ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ 15ನೇ ಬಾರಿ ಬಜೆಟ್ (Karnataka Budget 2024) ಮಂಡಿಸಿದ್ದಾರೆ. ಗ್ಯಾರಂಟಿ ಸರ್ಕಾರದ ಎರಡನೇ ಬಜೆಟ್ ಇದಾಗಿದ್ದು, ಸಿದ್ದರಾಮಯ್ಯ (Siddaramaiah) ಅವರು ಕೃಷಿಕರು, ಮಹಿಳೆಯರು, ಹಿಂದುಳಿದವರು ಸೇರಿ ಸರ್ವರ ಏಳಿಗೆಗೆ ಆದ್ಯತೆ ನೀಡಿದ್ದಾರೆ. ಕರ್ನಾಟಕ ಬಜೆಟ್‌ನ ಕ್ಷಣಕ್ಷಣದ ಮಾಹಿತಿ (Karnataka Budget 2024 Live Updates) ಇಲ್ಲಿ ಲಭ್ಯ ಇದೆ.
ಅಲ್ಪಸಂಖ್ಯಾತರ ಏಳಿಗೆಗೆ ಸಿದ್ದು ಬಜೆಟ್ ಕೊಡುಗೆ
* ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ಅವರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು;
• 50 ಸಂಖ್ಯಾಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು.
• 100 ಸಂಖ್ಯಾಬಲವುಳ್ಳ 100 ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗುವುದು.
• 100 ಹೊಸ ಮೌಲಾನಾ ಆಜಾದ್ ಶಾಲೆಗಳನ್ನು ತೆರೆಯಲಾಗುವುದು.
• ಸ್ವಂತ ಕಟ್ಟಡ ಹೊಂದಿರುವ 25 ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪ್ರಾರಂಭಿಸಲಾಗುವುದು.
* ಸರ್ಕಾರಿ/ಖಾಸಗಿ ಕಾಲೇಜುಗಳಲ್ಲಿ ಬಿ.ಎಸ್ಸಿ. ನರ್ಸಿಂಗ್/ ಜಿ.ಎನ್.ಎಂ ನರ್ಸಿಂಗ್ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಶುಲ್ಕ ಭರಿಸುವ ಯೋಜನೆಯನ್ನು ಮತ್ತೆ ಪ್ರಾರಂಭ ಮಾಡಲಾಗುವುದು.
* ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಉದ್ಯಮಶೀಲರು ಸ್ಥಾಪಿಸುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಹೊಸ ಘಟಕಗಳನ್ನು ಸ್ಥಾಪಿಸಲು ಹಾಗೂ ಅಸ್ತಿತ್ವದಲ್ಲಿರುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಘಟಕಗಳ ಉನ್ನತೀಕರಣಕ್ಕೆ KSFC ಮೂಲಕ ಪಡೆಯುವ
10 ಕೋಟಿ ರೂ.ವರೆಗಿನ ಸಾಲಕ್ಕೆ ಶೇ.6ರಷ್ಟು ಬಡ್ಡಿ ಸಹಾಯಧನ ನೀಡಲಾಗುವುದು.
* ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ ಉತ್ತೇಜನ ನೀಡಲು 10 ಕೋಟಿ ರೂ. ಒದಗಿಸಲಾಗುವುದು.
* ರಾಜ್ಯದಲ್ಲಿನ ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಒದಗಿಸಲಾಗುವುದು ಹಾಗೂ ಭಾರತೀಯ ಪುರಾತತ್ವ ಇಲಾಖೆಯ ವ್ಯಾಪ್ತಿಯಲ್ಲಿರುವ ವಕ್ಫ್ ಆಸ್ತಿಗಳನ್ನು ಆದ್ಯತೆಯ ಮೇರೆಗೆ ಅಭಿವೃದ್ಧಿಪಡಿಸಲಾಗುವುದು.
* ರಾಜ್ಯದಲ್ಲಿನ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು 20 ಕೋಟಿ ರೂ. ಅನುದಾನ ಒದಗಿಸಲಾಗುವುದು.
