Karnataka Budget 2023 : ನೀವು Miss ಮಾಡಲೇಬಾರದ ಸಿದ್ದರಾಮಯ್ಯ ಬಜೆಟ್‌ನ TOP 60 ಮುಖ್ಯಾಂಶಗಳು - Vistara News

ಕರ್ನಾಟಕ

Karnataka Budget 2023 : ನೀವು Miss ಮಾಡಲೇಬಾರದ ಸಿದ್ದರಾಮಯ್ಯ ಬಜೆಟ್‌ನ TOP 60 ಮುಖ್ಯಾಂಶಗಳು

Karnataka Budget 2023 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 14ನೇ ಬಜೆಟ್‌ನ 60 ಮುಖ್ಯಾಂಶಗಳು ಇಲ್ಲಿವೆ. ಎಲ್ಲ ಕ್ಷೇತ್ರಗಳ TOP HIGH LIGHTS ಇವು.

VISTARANEWS.COM


on

Siddaramaiah Budget
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಶುಕ್ರವಾರ ರಾಜ್ಯ ವಿಧಾನಸಭೆಯಲ್ಲಿ ಮಂಡಿಸಿದ 2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ (Karnataka Budget 2023) ಘೋಷಿಸಿದ ಪ್ರಮುಖಾಂಶಗಳು (Budget Highlights) ಇವು.

  1. ಸಿದ್ದರಾಮಯ್ಯ ಅವರು ಮಂಡಿಸಿದ 2023-24ನೇ ಸಾಲಿನ ಬಜೆಟ್‌ನ ಒಟ್ಟು ಗಾತ್ರ 3,27,747 ಕೋಟಿ ರೂ. ಇದು 12,522 ಕೋಟಿ ರೂ. ಕೊರತೆಯ ಬಜೆಟ್‌.
  2. ರಾಜ್ಯದ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಗೆ ವರ್ಷಕ್ಕೆ 4000 ಕೋಟಿ ರೂ. ವೆಚ್ಚ ನಿಗದಿ (ದಿನಕ್ಕೆ 50ರಿಂದ 60 ಲಕ್ಷ ಮಹಿಳಾ ಪ್ರಯಾಣಿಕರ ಅಂದಾಜು)
  3. ಗೃಹ ಜ್ಯೋತಿ ಯೋಜನೆಯಡಿ 2 ಕೋಟಿಗೂ ಅಧಿಕ ಗ್ರಾಹಕರಿಗೆ 200 ಯುನಿಟ್‌ವರೆಗೆ ಉಚಿತ ವಿದ್ಯುತ್‌ ನೀಡಲು ವರ್ಷಕ್ಕೆ 13,910 ಕೋಟಿ ರೂ. ನಿಗದಿ
  4. ಗೃಹ ಲಕ್ಷ್ಮಿ ಯೋಜನೆಯಡಿ ಕುಟುಂಬದ ಯಜಮಾನಿಗೆ ಮಾಸಿಕ 2,000 ರೂ. ನೆರವು ನೇರ ವರ್ಗಾವಣೆಗೆ 30,000 ಕೋಟಿ ರೂ. ವೆಚ್ಚ. ನಿಗದಿ
  5. ಅನ್ನ ಭಾಗ್ಯ: ಎಲ್ಲ ಅರ್ಹ ಫಲಾನುಭವಿಗಳಿಗೆ 5 ಕೆ.ಜಿ. ಹೆಚ್ಚುವರಿ ಆಹಾರಧಾನ್ಯ ವಿತರಣೆಗೆ (ಆಹಾರ ಧಾನ್ಯ ಲಭ್ಯವಾಗುವವರೆಗೆ ಪ್ರತಿ ಫಲಾನುಭವಿಗೆ 170 ರೂ.ನಂತೆ ಡಿಬಿಟಿ ಮೂಲಕ ನಗದು ವರ್ಗಾವಣೆಗೆ) ವಾರ್ಷಿಕ 10,000 ಕೋಟಿ ರೂ. ವೆಚ್ಚ.
  6. ಯುವ ನಿಧಿ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3,000 ರೂ. ಹಾಗೂ ಡಿಪ್ಲೊಮಾ ಪಡೆದವರಿಗೆ ಮಾಸಿಕ 1500 ರೂ. ನಿರುದ್ಯೋಗ ಭತ್ಯೆ. ನೀಡಲು ನಿರ್ಧಾರ (ಹಣ ನಿಗದಿ ಮಾಡಿಲ್ಲ)
  7. ಕೃಷಿ ಭಾಗ್ಯ ಯೋಜನೆ 100 ಕೋಟಿ ರೂ. ವೆಚ್ಚದಲ್ಲಿ ಮರುಜಾರಿ. `ನವೋದ್ಯಮ’ ಹೊಸ ಯೋಜನೆಯಡಿ ಕೃಷಿ ಉದ್ಯಮಗಳಿಗೆ ನಾವೀನ್ಯತೆಯನ್ನು ಪ್ರೋತ್ಸಾಹಿಸಲು 10 ಕೋಟಿ ರೂ. ನೆರವು.
  8. ಹಿಂದುಳಿದ ತಾಲ್ಲೂಕುಗಳ 100 ರೈತ ಉತ್ಪಾದಕ ಸಂಸ್ಥೆಗಳಿಗೆ ತಲಾ 20 ಲಕ್ಷ ರೂ. ವರೆಗಿನ ಸಾಲಕ್ಕೆ ಶೇ.4ರ ಬಡ್ಡಿ ಸಹಾಯಧನ ಸೌಲಭ್ಯ.
  9. GI Tag ಹೊಂದಿರುವ ಕಾಫಿ, ಮೈಸೂರು ಮಲ್ಲಿಗೆ, ನಂಜನಗೂಡು ರಸಬಾಳೆ, ಮೈಸೂರು ವೀಳ್ಯದೆಲೆಗಳ ಉತ್ಪಾದನೆ, ಸಂಶೋಧನೆ, ಮಾರುಕಟ್ಟೆ ಮತ್ತು ಬ್ರಾಂಡಿಂಗ್ ಮಾಡಲು ಕ್ರಮ.
  10. ಶೇ. 3ರ ಬಡ್ಡಿ ದರದಲ್ಲಿ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಮಿತಿ 10 ಲಕ್ಷ ರೂ. ಗಳಿಂದ 15 ಲಕ್ಷ ರೂ. ಗಳಿಗೆ ಹೆಚ್ಚಳ. 30 ಲಕ್ಷಕ್ಕೂ ಹೆಚ್ಚು ರೈತರಿಗೆ 25,000 ಕೋಟಿ ರೂ. ಸಾಲ ವಿತರಣೆ ಗುರಿ.
Siddaramaiah Budget Highlights- Krishi
Siddaramaiah Budget Highlights- startup

ಕೃಷಿ ವಲಯಕ್ಕೆ ಸಿದ್ದರಾಮಯ್ಯ ನೀಡಿದ್ದೇನು?

