ ಬಿಟ್ಟ ಆದಿತ್ಯಗೆ ಯುಪಿಎಸ್‌ಸಿ ಫಸ್ಟ್‌ ರ‍್ಯಾಂಕ್;‌ ಯಾರಿವರು?

Robbery Case In Bengaluru
ಬೆಂಗಳೂರು2 hours ago

Robbery case : ಎಎಸ್‌ಐ ಬೈಕ್‌ ಎಗರಿಸಿ ಹೆದ್ದಾರಿಯಲ್ಲಿ ರಾಬರಿ; ಖತರ್ನಾಕ್‌ ಗ್ಯಾಂಗ್‌ ಅರೆಸ್ಟ್‌

Arun Yogiraj
ಕಿರುತೆರೆ2 hours ago

Arun Yogiraj: ಕಿರುತೆರೆಗೆ ಕಾಲಿಟ್ಟ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್‌; ಯಾವ ಕಾರ್ಯಕ್ರಮ?

UPSC Result 2024:
ಪ್ರಮುಖ ಸುದ್ದಿ2 hours ago

UPSC Result 2024: ಯುಪಿಎಸ್‌ಸಿ ಫಲಿತಾಂಶ ಪ್ರಕಟ; ಆದಿತ್ಯ ಶ್ರೀವಾಸ್ತವ ಪ್ರಥಮ ರ್‍ಯಾಂಕ್

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya
ಭವಿಷ್ಯ12 hours ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20241 day ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20242 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ2 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ3 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ4 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ4 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ5 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20245 days ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

ಟ್ರೆಂಡಿಂಗ್‌