* ಮಂಗಳೂರಿನ ಹಜ್ ಭವನದ ನಿರ್ಮಾಣ ಕಾಮಗಾರಿಯನ್ನು 10 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು.
* ಜೈನರ ಪ್ರಮುಖ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗಾಗಿ 50 ಕೋಟಿ ರೂ. ಅನುದಾನ ಒದಗಿಸಲಾಗುವುದು.
* ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ 200 ಕೋಟಿ ರೂ. ಒದಗಿಸಲಾಗುವುದು.
* ಬೌದ್ಧರ ಪವಿತ್ರ ಗ್ರಂಥಗಳಾದ ತ್ರಿಪಿಟಕಗಳನ್ನು ಪಾಲಿ ಭಾಷೆಯಿಂದ ಕನ್ನಡಕ್ಕೆ ಅನುವಾದ ಮಾಡಲು ಸೂಕ್ತ ಅನುದಾನ ಒದಗಿಸಲಾಗುವುದು.
* ರಾಜ್ಯದಲ್ಲಿ ವಾಸಿಸುತ್ತಿರುವ ಸಿಖ್ಖ್ ಲಿಗಾರ್ ಸಮುದಾಯದ ಜನರ ಆರ್ಥಿಕ ಸಬಲೀಕರಣಕ್ಕಾಗಿ ಎರಡು ಕೋಟಿ ರೂ. ಅನುದಾನದಲ್ಲಿ ಹೊಸ ಯೋಜನೆಗಳನ್ನು ರೂಪಿಸಲಾಗುವುದು.
* ಬೀದರ್‌ನಲ್ಲಿರುವ ಶ್ರೀ ನಾನಕ್ ಝೀರಾ ಸಾಹೇಬ್ ಗುರುದ್ವಾರದ ಅಭಿವೃದ್ಧಿಗಾಗಿ ಒಂದು ಕೋಟಿ ರೂ. ಅನುದಾನ ನೀಡಲಾಗುವುದು.
* ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2024-25ನೇ ವರ್ಷದಲ್ಲಿ ಒಟ್ಟಾರೆಯಾಗಿ 393 ಕೋಟಿ ರೂ.ಗಳ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು
ಹಿಂದುಳಿದ ವರ್ಗಗಳ ಕಲ್ಯಾಣ
* 100 ಸಂಖ್ಯಾಬಲದ ಮೆಟ್ರಿಕ್ ನಂತರದ 75 ಬಾಲಕರ ಮತ್ತು 75 ಬಾಲಕಿಯರ ವಸತಿನಿಲಯಗಳನ್ನು ಜಿಲ್ಲಾ ಕೇಂದ್ರಗಳಲ್ಲಿ ಪ್ರಾರಂಭ.
* ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 100 ಸಂಖ್ಯಾಬಲದ 150 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹಾಗೂ 174 ಮೊರಾರ್ಜಿ ದೇಸಾಯಿ ವಸತಿ ಶಾಲೆ/ ಕಾಲೇಜುಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು 200 ಕೋಟಿ ರೂ. ವೆಚ್ಚದಲ್ಲಿ ಹಂತ ಹಂತವಾಗಿ ಒದಗಿಸಲಾಗುವುದು.
* ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಆಶ್ರಮ ಶಾಲೆಗಳನ್ನು ಡಿ.ದೇವರಾಜು ಅರಸು ವಸತಿ ಶಾಲೆಗಳೆಂದು ಮರುನಾಮಕರಣ ಮಾಡಲಾಗುವುದು.
* ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ CLAT, MAT ಮತ್ತು Chartered Accountant ಫೌಂಡೇಷನ್ ಪರೀಕ್ಷೆಗಳಿಗೆ ಸಿದ್ಧಗೊಳಿಸಲು ಪರೀಕ್ಷಾ ಪೂರ್ವ ತರಬೇತಿ ನೀಡಲಾಗುವುದು.