  1. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ರೈತರಿಗೆ ಸರಕು ಸಾಗಾಣಿಕೆಗೆ ಪಿಕ್‌ಅಪ್ ವ್ಯಾನ್ ಖರೀದಿಗೆ ಶೇ.4 ರ ಬಡ್ಡಿ ದರದಲ್ಲಿ ಏಳು ಲಕ್ಷ ರೂ. ವರೆಗಿನ ಸಾಲ ಸೌಲಭ್ಯ.
  2. ಎಪಿಎಂಸಿ ಕಾಯ್ದೆ ತಿದ್ದುಪಡಿ ಹಿಂಪಡೆಯಲು ಕ್ರಮ
  3. ಪ್ರಗತಿಯಲ್ಲಿರುವ 940 ಕೋಟಿ ರೂ. ಬಾಕಿ ಮೊತ್ತದ 10 ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆ.
  4. ಎತ್ತಿನಹೊಳೆ ಯೋಜನೆ ಬಾಕಿ ಕಾಮಗಾರಿ ಪೂರ್ಣಗೊಳಿಸಲು, ಮೇಕೆದಾಟು ಯೋಜನೆಗೆ ಅರಣ್ಯ ಭೂಮಿ ಸ್ವಾಧೀನ, ಭೂಸ್ವಾಧೀನಕ್ಕೆ ಕ್ರಮ.
  5. ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅನುದಾನ ಬಿಡುಗಡೆಗೆ ಹಾಗೂ ಕಳಸಾ ಮತ್ತು ಬಂಡೂರಾ ನಾಲಾ ತಿರುವು ಕುಡಿಯುವ ನೀರಿನ ಯೋಜನೆಗೆ ಅಗತ್ಯ ತೀರುವಳಿ ಪಡೆಯಲು ಕ್ರಮ.
  6. ಶಿಕ್ಷಣ ಕೆ.ಸಿ. ವ್ಯಾಲಿ ಮತ್ತು ಹೆಚ್.ಎನ್. ವ್ಯಾಲಿ ಯೋಜನೆಗಳ ಎರಡನೇ ಹಂತದಲ್ಲಿ 529 ಕೋಟಿ ರೂ. ವೆಚ್ಚದಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ 296 ಕೆರೆ ತುಂಬಿಸುವ ಯೋಜನೆ ಅನುಷ್ಠಾನ.
  7. 1ರಿಂದ 10ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ವಾರದಲ್ಲಿ ಎರಡು ನೀಡುವ ಪೂರಕ ಪೌಷ್ಟಿಕ ಆಹಾರ; 60 ಲಕ್ಷ ಮಕ್ಕಳಿಗೆ ಅನುಕೂಲ; 280 ಕೋಟಿ ರೂ. ಅನುದಾನ.
  8. ಕಲಿಕೆಯಲ್ಲಿ ಹಿಂದುಳಿದ 33 ಲಕ್ಷ ಶಾಲಾ ವಿದ್ಯಾರ್ಥಿಗಳ ಕಲಿಕಾ ಬಲವರ್ಧನೆಗೆ 80 ಕೋಟಿ ರೂ. ವೆಚ್ಚ ಒಂದೂವರೆ ಲಕ್ಷ ವಿದ್ಯಾರ್ಥಿಗಳನ್ನು ಪ್ರೌಢಹಂತದ ಪರೀಕ್ಷೆಗಳಿಗೆ ಸಜ್ಜುಗೊಳಿಸಲು ‘ಮರುಸಿಂಚನ’ ತರಬೇತಿ.
  9. ಸ್ಥಳೀಯವಾದ ಸಾಂಸ್ಕೃತಿಕ ಮತ್ತು ವಾಸ್ತವಿಕತೆಯನ್ನು ಆಧರಿಸಿದ ಹೊಸ ಶಿಕ್ಷಣ ನೀತಿ ರೂಪಿಸಲು ಕ್ರಮ. ಉನ್ನತ ಶಿಕ್ಷಣ ಇಲಾಖೆಯಡಿ ನಿರ್ಮಿಸಿರುವ 13,169 ವಿದ್ಯಾರ್ಥಿಗಳ ಸಾಮರ್ಥ್ಯ ಹೊಂದಿರುವ 224 ವಸತಿ ನಿಲಯಗಳನ್ನು ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ವರ್ಗಾವಣೆ.
  10. ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಹಾಗೂ ಖಾಸಗಿ ವಿಶ್ವವಿದ್ಯಾಲಯಗಳ ಶೇ. 40 ಸೀಟುಗಳಿಗೆ ಪಿಎಚ್.ಡಿ. ಅಧ್ಯಯನಕ್ಕೆ ಕೌನ್ಸೆಲಿಂಗ್ ಮೂಲಕ ಪ್ರವೇಶ.
Siddaramaiah Budget Highlights- sahakara
Siddaramaiah Budget Highlights- startup
  1. ಮಧುಮೇಹ ಮತ್ತು ರಕ್ತದೊತ್ತಡ ತಪಾಸಣೆ, ಮನೆಬಾಗಿಲಿಗೆ ಔಷಧ ವಿತರಣೆ-ಪ್ರಾಯೋಗಿಕವಾಗಿ 8 ಜಿಲ್ಲೆಗಳಲ್ಲಿ ಜಾರಿ.
  2. ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಸಿ.ಟಿ.ಸ್ಕ್ಯಾನಿಂಗ್ ಮತ್ತು ಎಂ.ಆರ್.ಐ. ಸ್ಕ್ಯಾನಿಂಗ್ ಸೌಲಭ್ಯ ವಿಸ್ತರಣೆಗೆ ಕ್ರಮ.
  3. ಪುನೀತ್ ರಾಜ್‌ಕುಮಾರ್ ರವರ ಸ್ಮರಣಾರ್ಥ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲು ಕ್ರಮ.
  4. ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನಲ್ಲಿ ಒಂದು ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ. ಮೈಸೂರು, ಕಲಬುರಗಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ
  5. ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಮೂಲಕ ಮಹಿಳಾ ಉದ್ಯಮಿಗಳಿಗೆ ಶೇ.4 ರ ಬಡ್ಡಿ ದರದಲ್ಲಿ ನೀಡಲಾಗುವ ಸಾಲದ ಮಿತಿ ಐದು ಕೋಟಿ ರೂ.ಗಳಿಗೆ ಹೆಚ್ಚಳ.
  6. SCSP/TSP ಅಧಿನಿಯಮ, 2013ರಡಿ ಹಂಚಿಕೆಯಾಗುವ ಅನುದಾನ ಆ ಸಮುದಾಯಗಳಿಗೆ ಬಳಕೆಯಾಗುವುದನ್ನು ಖಾತರಿ ಪಡಿಸಲು ಕಾಯ್ದೆಯ ಸೆಕ್ಷನ್ 7(ಡಿ) ಅನ್ನು ಕೈಬಿಡಲು ಕ್ರಮ.
  7. ಹಿಂದುಳಿದ ವರ್ಗದ ವಿದ್ಯಾರ್ಥಿಗಳ ‘ಅರಿವು’ ಸಾಲ ಯೋಜನೆ, ವಿದ್ಯಾಸಿರಿ, ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನ ಯೋಜನೆ, ವಿದೇಶಿ ವ್ಯಾಸಂಗಕ್ಕೆ ಶೂನ್ಯ ಬಡ್ಡಿದರದಲ್ಲಿ 20 ಲಕ್ಷ ರೂ. ವರೆಗೆ ಸಾಲ ಯೋಜನೆ ಹಾಗೂ ಶುಚಿ ಸಂಭ್ರಮ ಕಿಟ್ ವಿತರಣೆ ಯೋಜನೆಗಳ ಪುನರಾರಂಭಕ್ಕೆ ಕ್ರಮ.
  8. ಅಸಂಘಟಿತ ವಲಯಗಳಲ್ಲಿ ಇ-ಕಾಮರ್ಸ್ ಸಂಸ್ಥೆಗಳಲ್ಲಿ ಪೂರ್ಣಕಾಲಿಕ/ಅರೆಕಾಲಿಕ ನೌಕರರಾಗಿ ಕಾರ್ಯನಿರ್ವಹಿಸುತ್ತಿರುವ ಒಟ್ಟು 4 ಲಕ್ಷ ರೂ. ಗಳ ಜೀವವಿಮೆ ಹಾಗೂ ಅಪಘಾತ ವಿಮಾ ಸೌಲಭ್ಯ.
  9. ರಾಜ್ಯದ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗಳಲ್ಲಿ 85 ಕೋಟಿ ರೂ. ವೆಚ್ಚದಲ್ಲಿ ವಿವಿಧ ವೈದ್ಯಕೀಯ ಸೌಲಭ್ಯಗಳ ಉನ್ನತೀಕರಣ. ಎಲ್ಲಾ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗಳಲ್ಲಿ ಆಯುಷ್ ವಿಭಾಗ ಪ್ರಾರಂಭ.
  10. 4000 ಗ್ರಾಮ ಪಂಚಾಯಿತಿಗಳಲ್ಲಿ ‘ಕೂಸಿನ ಮನೆ’ ಎಂಬ ಹೆಸರಿನಲ್ಲಿ ಶಿಶುಪಾಲನಾ ಕೇಂದ್ರಗಳ ಪ್ರಾರಂಭ.
Siddaramaiah Budget Highlights- women
Siddaramaiah Budget Highlights- startup
  1. ರಾಜ್ಯದ 62 ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು 30 ಕೋಟಿ ರೂ. ವೆಚ್ಚದಲ್ಲಿ 6 ರಿಂದ 12ನೇ ತರಗತಿಯವರೆಗೆ ಶಾಲೆಗಳನ್ನಾಗಿ ಉನ್ನತೀಕರಣ; 13,000 Integrated ವಿದ್ಯಾರ್ಥಿಗಳಿಗೆ ಅನುಕೂಲ.
  2. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರಥಮ ವರ್ಷದಿಂದಲೇ NEET, JEE, CET ಹಾಗೂ ಇತರೆ ಪ್ರವೇಶ ಪರೀಕ್ಷೆಗಳ ತಯಾರಿಗಾಗಿ ಪ್ರತಿಷ್ಠಿತ ಸಂಸ್ಥೆಗಳಿಂದ ಎರಡು ವರ್ಷಗಳ ತರಬೇತಿ ನೀಡಲು ಎಂಟು ಕೋಟಿ ರೂ.ಗಳ ಅನುದಾನ.
  3. ಬೆಂಗಳೂರಿನ ಹಜ್ ಭವನದಲ್ಲಿ ಅಲ್ಪಸಂಖ್ಯಾತರ ಯುವ ಜನರಿಗೆ 10 ತಿಂಗಳ ವಸತಿಸಹಿತ IAS/KAS ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಳನ್ನು ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಪ್ರಾರಂಭಿಸಲು ಕ್ರಮ.
