Site icon Vistara News

Karnataka Budget 2024 Live Updates: ರೈತರ ಕಲ್ಯಾಣ, ಅಹಿಂದ ಮಂತ್ರ ಪಠಣ; ಸಿದ್ದು ಬಜೆಟ್ಟಲ್ಲಿ ಏನೇನಿದೆ?

Karnataka Budget 2024

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ 15ನೇ ಬಾರಿ ಬಜೆಟ್‌ (Karnataka Budget 2024) ಮಂಡಿಸಿದ್ದಾರೆ. ಗ್ಯಾರಂಟಿ ಸರ್ಕಾರದ ಎರಡನೇ ಬಜೆಟ್‌ ಇದಾಗಿದ್ದು, ಸಿದ್ದರಾಮಯ್ಯ (Siddaramaiah) ಅವರು ಕೃಷಿಕರು, ಮಹಿಳೆಯರು, ಹಿಂದುಳಿದವರು ಸೇರಿ ಸರ್ವರ ಏಳಿಗೆಗೆ ಆದ್ಯತೆ ನೀಡಿದ್ದಾರೆ. ಕರ್ನಾಟಕ ಬಜೆಟ್‌ನ ಕ್ಷಣಕ್ಷಣದ ಮಾಹಿತಿ (Karnataka Budget 2024 Live Updates) ಇಲ್ಲಿ ಲಭ್ಯ ಇದೆ.

B Somashekhar

ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಮಾಡಿದ ಘೋಷಣೆಗಳು

* ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ದಕ್ಷತೆ ತರುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಿಸಲಾಗುವುದು.

* ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗಾಗಿ 400 ಕೋಟಿ ರೂ. ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ 130 ಕೋಟಿ ರೂ. ಒದಗಿಸಲಾಗುವುದು.

* ಮೈಸೂರಿನಲ್ಲಿರುವ 40 ಹಾಸಿಗೆ ಸಾಮರ್ಥ್ಯದ Nephro-Urology ಆಸ್ಪತ್ರೆಯನ್ನು 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಉನ್ನತೀಕರಿಸಲಾಗುವುದು.

* ಕಲಬುರಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಕ್ಕಳ ಆರೋಗ್ಯ ಘಟಕವನ್ನು ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯ ತಾಂತ್ರಿಕ ನೆರವಿನೊಂದಿಗೆ ಸ್ಥಾಪಿಸಲಾಗುವುದು.

* ಗದಗ, ಕೊಪ್ಪಳ ಮತ್ತು ಚಾಮರಾಜನಗರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳು ನಿರ್ಮಾಣವಾಗಿದ್ದು, ಈ ಆಸ್ಪತ್ರೆಗಳಿಗೆ ಅವಶ್ಯವಿರುವ ವೈದ್ಯಕೀಯ ಉಪಕರಣ ಮತ್ತು ಪೀಠೋಪಕರಣಗಳ ಖರೀದಿಗಾಗಿ 150 ಕೋಟಿ ರೂ. ಒದಗಿಸಲಾಗುವುದು.

* ಬೆಂಗಳೂರಿನ ನೆಫ್ರೋ-ಯುರಾಲಜಿ ಸಂಸ್ಥೆಯ ಶಸ್ತ್ರ ಚಿಕಿತ್ಸಾ ವಿಭಾಗದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ರೋಬೋಟಿಕ್ ಯಂತ್ರದ ಮೂಲಕ ಉತ್ತಮ ಶಸ್ತ್ರಚಿಕಿತ್ಸೆ ನೀಡಲು ಕ್ರಮವಹಿಸಲಾಗುವುದು.

* ವೈದ್ಯಕೀಯ ಕಾಲೇಜುಗಳಲ್ಲಿನ ಆಸ್ಪತ್ರೆ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ 114 Modular OT ಗಳನ್ನು 177 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು.

* ರಾಜ್ಯದಲ್ಲಿ ಈಗಾಗಲೇ ನಾಲ್ಕು ಜಿಲ್ಲೆಗಳಲ್ಲಿ Human Milk Bank ಘಟಕಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ರಾಯಚೂರು, ಮೈಸೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಹೊಸ ಘಟಕಗಳನ್ನು ಸ್ಥಾಪಿಸಲಾಗುವುದು.

* ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಅಪಾಯಕಾರಿ ಸಾಂಕ್ರಾಮಿಕ ರೋಗಗಳು ಮತ್ತು ವೈರಲ್ ಸೋಂಕುಗಳನ್ನು ಪತ್ತೆ ಹಚ್ಚಲು Viral Research & Diagnostic Laboratory (VRDL) ಸ್ಥಾಪಿಸಲಾಗುವುದು.

* ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಥಾಪಿಸಿದ ಮೈಸೂರು ವೈದ್ಯಕೀಯ ಮಹಾವಿದ್ಯಾಲಯದ ಶತಮಾನೋತ್ಸವದ ನೆನಪಿಗಾಗಿ ಕೆ.ಆರ್. ಆಸ್ಪತ್ರೆ ಆವರಣದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಹೊರ ರೋಗಿ ವಿಭಾಗದ ಕಟ್ಟಡ ನಿರ್ಮಿಸಲಾಗುವುದು.

B Somashekhar

ಮಹಿಳೆಯರು ಮತ್ತು ಮಕ್ಕಳ ಅಭಿವೃದ್ಧಿಗೆ ಪ್ರಮುಖ ಘೋಷಣೆಗಳು

* ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ 20 ಸಾವಿರ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ. ಒದಗಿಸಲಾಗುವುದು.

* ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್‌ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ಒದಗಿಸಲಾಗುವುದು.

* ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,000 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು 200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು.

* ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸವಲತ್ತುಗಳನ್ನು ನೀಡಲಾಗುವುದು.

* ಆರೋಗ್ಯ ಇಲಾಖೆಯೊಂದಿಗೆ ಸಮನ್ವಯಿಸಿ ಎಲ್ಲ ತಾಲೂಕುಗಳಲ್ಲಿ ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಎರಡು Cataract ಶಸ್ತ್ರಚಿಕಿತ್ಸೆ ಶಿಬಿರಗಳ ಆಯೋಜನೆ.

* ನಿರಾಶ್ರಿತ ಬೌದ್ಧಿಕ ವಿಕಲಚೇತನರ ಆರೈಕೆ ಮತ್ತು ಸಂರಕ್ಷಣೆಗಾಗಿ 4 ಅನುಪಾಲನಾ ಗೃಹಗಳನ್ನು 2 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು.

* ಲಿಂಗತ್ವ ಅಲ್ಪಸಂಖ್ಯಾತರ ಬದುಕನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಮೈತ್ರಿ ಯೋಜನೆಯಡಿ ನೀಡುವ ಮಾಸಾಶನವನ್ನು 800 ರೂ.ಗಳಿಂದ 1,200 ರೂ.ಗಳಿಗೆ ಹೆಚ್ಚಿಸಲಾಗುವುದು.

* ಮಾಜಿ ದೇವದಾಸಿಯರ ಕಲ್ಯಾಣಕ್ಕಾಗಿ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು;

• ಪ್ರಸ್ತುತ ನೀಡುತ್ತಿರುವ ಮಾಸಾಶನವನ್ನು 1500 ರೂ.ಗಳಿಂದ 2000 ರೂ.ಗಳಿಗೆ ಹೆಚ್ಚಿಸಲಾಗುವುದು.

• ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ವಿಶೇಷ ಪ್ಯಾಕೇಜ್ ನೀಡಲಾಗುವುದು.

• ನಿವೇಶನ ಹೊಂದಿರುವ ವಸತಿರಹಿತರಿಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ವಸತಿ ಸೌಲಭ್ಯ ಕಲ್ಪಿಸಲಾಗುವುದು.

• ಅವರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಿ, ಪುನರ್ವಸತಿ ಕಲ್ಪಿಸಲು ಮರುಸಮೀಕ್ಷೆ ನಡೆಸಲಾಗುವುದು.

* 2024-25ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 86,423 ಕೋಟಿ ರೂ. ಒದಗಿಸಲಾಗುವುದು.

* ಮಕ್ಕಳ ಉದ್ದೇಶಿತ ಯೋಜನೆಗಳಿಗೆ 2024-25ನೇ ಸಾಲಿನಲ್ಲಿ 54,617 ಕೋಟಿ ರೂ. ಒದಗಿಸಲಾಗುವುದು.

Deepa S

Karnataka Budget 2024: ಕಾಂಗ್ರೆಸ್‌ ಸರ್ಕಾರದ ಗ್ಯಾರೆಂಟಿಯನ್ನೊಳಗೊಂಡ ಬಜೆಟ್‌ನ ಹೈಲೈಟ್ಸ್‌ ಹೀಗಿದೆ..