* ದೇಶದ ಪ್ರತಿಷ್ಠಿತ ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಪ್ರಸಕ್ತ ಸಾಲಿನಲ್ಲಿ 500 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ತರಬೇತಿ ಸಂಸ್ಥೆಗಳಿಂದ ಎರಡು ವರ್ಷಗಳ JEE/NEET ತರಬೇತಿಯನ್ನು ಉಚಿತವಾಗಿ ನೀಡಲಾಗುವುದು.
* ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗತಿಗಳ ಬಗ್ಗೆ ಅಧ್ಯಯನ ಮಾಡಲು ʻಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಆಯೋಗʼ ರಚಿಸಲಾಗುವುದು.
* ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ನಿಗಮಗಳಿಂದ 2024-25ನೇ ವರ್ಷದಲ್ಲಿ ಒಟ್ಟಾರೆಯಾಗಿ 1,600 ಕೋಟಿ ರೂ.ಗಳ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು.
ಕೃಷಿ ಕ್ಷೇತ್ರಕ್ಕೆ ನೀಡಿದ ಪ್ರಮುಖ ಕೊಡುಗೆಗಳು
* ಕೃಷಿ ಭಾಗ್ಯ ಯೋಜನೆಯನ್ನು ಮರುಜಾರಿಗೊಳಿಸಲಾಗಿರುತ್ತದೆ. 2023-24ನೇ ಸಾಲಿನಲ್ಲಿ 200 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿಯೂ ಈ ಯೋಜನೆಯನ್ನು ಮುಂದುವರೆಸಲಾಗುವುದು.
* ಕಣ್ಮರೆಯಾಗುತ್ತಿರುವ ಹಾಗೂ ನಶಿಸಿ ಹೋಗುತ್ತಿರುವ ಸ್ಥಳೀಯ ಬೆಳೆಗಳ ತಳಿಗಳನ್ನು ಸಂಗ್ರಹಿಸಲು ಮತ್ತು ಸಂರಕ್ಷಿಸುವ ಉದ್ದೇಶದಿಂದ ಒಂದು ಸಮುದಾಯ ಬೀಜ ಬ್ಯಾಂಕ್ ಸ್ಥಾಪನೆ
* ನಮ್ಮ ಮಿಲ್ಲೆಟ್ ಎಂಬ ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು. ಈ ಯೋಜನೆಯಡಿಯಲ್ಲಿ ಸಂಸ್ಕರಿಸಿದ ಸಿರಿಧಾನ್ಯಗಳು ಹಾಗೂ ಮೌಲ್ಯವರ್ಧಿತ ಸಿರಿಧಾನ್ಯ ಉತ್ಪನ್ನಗಳನ್ನು ಅಗ್ರಿ-ಟೆಕ್ ಕಂಪನಿಗಳು ಮತ್ತು ರಿಟೇಲ್ ಚೈನ್‌ಗಳ ಸಹಭಾಗಿತ್ವದೊಂದಿಗೆ ಕೈಗೆಟುಕುವ ದರದಲ್ಲಿ ದೊರಕಿಸಲು ಅನುವು ಮಾಡಿಕೊಡಲಾಗುವುದು.
* ರಾಜ್ಯಾದ್ಯಂತ 5,000 ಸಣ್ಣ ಸರೋವರಗಳನ್ನು ನರೇಗಾ ಯೋಜನೆಯಡಿ ನಿರ್ಮಿಸಲಾಗುವುದು
* ರೈತರಿಗೆ ಕೀಟ, ರೋಗ ಮತ್ತು ಪೋಷಕಾಂಶ ನಿರ್ವಹಣೆಯ ಸಲಹೆ ನೀಡಲು ರಾಯಚೂರು ಕೃಷಿ ವಿಶ್ವವಿದ್ಯಾಲಯವು ಅಭಿವೃದ್ಧಿಪಡಿಸಿರುವ e-SAP ತಂತ್ರಾಂಶದ ಸೌಲಭ್ಯವನ್ನು ಎಲ್ಲ ರೈತರಿಗೆ ಪರಿಚಯಿಸಲು ಕ್ರಮ ವಹಿಸಲಾಗುವುದು.