  4. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿಶ್ವದಲ್ಲಿ 250 ರೊಳಗೆ University Ranking ಹೊಂದಿರುವ ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡಲು ಶೂನ್ಯ ಬಡ್ಡಿ ದರದಲ್ಲಿ ಪ್ರತಿ ವಿದ್ಯಾರ್ಥಿಗೆ 20 ಲಕ್ಷ ರೂ. ಸಾಲ ಸೌಲಭ್ಯ.
  5. ನೆನೆಗುದಿಗೆ ಬಿದ್ದಿರುವ 126 ಶಾದಿ ಮಹಲ್ ಮತ್ತು ಸಮುದಾಯ ಭವನಗಳ ನಿರ್ಮಾಣ ಕಾರ್ಯಗಳನ್ನು 54 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಲು ಕ್ರಮ.
  6. 868 ಹಿಂದೂಯೇತರ ಧಾರ್ಮಿಕ ಸಂಸ್ಥೆಗಳಿಗೆ ನೀಡಲಾಗುತ್ತಿರುವ ತಸ್ತಿಕ್ ಮೊತ್ತ 60,000 ರೂ. ಗಳಿಗೆ ಹೆಚ್ಚಳ.
  7. ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆ ಹಾಗೂ ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ಕಾರ್ಯಕ್ರಮಗಳಡಿ ವಿವಿಧ ಅಭಿವೃದ್ಧಿ ಅಲ್ಪಸಂಖ್ಯಾತರ ಸಮುದಾಯಗಳಿಗೆ ಕಾರ್ಯಕ್ರಮಗಳಿಗೆ ಒಟ್ಟು 360 ಕೋಟಿ ರೂ. ಅನುದಾನ.
  8. ಜೈನರ ಪ್ರಮುಖ ಪುಣ್ಯಕ್ಷೇತ್ರಗಳ ಅಭಿವೃದ್ಧಿಗಾಗಿ 25 ಕೋಟಿ ರೂ. ಅನುದಾನ.
  9. ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪನೆಗೆ ಕ್ರಮ. 100 ಕೋಟಿ ರೂ. ಅನುದಾನ.
  10. ರಾಜ್ಯದಲ್ಲಿರುವ ವಕ್ಸ್ ಆಸ್ತಿಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗಾಗಿ 50 ಕೋಟಿ ರೂ. ನೆರವು.
Siddaramaiah Budget Highlights- minorities
Siddaramaiah Budget Highlights- startup
  1. ಬೆಂಗಳೂರು ನಗರವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸಲು ‘ಬ್ರಾಂಡ್ ಬೆಂಗಳೂರು’ ಪರಿಕಲ್ಪನೆ ಜಾರಿ.
  2. ಬೆಂಗಳೂರು ಮತ್ತು ಇತರ ನಗರಗಳಲ್ಲಿ ಇಂದಿರಾ ಕ್ಯಾಂಟೀನ್ ಗಳ ಪುನರಾರಂಭಕ್ಕೆ 100 ಕೋಟಿ ರೂ. ಅನುದಾನ.
  3. ನಮ್ಮ ಮೆಟ್ರೋ ಯೋಜನೆಯಡಿ ಮುಂದಿನ ಮೂರು ವರ್ಷಗಳಲ್ಲಿ ಈಗಿರುವ 70 ಕಿ.ಮೀ.ನ ಸಂಪರ್ಕಜಾಲವನ್ನು 176 ಕಿ.ಮೀ.ಗೆ ವಿಸ್ತರಿಸಲು ಕ್ರಮ. ವಿಮಾನ ನಿಲ್ದಾಣ ಮಾರ್ಗ 2026 ರಲ್ಲಿ ಪೂರ್ಣ.
  4. ಮೆಟ್ರೋ 3ನೇ ಹಂತದಡಿ 15,000 ಕೋಟಿ ರೂ. ಅಂದಾಜು ವೆಚ್ಚದ, ಹೆಬ್ಬಾಳದಿಂದ ಸರ್ಜಾಪುರದವರೆಗಿನ 37 ಕಿ.ಮೀ. ಉದ್ದದ ಯೋಜನೆ ಪ್ರಸ್ತಾವನೆ ಕೇಂದ್ರಕ್ಕೆ ಸಲ್ಲಿಕೆ.
  5. ಬೆಂಗಳೂರು ಉಪನಗರ ರೈಲು ಯೋಜನೆಯಡಿ ಪ್ರಸ್ತುತ ಸಾಲಿನಲ್ಲಿ ಕಾರಿಡಾರ್-2 ಮತ್ತು ಕಾರಿಡಾರ್-4ರ ಸಿವಿಲ್ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರದಿಂದ 1,000 ಕೋಟಿ ರೂ.
  6. ಧರ್ಮಸ್ಥಳ, ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಹೊಸ ಏರ್‌ ಸ್ಟ್ರಿಪ್‌ಗಳನ್ನು (Airstrip) ಅಭಿವೃದ್ಧಿಪಡಿಸಲು ಕ್ರಮ. ಪ್ರಸಕ್ತ ಸಾಲಿನಲ್ಲಿಯೇ ವಿಜಯಪುರ ವಿಮಾನ ನಿಲ್ದಾಣದ ಕಾರ್ಯಾಚರಣೆ ಪ್ರಾರಂಭಿಸಲು ಕ್ರಮ.
  7. ಮೀನುಗಾರಿಕಾ ದೋಣಿಗಳು ತಂಗುವ ಜೆಟ್ಟಿಗಳು ಹಾಗೂ ಬಂದರುಗಳಲ್ಲಿ ಹೂಳು ತೆಗೆಯುವುದು ಮತ್ತು ಮಲ್ಪೆ, ಹೊನ್ನಾವರ, ಭಟ್ಕಳ, ಕುಂದಾಪುರ ಮತ್ತು ಬೆಲೆಕೇರಿ ಬಂದರುಗಳಲ್ಲಿ ಎರಡು ವರ್ಷಗಳಿಗೊಮ್ಮೆ ಹೂಳೆತ್ತಲು ಕ್ರಮ.
  8. ಕೈಗಾರಿಕೆಗಳ ಸ್ಥಾಪನೆಗೆ ಎರಡು ಎಕರೆವರೆಗಿನ ಕೃಷಿ ಭೂಮಿಯನ್ನು ಕೈಗಾರಿಕಾ ಉದ್ದೇಶಕ್ಕಾಗಿ ಪರಿವರ್ತಿಸದೆ ಬಳಸಲು ಕರ್ನಾಟಕ ಭೂ ಕಂದಾಯ ಕಾಯ್ದೆಗೆ ತಿದ್ದುಪಡಿ.
  9. ಬೆಂಗಳೂರಿನ ದೇವನಹಳ್ಳಿ ಏರೋಸ್ಪೇಸ್‌ ಮತ್ತು ಡಿಫೆನ್ಸ್ ಪಾರ್ಕ್‌ನಲ್ಲಿ ಅತ್ಯಾಧುನಿಕ ಕರ್ನಾಟಕ ಏರೋಸ್ಪೇಸ್ ತಂತ್ರಜ್ಞಾನ ಕೇಂದ್ರ ಸ್ಥಾಪನೆ.
  10. ರಾಜ್ಯದ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ (KSSIDC) ವತಿಯಿಂದ ಹೊಸದಾಗಿ ಏಳು ಕೈಗಾರಿಕಾ ವಸಾಹತುಗಳ ಸ್ಥಾಪನೆ.
Siddaramaiah Budget Highlights- startup
Siddaramaiah Budget Highlights- startup
  1. 10 ಹೆಚ್.ಪಿ. ವರೆಗಿನ ವಿದ್ಯುತ್‌ ಸಂಪರ್ಕ ಹೊಂದಿರುವ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳಿಗೆ 250 ಯುನಿಟ್ ವರೆಗೆ ಉಚಿತ ವಿದ್ಯುತ್ ಸೌಲಭ್ಯ
  2. ಖ್ಯಾತ ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಪ್ರತಿಷ್ಠಾನದ ಚಟುವಟಿಕೆಗೆ ನೆರವು ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ. ಎಂ. ಎಂ. ಕಲಬುರಗಿ ಅವರ ಹೆಸರಿನಲ್ಲಿ ಟ್ರಸ್ಟ್ ಸ್ಥಾಪನೆಗೆ ಕ್ರಮ.
  3. ಕ್ರೀಡಾಪಟುಗಳಿಗೆ ಪೊಲೀಸ್ ಮತ್ತು ಅರಣ್ಯ ಇಲಾಖೆಯ ನೇಮಕಾತಿಯಲ್ಲಿ ಶೇ.3 ರಷ್ಟು ಹುದ್ದೆಗಳನ್ನು ಮೀಸಲಾತಿ ನಿಗದಿಗೆ ಕ್ರಮ.
  4. ಕಡಲ ತೀರದ ಪ್ರವಾಸೋದ್ಯಮ ಅಭಿವೃದ್ಧಿಗೆ ಕರಾವಳಿ ಬೀಚ್ ಪ್ರವಾಸೋದ್ಯಮ ಕಾರ್ಯಪಡೆ ರಚನೆ. ಅಂತಾರಾಷ್ಟ್ರೀಯ ಸರ್ಫಿಂಗ್ ತಾಣವಾಗಿ ಸಸಿಹಿತ್ತು ಕಡಲ ತೀರದ ಅಭಿವೃದ್ಧಿ.
  5. ನೋಂದಣಿಯೇತರ ವಹಿವಾಟುಗಳಿಗೆ ಇ-ಮುದ್ರಾಂಕ ಮತ್ತು ಡಿಜಿಟಲ್ ಸ್ಟಾಂಪಿಂಗ್ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲು ಕ್ರಮ.
  6. ವಿವಾಹ ನೋಂದಣಿ ಪ್ರಕ್ರಿಯೆ ಸುಗಮಗೊಳಿಸಲು ಆನ್‌ಲೈನ್ ನಲ್ಲಿ ಮುಂಗಡ ಸಮಯ ನಿಗದಿ ಹಾಗೂ ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಲು ಅವಕಾಶ.
  7. ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಾಲಯ ಹಾಗೂ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿಗಾಗಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಕ್ರಮ.
  8. ಸಿ ವರ್ಗದ ಒಟ್ಟು 121 ಮುಜರಾಯಿ ದೇವಸ್ಥಾನಗಳಿಗೆ ಸಮಾನವಾಗಿ 15,000 ರೂ.ಗಳ ಸಹಾಯಾನುದಾನವನ್ನು ನೀಡಲು ಕ್ರಮ.
  9. ಸಂಕಷ್ಟದಲ್ಲಿರುವ ಪತ್ರಕರ್ತರ ಮಾಸಾಶನ ಮೊತ್ತ 12 ಸಾವಿರ ರೂ. ಗಳಿಗೆ ಹಾಗೂ ಕುಟುಂಬ ಮಾಸಾಶನ 6 ಸಾವಿರ ರೂ. ಗಳಿಗೆ ಹೆಚ್ಚಳ.
  10. ಮದ್ಯದ ಎಲ್ಲಾ 18 ಘೋಷಿತ ಬೆಲೆ ಸ್ಲಾಬ್ ಗಳ ಮೇಲೆ ಶೇ.20ರಷ್ಟು ಹಾಗೂ ಬಿಯರ್ ಮೇಲೆ ಶೇ.10ರಷ್ಟು ಹೆಚ್ಚುವರಿ ಅಬಕಾರಿ ಸುಂಕ ಹೆಚ್ಚಳ.