Karnataka Budget 2024: ಕಾಂಗ್ರೆಸ್‌ ಸರ್ಕಾರದ ಗ್ಯಾರೆಂಟಿಯನ್ನೊಳಗೊಂಡ ಬಜೆಟ್‌ನ ಹೈಲೈಟ್ಸ್‌ ಹೀಗಿದೆ..
B Somashekhar

ಗ್ರಾಮೀಣ ಅಭಿವೃದ್ಧಿಗೆ ಸಿದ್ದು ಭರ್ಜರಿ ಕೊಡುಗೆ

* ಗ್ರಾಮೀಣ ಭಾಗದಲ್ಲಿ 9,450 ಕಿ.ಮೀ ರಸ್ತೆ ನಿರ್ಮಾಣಕ್ಕೆ 5,200 ಕೋಟಿ ರೂ.

* ಕಲ್ಯಾಣ ಕರ್ನಾಟಕದ 38 ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಲ್ಲಿ 1,150 ಕಿ.ಮೀ. ಉದ್ದದ ರಸ್ತೆಗೆ 1 ಸಾವಿರ ಕೋಟಿ ರೂ. ಮೀಸಲು

* ನರೇಗಾ ಯೋಜನೆ ಅಡಿಯಲ್ಲಿ 2024-25ನೇ ಸಾಲಿನಲ್ಲಿ 16 ಕೋಟಿ ಮಾನವ-ದಿನಗಳನ್ನು ಸೃಜಿಸಿ, ಸುಮಾರು 30 ಲಕ್ಷ ಕುಟುಂಬಗಳಿಗೆ ಉದ್ಯೋಗ ನೀಡುವ ಗುರಿ

* ಅರಿವು ಕೇಂದ್ರಗಳನ್ನು ಬಲಪಡಿಸಲು 132 ಕೋಟಿ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡ ನಿರ್ಮಾಣ ಮಾಡಲಾಗುವುದು ಮತ್ತು ಪುಸ್ತಕಗಳು, ಡಿಜಿಟಲ್‌ ಉಪಕರಣಗಳು ಹಾಗೂ ವಿಶೇಷಚೇತನ ಸ್ನೇಹಿ ಉಪಕರಣಗಳನ್ನು ಖರೀದಿಸಲಾಗುವುದು.

* ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ, ಭ್ರಷ್ಟಾಚಾರ ನಿಯಂತ್ರಣ ಮತ್ತು ದಕ್ಷತೆಯನ್ನು ಹೆಚ್ಚಿಸಲು ಪ್ರಸಕ್ತ ವರ್ಷ 5 ಉಪ ಕ್ರಮಗಳನ್ನು ಕೈಗೊಳ್ಳಲಿದೆ…

• ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ವರ್ಗಾವಣೆಯನ್ನು ಕೌನ್ಸೆಲಿಂಗ್ ಮೂಲಕ ಮಾಡಲಾಗುವುದು.

• ಗ್ರಾಮ ಪಂಚಾಯಿತಿಗಳ ಸಂಪನ್ಮೂಲಗಳನ್ನು ಹೆಚ್ಚಿಸಲು ಗ್ರಾಮ ಪಂಚಾಯಿತಿ ಸ್ವತ್ತುಗಳ Asset Monetisation ನೀತಿಯನ್ನು ಜಾರಿಗೆ ತರಲಾಗುವುದು.

• ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಇ-ಆಫೀಸ್‌ ಪ್ರಾರಂಭಿಸಲಾಗುವುದು.

• ಸೇವಾ ಸಿಂಧು ಪೋರ್ಟಲ್‌ ಮೂಲಕ ಒದಗಿಸಲಾಗುತ್ತಿರುವ ಎಲ್ಲ ಸೇವೆಗಳನ್ನು ಈ ವರ್ಷದಿಂದ ಬಾಪೂಜಿ ಸೇವಾ ಕೇಂದ್ರಗಳಲ್ಲೂ ಪ್ರಾರಂಭಿಸಲಾಗುವುದು.

• ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನಿಗದಿತ ಶುಲ್ಕ ಪಾವತಿಯೊಂದಿಗೆ ವ್ಯವಹಾರ ಪರವಾನಗಿಗಳ ಸ್ವಯಂಚಾಲಿತ ನವೀಕರಣಕ್ಕೆ ಕಾಯ್ದೆಯಲ್ಲಿ ಸೂಕ್ತ ತಿದ್ದುಪಡಿ ತರಲಾಗುವುದು.