* ಆಹಾರ ಸಂಸ್ಕರಣಾ ವಲಯವು ರೈತರ ಆದಾಯ ಹೆಚ್ಚಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತಿದೆ. ಕೃಷಿ ಉತ್ಪನ್ನಗಳು ವ್ಯರ್ಥವಾಗದಂತೆ ತಡೆಯಲು ಹಾಗೂ ಬೆಳೆಗಳಿಗೆ ಸಮರ್ಪಕ ಬೆಲೆ ದೊರಕಿಸುವ ಸಲುವಾಗಿ ಕೃಷಿ ಇಲಾಖೆಯ ಅಧೀನದಲ್ಲಿ ಪ್ರತ್ಯೇಕ ಆಹಾರ ಸಂಸ್ಕರಣಾ ಆಯುಕ್ತಾಲಯ ರಚಿಸಲಾಗುವುದು. ಇದರ ಮೂಲಕ ವಿವಿಧ ಇಲಾಖೆಗಳಡಿಯಲ್ಲಿರುವ ಆಹಾರ ಸಂಸ್ಕರಣೆಗೆ ಸಂಬಂಧಿಸಿದ ಎಲ್ಲ ಯೋಜನೆಗಳನ್ನು ಒಗ್ಗೂಡಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು.
* ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಫ್ತನ್ನು ಉತ್ತೇಜಿಸಲು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ (ಕೆಪೆಕ್) ಸಂಸ್ಥೆಯನ್ನು ಬಲಪಡಿಸಲು ಕ್ರಮವಹಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಈ ಉದ್ದೇಶಕ್ಕಾಗಿ PMFME ಯೋಜನೆಯಡಿಯಲ್ಲಿ 80 ಕೋಟಿ ರೂ. ಒದಗಿಸಲಾಗುವುದು.
* ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತನ್ನು ಉತ್ತೇಜಿಸಲು ರಾಜ್ಯದಲ್ಲಿರುವ ವಿಮಾನ ನಿಲ್ದಾಣಗಳ ಹತ್ತಿರದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಆಹಾರ ಪಾರ್ಕ್‌ಗಳನ್ನು ಸ್ಥಾಪಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ ಮತ್ತು ಬೆಂಗಳೂರು ಗ್ರಾಮಾಂತರದ ಪೂಜೇನಹಳ್ಳಿಯಲ್ಲಿ ಸ್ಥಾಪಿಸಲಾಗುವುದು.
* ಮಂಡ್ಯ ಜಿಲ್ಲೆಯ ವಿ.ಸಿ. ಫಾರಂ ನಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸುವ ಕುರಿತು ಪರಿಶೀಲಿಸಲು ತಜ್ಞರ ಸಮಿತಿ ರಚಿಸಲಾಗುವುದು.
ಆರೋಗ್ಯ ಕ್ಷೇತ್ರಕ್ಕೆ ಸಿದ್ದರಾಮಯ್ಯ ನೀಡಿದ ಪ್ರಮುಖ ಕೊಡುಗೆಗಳು
* ರಾಜ್ಯದಲ್ಲಿ ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿರುವ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ ಪ್ರಾಣ ಉಳಿಸುವ ಉದ್ದೇಶದಿಂದ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಆಧುನಿಕ ಕ್ರಿಟಿಕಲ್ ಕೇರ್ ಘಟಕಗಳ ಸ್ಥಾಪನೆ
* ತಾಲ್ಲೂಕು ಆಸ್ಪತ್ರೆಗಳಿಲ್ಲದ ಆನೇಕಲ್, ನೆಲಮಂಗಲ, ಹೊಸಕೋಟೆ, ಶೃಂಗೇರಿ, ಖಾನಾಪುರ, ಶಿರಹಟ್ಟಿ ಮತ್ತು ಯಳಂದೂರು ತಾಲೂಕುಗಳಲ್ಲಿ ಪ್ರಸಕ್ತ ಸಾಲಿನಲ್ಲಿ 100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆಗಳನ್ನು 280 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ.