ಇದನ್ನೂ ಓದಿ: ಕರ್ನಾಟಕ ಬಜೆಟ್‌-2023 ಸಮಗ್ರ ಸುದ್ದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಸಿನಿಮಾ

Actor Darshan: ಈ ಕಾರಣಕ್ಕೆ ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಕ್ಕಿದ್ದು; 6 ವಾರಗಳ ನಂತ್ರ ಮತ್ತೆ ಜೈಲು!

Actor Darshan: ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಕ್ಕಿದ್ದು, 6 ವಾರಗಳ ನಂತ್ರ ಮತ್ತೆ ಸರೆಂಡರ್‌ ಆಗಬೇಕಿದೆ

VISTARANEWS.COM


on

By

Hc grants interim bail to actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್‌ಗೆ ಹೈಕೋರ್ಟ್‌ನಲ್ಲಿ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. 5 ತಿಂಗಳ ಬಳಿಕ ನಟ ದರ್ಶನ್‌ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ಸಿಕ್ಕಿದೆ. ಮಧ್ಯಂತರ ಜಾಮೀನು ನೀಡಿ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಪೀಠದಿಂದ ಆದೇಶ ಹೊರಡಿದೆ. ಇನ್ನು ನಟ ದರ್ಶನ್‌ಗೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜಾಮೀನು ಸಿಕ್ಕಿಲ್ಲ. ಬದಲಾಗಿ ಅನಾರೋಗ್ಯದಿಂದ ಬಳಲುತ್ತಿರುವ ಕಾರಣ ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್‌ ಆದೇಶ ನೀಡಿದೆ.