• ಗ್ರಾಮ ಪಂಚಾಯಿತಿಗಳ ಸಭೆಗಳು ಮತ್ತು ಗ್ರಾಮ ಸಭೆಗಳ ಕಾರ್ಯಕಲಾಪಗಳ ನೇರ ಪ್ರಸಾರ ಮಾಡಲಾಗುವುದು.

B Somashekhar

ಪ್ರತಿಯೊಬ್ಬರಿಗೂ ಸೂರು, ಸಿದ್ದರಾಮಯ್ಯ ಘೋಷಣೆ ಜೋರು

* 2024-25ರಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ, ರಾಜ್ಯದಲ್ಲಿ ವಸತಿರಹಿತರ ಸಂಖ್ಯೆಯನ್ನು ಗುರುತಿಸಲು ಒಂದು ಸಮೀಕ್ಷೆ

* ಕೊಳೆಗೇರಿ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್‌ ಯೋಜನೆ (ಎ.ಎಚ್.ಪಿ.) ಅಡಿಯಲ್ಲಿ 1,18,359 ಮನೆಗಳನ್ನು ನಿರ್ಮಿಸಲಾಗುತ್ತಿದೆ. ಶೀಘ್ರದಲ್ಲಿಯೇ 48,796 ಮನೆಗಳನ್ನು ಪೂರ್ಣಗೊಳಿಸಿ ಕೊಳೆಗೇರಿ ನಿವಾಸಿಗಳಿಗೆ ಹಸ್ತಾಂತರಿಸಲಾಗುವುದು.

201. ನಗರ ಪ್ರದೇಶದ ಬಡ ನಿವಾಸಿಗಳಿಗೆ ಕೈಗೆಟಕುವ ದರದಲ್ಲಿ ವಸತಿ ಸೌಲಭ್ಯ ಒದಗಿಸಲು ಸಂಪನ್ಮೂಲ ಕ್ರೋಡೀಕರಣಕ್ಕಾಗಿ ವಸತಿ ಇಲಾಖೆಯು ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಿದೆ;

• Asset Monetisation, ವಸತಿ ಸೆಸ್‌ ಮತ್ತು ವಿವಿಧ ಶಾಸನ ಬದ್ಧ ಶುಲ್ಕಗಳನ್ನು ವಿಧಿಸುವ ಮೂಲಕ ಸಂಪನ್ಮೂಲ ಕ್ರೊಢೀಕರಿಸಿ Karnataka Affordable Housing Fund ಅನ್ನು (KAHF) ಸ್ಥಾಪಿಸಲಾಗುವುದು.

• ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆ ಕಾಯ್ದೆಯಡಿ ಕೊಳೆಗೇರಿ ಸೆಸ್‌ ದರ ಪರಿಷ್ಕರಣೆ ಮಾಡುವುದು.

• ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಸ್ಥಿರ ಆಸ್ತಿಗಳಿಂದ ಸಂಪನ್ಮೂಲ ಸೃಜಿಸಲಾಗುವುದು.

* ಕರ್ನಾಟಕ ರಿಯಲ್‌ ಎಸ್ಟೇಟ್‌ ನಿಯಂತ್ರಣ ಪ್ರಾಧಿಕಾರವು ರಿಯಲ್‌ ಎಸ್ಟೇಟ್‌ ವಲಯದಲ್ಲಿ ಪಾರದರ್ಶಕತೆ, ವಿಶ್ವಾಸಾರ್ಹತೆ ಹಾಗೂ ದಕ್ಷತೆಯನ್ನು ಹೆಚ್ಚಿಸಲು ಹಾಗೂ ಮನೆ ಖರೀದಿದಾರರ ಹಿತರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿದೆ. 2023-24 ನೇ ಸಾಲಿನಲ್ಲಿ ಡೆವಲಪರ್‌ಗಳಿಗೆ 40 ಕೋಟಿ ರೂ. ದಂಡ ವಿಧಿಸಲಾಗಿರುತ್ತದೆ. ಮುಂದಿನ ದಿನಗಳಲ್ಲಿ ದಕ್ಷ ಹಾಗೂ ಪರಿಣಾಮಕಾರಿ ಕಾರ್ಯನಿರ್ವಹಣೆಯ ಮೂಲಕ ಜನರ ಹಿತರಕ್ಷಣೆಗೆ ಆದ್ಯತೆ ನೀಡಲಾಗುವುದು.

Exit mobile version