* ಆರೋಗ್ಯ ಇಲಾಖೆಯ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ದುರಸ್ತಿ ಮತ್ತು ಉನ್ನತೀಕರಣಕ್ಕೆ 75 ಕೋಟಿ ರೂ. ಅನುದಾನ
* ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಮತ್ತಿತರ ಮೂಲಸೌಕರ್ಯ ಕಾಮಗಾರಿಗಳನ್ನು 150 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭ
* ಗ್ರಾಮೀಣ ಪ್ರದೇಶದ ಜನರಿಗೆ 24×7 ತುರ್ತು ಆರೋಗ್ಯ ಸೇವೆ ನೀಡಲು ಮುಂದಿನ 2 ವರ್ಷಗಳಲ್ಲಿ 350 ಕೋಟಿ ರೂ. ವೆಚ್ಚದಲ್ಲಿ 25 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು.
* ಕಲ್ಯಾಣ ಕರ್ನಾಟಕ ಭಾಗದಲ್ಲಿ 46 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 221 ಕೋಟಿ ರೂ.ಗಳ ವೆಚ್ಚದಲ್ಲಿ KKRDB ಮೂಲಕ ಸ್ಥಾಪಿಸಲಾಗುವುದು.
* ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆ ನೀಡಲು 6,493 ಆರೋಗ್ಯ ಕ್ಷೇಮ
ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 199 ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಕಟ್ಟಡ ಕಾಮಗಾರಿಗಾಗಿ
130 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು.
* ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಮತ್ತು ನಿರಂತರ ಅನುಸರಣೆಗಾಗಿ ಬಹುತೇಕ ಜಿಲ್ಲೆಗಳಲ್ಲಿ Chemotherapy ಚಿಕಿತ್ಸಾ ಕೇಂದ್ರಗಳು ಲಭ್ಯವಿರದ ಕಾರಣ, ಸರ್ಕಾರವು 20 ಕೋಟಿ ರೂ. ವೆಚ್ಚದಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಒಂದು ಡೇ-ಕೇರ್ ಕಿಮೋಥೆರಪಿ ಕೇಂದ್ರವನ್ನು ಸ್ಥಾಪಿಸಲಾಗುವುದು.
* ಮಹಿಳೆಯರಲ್ಲಿ ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್ ಅನ್ನು ಪ್ರಾರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಚಿಕಿತ್ಸೆ ನೀಡಲು 20 ಜಿಲ್ಲಾ ಆಸ್ಪತ್ರೆಗಳಲ್ಲಿ Digital Mammography ಯಂತ್ರಗಳನ್ನು ಮತ್ತು ಕೆ.ಸಿ. ಜನರಲ್ ಆಸ್ಪತ್ರೆ ಬೆಂಗಳೂರು ಹಾಗೂ ಉಡುಪಿ, ಕೋಲಾರ ಮತ್ತು ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಿಗೆ Colposcopy ಉಪಕರಣಗಳ ಖರೀದಿಗೆ 21 ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು.