ಬೆನ್ನುಹುರಿ ಚಿಕಿತ್ಸೆಗೆ ದರ್ಶನ್‌ಗೆ ಷರತ್ತುಬದ್ಧ ಮಧ್ಯಂತರ ಜಾಮೀನು ಅಂಗೀಕಾರವಾಗಿದೆ. ದರ್ಶನ್ ಇಚ್ಛಿಸಿದ ಆಸ್ಪತ್ರೆಯಲ್ಲಿಯೇ ಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗಿದೆ. ಒಂದು ವಾರದಲ್ಲಿ ಯಾವ ರೀತಿಯ ಚಿಕಿತ್ಸೆ ಎಂಬ ವರದಿಯನ್ನು ನೀಡಬೇಕು. ದರ್ಶನ್ ತನ್ನ ಪಾಸ್‌ಪೋರ್ಟ್ ಸರಂಡರ್ ಮಾಡಬೇಕೆಂದು ನ್ಯಾ . ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ಆದೇಶಿಸಿದೆ.

ಏನಿದು ಕೊಲೆ ಕೇಸ್‌?

ಜೂನ್ 9ರಂದು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಸಂಬಂಧ ಜೂನ್ 11ರಂದು ಮೈಸೂರಿನಲ್ಲಿ ಎ2 ದರ್ಶನ್ ಅರೆಸ್ಟ್ ಆಗಿದ್ದರು. ಜೂನ್ 22ರಂದು ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಜೂ.22ರಂದು ನಟ ದರ್ಶನ್‌ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಆದರೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದ ಹಿನ್ನೆಲೆಯಲ್ಲಿ ಅಲ್ಲಿಂದ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ದರ್ಶನ್ ಶಿಫ್ಟ್ ಮಾಡಲಾಗಿತ್ತು. ಆ.29ರಂದು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಆಗಿದ್ದ ದರ್ಶನ್‌ಗೆ ಬೆನ್ನು ನೋವು ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ದರ್ಶನ್‌ಗೆ ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್ ಆದೇಶಿಸಿದೆ.

ಪವಿತ್ರಾಗೌಡ ಖುಷಿ

ದರ್ಶನ್‌ಗೆ ಮಧ್ಯಂತರ ಜಾಮೀನು ಮಂಜೂರು ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾ ಗೌಡ ಖುಷಿ ಆಗಿದ್ದಾರೆ. ತನ್ನಿಂದಾಗಿ ದರ್ಶನ್ ಜೈಲು ಸೇರಿದ ಎಂಬ ಬೇಸರವಿತ್ತು. ದರ್ಶನ್‌ಗೆ ಜಾಮೀನು ಸಿಕ್ಕಿದೆ ಎಂದು ಪವಿತ್ರಾ ಖುಷಿಯಾಗಿದ್ದು, ತನಗೂ ಬೇಲ್ ಸಿಗುತ್ತೆಂಬ ವಿಶ್ವಾಸದಲ್ಲಿದ್ದಾರೆ.

Continue Reading

ಬೆಂಗಳೂರು

Bengaluru News : 5 ವರ್ಷದಿಂದ ವ್ಯಕ್ತಿಯ ಹೊಟ್ಟೆಯೊಳಗಿತ್ತು ಮೀನಿನ ಮೂಳೆ!

ಐದು ವರ್ಷದಿಂದ ಹೊಟ್ಟೆಯಲ್ಲೇ ಇದ್ದ 2 ಸೆಂ.ಮೀ ಉದ್ದದ ಮೀನಿನ ಮೂಳೆಯನ್ನು ಯಶಸ್ವಿಯಾಗಿ ಹೊರತೆಗೆದ ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ

VISTARANEWS.COM


on

By

Doctors at Fortis Hospital remove fish bone from man's stomach for 5 years
Koo

ಬೆಂಗಳೂರು: ಕಳೆದ ಐದು ವರ್ಷದಿಂದ ಒಂದಿಲ್ಲೊಂದು ರೀತಿಯ ಹೊಟ್ಟೆ ನೋವಿನಿಂದ ಬಳಲುತ್ತಿದ್ದ 61 ವರ್ಷದ ವ್ಯಕ್ತಿಯ ಹೊಟ್ಟೆಯಿಂದ 2 ಸೆಂ.ಮೀ ಉದ್ದದ ಮೀನಿನ ಮೂಳೆಯನ್ನು ಬೆಂಗಳೂರಿನ (Bengaluru News) ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಹೊರತೆಗೆದಿದೆ.

ಈ ಕುರಿತು ಮಾತನಾಡಿದ ನಾಗರಭಾವಿ ಫೋರ್ಟಿಸ್ ಆಸ್ಪತ್ರೆಯ ಜೀರ್ಣಾಂಗವ್ಯೂಹದ ಶಸ್ತ್ರಚಿಕಿತ್ಸಾ ಸಮಾಲೋಚಕ ಡಾ. ಪ್ರಣವ್ ಹೊನ್ನಾವರ ಶ್ರೀನಿವಾಸನ್, 61 ವರ್ಷದ ರೋಗಿ ರಾಜೇಶ್ (ಹೆಸರು ಬದಲಾಯಿಸಲಾಗಿದೆ) ಎಂಬುವವರು ಐದು ವರ್ಷದ ಹಿಂದೆ ಮೀನು ಸೇವಿಸಿದ್ದರು. ಆಗ ಗಂಟಲಿನಲ್ಲಿ ಮೀನಿನ ಮೂಳೆ ಸಿಲುಕಿ, ಅದು ಹೊಟ್ಟೆ ಸೇರಿತ್ತು. ಬಳಿಕ ಅವರು ಖಾಸಗಿ ಆಸ್ಪತ್ರೆಯೊಂದರಲ್ಲಿ ಎಂಡೋಸ್ಕೋಪಿಕ್‌ ಕಾರ್ಯವಿಧಾನಕ್ಕೆ ಒಳಗಾಗುವ ಮೂಲಕ ಒಂದು ಮೂಳೆ ತೆಗೆಸಿಕೊಂಡಿದ್ದರು. ಮತ್ತೊಂದು ಮೂಳೆ ಇರುವುದು ಅವರಿಗೆ ತಿಳಿದಿರಲಿಲ್ಲ.

ಸಂಪೂರ್ಣ ಮೂಳೆ ತೆಗೆಯದ ಕಾರಣ, 2 ಸೆಂ.ಮೀ ಉದ್ದದ ಮೀನಿನ ಮೂಳೆ ಹೊಟ್ಟೆಯಲ್ಲೇ ಉಳಿದಿತ್ತು. ಇದು ಅವರ ಗಮನಕ್ಕೂ ಬಂದಿಲ್ಲ. ಇದಾಗಿ ಐದು ವರ್ಷ ಕಳೆದಿದೆ. ಐದು ವರ್ಷಗಳಿಂದಲೂ ಒಂದಲ್ಲ ಒಂದು ರೀತಿಯ ಹೊಟ್ಟೆನೋವು, ವಿವಿಧ ರೀತಿಯ ಅಸ್ವಸ್ಥತೆ ಅನುಭವಿಸುತ್ತಿದ್ದರು. ಆಸ್ಪತ್ರೆಗಳಿಗೆ ತೆರಳಿ ಪರೀಕ್ಷೆಗೆ ಒಳಗಾಗಿದ್ದರೂ ಈ ಮೂಳೆ ಕಾಣಿಸಿಕೊಂಡಿಲ್ಲ. ಈ ಮೂಳೆಯಿಂದ ಅವರ ಆರೋಗ್ಯ ಕ್ಷೀಣಿಸುತ್ತಾ ಹೊಟ್ಟೆ ನೋವು ಹೆಚ್ಚುತ್ತಲೇ ಹೋಗಿದೆ.

Doctors at Fortis Hospital remove fish bone from man's stomach for 5 years
Doctors at Fortis Hospital remove fish bone from man's stomach for 5 years

ನಂತರ ಅವರು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ಅವರ ಸಂಪೂರ್ಣ ತಪಾಸಣೆಯ ಬಳಿಕ ಓಮೆಂಟಮ್‌ನಲ್ಲಿ (ಕಿಬ್ಬೊಟ್ಟೆಯ ಅಂಗಗಳ ಸುತ್ತಲಿನ ಅಂಗಾಂಶದ ಪದರ) ಈ ಮೂಳೆ ಇರುವುದು ಕಂಡು ಬಂದಿತು. ಐದು ವರ್ಷಗಳ ಹಿಂದಿನಿಂದಲೂ ಈ ಮೂಳೆ ಒಂದಿಲ್ಲೊಂದು ರೀತಿಯಲ್ಲಿ ನೋವು ನೀಡುತ್ತಿರುವುದು ರೋಗಿಗೂ ಆಗಲೇ ತಿಳಿದಿದ್ದು. ಅವರಿಗೆ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸಾ ವಿಧಾನದ ಮೂಲಕ ಮೂಳೆಯನ್ನು ತೆಗೆದು ಹಾಕಲಾಗಿದ್ದು, ರೋಗಿಯು ಚೇತರಿಸಿಕೊಳ್ಳುತ್ತಿದ್ದಾರೆ ಎಂದರು. ಈ ಶಸ್ತ್ರಚಿಕಿತ್ಸೆ ವೇಳೆ ಅವರಿಗೆ ಪಿತ್ತಕೋಶದ ಕಾಯಿಲೆ ಹಾಗೂ ಹೊಕ್ಕುಳಿನ ಅಂಡವಾಯು ಸಮಸ್ಯೆ ಇರುವುದು ತಿಳಿದು ಬಂತು. ಈ ಸಮಸ್ಯೆಗಳಿಗೂ ಚಿಕಿತ್ಸೆ ನೀಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Continue Reading

ಕೊಡಗು

Murder case : ಸುಳಿವೆ ಇಲ್ಲದಿರುವ ಕೊಲೆ ಪ್ರಕರಣ ಭೇದಿಸಿದ ಸುಂಟಿಕೊಪ್ಪ ಪೊಲೀಸರಿಗೆ ಸನ್ಮಾನ

Murder case : ಸುಳಿವೆ ಇಲ್ಲದಿರುವ ಕೊಲೆ ಪ್ರಕರಣವನ್ನು ಭೇದಿಸಿದ ಸುಂಟಿಕೊಪ್ಪ ಪೊಲೀಸರಿಗೆ ಪನ್ಯ ಎಫ್.ಸಿ. ತಂಡದ ಸದಸ್ಯರು ಸನ್ಮಾನಿಸಿ ಗೌರವಿಸಿದರು.

VISTARANEWS.COM


on

By

murder case
Koo

ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಠಾಣಾ ವ್ಯಾಪ್ತಿಯ ಸಂದೇಶ್‌ ಎಂಬುವವರಿಗೆ ಸೇರಿದ ಪನ್ಯ ಕಾಫಿ ತೋಟದಲ್ಲಿ ವ್ಯಕ್ತಿಯನ್ನು ಕೊಲೆ (murder case) ಮಾಡಿ, ಸುಟ್ಟು ಹಾಕಿದ ಪ್ರಕರಣವನ್ನು ಸುಂಟಿಕೊಪ್ಪ ಪೊಲೀಸರು ಕಾರ್ಯಾಚರಣೆ ನಡೆಸಿ ಭೇದಿಸಿದ್ದರು. ಹೀಗಾಗಿ ಸುಂಟಿಕೊಪ್ಪ ಪೊಲೀಸರ ಕಾರ್ಯವನ್ನು ಶ್ಲಾಘಿಸಿ ಪನ್ಯತೋಟದ ಪನ್ಯ ಎಫ್.ಸಿ. ತಂಡದ ಸದಸ್ಯರು ಸುಂಟಿಕೊಪ್ಪ ಠಾಣೆಗೆ ತೆರಳಿ ಕುಶಾಲನಗರ ವೃತ್ತ ನಿರೀಕ್ಷಕ ಮುದ್ದು ಮಾದೇವ, ಸುಂಟಿಕೊಪ್ಪದ ಠಾಣಾಧಿಕಾರಿ ಚಂದ್ರಶೇಖರ ಹಾಗೂ ಕಾರ್ಯಾಚರಣೆಯಲ್ಲಿ ಭಾಗಿಯಾದ ಸಿಬ್ಬಂದಿಯನ್ನು ಸನ್ಮಾನಿಸಿ ಗೌರವಿಸಿದರು.

murder case
Murder Case

ಯಾವುದೆ ಸುಳಿವು ಇಲ್ಲದಿರೋ ಈ ಪ್ರಕರಣವನ್ನು ಪೊಲೀಸರು ಭೇದಿಸಿರೋದಕ್ಕೆ ಪನ್ಯ ಎಫ್.ಸಿ ತಂಡ ಶ್ಲಾಘನೆ ವ್ಯಕ್ತಪಡಿಸಿತ್ತು. ಪನ್ಯ ಎಫ್.ಸಿ. ತಂಡದ ಸುಮಾರು 25ಕ್ಕೂ ಅಧಿಕ ಸದಸ್ಯರು ಪಾಲ್ಗೊಂಡಿದ್ದರು. ಗ್ರಾ.ಪಂ. ಸದಸ್ಯ ಪ್ರಸಾದ್ ಕುಟ್ಟಪ್ಪ ಅವರ ನೇತೃತ್ವದಲ್ಲಿ ಈ ಸನ್ಮಾನ ಕಾರ್ಯಕ್ರಮ ನಡೆಯಿತು

murder case
Murder Case

ಆಸ್ತಿಗಾಗಿ ಪ್ರಿಯಕರನ ಜತೆ ಸೇರಿ ಗಂಡನಿಗೆ ಚಟ್ಟ ಕಟ್ಟಿದ್ದಳು

ಕೊಡಗು: ಅಕ್ಟೋಬರ್ 8ರಂದು ಕೊಡಗಿನ ಸುಂಟಿಕೊಪ್ಪ ಸಮೀಪ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ (Murder case) ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಪ್ರಕರಣವನ್ನು ಬೇಧಿಸಿದ್ದು, ತೆಲಂಗಾಣ ಮೂಲದ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಪ್ರಮುಖ ಆರೋಪಿ ನಿಹಾರಿಕ (29), ಪಶು ವೈದ್ಯ ನಿಖಿಲ್ ಹಾಗೂ ಹರಿಯಾಣದ ಅಂಕುರ್ ಎಂಬುವವರು ಬಂಧಿತರು.