ಬೆಂಗಳೂರು ಅಭಿವೃದ್ಧಿಗೆ ಸಿದ್ದು ಬಜೆಟ್‌ನಲ್ಲಿ ಸಿಕ್ಕಿದ್ದಿಷ್ಟು…
• ಬೆಂಗಳೂರಲ್ಲಿ ನೂತನ ಬಯೋ ಸಿಎನ್‌ಜಿ ಘಟಕ ಸ್ಥಾಪನೆ
• ಬೆಂಗಳೂರಿಲ್ಲಿ 420 ಹಬ್ & ಸ್ಪೋಕ್ ಮಾದರಿಯಲ್ಲಿ ಪ್ರಯೋಗಾಲಯಕ್ಕೆ 20 ಕೋಟಿ
• ಬೆಂಗಳೂರಿನ ನೆಫ್ರೋ ಯುರಾಲಜಿ ಸಂಸ್ಥೆಯಲ್ಲಿ 20 ಕೋಟಿ ವೆಚ್ಚದಲ್ಲಿ ರೋಬೋಟಿಕ್ ಯಂತ್ರ ಸ್ಥಾಪನೆ
• ನಗರದ ಪೂರ್ವ ಭಾಗದಲ್ಲಿ 10 ಕೋಟಿ ವೆಚ್ಚದಲ್ಲಿ 500 ಜನ ವ್ಯವಸ್ಥೆಯ ನಿರಾಶ್ರಿತ ಕೇಂದ್ರ
• ಜಾಹೀರಾತು ಮೂಲಕ 2000 ಕೋಟಿ ನಿರೀಕ್ಷೆ
• ನಗರದಲ್ಲಿ 147km ವೈಟ್ ಟಾಪಿಂಗ್ ಗೆ 1,700 ಕೋಟಿ ರೂ. ಮಂಜೂರು
• ಹೆಬ್ಬಾಳ ಜಂಕ್ಷನ್ ನಲ್ಲಿ ಸುರಂಗ ಮಾರ್ಗ ನಿರ್ಮಿಸಲು ಸರ್ಕಾರ ಅಸ್ತು
• ಹೊರವರ್ತುಲ ರಸ್ತೆ ಅಭಿವೃದ್ಧಿಗೆ 200 ಕೋಟಿ (ನಾಲಾ ಬಫರ್ ರಸ್ತೆ ಸೇರಿದಂತೆ)
• ಬೆಂಗಳೂರಿಗೆ ನೂತನ ಬ್ಯುಸಿನೆಸ್ ಕಾರಿಡಾರ್ ಘೋಷಣೆ – 73 ಕಿ.ಮೀ ಉದ್ದದ ಬ್ಯುಸಿನೆಸ್ ಕಾರಿಡಾರ್ ಗೆ 27 ಸಾವಿರ ಕೋಟಿ
• ನಗರದಲ್ಲಿ 250 ಮೀಟರ್ ಎತ್ತರದ ಸ್ಕೈ ಡೆಕ್ ನಿರ್ಮಾಣಕ್ಕೆ ಒಪ್ಪಿಗೆ
• ನಮ್ಮ ಮೆಟ್ರೋದ ಫೇಸ್ 3ಗೆ 15,611 ಕೋಟಿ ರೂ. ಅನುದಾನ ಮೀಸಲು
• ಬಿಎಂಟಿಸಿಗೆ 820 ಹೊಸ ಎಲೆಕ್ಟ್ರಿಕ್ ಬಸ್‌ಗಳ ಖರೀದಿಗೆ 1,334 ಕೋಟಿ ರೂ. ಅನುದಾನ
• ಜಲ ಮಂಡಳಿಯ ಕಾವೇರಿ 5ನೇ ಹಂತದ ಕಾಮಗಾರಿಗೆ 5,550 ಕೋಟಿ ರೂ. (12 ಲಕ್ಷ ಜನರಿಗೆ ಪ್ರತಿ ದಿನ ನೀರು)
• ಬಿಬಿಎಂಪಿಯ 7 ಘನತ್ಯಾಜ್ಯ ಘಟಕಗಳ ಅಭಿವೃದ್ಧಿಗೆ 441 ಕೋಟಿ ರೂ.
• ಬಿಬಿಎಂಪಿಯ 110 ಹಳ್ಳಿಗೆ ಕುಡಿಯುವ ನೀರು ಪೂರೈಕೆಗೆ 200 ಕೋಟಿ ರೂ.
• ಬೆಂಗಳೂರಲ್ಲಿ ಹೋಟೆಲ್ ವ್ಯಾಪಾರ ಅವಧಿ ರಾತ್ರಿ ಒಂದು ಗಂಟೆಗೆ ಏರಿಕೆ