ಈ ಮೂವರು ರಿಯಲ್ ಎಸ್ಟೇಟ್ ಉದ್ಯಮಿ ರಮೇಶ್ (54) ಎಂಬಾತನನ್ನು ತೆಲಂಗಾಣದಲ್ಲಿ ಕೊಲೆ ಮಾಡಿ, ಕೊಡಗಿನಲ್ಲಿ ಸುಟ್ಟು ಹಾಕಿ ಕಾಲ್ಕಿತ್ತಿದ್ದರು. ಆಸ್ತಿಗಾಗಿ ನಿಹಾರಿಕ ಪ್ರಿಯಕರರ ಜತೆ ಸೇರಿ ತನ್ನ ಪತಿಯನ್ನೇ ಹತ್ಯೆ ಮಾಡಿದ್ದಳು. ಹತ್ಯೆ ಮಾಡಿ ನಂತರ ಕೊಡಗಿನ ಸುಂಟಿಕೊಪ್ಪದಲ್ಲಿ ಸುಟ್ಟು ಹಾಕಿದ್ದರು. ಪ್ರಕರಣ ಸಂಬಂಧ ಪೊಲೀಸರು ಸಿಸಿ ಕ್ಯಾಮೆರಾ ಸುಳಿವು ಆಧಾರಿಸಿ, ರೆಡ್ ಕಲರ್ ಬೆಂಜ್ ಕಾರಿನ ಹಿಂದೆ ಬಿದ್ದಿದ್ದರು. ಕಾರುಪತ್ತೆ ಮಾಡಿ ಆರೋಪಿಯನ್ನು ಬಂಧಿಸಲಾಗಿತ್ತು.

Murder Case
Murder Case

ನಿಹಾರಿಕ ತಾನು 10ನೇ ತರಗತಿಯಲ್ಲಿ ಇರುವಾಗಲೇ ಮದುವೆಯಾಗಿದ್ದಳು. ಎರಡು ಮಕ್ಕಳಾದ ಮೇಲೆ ಪತಿಗೆ ಡಿವೋಸ್‌ ಕೊಟ್ಟು ದೂರವಾಗಿದ್ದಳು. ಬಳಿಕ ಜೈಲಿನಲ್ಲಿದ್ದ ಅಂಕುರ್ ಎಂಬಾತನ ಪರಿಚಯವಾಗಿತ್ತು. ಈ ಅಂಕುರ್‌ ಮೂಲಕ ರಮೇಶ್‌ನ ಪರಿಚಯವಾಗಿ ಮದುವೆಯಾಗಿದ್ದಳು. ರಮೇಶ್‌ ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮಾಡುತ್ತಿದ್ದರು. ಈ ನಡುವೆ ನಿಹಾರಿಕ, ನಿಖಿಲ್‌ ಜತೆಗೂ ಲಿವಿಂಗ್ ರಿಲೇಶನ್ ಶಿಪ್‌ನಲ್ಲಿ ಇದ್ದಳು.

ನಿಹಾರಿಕ ಅಂಕುರ್‌ನೊಂದಿಗೆ ಸೇರಿ ಆಸ್ತಿ ನೀಡುವಂತೆ ರಮೇಶ್‌ನಿಗೆ ಕಿರುಕುಳ ನೀಡುತ್ತಿದ್ದರು. ಆಸ್ತಿ ನೀಡದೇ ಇದ್ದದ್ದಕ್ಕೆ ಹೈದರಾಬಾದ್ ಸಮೀಪ ಹಗ್ಗದಿಂದ ಬಿಗಿದು ರಮೇಶ್‌ನ ಕೊಲೆ ಮಾಡಿದ್ದರು. ಕೊಲೆ ಮಾಡಿ ಬಳಿಕ ರಮೇಶ್‌ನ ಕಾರಿನಲ್ಲೇ ಆತನ ಅಪಾರ್ಟ್ಮೆಂಟ್‌ಗೆ ಹೋಗಿ ಹಣ, ಆಸ್ತಿ ದಾಖಲೆ ದೋಚಿದ್ದರು. ನಂತರ ಬೆಂಗಳೂರಿಗೆ ಬಂದು ಪೆಟ್ರೋಲ್ ಖರೀದಿಸಿ, ಕೊಡಗಿಗೆ ತಂದು ರಮೇಶ್‌ ಬಾಡಿಯನ್ನು ಸುಟ್ಟು ಹಾಕಿದ್ದರು. ಕೊಲೆ ಬಳಿಕ ಅಂಕುರ್ ದೆಹಲಿ, ಹರಿಯಾಣ ಅಂತ ಸುತ್ತಾಡಿದ್ದ.

Continue Reading

ಬೆಂಗಳೂರು

Assault Case : ಬೆಂಗಳೂರಿನಲ್ಲೊಬ್ಬ ಸೈಕೋಪಾಥ್ ಪತಿ; ನಿಧಿಗಾಗಿ ಮಗುನಾ ಬಲಿ ಕೊಡೋಣವೆಂದು ಪತ್ನಿಗೆ ಕಿರುಕುಳ

VISTARANEWS.COM


on

By

Koo

ಬೆಂಗಳೂರು: ಬೆಂಗಳೂರಿನಲ್ಲೊಬ್ಬ ಸೈಕೋಪಾಥ್ ಪತಿಯ ಕಾಟಕ್ಕೆ ಬೇಸತ್ತ ಪತ್ನಿ ಪೊಲೀಸ್‌ ಠಾಣೆ (Assault Case) ಮೆಟ್ಟಿಲೇರಿದ್ದಾಳೆ. ಮಗುವನ್ನು ಬಲಿ ಕೊಡೋಣ, ಬಲಿ ಕೊಟ್ರೆ ನಿಧಿ ಸಿಗುತ್ತೆ. ಕುಟುಂಬದ ಸಮೃದ್ಧಿ ಹೆಚ್ಚಾಗತ್ತೆ ಎಂದು ಪತ್ನಿಗೆ ಕಿರುಕುಳ ನೀಡುತ್ತಿದ್ದಾನೆ. ಪತಿ ವಿರುದ್ಧ ಸಿಡಿದೆದ್ದ ಪತ್ನಿಯಿಂದ ಪೊಲೀಸ್ ಕಮಿಷನರ್‌ಗೆ ದೂರು ನೀಡಿದ್ದಾರೆ. ಬೆಂಗಳೂರಿನ ಕೆ.ಆರ್.ಪುರಂ ನಿವಾಸಿ ಸದ್ದಾಂ ವಿರುದ್ಧ ಪತ್ನಿಯೇ ದೂರು ನೀಡಿದ್ದಾರೆ. ಕಳೆದ ನಾಲ್ಕು ವರ್ಷಗಳ ಹಿಂದೆ ನಾನೊಬ್ಬ ಹಿಂದು ಯುವಕಮ ನನ್ನ ಹೆಸರು ಆದಿಈಶ್ವರ್ ಎಂದು ಸುಳ್ಳು ಹೇಳಿ ಸದ್ದಾಂ ಹಿಂದು ಧರ್ಮದ ಯುವತಿಯನ್ನು ಮದುವೆಯಾಗಿದ್ದ.

Assault case A psychopathic husband in Bangalore Wife harassed for sacrificing her child for treasure
Assault case A psychopathic husband in Bangalore Wife harassed for sacrificing her child for treasure

ಮದುವೆಯಾಗಿ ಪತ್ನಿ ಗರ್ಭಿಣಿಯಾದಾಗ ತಾನೊಬ್ಬ ಮುಸಲ್ಮಾನ್ ತನ್ನ ಹೆಸರು ಸದ್ದಾಂ ಎಂದು ಹೇಳಿಕೊಂಡಿದ್ದ.
ನೀನು ಮುಸಲ್ಮಾನ್ ಧರ್ಮಕ್ಕೆ ಮತಾಂತರವಾಗಬೇಕೆಂದು ಪತ್ನಿಯನ್ನು ಮತಾಂತರಿಸಿದ್ದ. ಅಲ್ಲದೇ ಪತ್ನಿಯ ಹೆಸರನ್ನು ಬದಲಾಯಿಸಿದ್ದ. ಪ್ರೀತಿಸಿ ಮದುವೆಯಾದವನು ಧರ್ಮ ಯಾವುದಾದರೇನು ಎಂದು ಪತ್ನಿಯೂ ಸುಮ್ಮನಾಗಿದ್ದಳು. ಆದರೆ ಇತ್ತೀಚಿಗೆ ಸೈಕೋ ರೀತಿಯಲ್ಲಿ ಸದ್ದಾಂ ವರ್ತಿಸುತ್ತಿದ್ದ.

Assault case A psychopathic husband in Bangalore Wife harassed for sacrificing her child for treasure
Assault case A psychopathic husband in Bangalore Wife harassed for sacrificing her child for treasure

ಗಂಡು ಮಗು ಹುಟ್ಟಿದ ನಂತರ ಕುಟ್ಟಿ ಸೈತಾನ್ ಪೂಜೆ ಮಾಡಬೇಕು. ಕುಟ್ಟಿ ಸೈತಾನ್ ಪೂಜೆಯಲ್ಲಿ ಮಗುವನ್ನು ಬಲಿ ಕೊಡಬೇಕು. ಮಗುವನ್ನು ಬಲಿ ಕೊಟ್ರೆ ಸಮೃದ್ಧಿ ಹೆಚ್ಚಾಗತ್ತೆ, ಜತೆಗೆ ನಿಧಿ ಸಿಗತ್ತೆ ಎಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ. ಸದ್ಯ ಸೈಕೋ ಗಂಡನಿಂದ ತಪ್ಪಿಸಿಕೊಂಡಿರುವ ಮಹಿಳೆ ತುಮಕೂರಿನ ತವರು ಮನೆ ಸೇರಿಕೊಂಡಿದ್ದಾಳೆ. ತುಮಕೂರಿಗೂ ತೆರಳಿ ಮಗುವನ್ನು ಬಲಿ ಕೊಡೋಣ ಮಗುವನ್ನು ಕೊಡು ಎಂದು ಟಾರ್ಚರ್ ಕೊಟ್ಟಿದ್ದಾನೆ. ಆರೋಪಿ ಸದ್ದಾಂ ಪತ್ನಿಯ ತಾಯಿಗೂ ಜೀವ ಬೆದರಿಕೆ ಹಾಕಿದ್ದಾನೆ.

Assault case A psychopathic husband in Bangalore Wife harassed for sacrificing her child for treasure
Assault case A psychopathic husband in Bangalore Wife harassed for sacrificing her child for treasure

ಹೀಗಾಗಿ ಮಹಿಳೆ ಈ ಬಗ್ಗೆ ಕೆ.ಆರ್.ಪುರ ಠಾಣೆಗೆ ದೂರು ನೀಡಿದ್ದಾಳೆ. ಆದರೆ ಯಾವುದೇ ಕ್ರಮವಾಗದ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತ ದಯಾನಂದ್‌ಗೆ ನೊಂದಾಕೆ ದೂರು ನೀಡಿದ್ದಾಳೆ. ತಡರಾತ್ರಿ ಎದ್ದು ಮಂತ್ರ ಪಠಿಸುತ್ತಾ ವಾಮಾಚಾರ ವಿದ್ಯೆ ಅಭ್ಯಾಸ ಮಾಡುತ್ತಿದ್ದ. ಪತಿಯ ವರ್ತನೆ ಕಂಡು ಭಯಭೀತಳಾಗಿದ್ದ ಮಹಿಳೆ, ದಿನ ಕಳೆದಂತೆ ಕುಟ್ಟಿ ಸೈತಾನ್ ಪೂಜೆಗೆ ಮಗುವನ್ನು ಬಲಿ ಕೊಡಬೇಕೆಂದು ಹಿಂಸೆ ನೀಡಲು ಶುರು ಮಾಡಿದ್ದ.

Continue Reading
Advertisement
Dina Bhavishya
ಭವಿಷ್ಯ4 ಗಂಟೆಗಳು ago

Dina Bhavishya : ಪ್ರಮುಖ ವ್ಯಕ್ತಿಗಳೊಂದಿಗೆ ಮಾತನಾಡುವಾಗ ಜಾಗೃತೆ ಇರಲಿ

Dina Bhavishya
ಭವಿಷ್ಯ23 ಗಂಟೆಗಳು ago

Dina Bhavishya : ಭೂ ಸಂಬಂಧಿ ವ್ಯವಹಾರಗಳಲ್ಲಿ ಡಬಲ್‌ ಲಾಭ; ಬಹುದಿನಗಳ ಕನಸು ನನಸಾಗುವ ಕಾಲ

Hc grants interim bail to actor Darshan
ಸಿನಿಮಾ2 ದಿನಗಳು ago

Actor Darshan: ಈ ಕಾರಣಕ್ಕೆ ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಕ್ಕಿದ್ದು; 6 ವಾರಗಳ ನಂತ್ರ ಮತ್ತೆ ಜೈಲು!

dina bhavishya
ಭವಿಷ್ಯ2 ದಿನಗಳು ago

Dina Bhavishya : ಅನಾವಶ್ಯಕ ವಾದದಲ್ಲಿ ಸಿಲಿಕಿಕೊಳ್ಳುವ ಸಾಧ್ಯತೆ ಎಚ್ಚರಿಕೆ ಇರಲಿ

Doctors at Fortis Hospital remove fish bone from man's stomach for 5 years
ಬೆಂಗಳೂರು3 ದಿನಗಳು ago

Bengaluru News : 5 ವರ್ಷದಿಂದ ವ್ಯಕ್ತಿಯ ಹೊಟ್ಟೆಯೊಳಗಿತ್ತು ಮೀನಿನ ಮೂಳೆ!

murder case
ಕೊಡಗು3 ದಿನಗಳು ago

Murder case : ಸುಳಿವೆ ಇಲ್ಲದಿರುವ ಕೊಲೆ ಪ್ರಕರಣ ಭೇದಿಸಿದ ಸುಂಟಿಕೊಪ್ಪ ಪೊಲೀಸರಿಗೆ ಸನ್ಮಾನ

ಬೆಂಗಳೂರು3 ದಿನಗಳು ago

Assault Case : ಬೆಂಗಳೂರಿನಲ್ಲೊಬ್ಬ ಸೈಕೋಪಾಥ್ ಪತಿ; ನಿಧಿಗಾಗಿ ಮಗುನಾ ಬಲಿ ಕೊಡೋಣವೆಂದು ಪತ್ನಿಗೆ ಕಿರುಕುಳ

Dina Bhavishya
ಭವಿಷ್ಯ3 ದಿನಗಳು ago

Dina Bhavishya : ಈ ದಿನ ಯಾವುದೇ ಕಾರಣಕ್ಕೂ ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ

Murder case
ಉತ್ತರ ಕನ್ನಡ4 ದಿನಗಳು ago

Murder Case : ಗಾರೆ ಕೆಲಸಕ್ಕೆ ಬಂದಿದ್ದ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಪಾಪಿಗಳು

Medical negligence
ಪ್ರಮುಖ ಸುದ್ದಿ4 ದಿನಗಳು ago

Medical Negligence : ವಿಜಯನಗರದಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ 5 ವರ್ಷದ ಮಗು ಬಲಿ; ಕೆರೆಗೆ ಕಾಲು ಜಾರಿ ಬಿದ್ದು ಯುವತಿ ಸಾವು

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ11 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ12 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ4 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